ಬೆಂಗಳೂರು: ಅನೇಕ ದಿನಗಳಿಂದ ಚರ್ಚೆ ನಡೆಯುತ್ತಿದ್ದ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ನೇಮಕ ಆಗಿದ್ದಾರೆ. ಸುಮಾರು ಎರಡು ವರ್ಷ ಸುದೀರ್ಘ ಅವಧಿಗೆ ಆಯುಕ್ತರಾಗಿದ್ದ ಕಮಲ್ ಪಂತ್ ಅವರ ಸ್ಥಾನಕ್ಕೆ ಪ್ರತಾಪ್ ರೆಡ್ಡಿ ನೇಮಕ ಆಗಿದ್ದಾರೆ.
ಪ್ರತಾಪ್ ರೆಡ್ಡಿ ಇಲ್ಲಿವರೆಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿದ್ದರು. ಇಲ್ಲಿವರೆಗೆ ಆಯುಕ್ತರಾಗಿದ್ದ ಕಮಲ್ ಪಂತ್ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿ ಆಗಿ ನೇಮಿಸಲಾಗಿದೆ.
ಈ ಇಬ್ಬರು ಅಧೀಕಾರಿಗಳ ಜತೆಗೆ ಇನ್ನೂ ಮೂವರನ್ನು ವರ್ಗಾವಣೆ ಮಾಡಲಾಗಿದೆ. ಕೆಎಸ್‌ಆರ್‌ಪಿ ಎಡಿಜಿಪಿ ಅಗಿದ್ದ ಅಲೋಕ್ ಕುಮಾರ್ ಅವರನ್ನು ಪ್ರತಾಪ್ ರೆಡ್ಡಿ ಅವರಿದ್ದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆಗಿ ನೇಮಿಸಲಾಗಿದೆ. ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ ಆಗಿದ್ದ ಆರ್. ಹಿತೇಂದ್ರ ಅವರನ್ನು ಕೆಎಸ್‌ಆರ್‌ಪಿ ಎಡಿಜಿಪಿಯಾಗಿ, ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಅವರನ್ನು ಅಪರಾಧ ತನಿಖಾ ವಿಭಾಗದ ಎಸ್‌ಪಿ ಆಗಿ ನೇಮಿಸಿ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ | ಪೊಲೀಸ್ ಸಿಬ್ಬಂದಿಯಿಂದ ಅನಾಥ ಶವದ ಅಂತ್ಯಸಂಸ್ಕಾರ, ಮಾನವೀಯ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ
ಬೆಂಗಳೂರು ಪೊಲೀಸ್ ಅಯುಕ್ತರ ಸ್ಥಾನಕ್ಕೆ ಸಾಕಷ್ಟು ಪೈಪೋಟಿ ಇರುತ್ತದೆ. ಸಾಮಾನ್ಯವಾಗಿ ಒಂದು ವರ್ಷದ ನಂತರ ಆಯುಕ್ತರನ್ನು ಬದಲಾವಣೆ ಮಾಡಲಾಗುತ್ತದೆ. ಕಮಲ್ ಪಂತ್ 2020ರ ಜುಲೈನಲ್ಲಿ ನೇಮಕ ಆಗಿದ್ದರು. ನೇಮಕವಾರಿ ಇನ್ನೆರಡು ತಿಂಗಳೂ ಕಳೆದರೆ ಎರಡು ವರ್ಷವಾಗುತ್ತಿತ್ತು. ಈ ಸ್ಥಾನಕ್ಕೆ ಹಿರಿಯ ಅಧಿಕಾರಿಗಳಾದ ದಯಾನಂದ್, ಅಲೋಕ್ ಕುಮಾರ್ ಸೇರಿ ಅನೇಕರು ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಸುದ್ದಿಯಿತ್ತು. ಇದೀಗ ಆ ಎಲ್ಲರ ಹೊರತಾಗಿ 1991ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರನ್ನು ಸರ್ಕಾರ ಆಯ್ಕೆ ಮಾಡಿದೆ.
ಇದನ್ನೂ ಓದಿ | PSI SCAM | ಮರುಪರೀಕ್ಷೆ ಘೋಷಿಸಿದ ಸರ್ಕಾರ