ಬೆಂಗಳೂರು: ಕಾಂಗ್ರೆಸ್ ಸರ್ಕಾರವಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ಇತ್ತೀಚೆಗೆ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದರ ಹಿನ್ನೆಲೆಯಲ್ಲಿ ʻಧ್ವೇಷ ಬಿಡಿ ಸಂಸದ ತೇಜಸ್ವಿ ಸೂರ್ಯʼ ಅಭಿಯಾಣಕ್ಕೆ ಕಾಂಗ್ರೆಸ್ ಚಾಲನೆ ನೀಡಿದೆ.
ಅಭಿಯಾನದ ಆರಂಭವಾಗಿ, ಶ್ರೀನಗರದಲ್ಲಿರುವ ಕೆಪಿಸಿಸಿ ವಕ್ತಾರ ಡಾ.ಶಂಕರ್ ಗುಹಾ ದ್ವಾರಕಾನಾಥ್ ಅವರ ಕಚೇರಿಯಲ್ಲಿ ಶುಭಕೃತ್ ನಾಮ ಸಂವತ್ಸರದ ಶ್ರಾವಣ ಮಾಸದಲ್ಲಿ ಶುಕ್ಲಪಕ್ಷದ ದ್ವಾದಶಿ ತಿಥಿಯಂದು ಪಂಚ ಪುಷ್ಪಗಳಲ್ಲಿ ವಿಶೇಷವಾದ ಪಂಚದುರ್ಗಾ ಮಹಾಪೂಜೆ ನೆರವೇರಿಸಲಾಯಿತು.
ಪೂಜೆಯಲ್ಲಿ ಬಸವನಗುಡಿ ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಿದ್ದರು. ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿಸುಬ್ರಹ್ಮಣ್ಯ ಅವರಿಗೆ ಒಳ್ಳೆಯ ಮನಸ್ಸನ್ನು ದೇವರು ದಯಪಾಲಿಸಲಿ ಎಂದು ಪ್ರಾರ್ಥನೆ ಮಾಡಲಾಯಿತು.
ಇದನ್ನೂ ಓದಿ | ತೇಜಸ್ವಿ ಸೂರ್ಯ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ವಕ್ತಾರ ಡಾ.ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು ಬಂಧನ
ಕಾಂಗ್ರೆಸ್ ಸರ್ಕಾರವಿದ್ದರೆ ಕಲ್ಲು ಹೊಡೆಯಬಹುದಾಗಿತ್ತು ಎಂದು ಇತ್ತೀಚೆಗೆ ಸಂಸದರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯಿಂದ ಅಶಾಂತಿಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿತ್ತು. ಹಾಗಾಗಿ ‘Quit hatred Tejasvi Surya’ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಸಂಸದರಲ್ಲಿರುವ ದ್ವೇಷ, ಕ್ಲೇಶ, ದುಷ್ಟ ಬುದ್ಧಿಗಳು ದೂರವಾಗಲಿ, ತಮ್ಮ ಕ್ಷೇತ್ರದ ಜನರನ್ನು ಪ್ರೀತಿಯಿಂದ ಕಾಣುವಂತಾಗಲಿ ಎಂದು ಪೂಜೆ ಮಾಡಲಾಗುತ್ತಿದೆ ಎಂದು ಡಾ. ಶಂಕರ ಗುಹಾ ದ್ವಾರಕಾನಾಥ್ ತಿಳಿಸಿದ್ದಾರೆ. ಪೂಜೆಯ ಬಳಿಕ ಸಂಸದರಿಗೆ ಪ್ರಸಾದವನ್ನು ಕಳಿಸಿಕೊಡಲಾಗುತ್ತದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.
ಇದನ್ನೂ ಓದಿ | Audio Leak | ಕಾಂಗ್ರೆಸ್ ಸರ್ಕಾರ ಆಗಿದ್ರೆ ಕಲ್ಲು ಹೊಡೆಯಬಹುದಿತ್ತು ಎಂದ ತೇಜಸ್ವಿ!