Pustaka Sante : ವೀರಲೋಕ ಪುಸ್ತಕ ಸಂತೆ ಅದ್ಧೂರಿ ಆರಂಭ, ವೆರಿ ಗುಡ್ ಎಂದು ಬೆನ್ನುತಟ್ಟಿದ ಸಿಎಂ ಸಿದ್ದರಾಮಯ್ಯ - Vistara News

ಬೆಂಗಳೂರು

Pustaka Sante : ವೀರಲೋಕ ಪುಸ್ತಕ ಸಂತೆ ಅದ್ಧೂರಿ ಆರಂಭ, ವೆರಿ ಗುಡ್ ಎಂದು ಬೆನ್ನುತಟ್ಟಿದ ಸಿಎಂ ಸಿದ್ದರಾಮಯ್ಯ

Pustaka Sante : ವೀರಲೋಕ ಪ್ರಕಾಶನ ಆಯೋಜಿಸಿರುವ ಪುಸ್ತಕ ಸಂತೆ ಶನಿವಾರ ಆರಂಭಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಇದನ್ನು ಉದ್ಘಾಟಿಸಿ ಇದೊಂದು ಉತ್ತಮ ಪ್ರಯತ್ನ ಎಂದರು.

VISTARANEWS.COM


on

Pustaka sante CM Siddaramaiah1Pustaka sante CM Siddaramaiah1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಪುಸ್ತಕೋದ್ಯಮದಲ್ಲಿ ಹೊಸ ಕ್ರಾಂತಿ ಎಂದೇ ಪರಿಗಣಿತವಾದ ವೀರಲೋಕ ಪ್ರಕಾಶನದ (Veeraloka Prakashana) ಅತಿ ವಿಶಿಷ್ಟ ʻಪುಸ್ತಕ ಸಂತೆʼ (Pustaka Sante) ಶನಿವಾರ ಅದ್ಧೂರಿಯಾಗಿ ಆರಂಭಗೊಂಡಿದೆ. ನಗರದ ಎಚ್.ಎಸ್.ಆರ್ ಬಡಾವಣೆಯ ಸ್ವಾಭಿಮಾನ ಉದ್ಯಾನವನದಲ್ಲಿ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ (ಫೆ 11 ಮತ್ತು 12) ನಡೆಯುವ ಈ ಪುಸ್ತಕ ಸಂತೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಉದ್ಘಾಟಿಸಿದರು. ಇದೊಂದು ಉತ್ತಮ ಪ್ರಯತ್ನ ಎಂದು ಅವರು ಪ್ರಶಂಸಿಸಿದರು.

ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪುಸ್ತಕ ಮತ್ತು ಪತ್ರಿಕೆಗಳನ್ನು ಕೊಂಡು ಓದುವ ಅಭಿರುಚಿ ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಿ ಎಂದು ನೆರೆದಿದ್ದ ಓದುಗರಿಗೆ ಕರೆ ನೀಡಿದರು.

Pustaka sante CM Siddaramaiah

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ, ಲೇಖಕರಾದ ಬರಗೂರು ರಾಮಚಂದ್ರಪ್ಪ, ಮಾಜಿ ಸಂಸದ ಉಗ್ರಪ್ಪ ಮತ್ತು ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Pustaka sante CM Siddaramaiah1

ಕನ್ನಡ ಬರಹಗಾರರು ಮತ್ತು ಪ್ರಕಾಶಕರ ಸಂಘದ ರಾಜ್ಯಾಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕಾರ್ಯದರ್ಶಿಗಳಾದ ಆರ್. ದೋಡ್ಡೇಗೌಡ, ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಕಂಬತ್ತಳ್ಳಿ, ರೋಟರಿ ಕ್ಲಬ್‌ನ ಮುಖ್ಯಸ್ಥ ರಾಜೀವ್ ಥ್ಯಾಕಟ್, ಪುಸ್ತಕಸಂತೆಯ ಆಯೋಜಕರಾದ ವೀರಕಪುತ್ರ ಶ್ರೀನಿವಾಸ ಮತ್ತಿತರರು ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಎರಡನೇ ದಿನದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗಿಯಾಗಿ, ಮಕ್ಕಳ ಸಂತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Pustaka sante CM Siddaramaiah3

ನೂರಕ್ಕೂ ಹೆಚ್ಚು ಪ್ರಕಾಶಕರು, ನೂರಾರು ಸ್ಟಾಲ್‌ಗಳು

ಎಚ್.ಎಸ್.ಆರ್ ಬಡಾವಣೆಯ ಸ್ವಾಭಿಮಾನ ಉದ್ಯಾನವನದಲ್ಲಿ ನಡೆಯುತ್ತಿರುವ ‘ಪುಸ್ತಕ ಸಂತೆ’ಯಲ್ಲಿ ನೂರಕ್ಕೂ ಹೆಚ್ಚು ಪ್ರಕಾಶಕರು ತಮ್ಮ ಸ್ಟಾಲ್‌ಗಳನ್ನು ತೆರೆದಿದ್ದಾರೆ. ಸಾಕಷ್ಟು ಓದುಗರು, ಬರಹಗಾರರು ಮತ್ತು ಪುಸ್ತಕಾಭಿಮಾನಿಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

CM Siddaramaiah released pustaka sante poster

ಜನರನ್ನು ಮತ್ತೆ ಪುಸ್ತಕಗಳ ಕಡೆಗೆ ಸೆಳೆಯುವ ಪ್ರಯತ್ನ

ಮೊಬೈಲ್‌, ಟಿವಿ, ಸೋಷಿಯಲ್‌ ಮೀಡಿಯಾಗಳಲ್ಲಿ ಕಳೆದುಹೋಗಿರುವ ಜನರಲ್ಲಿ ಮತ್ತೆ ಓದಿನ ಆಸಕ್ತಿ ಬೆಳೆಸುವುದು, ಪುಸ್ತಕಗಳ ಬಗೆಗಿನ ಕಾಳಜಿಯನ್ನು ಉದ್ದೀಪಿಸುವ ಉದ್ದೇಶದ ಈ ಪುಸ್ತಕ ಸಂತೆ ಕನ್ನಡದ ಮಟ್ಟಿಗೆ ಹೊಸ ಪ್ರಯತ್ನವಾಗಿದೆ. ಒಂದೇ ಪ್ರದೇಶದಲ್ಲಿ ಸಾವಿರಾರು ವೈವಿಧ್ಯಮಯ ಪುಸ್ತಕಗಳ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಗಮನ ಸೆಳೆದಿದೆ. ಎರಡು ದಿನಗಳಲ್ಲಿ 20,000ಕ್ಕೂ ಅಧಿಕ ಪುಸ್ತಕಾಭಿಮಾನಿಗಳು ಪುಸ್ತಕ ಸಂತೆಗೆ ಭೇಟಿ ನೀಡುವ ಸಾಧ್ಯತೆ ಇದೆ. (ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದಾದ ಸಂಖ್ಯೆಗಳು 7022122121, 8861212172)

ಇದನ್ನೂ ಓದಿ: Pustaka Sante: ಎಚ್ಎಸ್ಆರ್ ಲೇಔಟ್‌ನಲ್ಲಿ ಫೆ. 10, 11 ರಂದು ಪುಸ್ತಕ ಸಂತೆ

ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ, ವಿಸ್ತಾರ ಪ್ರಕಾಶನದ ಪುಸ್ತಕಗಳೂ ಲಭ್ಯ

ಅತ್ಯಂತ ವಿಶಿಷ್ಟ ಪರಿಕಲ್ಪನೆಯ ಈ ಪುಸ್ತಕ ಸಂತೆಗೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ. ಅದರ ಜತೆಗೆ ವಿಸ್ತಾರ ಪ್ರಕಾಶನದ ಪುಸ್ತಕಗಳ ಮಾರಾಟದ ಮಳಿಗೆಯೂ ಸಂತೆಯಲ್ಲಿ ಇರಲಿದೆ.

ಮಳಿಗೆಯಲ್ಲಿ ಲಭ್ಯವಿರುವ ವಿಸ್ತಾರ ಪ್ರಕಾಶನದ ಜನಪ್ರಿಯ ಪುಸ್ತಕಗಳು

1.ಹೊಸತಿಳಿವಿನ ಬಾಗಿಲು: ವಿಸ್ತಾರ ಭಾಗ -1 (ಲೇಖಕರು: ಹರಿಪ್ರಕಾಶ್‌ ಕೋಣೆಮನೆ)
2.ಹರಿವ ನದಿಗೆ ಸಾವಿರ ಕಾಲು: ವಿಸ್ತಾರ ಭಾಗ-2 (ಲೇಖಕರು: ಹರಿಪ್ರಕಾಶ್‌ ಕೋಣೆಮನೆ)
3.ರಾಜ ಮಾರ್ಗ: ಇವು ಸೋತವರನ್ನೂ ಗೆಲ್ಲಿಸುವ ಕಥೆಗಳು (ಲೇಖಕರು: ರಾಜೇಂದ್ರ ಭಟ್‌ ಕೆ.)
4. ನಮ್ಮದೇ ಕಥೆಗಳು; ಇದು ದಂತ ಕಥೆಯಲ್ಲ, ನಮ್ಮೆಲ್ಲರ ಸ್ವಂತ ಕಥೆ (ಲೇಖಕರು: ಕೃಷ್ಣ ಭಟ್‌ ಅಳದಂಗಡಿ)
5. ಅಮ್ಮ ಹೇಳುವ ಚಂದದ ಕಥೆಗಳು (ಲೇಖಕರು: ಅಲಕಾ ಕಟ್ಟೆಮನೆ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

HD Revanna Jailed: ಇನ್ನು ಮೂರು ದಿನ ಎಚ್‌ಡಿ ರೇವಣ್ಣ ಭೇಟಿ ಯಾರಿಗೂ ಇಲ್ಲ

HD Revanna Jailed: ರೇವಣ್ಣ ಅವರನ್ನು ಆಪ್ತರು ಬಂದು ಪ್ರತಿದಿನ ಭೇಟಿಯಾಗುತ್ತಿದ್ದರು. ಆದರೆ ಇಂದು ಸೇರಿದಂತೆ ಮೂರು ದಿನ ರೇವಣ್ಣ ಯಾರನ್ನೂ ಭೇಟಿ ಮಾಡಲು ಸಾಧ್ಯವಿಲ್ಲದಾಗಿದೆ. ಇಂದು ಅಕ್ಷಯ ತೃತೀಯ ಸರ್ಕಾರಿ ರಜೆ, ನಾಳೆ ಎರಡನೇ ಶನಿವಾರ ರಜೆ, ನಾಡಿದು ಭಾನುವಾರ ಹೀಗೆ ಮೂರು ದಿನ ಸರ್ಕಾರಿ ರಜೆ ಹಿನ್ನೆಲೆಯಲ್ಲಿ, ಮೂರು ದಿನ ಜೈಲು ಬಂಧಿಗಳ ಭೇಟಿಗೆ ಅವಕಾಶವಿಲ್ಲ.

VISTARANEWS.COM


on

hd revanna jailed 2
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (physical Abuse) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರು ನಿನ್ನೆ ಜಾಮೀನು (bail) ಸಿಗದ ಹಿನ್ನೆಲೆಯಲ್ಲಿ ಮತ್ತಷ್ಟು ಮಂಕಾಗಿದ್ದು, ಮೌನವಾಗಿ ದಿನ ಕಳೆದಿದ್ದಾರೆ. ಇನ್ನು ಮೂರು ದಿನ ಅವರನ್ನು ಆಪ್ತರೂ ಭೇಟಿಯಾಗುವಂತಿಲ್ಲ.

ರೇವಣ್ಣ ಅವರನ್ನು ಆಪ್ತರು ಬಂದು ಪ್ರತಿದಿನ ಭೇಟಿಯಾಗುತ್ತಿದ್ದರು. ಆದರೆ ಇಂದು ಸೇರಿದಂತೆ ಮೂರು ದಿನ ರೇವಣ್ಣ ಯಾರನ್ನೂ ಭೇಟಿ ಮಾಡಲು ಸಾಧ್ಯವಿಲ್ಲದಾಗಿದೆ. ಇಂದು ಅಕ್ಷಯ ತೃತೀಯ ಸರ್ಕಾರಿ ರಜೆ, ನಾಳೆ ಎರಡನೇ ಶನಿವಾರ ರಜೆ, ನಾಡಿದು ಭಾನುವಾರ ಹೀಗೆ ಮೂರು ದಿನ ಸರ್ಕಾರಿ ರಜೆ ಹಿನ್ನೆಲೆಯಲ್ಲಿ, ಮೂರು ದಿನ ಜೈಲು ಬಂಧಿಗಳ ಭೇಟಿಗೆ ಅವಕಾಶವಿಲ್ಲ.

ಆಪ್ತರ ಭೇಟಿಯಲ್ಲಿ ರೇವಣ್ಣ ತಮ್ಮ ದುಗುಡ ದುಮ್ಮಾನ ಹೇಳಿಕೊಂಡು ಮನಸ್ಸು ಹಗುರ ಮಾಡಿಕೊಳ್ಳುತ್ತಿದ್ದರು. ಇದೀಗ ಅದಕ್ಕೂ ಸರ್ಕಾರಿ ರಜೆ ಅಡ್ಡಿಯಾಗಿದೆ. ಪ್ರತಿ ಶುಕ್ರವಾರ ಜೈಲುವಾಸಿಗಳಿಗೆ ಚಿಕನ್ ಊಟ ನೀಡಲಾಗುತ್ತಿತ್ತು. ಆದರೆ ಇಂದು ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ನಾನ್ ವೆಜ್ ನೀಡಲಾಗುತ್ತಿಲ್ಲ. ಭಾನುವಾರ ಚಿಕನ್ ನೀಡಲಿದ್ದಾರೆ ಎಂದು ಗೊತ್ತಾಗಿದೆ. ಇಂದು ನಿತ್ಯ ಕೈದಿಗಳಿಗೆ ನೀಡಲಾಗುವ ಉಪ್ಪಿಟ್ಟು, ಚಿತ್ರಾನ್ನವನ್ನೇ ಅವರಿಗೂ ನೀಡಲಾಗಿದ್ದು, ಅದನ್ನು ಅವರು ಸೇವಿಸಿಲ್ಲ.

ಸಾಮಾನ್ಯ ವಿಚಾರಣಾಧೀನ ಕೈದಿಯಂತೆ ದಿನ ಕಳೆಯುತ್ತಿರುವ ರೇವಣ್ಣ ಅವರಿಗೆ ನಿನ್ನೆ ಜಾಮೀನು ಸಿಗದೆ ನಿರಾಸೆಯಾಗಿದೆ. ಬೇಲ್ ಸಿಗದ ಹಿನ್ನೆಲೆಯಲ್ಲಿ ಮತ್ತಷ್ಟು ಮಂಕಾಗಿರುವ ರೇವಣ್ಣ ಆಪ್ತರ ಭೇಟಿ ವೇಳೆ ಬೇಸರ ಹೊರಹಾಕಿದ್ದಾರೆ. ರಾತ್ರಿ ಊಟ ಕೂಡ ತಡವಾಗಿ ಮಾಡಿದ್ದಾರೆ. ರಾತ್ರಿಯೂಟಕ್ಕೆ ಮುದ್ದೆ, ಚಪಾತಿ, ಅನ್ನ, ಸಾಂಬಾರ್ ಮತ್ತು ಮಜ್ಜಿಗೆ ನೀಡಲಾಗಿತ್ತು.

ಹೊಟ್ಟೆ ನೋವು ಹಿನ್ನೆಲೆಯಲ್ಲಿ ರೇವಣ್ಣ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ. ಬೆಳಗ್ಗೆ ಮತ್ತು ಸಂಜೆ ವೇಳೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜೈಲಿನ ಮೆನು ಪ್ರಕಾರ ಇಂದು ಟೊಮ್ಯಾಟೊ ಬಾತ್ ನೀಡಲಿದ್ದಾರೆ. ಇಂದು ಬೆಳಗ್ಗೆ ಕಾಫಿ ಕುಡಿಯುತ್ತಾ ದಿನಪತ್ರಿಕೆಯ ಮೇಲೆ ಕಣ್ಣಾಡಿಸಿದ್ದಾರೆ ಎಂದು ಗೊತ್ತಾಗಿದೆ.

“ಈ ಪ್ರಕರಣದಲ್ಲಿ ನಾನಿಲ್ಲ ಅಂದಾಗ ಹೀಗಾದಾಗ ಮನಸ್ಸಿನಲ್ಲಿ ಬೇಜಾರಾಗುತ್ತೆ. ಸೋಮವಾರ ಏನಾಗುತ್ತೆ ನೋಡೋಣ. ನ್ಯಾಯ ದೊರಕುತ್ತೆ ಅನ್ನೋದು ಅವರ ಅಭಿಪ್ರಾಯ” ಎಂದು ಗುರುವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣರನ್ನು ಭೇಟಿಯಾಗಿ ಬಂದ ಬಳಿಕ ಶಾಸಕ ಸಿ.ಎನ್ ಬಾಲಕೃಷ್ಣ ಹೇಳಿದ್ದಾರೆ. “ನಮ್ಮ ಜಿಲ್ಲೆ ಮುಖಂಡರು ಅವರು. ಅವರಿಗೆ ಧೈರ್ಯ ತುಂಬಿ ಬಂದಿದ್ದೀವಿ. ಕಾನೂನು ರೇವಣ್ಣ ಪರ ಆಗುತ್ತೆ ಅನ್ನೋ ನಂಬಿಕೆ ಇದೆ. ಈ ರೀತಿಯಾದ ದ್ವೇಷದ ರಾಜಕಾರಣ ಯಾರಿಗೂ ಆಗಬಾರದು. ಈ ರೀತಿಯಾದ ರಾಜಕೀಯ ದ್ವೇಷ ಖಂಡಿಸುತ್ತೇನೆ. ರೇವಣ್ಣ ಮೇಲೆ ಈ ರೀತಿ ಆಪಾದನೆ ಮಾಡಿ ಕೇಸ್ ಆಗಿರುವುದು ತಪ್ಪು” ಎಂದಿದ್ದಾರೆ.

ಜಾಮೀನು ಅರ್ಜಿ ಸೋಮವಾರಕ್ಕೆ ಮುಂದೂಡಿಕೆ

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೆ ಗುರುವಾರ ಸಹ ಜಾಮೀನು ಸಿಕ್ಕಿಲ್ಲ. ಸಾಕಷ್ಟು ವಾದ – ಪ್ರತಿವಾದದ ಬಳಿಕ ಜನಪ್ರತಿನಿಧಿಗಳ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಮಾಡಿದ್ದು, ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ
ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ವಾದ ಮಂಡಿಸಿದ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ತಪ್ಪು ಮಾಹಿತಿ ನೀಡಿಲ್ಲ. ಬೇಲ್ ಅರ್ಜಿ ಊರ್ಜಿತವಲ್ಲವೆಂದು ಎಸ್‌ಪಿಪಿ ವಾದ ಮಂಡಿಸಿದ್ದಾರೆ. ಇದು ಹೇಗೆ ಸಾಧ್ಯ? ಎಂದು ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. 2023ರ ತೀಸ್ತಾ ಸೆಟಲ್ ವಾಡ್‌ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ನಾಗೇಶ್‌, ಸೆಟಲ್ ವಾಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ನಿರಂಜನ್ ಸಿಂಗ್ ಕೇಸ್‌ನಲ್ಲಿಯೂ ಜಾಮೀನು ಉಲ್ಲೇಖವಿದೆ. 22 ತೀರ್ಪುಗಳಲ್ಲಿ ನಿರಂಜನ್ ಕೇಸ್‌ ಅನ್ನು ಅನುಸರಿಸಲಾಗಿದೆ. ಕಸ್ಟಡಿಯಲ್ಲಿದ್ದಾಗಲೂ ಜಾಮೀನು ನೀಡಿರುವ ಉಲ್ಲೇಖವಿದೆ. ಒಂದೊಂದು ದಿನ ಒಬ್ಬೊಬ್ಬರನ್ನು ಎಸ್‌ಪಿಪಿಯಾಗಿ ನೇಮಕ ಮಾಡಲಾಗುತ್ತಿದೆ. ಮೊದಲು ಜಗದೀಶ್ ಇದ್ದರು, ಈಗ ಜಯ್ನಾ ಕೊಠಾರಿ ಇದ್ದಾರೆ. ಎಸ್‌ಪಿಪಿ ನೇಮಕಕ್ಕೂ ಕಾನೂನಿನಲ್ಲಿ ಕೆಲ ಕ್ರಮಗಳಿವೆ ಎಂದು ವಾದಿಸಿದರು.

ಈ ವೇಳೆ ವಾದ ಮಂಡನೆಗೆ ಜಯ್ನಾ ಕೊಠಾರಿ ಕಾಲಾವಕಾಶ ಕೋರಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್‌, ಈಗಾಗಲೇ ಆಕ್ಷೇಪಣೆಗೆ 3 ಬಾರಿ ಸಮಯ ನೀಡಲಾಗಿದೆ. ಇನ್ನೂ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ

ಈ ವೇಳೆ ವಾದ ಮುಂದುವರಿಸಿದ ನಾಗೇಶ್‌, ಪ್ರಕರಣದಲ್ಲಿ ಹಾಕಿದ ಸೆಕ್ಷನ್‌ಗಳ ಬಗ್ಗೆ ಉಲ್ಲೇಖಿದರು. ಸಂತ್ರಸ್ತೆ ಎಲ್ಲಿದ್ದಾರೆ, ಸಂತ್ರಸ್ತೆಗೆ ಏನಾದರೂ ಗಾಯವಾಗಿದೆಯಾ? ಸಂತ್ರಸ್ತೆಯ ಪರಿಸ್ಥಿತಿಯ ಬಗ್ಗೆ ಎಸ್‌ಐಟಿ ಮಾತನಾಡುತ್ತಿಲ್ಲ. ಸಂತ್ರಸ್ತೆ ಪತ್ತೆಯಾಗದ ಕಾರಣ ನಿರೀಕ್ಷಣಾ ಜಾಮೀನು ರಿಜೆಕ್ಟ್ ಆಗಿತ್ತು. ಮಹಿಳೆಯ ಸುರಕ್ಷತೆ ಸಂಬಂಧ ನಿರೀಕ್ಷಣಾ ಜಾಮೀನು ನಿರಾಕರಣೆ ಮಾಡಲಾಗಿತ್ತು. 364(a), 365 ಅಡಿ ಕೇಸ್ ದಾಖಲಿಸುವ ಅಗತ್ಯವೇ ಇರಲಿಲ್ಲ ಎಂದು ವಕೀಲರಾದ ನಾಗೇಶ್‌ ಅವರು ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನೂ ಓದಿ: Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

Continue Reading

ಕ್ರೈಂ

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

Prajwal Revanna case: ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ದೂರು ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ವಕೀಲ ದೇವರಾಜೇಗೌಡ ಮೇಲೂ ಲೈಂಗಿಕ ದೌರ್ಜನ್ಯ ದೂರು

ಪೆನ್ ಡ್ರೈವ್ ಪ್ರಕರಣದಲ್ಲಿ (Prajwal Revanna Case) ಹೋರಾಟ ನಡೆಸುತ್ತಿದ್ದ ವಕೀಲ ದೇವರಾಜೇಗೌಡ (Devaraje Gowda) ವಿರುದ್ದ ಎಫ್ಐಆರ್ ದಾಖಲಾಗಿದೆ. ಮಹಿಳೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸ್​ಆ್ಯಪ್​ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿದೆ. ಅದೇ ರೀತಿ ಬಳಿಕ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವೂ ಕೇಳಿ ಬಂದಿದೆ.

ಮಹಿಳೆಗೆ ಫೋನ್ ಮಾಡಿ ತಾವು ಜೊತೆಯಲ್ಲಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ ಆರೋಪವೂ ದಾಖಲಾಗಿದೆ. ಅದೇ ರೀತಿ ಮಹಿಳೆಗೆ ವಿಡಿಯೋ ಕಾಲ್‌ ಮಾಡಿ‌ ಖಾಸಗಿ ಅಂಗಗಳನ್ನು ಪ್ರದರ್ಶನದ ಮಾಡಿರುವ ಆರೋಪವೂ ದಾಖಲಾಗಿದೆ.

ತಾನು ಹೇಳಿದ ಹಾಗೆ ಕೇಳಬೇಕು.ಇಲ್ಲದೇ ಹೋದರೆ ಪತಿಯ ಜೀವಕ್ಕೆ ಪಾಯ ತಂದೊಡ್ಡುವುದಾಗಿ ದೇವರಾಜೇಗೌಡ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ತನ್ನ ಬೆಂಬಲಿಗರನ್ನು ಕಳುಹಿಸಿ ಜೀವ ಬೆದರಿಕೆ ಹಾಕಿದ ಅರೋಪವೂ ಕೇಳಿ ಬಂದಿದೆ. ಹಲವಾರು ಆರೋಪಗಳ ಮೇಲೆ ದೂರು ದಾಖಲಾಗಿದೆ. ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೂ ನಿನ್ನೆಯೂ ಸಹ ಜಾಮೀನು ಸಿಕ್ಕಿಲ್ಲ. ಸಾಕಷ್ಟು ವಾದ – ಪ್ರತಿವಾದದ ಬಳಿಕ ಜನಪ್ರತಿನಿಧಿಗಳ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದಿದೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಮಾಡಿದ್ದು, ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ
ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Continue Reading

ಮಳೆ

Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನ ಭಾರಿ ಮಳೆಯಾಗುವ (Heavy Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜೋರಾಗಿ ಗಾಳಿ ಬೀಸುವುದರಿಂದ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಕರಾವಳಿಐಲ್ಲಿ ಮಧ್ಯಮ ಮಳೆಯಾಗುವ (Rain News) ನಿರೀಕ್ಷೆ ಇದೆ. ಜತೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ರಾಯಚೂರು ಹಾಗೂ ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯನಗರ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿರಲಿದೆ.

ಇದನ್ನೂ ಓದಿ: Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಸಹಿತ ಬಿರುಗಾಳಿ (ಗಂಟೆಗೆ 40-50 ಕಿ.ಮೀ) ಬೀಸಲಿದೆ. ಹೀಗಾಗಿ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಿದೆ. ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

ಅಕ್ಷಯ ತೃತೀಯ ಅಂಗವಾಗಿ ಈ ಬಾರಿ ವಿಶೇಷವಾಗಿ ಬೆಂಗಳೂರಿನಲ್ಲಿರುವ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ 50 ಸಾವಿರ ರೂ. ಮೇಲ್ಪಟ್ಟು ಖರೀದಿಸುವ ಗ್ರಾಹಕರಿಗೆ ಅಯೋಧ್ಯೆಯ ಶ್ರೀ ಬಾಲರಾಮನ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಬಾಲ ರಾಮನ ಬೆಳ್ಳಿ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದೆ.ಕಾರ್ಯಕ್ರಮಕ್ಕೆ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ರಾಯಬಾರಿ, ಬಿಗ್‌ಬಾಸ್ ಖ್ಯಾತಿಯ ನಮ್ರತಾ ಗೌಡ ಆಗಮಿಸಲಿದ್ದಾರೆ.

VISTARANEWS.COM


on

Akshaya Tritiya Bala Rama Silver Idol gift from Sri Sai Gold Palace in bengaluru
Koo

ಬೆಂಗಳೂರು: ಅಕ್ಷಯ ತೃತೀಯ (Akshaya Tritiya 2024) ಅಂಗವಾಗಿ ಈ ಬಾರಿ ವಿಶೇಷವಾಗಿ ಬೆಂಗಳೂರಿನಲ್ಲಿರುವ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ (Sri Sai Gold Palace) 50 ಸಾವಿರ ರೂ. ಮೇಲ್ಪಟ್ಟು ಖರೀದಿಸಿದ ಗ್ರಾಹಕರಿಗೆ ಅಯೋಧ್ಯೆಯ ಶ್ರೀ ಬಾಲರಾಮನ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಬಾಲ ರಾಮನ ಬೆಳ್ಳಿ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದೆ.

ಇದನ್ನೂ ಓದಿ: Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

ಅಕ್ಷಯ ತೃತೀಯದಂದು ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ಎಲ್ಲಾ ಶಾಖೆಗಳು ಬೆಳಗ್ಗೆ 7 ರಿಂದ ರಾತ್ರಿ 11 ಗಂಟೆಯವರೆಗೂ ತೆರೆದಿರುತ್ತವೆ.

ಇದನ್ನೂ ಓದಿ: SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

ಮೇ 10 ರಂದು ಶುಕ್ರವಾರ ಆಚರಿಸುವ ಅಕ್ಷಯ ತೃತೀಯ ಕಾರ್ಯಕ್ರಮಕ್ಕೆ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ರಾಯಭಾರಿ ಬಿಗ್‌ಬಾಸ್ ಖ್ಯಾತಿಯ ನಮ್ರತಾ ಗೌಡ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading
Advertisement
hd revanna jailed 2
ಕ್ರೈಂ3 mins ago

HD Revanna Jailed: ಇನ್ನು ಮೂರು ದಿನ ಎಚ್‌ಡಿ ರೇವಣ್ಣ ಭೇಟಿ ಯಾರಿಗೂ ಇಲ್ಲ

Aravind Kejriwal
ದೇಶ35 mins ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ45 mins ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 202448 mins ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Virat Kohli
ಐಪಿಎಲ್ 202458 mins ago

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Akshaya Tritiya 2024
ಪ್ರಮುಖ ಸುದ್ದಿ1 hour ago

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024
ಧಾರ್ಮಿಕ1 hour ago

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

America v/s Russia
ವಿದೇಶ1 hour ago

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Actor Prabhas
ಸಿನಿಮಾ2 hours ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Prajwal Revanna Case
ಕ್ರೈಂ2 hours ago

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ13 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ13 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ20 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌