ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞರು ಮುನ್ಸೂಚನೆ ( Rain news ) ನೀಡಿದ್ದಾರೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಮೈಸೂರು ಹಾಗೂ ರಾಮನಗರದಲ್ಲಿ ಭಾನುವಾರದಿಂದ ಮಾರ್ಚ್ 29ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕೊಡಗು, ಬಳ್ಳಾರಿ, ಕಲಬುರಗಿ, ರಾಯಚೂರು ಮತ್ತು ಬೀದರ್‌ನಲ್ಲಿ ಭಾನುವಾರ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗಿದೆ. ಕಲಬುರಗಿಯಲ್ಲಿ ಶನಿವಾರ 38.2 ಡಿಗ್ರಿ ಸೆಲ್ಸಿಯಸ್ ಅಧಿಕ ತಾಪಮಾನ ದಾಖಲಾಗಿತ್ತು. ಧಾರವಾಡದಲ್ಲಿ ಕಡಿಮೆ ತಾಪಮಾನ 15.6 ಉಷ್ಣಾಂಶ ವರದಿಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ಹೇಳಿಕೆ ನೀಡಿದ್ದಾರೆ.