Site icon Vistara News

MLC Election: ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಗೆ ಎ ಎಚ್ ಆನಂದ್ ಸಿದ್ಧತೆ; ನೋಂದಣಿ ಪ್ರಕ್ರಿಯೆಗೆ ಚಾಲನೆ

Graduate Registration Process Campaign

ಬೆಂಗಳೂರು: 2024ರ ವಿಧಾನ ಪರಿಷತ್‌ನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ (MLC Election) ಹಿನ್ನೆಲೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವ ಜನಮನ ಸಂಘಟನೆಯ ಎ. ಎಚ್. ಆನಂದ್ ಅವರು ಚುನಾವಣಾ ಸಿದ್ಧತೆ ಪ್ರಾರಂಭಿಸಿದ್ದಾರೆ. ಇದರ ಭಾಗವಾಗಿ ಶುಕ್ರವಾರ ನಗರದ ಪ್ರೆಸ್ ಕ್ಲಬ್ ಆವರಣದಲ್ಲಿ ಪದವೀಧರರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ರಾಜ್ಯವ್ಯಾಪಿ ಬಿಜೆಪಿ ಸಂಘಟನೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ಎ.ಎಚ್. ಆನಂದ್ ಅವರಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಹಲವು ಹಿರಿಯ ನಾಯಕರು ಆಗ್ರಹ ಮಾಡಿದರು. ನಂತರ ಮಾತನಾಡಿದ ಎ.ಎಚ್. ಆನಂದ್ ಅವರು, ಮುಂದಿನ ದಿನಗಳಲ್ಲಿ ನಿರುದ್ಯೋಗ ಸೇರಿ ಪದವೀಧರರ ಸಮಸ್ಯೆಗಳಿಗೆ ಪರಿಹಾರ ನೀಡುವ ಹಾಗೂ ಮೇಲ್ಮನೆಯಲ್ಲಿ ಬೆಂಗಳೂರಿನ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವ ಧ್ಯೇಯೋದ್ದೇಶ ಇಟ್ಟುಕೊಂಡಿದ್ದೇನೆ. ಹೀಗಾಗಿ ಜನ ಸೇವೆ ಮಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ | OBC Reservation : ಒಬಿಸಿ ಮೀಸಲಾತಿಯಲ್ಲಿ ಸಣ್ಣ ಸಮುದಾಯಕ್ಕೆ ಅನ್ಯಾಯ: ನ್ಯಾ. ಭಕ್ತವತ್ಸಲ ಅಸಮಾಧಾನ

ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್, ಬಿಜೆಪಿ ನಾಯಕರಾದ ತಮ್ಮೇಶ್ ಗೌಡ, ಬಿಬಿಎಂಪಿ ಮಾಜಿ ಉಪ ಮೇಯರ್ ಹರೀಶ್ ಕುಮಾರ್, ಒಕ್ಕಲಿಗರ ಸಂಘದ ನಿರ್ದೇಶಕ ಆಂಜಿನಪ್ಪ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

Exit mobile version