ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ (Ragging Case) ಮಿತಿಮೀರಿದೆ. ಮೀಸೆ ಚಿಗುರದ ಯುವಕರು ಓಡಿಸೋಕ್ಕೆ ಬೈಕ್ ಸಿಕ್ಕರೆ ಸಾಕು ರಸ್ತೆಯಲ್ಲಿ ವ್ಹೀಲಿಂಗ್ (bike wheeling) ಮಾಡುತ್ತಾ, ಹೆಣ್ಮಕ್ಕಳಿಗೆ ರ‍್ಯಾಗಿಂಗ್ ಮಾಡುವುದು ಹೆಚ್ಚಾಗುತ್ತಿದೆ. ಸದ್ಯ ಇಂತಹದ್ದೆ ಘಟನೆಯೊಂದು ನಾಗರಭಾವಿ ಔಟರ್ ರಿಂಗ್ ರೋಡ್ ಬಳಿ ನಡೆದಿದೆ.
ಕುಟುಂಬದವರ ಜತೆ ಹೋಗುತ್ತಿದ್ದ ಮಹಿಳೆಯ ಹಿಂದೆ ಬಿದ್ದ ಕೆಲ ಪೋಲಿ ಹುಡುಗರು, ವ್ಹೀಲಿಂಗ್ ಮಾಡಿ ಭಯ ಪಡಿಸಿದ್ದಲ್ಲದೇ ರ‍್ಯಾಗಿಂಗ್ ಮಾಡಿದ್ದಾರೆ. ನಿನ್ನೆ ಭಾನುವಾರ ರಾತ್ರಿ 11.40ರ ಸುಮಾರಿಗೆ ಘಟನೆ ನಡೆದಿದೆ. ನೀತು ಬಳೆಗಾರ್ ಎಂಬಾಕೆ ಪೊಲೀಸರಿಗೆ ದೂರು ನೀಡಿದ್ದಾರೆ.
ನೀತು ಕುಟುಂಬಸ್ಥರ ಜತೆ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಪುಂಡರಿಬ್ಬರು ನಂಬರ್ ಪ್ಲೇಟ್ ಇಲ್ಲದ ಇರುವ ಡ್ಯೂಕ್ ಬೈಕ್‌ನಲ್ಲಿ ಬಂದು ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ. ಇದನ್ನೂ ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯನ್ನು ನಿಂದಿಸಿದ್ದಾರೆ. ಹೀಗಾಗಿ ನೀತು ಫೋಟೋ ಸಮೇತ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಜತೆಗೆ ಸೋಶಿಯಲ್ ಮೀಡಿಯಾದಲ್ಲಿ ಟ್ಯಾಗ್ ಮಾಡಿ ಬೆಂಗಳೂರಿನಲ್ಲಿ ಸಾಮಾನ್ಯ ಜನರಿಗೆ ಸೇಫ್ಟಿ ಇಲ್ಲ. ದಯಮಾಡಿ ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಬಾಲಕನನ್ನು ಥಳಿಸಿದ ಯುವಕರ ಗುಂಪು
ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳ ಗುಂಪೊಂದು ಶಾಲಾ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದೆ. ಹುಬ್ಬಳ್ಳಿಯ ವಿಶ್ವೇಶ್ವರ ನಗರದಲ್ಲಿ ಖಾಸಗಿ ಶಾಲೆಯ ವಿದ್ಯಾರ್ಥಿ ಹಿಡಿದ ಐದಾರು ಮಂದಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಲೆಯ ಪ್ರಾಂಶುಪಾಲರಿಂದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿದ್ಯಾರ್ಥಿನಿ ಜತೆ ಮಾತನಾಡುತ್ತಿದ್ದ ಎಂಬ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ.
ಘಟನೆ ಸಂಬಂಧಪಟ್ಟಂತೆ ವಿವಿಧ ಕಾಲೇಜುಗಳ ಐವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ
ಕಾಲೇಜು ಯುವತಿಯವರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್ ಆಗಿದ್ದ ದುಷ್ಟ ಅರೆಸ್ಟ್
ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸುವ ಮೂಲಕ ಅಸಭ್ಯವಾಗಿ ವರ್ತಿಸಿ (Indecent Behaviour) ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜು ಬಳಿ ನಿಂತಿದ್ದ ಯುವತಿರ ಮುಂದೆ ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೆಹಮಾನ್ (48) ಆರೋಪಿ. ಕಾಲೇಜು ಮುಂಭಾಗ ನಿಂತಿದ್ದ ಹುಡುಗಿಯರ ಗುಂಪಿನ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ, ಅಸಭ್ಯವಾಗಿ ವರ್ತಿಸಿದ್ದ. ಆ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ಕ್ರಮ ಕೈಗೊಳ್ಳಲು ಪೊಲೀಸರಿಗೆ ಮನವಿ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಗಮನಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ