Rain News | ರಾಜಧಾನಿಯಲ್ಲಿ ಮಳೆ ಅವಾಂತರ; ಹಾನಿ ಪ್ರದೇಶಗಳಿಗೆ ಇಂದು ಸಂಜೆ ಸಿಎಂ ರೌಂಡ್ಸ್‌ - Vistara News

ಪ್ರಮುಖ ಸುದ್ದಿ

Rain News | ರಾಜಧಾನಿಯಲ್ಲಿ ಮಳೆ ಅವಾಂತರ; ಹಾನಿ ಪ್ರದೇಶಗಳಿಗೆ ಇಂದು ಸಂಜೆ ಸಿಎಂ ರೌಂಡ್ಸ್‌

ಧಾರಾಕಾರವಾಗಿ ಸುರಿಯುತ್ತಿರುವ ಮಳೆ (Rain News) ಬೆಂಗಳೂರಿನಲ್ಲಿ ನಾನಾ ಅವಾಂತರ ಸೃಷ್ಟಿಸಿದೆ. ಜನ “ಸೇವ್‌ ಬೆಂಗಳೂರುʼ ಟ್ಯಾಗ್‌ನಡಿ ಸೋಶಿಯಲ್‌ ಮೀಡಿಯಾದಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

VISTARANEWS.COM


on

rain news
ಇಕೋಸ್ಪೇಸ್ ಮುಖ್ಯರಸ್ತೆ ಜಲಾವೃತ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಗೆ (Rain News) ಜನರು ನಲುಗಿ ಹೋಗಿದ್ದಾರೆ. ಈ ಹಿಂದೆ ಪ್ರವಾಹ ಕಾಣದ ಪ್ರದೇಶಗಳಲ್ಲಿಯೂ ಈ ಬಾರಿ ಪ್ರವಾಹ ಸೃಷ್ಟಿಯಾಗಿದೆ. ಅದರಲ್ಲೂ ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್‌ಹಳ್ಳಿ ಭಾಗದಲ್ಲಿ‌ ಮಳೆ ನೀರಿಗೆ ರಸ್ತೆಯೇ ಕಾಣದಂತಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ. ಗುರುವಾರ ಸಂಜೆ 4 ಗಂಟೆಗೆ ಸಿಎಂ ಬೊಮ್ಮಾಯಿ‌ ಬೆಂಗಳೂರು ಸಿಟಿ ರೌಂಡ್ಸ್ ನಡೆಸಲಿದ್ದು, ಬಳಿಕ ಮಳೆ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಮಳೆ ಹಾನಿಯಿಂದ ಬೇಸತ್ತ ಸಾರ್ವಜನಿಕರು ಸೋಶಿಯಲ್‌ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದಾರೆ. “ಸೇವ್ ಬೆಂಗಳೂರುʼ ಎಂಬ ಟ್ಯಾಗ್ ಲೈನ್ ಮೂಲಕ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. “ಸೇವ್ ಬೆಂಗಳೂರುʼ ಎಂದು ಪ್ರಧಾನಿ ನರೇಂದ್ರ ಮೋದಿಗೆ ಐಟಿ ಉದ್ಯಮಿ ಮೋಹನ್ ದಾಸ್ ಪೈ ಅವರು ಟೀಟ್‌ ಮಾಡಿದ್ದಾರೆ.

ಮಳೆ ಹಾನಿ ಸಂಬಂಧ ಬುಧವಾರ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದ್ದು, ತೀವ್ರ ಹಾನಿ ಸಂಭವಿಸಿರುವ ಸ್ಥಳಗಳನ್ನು ಬಿಬಿಎಂಪಿ ಅಧಿಕಾರಿಗಳು ಗುರುತಿಸಿದ್ದಾರೆ. ಮಹದೇವಪುರದ 9 ಸ್ಥಳಗಳು ಹಾಗೂ ಬೊಮ್ಮನಹಳ್ಳಿಯ 11 ಕಡೆ ಹೆಚ್ಚಿನ ಹಾನಿಯಾಗಿದೆ. ಈ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಇಕೋಸ್ಪೇಸ್‌-ಆರ್‌ಎಂಝಡ್‌ ಪ್ರದೇಶ ಜಲಾವೃತ

ಸವಳಕೆರೆ ತುಂಬಿ ಹರಿದ ಹಿನ್ನಲೆಯಲ್ಲಿ ಕೆರೆ ನೀರು ರಸ್ತೆಗೆ ಹರಿದು ಬಂದಿದೆ. ಬೆಳ್ಳಂದೂರು ಇಕೋಸ್ಪೇಸ್ ಹಾಗೂ ಆರ್‌ಎಂಝಡ್ ಪ್ರದೇಶದಲ್ಲಿ ನೀರು ಜಲಾವೃತಗೊಂಡಿದ್ದು, ಕೂಡಲೇ ತೆರವುಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಬೊಮಾಯಿ ಸೂಚನೆ ನೀಡಿದ್ದಾರೆ. ಜತೆಗೆ ರೇನ್ಬೊ ಲೇಔಟ್‌ನಲ್ಲಿ ಪರಿಹಾರ ಕಾರ್ಯಕ್ಕೂ ಅನುಮತಿ ನೀಡಲಾಗಿದೆ. ಇಂದಿನ ಸಿಎಂ ಸಿಟಿ ರೌಂಡ್ಸ್‌ನಲ್ಲಿ ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯೂಎಸ್‌ಸ್‌ಬಿ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಸಾಥ್‌ ನೀಡಲಿದ್ದಾರೆ.

ಹೊಸ ಹೊಸ ಏರಿಯಾದಲ್ಲೂ ಪ್ರವಾಹ ಸೃಷ್ಟಿ

ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ 209 ಸ್ಥಳಗಳನ್ನು ಮಳೆ ಹಾನಿ ಪ್ರದೇಶಗಳೆಂದು ಗುರುತು ಮಾಡಿದೆ. ಆದರೆ ಈ ಬಾರಿಯ ಮಳೆಗೆ ಹೊಸ ಏರಿಯಾಗಳಲ್ಲಿಯೂ ಪ್ರವಾಹ ಸೃಷ್ಟಿಯಾಗಿದೆ. ಪಾಲಿಕೆ ಗುರುತು ಹಚ್ಚಿದ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶ ಹೊರತುಪಡಿಸಿ ಹೊಸ ಪ್ರದೇಶಗಳು ಜಲಾವೃತಗೊಂಡಿವೆ. ಅದರಲ್ಲೂ ಐಟಿ ಕಾರಿಡಾರ್‌ಗಳಾದ ಮಾರತ್‌ಹಳ್ಳಿ, ಸರ್ಜಾಪುರ, ಔಟರ್‌ರಿಂಗ್ ರೋಡ್‌, ಬೆಳ್ಳಂದೂರು ಭಾಗದಲ್ಲಿ ರಸ್ತೆಗಳು ಮುಳುಗಡೆಯಾಗಿವೆ.

ಮಳೆಗೆ ಉಕ್ಕಿ ಹರಿದ ಕೆರೆಗಳು

ಮಳೆಯಿಂದಾಗಿ ಕೆರೆಯ ನೀರು ಉಕ್ಕಿ ಹರಿಯುತ್ತಿದೆ. ಬೆಳ್ಳಂದೂರು, ವರ್ತೂರು, ನಲ್ಲೂರಹಳ್ಳಿ ಕೆರೆಯು ಉಕ್ಕಿ ರಸ್ತೆಗೆ ನೀರು ಹರಿದು ಬರುತ್ತಿದೆ. ಇತ್ತ ರಸ್ತೆಗೆ ಹರಿದು ಬರುತ್ತಿರುವ ನೀರು ಸರಾಗವಾಗಿ ಹರಿದು ಹೋಗಲು ಆಗದೇ ಜಲಾವೃತಗೊಳ್ಳುತ್ತಿದೆ. ಈ ಭಾಗದಲ್ಲಿ ರಾಜಕಾಲುವೆ ಒತ್ತುವರಿ ಹಾಗೂ ಕೆರೆ ಒತ್ತುವರಿ ಬಗ್ಗೆ ಪಾಲಿಕೆ ಮೈಮರೆತಿರುವ ಆರೋಪ ಕೇಳಿ ಬಂದಿದೆ. ಕೆರೆಯಿಂದ ಹೊರ ಹೋಗುವ ನಾಲೆಗಳ ಒತ್ತುವರಿಯಾಗಿದ್ದೇ ಇದೆಕ್ಕೆಲ್ಲ ಕಾರಣವೆಂದು ದೂರಲಾಗುತ್ತಿದೆ.

ದಾಖಲೆಯ ಮಳೆ

ಆಗಸ್ಟ್‌ನಲ್ಲಿ ದಾಖಲೆಯ ಮಳೆಯಾಗಿದ್ದು, ರಾಜಧಾನಿಯಲ್ಲಿ ಬಹುತೇಕ ಕೆರೆಗಳು ಭರ್ತಿಯಾಗಿದೆ. ಆಗಸ್ಟ್‌ನಲ್ಲಿ ಈವರೆಗೆ 364.2 ಮಿಲಿ ಮೀಟರ್ ಮಳೆಯಾಗಿದ್ದು, 1998ರ ಬಳಿಕ ದಾಖಲೆಯ ಮಳೆಗೆ ಉದ್ಯಾನನಗರಿ ಸಾಕ್ಷಿಯಾಗಿದೆ. ಇದರ ಜತೆಗೆ ಕಳೆದ ಸೋಮವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭರ್ತಿಯಾಗಿದ್ದ ಕೆರೆಯು ಉಕ್ಕಿ ಹರಿದಿದೆ. ಈ ಕಾರಣದಿಂದ ಈ ಹಿಂದೆ ಪ್ರವಾಹಕ್ಕೆ ಸಿಲುಕದ ಪ್ರದೇಶಗಳಲ್ಲಿಯೂ ಈ ಬಾರಿ ನೆರೆ ಸೃಷ್ಟಿಯಾಗಿದೆ.

ಇದನ್ನೂ ಓದಿ | ಚಾಮರಾಜನಗರ ಶಾಸಕ ಎನ್‌.ಮಹೇಶ್‌ಗೆ ಮಳೆಹಾನಿ ಗ್ರಾಮಸ್ಥರ ತರಾಟೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸ್ತ್ರೀಯರ ಘನತೆಗೆ ಹಾನಿ ಎಸಗಿದವರಿಗೆ ಕಠಿಣ ಶಿಕ್ಷೆಯಾಗಲಿ

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪ ಸಾಬೀತಾದರೆ ಏಳು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ಆಗಬಹುದು. ತನ್ನ ಮೇಲೆ ರೇಪ್‌ ನಡೆದಿದೆ ಎಂದು ಆರೋಪ ನೀಡಿದವರು ಬಲವಾಗಿ ಕೋರ್ಟ್‌ನಲ್ಲಿ ವಾದಿಸಿದರೆ ಆರೋಪಿಯನ್ನು ಯಾರೂ ಕಾಪಾಡಲಾರರು. ಆದರೆ ಅಧಿಕಾರದಲ್ಲಿ ಇರುವವರ ಮುಂದೆ ಬಡ ಆರೋಪಿಗಳು ನಿಲ್ಲಲು ಸಾಧ್ಯವೇ ಎಂಬುದೇ ಆತಂಕದ ಪ್ರಶ್ನೆ.

VISTARANEWS.COM


on

Vistara Editorial
Koo

ಹಾಸನದಲ್ಲಿ ಹುಟ್ಟಿಕೊಂಡು ರಾಜ್ಯಾದ್ಯಂತ, ದೇಶಾದ್ಯಂತ ಸುದ್ದಿಯಾಗುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಪ್ರಕರಣ ಈಗಾಗಲೇ ಸಾಕಷ್ಟು ರಾಜಕೀಯ ಕೋಲಾಹಲ ಎಬ್ಬಿಸಿದೆ. ಈ ಪ್ರಕರಣವನ್ನು ಸಾರ್ವಜನಿಕಗೊಳಿಸಿದ ಸಂದರ್ಭ, ಇದರ ಹಿಂದೆ ಮುಂದೆ ಇರುವ ರಾಜಕೀಯ ಲೆಕ್ಕಾಚಾರಗಳು, ಈಗ ನಡೆಯುತ್ತಿರುವ ಪ್ರತಿಭಟನೆಗಳು, ಎಲ್ಲವೂ ಕುತೂಹಲಕರವಾಗಿವೆ. ಆರೋಪಿ ಎನಿಸಿಕೊಂಡಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ, ಈಗಾಗಲೇ ದೇಶ ಬಿಟ್ಟು ಜರ್ಮನಿಗೆ ತೆರಳಿದ್ದಾರೆ. “ತನಿಖೆಗೆ ಕರೆದಾಗ ಬರುತ್ತಾರೆ” ಎಂದು ಅವರ ತಂದೆ ಎಚ್‌ಡಿ ರೇವಣ್ಣ ಹೇಳಿದ್ದಾರೆ. ಆದರೆ ಬಹುಶಃ ನಿರೀಕ್ಷಣಾ ಜಾಮೀನು ದೊರೆಯುವವರೆಗೂ ಪ್ರಜ್ವಲ್‌ ಮರಳುವುದು ಅನುಮಾನವೇ ಅನಿಸುತ್ತದೆ. “ತನಿಖೆ ನಡೆಯಲಿ, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ” ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇದು ಎಲ್ಲರ ಮಾತೂ ಹೌದು.

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು, ಆರೋಪ ಸಾಬೀತಾದರೆ ಏಳು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ಆಗಬಹುದು. ತನ್ನ ಮೇಲೆ ರೇಪ್‌ ನಡೆದಿದೆ ಎಂದು ಆರೋಪ ನೀಡಿದವರು ಬಲವಾಗಿ ಕೋರ್ಟ್‌ನಲ್ಲಿ ವಾದಿಸಿದರೆ ಆರೋಪಿಯನ್ನು ಯಾರೂ ಕಾಪಾಡಲಾರರು. ಆದರೆ ಶ್ರೀಮಂತರು, ಪ್ರಭಾವಿಗಳು ಹಾಗೂ ಅಧಿಕಾರದಲ್ಲಿ ಇರುವವರ ಮುಂದೆ ಬಡ ಆರೋಪಿಗಳು ನಿಲ್ಲಲು ಸಾಧ್ಯವೇ? ಇದು ಕಾನೂನು ಹಾಗೂ ನ್ಯಾಯಾಂಗದ ಪಾರದರ್ಶಕತೆ, ತನಿಖಾ ಸಂಸ್ಥೆಗಳ ಪ್ರಾಮಾಣಿಕತೆ ಹಾಗೂ ಸಾಕ್ಷಿಗಳನ್ನು ಕಲೆಹಾಕುವ ಪರಿಶ್ರಮ ಇವುಗಳನ್ನೆಲ್ಲ ಅವಲಂಬಿಸಿದೆ.

ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದು, ಅಧಿಕೃತವಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ. ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ. ಎಡಿಜಿಪಿ ಬಿ.ಕೆ. ಸಿಂಗ್ ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಿ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿದೆ. ಮಹಿಳಾ ಸಂಘಟನೆಗಳು, ಮಹಿಳಾ ಹಕ್ಕುಗಳ ಆಯೋಗ ಕೂಡ ಈ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಲು ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿದೆ.

ಇದೆಲ್ಲವೂ ಒಂದು ಕಡೆಗಾದರೆ, ಪ್ರಕರಣದ ಇನ್ನೊಂದು ಆಯಾಮವನ್ನೂ ನೋಡಬೇಕು. ಲೈಂಗಿಕ ಕಿರುಕುಳದ ವಿಡಿಯೋಗಳನ್ನು ಹಾದಿಬೀದಿಯಲ್ಲಿ ಎಲ್ಲರಿಗೂ ಸಿಗುವಂತೆ ಹಂಚಿದವರು ಯಾರು? ಯಾಕೆ ಅದನ್ನು ಚುನಾವಣೆಯ ಸಂದರ್ಭದಲ್ಲಿಯೇ ಹೊರಬಿಡಲಾಯಿತು? ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ರಾಜಕೀಯ ಮೈತ್ರಿ ಮಾಡಿಕೊಂಡಿರುವ ಸಮಯವನ್ನೇ ಆಯ್ದುಕೊಂಡು ಈ ವಿಡಿಯೋಗಳನ್ನು ಹರಿದಾಡುವಂತೆ ಮಾಡುವ ಹಿನ್ನೆಲೆಯಲ್ಲಿ ಚುನಾವಣಾ ಅಭ್ಯರ್ಥಿಯೊಬ್ಬರ ಸೋಲಿಗಾಗಿ ನಡೆಸಿದ ಸಂಚು ಕೂಡ ಇಲ್ಲವೇ? ಇದು ಸಮಯಸಾಧಕತನವಲ್ಲ, ಇದರ ಹಿಂದೆ ರಾಜಕೀಯ ಇಲ್ಲ ಎನ್ನುವುದು ತೀರಾ ಮುಗ್ಧತೆಯೂ ಅಲ್ಲ, ಭಂಡತನವಾಗುತ್ತದೆ. ಆರೋಪಿಗಳಿಗೆ ಶಿಕ್ಷೆಯಾಗಬೇಕು ನಿಜ; ಆದರೆ ಸಂತ್ರಸ್ತ ಅಮಾಯಕ ಮಹಿಳೆಯರ ಗುರುತನ್ನು ಸಾರ್ವಜನಿಕಗೊಳಿಸಿದವರೂ ಆರೋಪಿಗಳೇ ಅಲ್ಲವೇ? ಅವರಿಗೂ ಶಿಕ್ಷೆಯಾಗಬೇಕಿದೆ. ಇದು ಮಹಿಳೆಯ ಘನತೆಗೆ ಕುಂದು ತರುವ ಸಂಚು.

ಘಟನೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದೊಳಗೆ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳುತ್ತಾರೋ ತಿಳಿಯದು. ಅದು ಪಕ್ಷದ ಆಂತರಿಕ ವಿಚಾರ. ಪಕ್ಷದಿಂದ ಅವರ ಉಚ್ಚಾಟನೆಗೆ ತೀರ್ಮಾನಿಸಲಾಗಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ. ಹಾಗೆ ಆದರೆ ಪಕ್ಷ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಬೇಕು. ಬಿಜೆಪಿ ಕೂಡ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿರುವುದರಿಂದ, ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ನಿಲುವು ಏನಿದೆ ಎಂದು ಸಾರ್ವಜನಿಕರು ತಿಳಿಯಲು ಬಯಸಿದರೆ ತಪ್ಪಾಗದು. ಹಾಗೆಯೇ ಹಾಸನ ಲೋಕಸಭೆ ಕ್ಷೇತ್ರದ ಮತದಾರರ ಮನಸ್ಸಿನಲ್ಲಿ ಈ ಪ್ರಕರಣ ಯಾವ ರೀತಿ ಕೆಲಸ ಮಾಡಿದೆ, ಫಲಿತಾಂಶ ಹೇಗಿದ್ದೀತು ಎಂದು ತಿಳಿಯುವುದಕ್ಕೆ ಫಲಿತಾಂಶದವರೆಗೂ ಕಾಯಬೇಕಾದೀತು. ಬಿಕೆ ಸಿಂಗ್‌ ನೇತೃತ್ವದ ಎಸ್‌ಐಟಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಪ್ರಕರಣ ತಾರ್ಕಿಕ ಕೊನೆ ಮುಟ್ಟಬಹುದು. ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹಾರೈಸೋಣ.

ಇದನ್ನೂ ಓದಿ: DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Continue Reading

ದೇಶ

Labour Day 2024: ಕಾರ್ಮಿಕರು ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

ಇ-ಶ್ರಮ ಕಾರ್ಡ್ ಮೂಲಕ ಅವರಿಗೆ (Labour Day 2024) ಸರ್ಕಾರಗಳ ಕಲ್ಯಾಣ ಯೋಜನೆಗಳನ್ನು ತಲುಪಿಸಿ, ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತಿದೆ. 2021ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಇ-ಶ್ರಮ ಯೋಜನೆ ಮೂಲಕ ದೇಶದ ಸುಮಾರು 38 ಕೋಟಿ ಅಸಂಘಟಿತ ಕಾರ್ಮಿಕರಿಗೆ ನೆರವಾಗುವ ಗುರಿ ಹೊಂದಿದೆ. ರಾಜ್ಯದಲ್ಲೂ ಇ-ಶ್ರಮ ಕಾರ್ಡ್ ವಿತರಿಸಲಾಗುತ್ತಿದೆ. ಕಾರ್ಮಿಕ ದಿನಾಚರಣೆ (ಮೇ 1) ಹಿನ್ನೆಲೆಯಲ್ಲಿ ಈ ಯೋಜನೆಯ ವಿವರ ಇಲ್ಲಿ ನೀಡಲಾಗಿದೆ.

VISTARANEWS.COM


on

Labour Day 2024
Koo

ಅಸಂಘಟಿತ ವಲಯ(Unorganised sectors)ದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ (Labour Day 2024) ಸಲುವಾಗಿ ಕೇಂದ್ರ ಸರ್ಕಾರ ಇ-ಶ್ರಮ (e-Shram) ಯೋಜನೆ ಜಾರಿಗೆ ತಂದಿದೆ. ಇ-ಶ್ರಮ ಕಾರ್ಡ್ ಮೂಲಕ ಅವರಿಗೆ ಸರ್ಕಾರಗಳ ಕಲ್ಯಾಣ ಯೋಜನೆಗಳನ್ನು ತಲುಪಿಸಿ, ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತಿದೆ. 2021ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಇ-ಶ್ರಮ ಯೋಜನೆ ಮೂಲಕ ದೇಶದ ಸುಮಾರು 38 ಕೋಟಿ ಅಸಂಘಟಿತ ಕಾರ್ಮಿಕರಿಗೆ ನೆರವಾಗುವ ಗುರಿ ಹೊಂದಿದೆ. ರಾಜ್ಯದಲ್ಲೂ ಇ-ಶ್ರಮ ಕಾರ್ಡ್ ವಿತರಿಸಲಾಗುತ್ತಿದೆ. ಹಾಗಾದರೆ ಇ-ಶ್ರಮ ಕಾರ್ಡ್‌ ಎಂದರೇನು? ಹೆಸರು ನೋಂದಾಯಿಸುವುದು ಹೇಗೆ? ಯಾರೆಲ್ಲ ಅರ್ಹರು? ಮುಂತಾದ ವಿವರ ಇಲ್ಲಿದೆ.

ಏನಿದು ಇ-ಶ್ರಮ ಕಾರ್ಡ್‌?

ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟೀಯ ದತ್ತಾಂಶವೇ ಈ ಇ-ಶ್ರಮ ಕಾರ್ಡ್. ಅಂದರೆ ಅಸಂಘಟಿತ ವಲಯದ ಕಾರ್ಮಿಕರಿಗೆ ವಿವಿಧ ಪ್ರಯೋಜನಗಳನ್ನು ಒದಗಿಸಲು ಕೇಂದ್ರ ಸರ್ಕಾರ ಪ್ರಾರಂಭಿಸಿದ ಡಿಜಿಟಲ್ ವೇದಿಕೆ ಇದಾಗಿದೆ. ಇದು ವಿಶಿಷ್ಟ 12-ಅಂಕಿಯ ಗುರುತಿನ ಸಂಖ್ಯೆಯನ್ನು ಒಳಗೊಂಡಿದೆ. ಇದರಲ್ಲಿ ಹೆಸರು, ವಯಸ್ಸು, ಲಿಂಗ, ಉದ್ಯೋಗ ಮತ್ತು ಕೆಲಸಗಾರನ ಕುರಿತು ಇತರ ಅಗತ್ಯ ಮಾಹಿತಿ ಇರುತ್ತದೆ.

ಯಾರೆಲ್ಲ ಅರ್ಹರು?

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‌ಗಳು, ಬೀದಿಬದಿ ವ್ಯಾಪಾರಿಗಳು, ಪತ್ರಿಕೆ ಮಾರಾಟಗಾರರು, ಇಟ್ಟಿಗೆ ಗೂಡು ಕೆಲಸಗಾರರು, ವಲಸೆ ಕಾರ್ಮಿಕರು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ತಮ್ಮ ಹೆಸರನ್ನು ಇದರಲ್ಲಿ ನೋಂದಾಯಿಸಬಹುದು. ಜತೆಗೆ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು ʼಇತರೆ ವರ್ಗʼಗಳಡಿ ನೋಂದಾಯಿಸಬಹುದು. 16ರಿಂದ 59 ವಯೋಮಾನದವರು, ಆದಾಯ ತೆರಿಗೆ ಪಾವತಿಸದವರು, ಭವಿಷ್ಯನಿಧಿ ಹಾಗೂ ಇಎಸ್​ಐ ಫಲಾನುಭವಿಯಾಗಿರದವರು ಇದಕ್ಕೆ ಅರ್ಹರು.

ಪ್ರಯೋಜನಗಳೇನು?

  • ನೋಂದಾಯಿಸಿಕೊಂಡ ಕಾರ್ಮಿಕರು ಭಾಗಶಃ ಅಂಗವೈಕಲ್ಯಕ್ಕೆ ಒಳಗಾದರೆ 1 ಲಕ್ಷ ರೂ.ಗಿಂತ ಪರಿಹಾರ ಲಭ್ಯ.
    ಆಕಸ್ಮಿಕವಾಗಿ ಮೃತಪಟ್ಟರೆ 2 ಲಕ್ಷ ರೂ. ಪರಿಹಾರ ಲಭ್ಯ.
  • ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿದರೆ ಸಾಮಾಜಿಕ ಭದ್ರತಾ ಯೋಜನೆಯ ಲಾಭ ದೊರೆಯುತ್ತದೆ.
    ಪಿಂಚಣಿ ವ್ಯವಸ್ಥೆಯೂ ಲಭ್ಯವಿದ್ದು, ತಿಂಗಳಿಗೆ 3,000 ರೂ. ಸಿಗುತ್ತದೆ.

ಆನ್‌ಲೈನ್‌ ಮೂಲಕ ಮಾಡುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://register.eshram.gov.in/#/user/selfಗೆ ಭೇಟಿ ನೀಡಿ.
  • ಮುಖಪುಟದ ವಿವರಗಳನ್ನು ಪರಿಶೀಲಿಸಿ ಮತ್ತು ಸ್ವಯಂ ನೋಂದಣಿ (Self Registration) ಆಯ್ಕೆ ಕ್ಲಿಕ್‌ ಮಾಡಿ.
  • ಆಧಾರ್‌ ಲಿಂಕ್‌ ಮಾಡಲಾದ ಮೊಬೈಲ್‌ ಸಂಖ್ಯೆ ನಮೂದಿಸಿ.
  • ಕ್ಯಾಪ್ಚಾ ಕೋಡ್‌ ನಮೂದಿಸಿ.
  • ಇಪಿಎಫ್‌ಒ ಮತ್ತು ಇಎಸ್ಐಸಿ ಹೌದು ಅಥವಾ ಇಲ್ಲ ಆಯ್ಕೆಯನ್ನು ಆರಿಸಿ.
  • Send OTP ಬಟನ್‌ ಮೇಲೆ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ತೆರೆದು ಅಗತ್ಯ ವಿವರಗಳನ್ನು ನೀಡಿ ಭರ್ತಿ ಮಾಡಿ.
  • ಕೇಳಿರುವ ಎಲ್ಲ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • Submit ಬಟನ್‌ ಕ್ಲಿಕ್‌ ಮಾಡಿ. ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಆಫ್‌ಲೈನ್‌ನಲ್ಲಿ ನೋಂದಣಿ ಮಾಡುವ ವಿಧಾನ

ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC)ಕ್ಕೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಯಶಸ್ವಿ ನೋಂದಣಿಯ ಬಳಿಕ ಫಲಾನುಭವಿಗೆ ಸ್ಥಳದಲ್ಲಿಯೇ ಗುರುತಿನ ಚೀಟಿ ವಿತರಿಸಲಾಗುತ್ತದೆ. ಗಮನಿಸಿ ನೋಂದಣಿಗೆ ಹೆಸರು, ವಿಳಾಸ ಪುರಾವೆ, ವೃತ್ತಿ, ಶೈಕ್ಷಣಿಕ ಮಾಹಿತಿ, ಕುಟುಂಬದ ವಿವರ, ಆಧಾರ್‌ ಕಾರ್ಡ್‌, ವಿದ್ಯುತ್‌ ಬಿಲ್‌, ಜನನ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್‌ ಪಾಸ್‌ಬುಕ್‌ ಮಾಹಿತಿ, ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡಿದ ಮೊಬೈಲ್‌ ಸಂಖ್ಯೆ ಇದ್ಯಾದಿ ದಾಖಲೆ ಒದಗಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌-14434ಕ್ಕೆ ಕರೆ ಮಾಡಿ. ಇಮೇಲ್‌ ಐಡಿ- eshramcare-mole@gov.in ಸಂಪರ್ಕಿಸಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading

ಭವಿಷ್ಯ

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for April 30 2024
Koo

ಚಂದ್ರನು ಮಂಗಳವಾರ ಬೆಳಗ್ಗೆ 11.29ಕ್ಕೆ ಕುಂಭ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಉತ್ಸಾಹ ತುಂಬಿದ ವಾತಾವರಣ ಸಿಗಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿರಲಿದೆ. ಸಿಂಹ ರಾಶಿಯವರು ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ. ಮಾತಿನಲ್ಲಿ ಆದಷ್ಟು ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಷಷ್ಠಿ 07:04 ವಾರ: ಮಂಗಳವಾರ
ನಕ್ಷತ್ರ: ಉತ್ತರಾಷಾಡ 28:08 ಯೋಗ: ಸಾಧ್ಯ 22:22
ಕರಣ: ವಣಿಜ 07:04 ಅಮೃತಕಾಲ: ರಾತ್ರಿ 09:54 ರಿಂದ 11:28

ಸೂರ್ಯೋದಯ : 05:59   ಸೂರ್ಯಾಸ್ತ : 06:34

ರಾಹುಕಾಲ : ಸಂಜೆ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ
12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರವನ್ನು ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಬಗ್ಗೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ ನಿಮ್ಮದಾಗಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಹೆಚ್ಚಿದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ. ಮಾತಿನಲ್ಲಿ ಆದಷ್ಟು ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಹಾಗೂ ನಿಮ್ಮ ಕೆಲಸಗಳಿಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ ಇದಾಗಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢರಾಗುವಿರಿ. ಕೌಟುಂಬಿಕವಾಗಿ ಶುಭ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಹೆಚ್ಚಿದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಹೆಚ್ಚಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರು ಭೇಟಿಯಾಗಲಿದ್ದು, ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಲಿದ್ದೀರಿ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ, ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಪಡೆಯುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ಉಂಟಾಗಲಿದೆ. ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನೂ ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ವಿದೇಶ

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Pakistan Inflation: ಹಣದುಬ್ಬರದಿಂದ ಪಾಕಿಸ್ತಾಣವು ತತ್ತರಿಸಿ ಹೋಗಿದೆ. ಒಂದೆಡೆ, ಪಾಕಿಸ್ತಾನಕ್ಕೆ ಬೇರೆ ದೇಶಗಳಿಂದ, ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ಹಣಕಾಸು ನೆರವು ಸಿಗುತ್ತಿಲ್ಲ. ಇನ್ನೊಂದೆಡೆ, ಹಣದುಬ್ಬರ ನಿಯಂತ್ರಣ ಮಾಡಲು ಆಗುತ್ತಿಲ್ಲ. ಹಾಗಾಗಿ, ಪಾಕಿಸ್ತಾನದ ನಾಗರಿಕರು ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಪಾವತಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಹಣದುಬ್ಬರ ಏರಿಕೆಯು ಅವರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ.

VISTARANEWS.COM


on

Pakistan Inflation
Koo

ಇಸ್ಲಾಮಾಬಾದ್:‌ ಉಗ್ರರ ಪೋಷಣೆ, ಅವರಿಗೆ ಹಣಕಾಸು ನೆರವು, ಅಸಮರ್ಥ ನಾಯಕತ್ವ, ಕೊರೊನಾ ಬಿಕ್ಕಟ್ಟು ಸೇರಿ ಹಲವು ಕಾರಣಗಳಿಂದ ಪಾಕಿಸ್ತಾನವು (Pakistan) ದಿವಾಳಿಯಾಗಿದೆ. ಇದೇ ಕಾರಣಕ್ಕಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ಎದುರು ಹಣಕ್ಕಾಗಿ ಭಿಕ್ಷಾ ಪಾತ್ರೆ ಹಿಡಿದು ನಿಂತಿದೆ. ಇನ್ನು, ಹಣದುಬ್ಬರದ ಏರಿಕೆಯಿಂದಾಗಿ (Pakistan Inflation) ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಯು ದಿನೇದಿನೆ ಜಾಸ್ತಿಯಾಗುತ್ತಿದ್ದು, ಜನ ಹೈರಾಣಾಗುತ್ತಿದ್ದಾರೆ. ಹೌದು, ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. (ಪಾಕಿಸ್ತಾನದ ರೂಪಾಯಿ) ಆದರೆ, ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಕೊಡಬೇಕಾಗಿದೆ. ಇದರಿಂದಾಗಿ ಪಾಕಿಸ್ತಾನದ ನಾಗರಿಕರು ತತ್ತರಿಸಿ ಹೋಗಿದ್ದಾರೆ.

“ಪಾಕಿಸ್ತಾನದ ಸರ್ಕಾರವು ಸಾಮಾನ್ಯ ಜನರ ಅಗತ್ಯಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದರಿಂದಾಗಿಯೇ ದಿನೇದಿನೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಈಗ ಗೋಧಿ ಕಟಾವು ಮಾಡುವ ಸೀಸನ್.‌ ಹೀಗಿದ್ದರೂ, ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಕೊಡಬೇಕಾಗಿದೆ. ಇನ್ನು, ಒಂದು ರೊಟ್ಟಿಗೆ 25 ರೂ. ನೀಡಬೇಕಾಗಿದೆ. ಇದರಿಂದಾಗಿ ಸಾಮಾನ್ಯ ಜನ ಮೂರು ಹೊತ್ತು ಊಟ ಮಾಡಲು ಕೂಡ ತೊಂದರೆಯಾಗುತ್ತಿದೆ. ಇದಕ್ಕೂ ಮೊದಲು ಒಂದು ಕೆ.ಜಿ ಹಿಟ್ಟಿಗೆ 230 ರೂ. ಇತ್ತು” ಎಂದು ಕರಾಚಿಯಲ್ಲಿ ದಿನಸಿ ಅಂಗಡಿ ಇಟ್ಟಿರುವ ಅಬ್ದುಲ್‌ ಹಮೀದ್‌ ಎಂಬುವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರಾಥಮಿಕ ಶಾಲೆ ಶಿಕ್ಷಕರಾಗಿರುವ ಅಬ್ದುಲ್‌ ಜಬ್ಬರ್‌ ಅವರು ಕೂಡ ಸಂಕಷ್ಟದ ಕುರಿತು ಮಾಹಿತಿ ನೀಡಿದ್ದಾರೆ. “ದಿನಕ್ಕೆ 16 ಗಂಟೆ ಲೋಡ್‌ ಶೆಡ್ಡಿಂಗ್‌ ಇರುತ್ತದೆ. ಆದರೂ, ಮಾಸಾಂತ್ಯಕ್ಕೆ ಹೆಚ್ಚಿನ ವಿದ್ಯುತ್‌ ಬಿಲ್‌ ಪಾವತಿಸಬೇಕು. ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಆದರೆ, ನಿತ್ಯ 500 ರೂ. ದುಡಿಯುವವರ ಪಾಡೇನು? ಅಡುಗೆ ಅನಿಲದ ಸಿಲಿಂಡರ್‌ ಬೆಲೆಯೂ ಗಗನಕ್ಕೇರಿದೆ. ಇದರಿಂದ ಜನರ ಜೀವನ ದುಸ್ಥರವಾಗಿದೆ” ಎಂದು ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಹೀಗಿದೆ

ಒಂದು ಲೀಟರ್‌ ಹಾಲಿಗೆ 212 ರೂ., ಕೆ.ಜಿ ಅಕ್ಕಿಗೆ 330 ರೂ., ಒಂದು ಕೆ.ಜಿ ಸೇಬಿಗೆ 300 ರೂ., ಒಂದು ಕೆ.ಜಿ ಟೊಮ್ಯಾಟೊಗೆ 125 ರೂ., ಒಂದು ಕೆ.ಜಿ ಈರುಳ್ಳಿ 125 ರೂ., ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. ಇದೆ. ದಿನೇದಿನೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇರುವುದು ಪಾಕಿಸ್ತಾನದ ನಾಗರಿಕರನ್ನು ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ನಂತರದ ದುಸ್ಥಿತಿ ಹೀಗೆಯೇ ಮುಂದುವರಿದಿರುವುದು ಅವರನ್ನು ಆತಂಕಕ್ಕೆ ದೂಡಿದೆ.

ಐಎಂಎಫ್‌ ಹಣವೂ ಸಿಗುತ್ತಿಲ್ಲ

ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯಲು ಹೆಣಗಾಡುತ್ತಿದೆ. ಈಗಾಗಲೇ ಐಎಂಎಫ್‌ 1.10 ಶತಕೋಟಿ ಡಾಲರ್‌ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಆದರೆ, ಮುಂದಿನ ಮೂರು ವರ್ಷಗಳವರೆಗೆ 6 ಶತಕೋಟಿ ಡಾಲರ್‌ ಸಾಲ ನೀಡಿ ಎಂಬುದಾಗಿ ಪಾಕಿಸ್ತಾನ ಮನವಿ ಮಾಡುತ್ತಿದೆ. ಆದರೆ, ಪಾಕ್‌ನಲ್ಲಿ ದಿನೇದಿನೆ ಹಣದುಬ್ಬರದ ಏರಿಕೆಯಾಗುತ್ತಿರುವ ಕಾರಣ ಸಾಲ ನೀಡಲು ಐಎಂಎಫ್‌ ಹಿಂದೇಟು ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

Continue Reading
Advertisement
Karnataka weather
ಕರ್ನಾಟಕ16 mins ago

Karnataka Weather: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮೇ 3ರವರೆಗೆ ಹೆಚ್ಚಿರಲಿದೆ ಶಾಖದ ಅಲೆಗಳ ತೀವ್ರತೆ!

Vistara Editorial
ಸಂಪಾದಕೀಯ44 mins ago

ವಿಸ್ತಾರ ಸಂಪಾದಕೀಯ: ಸ್ತ್ರೀಯರ ಘನತೆಗೆ ಹಾನಿ ಎಸಗಿದವರಿಗೆ ಕಠಿಣ ಶಿಕ್ಷೆಯಾಗಲಿ

Labour Day 2024
ದೇಶ45 mins ago

Labour Day 2024: ಕಾರ್ಮಿಕರು ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Paneer test
ಆರೋಗ್ಯ46 mins ago

Paneer Test: ನಾವು ತಿನ್ನುವ ಪನೀರ್‌ ಶುದ್ಧವಾದದ್ದೋ, ಕಲಬೆರಕೆಯದ್ದೋ ಪರೀಕ್ಷೆ ಮಾಡೋದು ಹೇಗೆ?

dina bhavishya read your daily horoscope predictions for April 30 2024
ಭವಿಷ್ಯ2 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

Pakistan Inflation
ವಿದೇಶ6 hours ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ7 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು7 hours ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ7 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ8 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202418 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202419 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌