Site icon Vistara News

Ram Mandir: ರಾಮಮಂದಿರ ಲೋಕಾರ್ಪಣೆ ದಿನ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ; ಸರ್ಕಾರದ ಅಧಿಕೃತ ಆದೇಶ

Ram Mandir Pooja

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ಲೋಕಾರ್ಪಣೆ ಹಿನ್ನೆಲೆಯಲ್ಲಿ ಜನವರಿ 22ರಂದು ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ (Muzrai Temple) ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲು ಅಧಿಕಾರಿಗಳಿಗೆ ಮುಜರಾಯಿ ಇಲಾಖೆ (Muzrai Department) ಅಧಿಕೃತ ಆದೇಶ ನೀಡಿದೆ.

ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಆದೇಶ ಹೊರಡಿಸಿದ್ದು, ರಾಜ್ಯದ ಮುಜರಾಯಿ ಇಲಾಖೆ ಅಡಿ ಬರುವ ಎಲ್ಲ ದೇವಸ್ಥಾನಗಳಲ್ಲೂ ವಿಶೇಷ ಪೂಜೆಗೆ ಸೂಚಿಸಿದ್ದಾರೆ. ಅಂದು ಮಧ್ಯಾಹ್ನ ಹನ್ನೆರಡು ಗಂಟೆ 29 ನಿಮಿಷ 8 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ ಪೂಜೆ ಸಲ್ಲಿಸಲು ಸೂಚನೆ ನೀಡಲಾಗಿದೆ.

ಏಕಕಾಲದಲ್ಲಿ ಮಹಾಮಂಗಳಾರತಿ

ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಏಕಕಾಲದಲ್ಲಿ ಮಹಾಮಂಗಳಾರತಿ ನಡೆಯಲಿದೆ. ದೇಶಕ್ಕೆ, ರಾಜ್ಯಕ್ಕೆ ಎಲ್ಲರಿಗೂ ಶ್ರೀರಾಮನ ರಕ್ಷಣೆ ಇರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸುವುದಾಗಿ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: Hariprakash Konemane: ಇಲ್ಲಿಯ ರಾಮ, ಅಲ್ಲಿಯ ರಾಮ ಎಂಬ ಭೇದವೇಕೆ? ಸಿಎಂಗೆ ಹರಿಪ್ರಕಾಶ್‌ ಕೋಣೆಮನೆ ಪ್ರಶ್ನೆ

ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿಲ್ಲ; ಹೃದಯದಲ್ಲೇ ದೇವರಿದ್ದಾನೆಂದ ಡಿಕೆಶಿ

ಜನವರಿ 22ರಂದು ರಾಮಜನ್ಮಭೂಮಿ (Ram Janmabhoomi) ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ (Lord Ram in Ayodhya) ಪ್ರತಿಷ್ಠಾಪನೆ ಕಾರ್ಯಕ್ರಮಕ್ಕಾಗಿ ನನಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ಬಂದಿಲ್ಲ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಆಹ್ವಾನ ಬಂದಿದೆ ಎಂದು ಪತ್ರಿಕೆಗಳಲ್ಲಿ ಓದಿದ್ದೇನೆ. ಪಕ್ಷ ಈ ವಿಚಾರದಲ್ಲಿ ತೀರ್ಮಾನ ಮಾಡುತ್ತದೆ. ನಮ್ಮ ಹೃದಯದಲ್ಲಿ ನಮ್ಮ ದೇವರುಗಳನ್ನು ಇಟ್ಟು ಪೂಜಿಸಿಕೊಂಡು ಬಂದಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿ.ಕೆ. ಶಿವಕುಮಾರ್‌ (DCM DK Shivakumar) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಮ್ಮ ಮನೆಯಲ್ಲಿ ಶಿವ, ಹನುಮಂತನ ಫೋಟೋ ಇಟ್ಟು ಪೂಜೆ ಮಾಡುತ್ತೇವೆ. ನಮ್ಮ ಹೃದಯದಲ್ಲಿ ನಮ್ಮ ದೇವರುಗಳನ್ನು ಇಟ್ಟು ಪೂಜಿಸಿಕೊಂಡು ಬಂದಿದ್ದೇವೆ. ಹೀಗಾಗಿ ಧರ್ಮ, ದೇವರ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ. ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ಮಂತ್ರಾಕ್ಷತೆ ನೀಡುತ್ತಿದ್ದಾರೆ. ಅನ್ನಭಾಗ್ಯ ಅಕ್ಕಿಯಲ್ಲೆ ಮಂತ್ರಾಕ್ಷತೆ ಮಾಡಿ ಹಂಚುತ್ತಿದ್ದಾರೆ. ಅದೇ ನಮಗೆ ಸಂತೋಷ ಎಂದು ತಿಳಿಸಿದರು.

ಇದನ್ನೂ ಓದಿ: Hariprakash Konemane: ಇಲ್ಲಿಯ ರಾಮ, ಅಲ್ಲಿಯ ರಾಮ ಎಂಬ ಭೇದವೇಕೆ? ಸಿಎಂಗೆ ಹರಿಪ್ರಕಾಶ್‌ ಕೋಣೆಮನೆ ಪ್ರಶ್ನೆ

ಬೊಮ್ಮಾಯಿ ಅವರಿಗೆ ಮರೆವು ಶುರುವಾಗಿದೆ

ಅನ್ನಭಾಗ್ಯ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಏನಿಲ್ಲ. ಇದು ಮೋದಿ ಸರ್ಕಾರ ನೀಡುತ್ತಿರುವ ಅಕ್ಕಿ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ಆಹಾರ ಭದ್ರತಾ ಕಾಯ್ದೆ ತಂದಿದ್ದು ಮನಮೋಹನ್ ಸಿಂಗ್ ಹಾಗೂ ಸೋನಿಯಾ ಗಾಂಧಿ ಅವರು. ಈ ವಿಚಾರವನ್ನು ಬೊಮ್ಮಾಯಿ ಅವರು ಮರೆತಿದ್ದಾರೆ. ನಾವು 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ನನ್ನ ಸ್ನೇಹಿತನಿಗೆ ಮರೆವು ಶುರುವಾಗಿರಬೇಕು ಎಂದು ತಿರುಗೇಟು ನೀಡಿದರು.

Exit mobile version