ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತದೆ ಎಂದು ಈಗಾಗಲೆ ಘೊಷಣೆ ಮಾಡಿರುವ ಕಾಂಗ್ರೆಸ್, ಇದೀಗ ಮತ್ತೊಂದು ಘೋಷಣೆ ಮಾಡಿದೆ. ಕರ್ನಾಟಕದ ಪ್ರತಿ ಮನೆಯ ಒಡತಿಗೆ ಮಾಸಿಕ 2 ಸಾವಿರ ರೂ. ನೀಡಲಾಗುತ್ತದೆ ಎಂದು ಘೋಷಣೆ ಮಾಡಿದೆ.
ಕಾಂಗ್ರೆಸ್‌ನಿಂದ ಆಯೋಜಿಸಿರುವ ನಾ-ನಾಯಕಿ ಅಭಿಯಾನದ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ನೆರೆದಿದ್ದ ಮಹಿಳೆಯರ ಎದುರು ʼಗೃಹಲಕ್ಷ್ಮೀʼ ಯೋಜನೆಯ ಗ್ಯಾರಂಟಿ ಚೆಕ್‌ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸಹಿ ಮಾಡಿ ಪ್ರಿಯಾಂಕಾ ಗಾಂಧಿಯವರಿಗೆ ನೀಡಲಾಯಿತು.
ಎಲ್‌ಪಿಜಿ ದರ ಹೆಚ್ಚಾಗಿದೆ, ತೈಲ ಬೆಲೆ ಹೆಚ್ಚಾಗಿದೆ. ಎಲ್ಲ ಬೆಲೆಗಳೂ ಹೆಚ್ಚಾಗಿರುವುದರಿಂದ ಈ ಹಣ ನೀಡಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಇದನ್ನೂ ಓದಿ | Congress Guarantee | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ಉಚಿತ ವಿದ್ಯುತ್: ಪ್ರಜಾಧ್ವನಿ ಯಾತ್ರೆಯಲ್ಲಿ ಮೊದಲನೆ ಘೋಷಣೆ