ಬೆಂಗಳೂರು: ಅಮೆಚೂರ್ ಒಲಿಂಪಿಯ ಇಂಡಿಯಾ-2022 ಆವೃತ್ತಿಯಲ್ಲಿ ಮಹಿಳೆಯರ ಫಿಟ್ನೆಸ್ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ನಗರದ ಪ್ರಿಯಾಂಕಾ ದೇಬನಾಥ್ನಾ ಅವರು ಬೆಳ್ಳಿ ಪದಕ ಪಡೆದಿದ್ದಾರೆ.
ಸುಮಾರು 12 ರಾಜ್ಯ ಹಾಗೂ 12 ದೇಶಗಳಿಂದ ಕ್ರೀಡಾಪಟುಗಳು ಪಾಲ್ಗೊಂಡಿದ್ದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪ್ರಿಯಾಂಕ ದೇಬನಾಥ್ನಾ ಬೆಳ್ಳಿ ಪದಕ ಪಡೆದಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯ ಎಚ್ಎಂಎಸ್ ಸ್ವೆಟ್ ಲೈಫ್‌ನಲ್ಲಿ ತರಬೇತಿ ಪಡೆಯುತ್ತಿರುವ ಇವರು, ಮುಂಬೈನಲ್ಲಿ ನಡೆದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಕರ್ನಾಟಕಕ್ಕೆ ಬೆಳ್ಳಿ ಪದಕವನ್ನು ತಂದುಕೊಟ್ಟಿದ್ದಾರೆ.
ಇದನ್ನೂ ಓದಿ | FIFA World Cup | ಮಾಜಿ ಚಾಂಪಿಯನ್ ಫ್ರಾನ್ಸ್ ತಂಡ ಕ್ವಾರ್ಟರ್ ಫೈನಲ್ಸ್‌ಗೆ ಪ್ರವೇಶ; ಪೋಲೆಂಡ್ ನಿರ್ಗಮನ