ಬೆಂಗಳೂರು: 18 ತಿಂಗಳು ಬಾಕಿ ಉಳಿಸಿಕೊಂಡಿರುವ ತುಟ್ಟಿಭತ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಸರ್ಕಾರಿ ನೌಕರರು (Protest) ಪ್ರತಿಭಟನೆಗಿಳಿದಿದ್ದಾರೆ. ಇಂದಿನ ಪ್ರತಿಭಟನೆ ಸರ್ಕಾರಕ್ಕೆ ಎಚ್ಚರಿಕೆ ಕೆಲಸವಾಗಿ ಇರಲಿದ್ದು, ಸರ್ಕಾರ ಎಚ್ಚೆತ್ತುಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ.
ನೌಕರರ ಬೇಡಿಕೆಗಳೇನು?
- ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರ, ಹೈಕೋರ್ಟ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಸೌಲಭ್ಯಗಳ ಪರಿಷ್ಕರಣೆ ಮಾಡಲು 7ನೇ ವೇತನ ಆಯೋಗ ರಚಿಸಬೇಕು.
- ಕೋವಿಡ್ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ ನೌಕರರ ಮತ್ತು ಪಿಂಚಣಿದಾರರ 18 ತಿಂಗಳ ಬಾಕಿ ತುಟ್ಟಿಭತ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು.
- 2022ರ ಜುಲೈನಿ೦ದ ಜಾರಿಗೆ ಬರುವಂತೆ ಶೇ.25 ರಷ್ಟು ಮಧ್ಯಂತರ ಪರಿಹಾರವನ್ನು ಕೂಡಲೇ ಘೋಷಿಸಬೇಕು.
- ನೂತನ ಪಿಂಚಣಿ ಯೋಜನೆಯನ್ನು (NPS) ರದ್ದುಪಡಿಸಿ, ನಿಶ್ಚಿತ ಪಿಂಚಣಿ ಪದ್ಧತಿ ಮರು ಸ್ಥಾಪಿಸಬೇಕು.
- ಆಡಳಿತ ಸುಧಾರಣಾ ಆಯೋಗ-2ರ ನೌಕರ-ವಿರೋಧಿ ಶಿಫಾರಸುಗಳನ್ನು ಕೈಬಿಡುವುದು ಹಾಗೂ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ | ನೌಕರ ಮಿತ್ರ | ಸರ್ಕಾರಿ ನೌಕರರು ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿಯೇ ವಾಸಿಸುವುದು ಕಡ್ಡಾಯವೇ?