ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬಿಸಿಲ ಧಗೆ ಹೆಚ್ಚುತ್ತಿರುವ ನಡುವೆ ಮಳೆಯಾಗುವ (Rain News ) ಮುನ್ಸೂಚನೆಯನ್ನು ಇಲಾಖೆ ಕೊಟ್ಟಿದೆ. ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ ಇದೆ ಎಂದು
ಮಾ.14ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಗಬಹುದು. ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯ ಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ, ಮಾ.17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.