Site icon Vistara News

Rain news | ಬೆಂಗಳೂರಿನಲ್ಲಿ ತುಂತುರು ಮಳೆ, ಇನ್ನೆರಡು ದಿನ ಚಳಿ ಹೆಚ್ಚಳ ಸಾಧ್ಯತೆ

bangalore cool

ಬೆಂಗಳೂರು: ರಾಜಧಾನಿಯಲ್ಲಿ ಮೋಡ ಕವಿದ ವಾತವರಣದ ಜೊತೆಗೆ ತುಂತುರು ಮಳೆಯಾಗುತ್ತಿದೆ. ಇನ್ನೆರಡು ದಿನ ಮತ್ತಷ್ಟು ಚಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ (Rain news) ತಿಳಿಸಿದೆ.

ನಗರದ ಕೆಲವಡೆ ಬೆಳಗಿನ ಜಾವ ದಟ್ಟವಾಗಿ ಮಂಜು ಆವರಿಸಿಕೊಂಡಿತ್ತು. ಇಂದು ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಗೆ ತಲುಪುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ವರದಿ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯಾಗುತ್ತಿದೆ. ರಾಜ್ಯದ ಹಲವೆಡೆ ಮಳೆಯಾಗಬಹುದು. ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.

Exit mobile version