Rameshwaram Cafe : ರಾಷ್ಟ್ರಗೀತೆಯೊಂದಿಗೆ ನಾಳೆ ಮತ್ತೆ ತೆರೆಯಲಿದೆ ರಾಮೇಶ್ವರಂ ಕೆಫೆ - Vistara News

ಬೆಂಗಳೂರು

Rameshwaram Cafe : ರಾಷ್ಟ್ರಗೀತೆಯೊಂದಿಗೆ ನಾಳೆ ಮತ್ತೆ ತೆರೆಯಲಿದೆ ರಾಮೇಶ್ವರಂ ಕೆಫೆ

Rameshwaram Cafe : ಬಾಂಬ್‌ ಸ್ಫೋಟದಿಂದ ಸದ್ದು ಮಾಡಿದ ರಾಮೇಶ್ವರಂ ಕೆಫೆಯಲ್ಲಿ ಶಿವರಾತ್ರಿ ದಿನದಂದು ಪೂಜೆ, ಹೋಮ ಹವನಗಳು ನಡೆದಿವೆ. ಮಾರ್ಚ್‌ 9ರ ಬೆಳಗ್ಗೆ 6.30ಕ್ಕೆ ರಾಷ್ಟ್ರಗೀತೆಯೊಂದಿಗೆ ಕೆಫೆ ಮರು ಆರಂಭಗೊಳ್ಳಲಿದೆ.

VISTARANEWS.COM


on

Rameshwaram Cafe reopen
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮಾರ್ಚ್‌ 1ರಂದು ಬಾಂಬ್‌ ಸ್ಫೋಟ (Blast in Bengaluru) ಸಂಭವಿಸಿ ಜಗತ್ತಿನಾದ್ಯಂತ ಸುದ್ದಿಯಾದ ಬೆಂಗಳೂರಿನ ವೈಟ್‌ ಫೀಲ್ಡ್‌ ಸಮೀಪದ ಬ್ರೂಕ್‌ ಫೀಲ್ಡ್‌ನಲ್ಲಿರುವ ಪ್ರತಿಷ್ಠಿತ, ಜನಪ್ರಿಯ ಫುಡ್‌ ಜಾಯಿಂಟ್‌ ರಾಮೇಶ್ವರಂ ಕೆಫೆ (Rameshwaram Cafe) ‌ಮಾರ್ಚ್‌ 9ರ ಶನಿವಾರ ಬೆಳಗ್ಗೆ 6.30ಕ್ಕೆ ಪುನರಾರಂಭಗೊಳ್ಳಲಿದೆ (Rameshwaram Cafe Reopen) ಬೆಳಗ್ಗೆ 6.30ಕ್ಕೆ ರಾಷ್ಟ್ರಗೀತೆ (National Anthem) ಹಾಡುವ ಮೂಲಕ ಕೆಫೆ ಮರು ಚಾಲನೆ ಪಡೆಯಲಿದೆ.

ರಾಷ್ಟ್ರದ್ರೋಹಿಗಳ ಸಂಚಿನಿಂದ ಬಾಂಬ್‌ ಸ್ಫೋಟ ನಡೆದು ಆತಂಕ ಮೂಡಿಸಿದ್ದ ಘಟನೆಯ ವಿಚಾರದಲ್ಲಿ ಜನರ ಆತಂಕ ನಿವಾರಿಸಲು ಮತ್ತು ರಾಷ್ಟ್ರಭಕ್ತಿ ಇದ್ದರೆ ಎಲ್ಲ ಭಯೋತ್ಪಾದಕ ಕೃತ್ಯಗಳನ್ನು ಮೆಟ್ಟಿ ನಿಲ್ಲಬಹುದು ಎಂಬ ಸಂದೇಶ ನೀಡುವ ಉದ್ದೇಶದಿಂದ ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ.

ವಾರದ ಬಳಿಕ ಮತ್ತೆ ಕೆಫೆ ಆರಂಭಗೊಳ್ಳುತ್ತಿದೆ. ರಾಷ್ಟ್ರಗೀತೆ ಹಾಡುವ ಮೂಲಕ ನಾಳೆ ಕೆಫೆಯನ್ನು ಮತ್ತೆ ಆರಂಭಿಸುತ್ತೇವೆ ಎಂದು ಕೆಫೆಯ ಮಾಲೀಕರಾದ ರಾಘವೇಂದ್ರ ರಾವ್‌ (Raghavendra Rao) ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ : Blast in Bengaluru: ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಳ್ಳಾರಿಯ ಬಂಧಿತ ಉಗ್ರ ಮಿನಾಝ್‌ ಕೈವಾಡ? ತೀವ್ರ ವಿಚಾರಣೆ

ಶುಕ್ರವಾರ ದಿನವಿಡೀ ಹೋಮ, ಹವನ; ಸಿಎಂ, ಡಿಸಿಎಂ ಕೂಡಾ ಭೇಟಿ

ರಾಮೇಶ್ವರಂ ಕೆಫೆಯ ಮಾಲೀಕರಾದ ರಾಘವೇಂದ್ರ ರಾವ್‌ ಮತ್ತು ದಿವ್ಯ ರಾಘವೇಂದ್ರ ರಾವ್‌ ಅವರು ಶಿವರಾತ್ರಿಯ ದಿನವೇ ಮತ್ತೆ ಹೋಟೆಲ್‌ಗೆ ಚಾಲನೆ ನೀಡುವುದಾಗಿ ಈ ಹಿಂದೆ ಪ್ರಕಟಿಸಿದ್ದರು. ಆದರೆ, ಬಾಂಬ್‌ ಸ್ಫೋಟದ ತನಿಖೆ ನಡೆಸುತ್ತಿರುವ ಎನ್‌ಐಎ ಮತ್ತು ಸಿಸಿಬಿ ಪೊಲೀಸರು ಸ್ಥಳ ತಪಾಸಣೆ ಮತ್ತು ಇತರ ಪ್ರಕ್ರಿಯೆಗಳು ಪೂರ್ಣಗೊಂಡಿಲ್ಲ ಎಂಬ ಕಾರಣ ನೀಡಿ ಅನುಮತಿ ಕೊಟ್ಟಿರಲಿಲ್ಲ.

ಅದಾದ ಬಳಿಕ ಪೊಲೀಸರು ಮತ್ತು ಎನ್‌ಐಎ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಬೇಕಾದ ಎಲ್ಲಾ ಮಾಹಿತಿಗಳನ್ನು ಪಡೆದ ಬಳಿಕ ಹೋಟೆಲ್‌ ಮರು ಆರಂಭಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಹೀಗಾಗಿ ರಾಘವೇಂದ್ರ ರಾವ್‌ ಕುಟುಂಬ ಎಲ್ಲ ಸಿದ್ಧತೆಗಳನ್ನು ಆರಂಭಿಸಿದೆ.

ಮಾರ್ಚ್‌ 9ರಿಂದ ಹೋಟೆಲ್‌ ಮರು ಆರಂಭದ ಮಾಹಿತಿಯನ್ನು ಇನ್ಸ್ಟಾಗ್ರಾಂ ಮೂಲಕ ಹಂಚಿಕೊಂಡ ರಾಮೇಶ್ವರಂ ಕೆಫೆ, ಹೋಟೆಲ್‌ನ ಒಳಗೆ ಸ್ವಚ್ಛತಾ ಕಾರ್ಯಗಳನ್ನು ನಡೆಸುವ ದೃಶ್ಯಗಳನ್ನು ಅಪ್ಲೋಡ್‌ ಮಾಡಿದೆ.

ಶಿವರಾತ್ರಿಯ ದಿನ ಇಡೀ ದಿನ ಹೋಮ ಹವನ

ಮಾರ್ಚ್‌ 9ರಂದು ಹೋಟೆಲ್‌ ಆರಂಭಕ್ಕೆ ದಿನ ನಿಗದಿ ಮಾಡಿದ ರಾಮೇಶ್ವರಂ ಕೆಫೆ ಮಾಲೀಕರು ಶುಕ್ರವಾರ ಇಡೀ ದಿನ ಪೂಜೆ. ಹೋಮ ಹವನಗಳನ್ನು ಆಯೋಜಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಪೂಜಾ ಕಾರ್ಯಗಳು ನಡೆಯುತ್ತಿವೆ. ಹೀಗಾಗಿ ಕೆಫೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.

ಶಿವರಾತ್ರಿ ಪ್ರಯುಕ್ತ ರುದ್ರ ಹೋಮ ನವಗ್ರಹ ಹೋಮ ಮೃತ್ಯುಂಜಯ ಹೋಮ ವಾಸ್ತು ಹೋಮ ಲಕ್ಷ್ಮಿ ಪೂಜೆ ಗಣೇಶ ಪೂಜೆ ಹಮ್ಮಿಕೊಂಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿ ಪರಮೇಶ್ವರ್ ಸೇರಿದಂತೆ ಆರ್ ಅಶೋಕ್ ಬಿ ವೈ ವಿಜಯೇಂದ್ರ ಪಿ ಸಿ ಮೋಹನ್ ಮಂಜುಳಾ ಅರವಿಂದ್ ಎಲ್ಲಾ ಗಣ್ಯರು ಆಗಮಿಸಲಿದ್ದಾರೆ ಎಂದು ಹೋಟೆಲ್‌ ಮಾಲೀಕರಾದ ರಾಘವೇಂದ್ರ ರಾವ್‌ ತಿಳಿಸಿದರು.

ಶನಿವಾರ ಬೆಳಗ್ಗೆ 6:30ಕ್ಕೆ ರಾಷ್ಟ್ರಗೀತೆ ಹಾಡಿ ಕೆಫೆ ಪ್ರಾರಂಭ ಮಾಡುತ್ತೇವೆ ಎಂದು ರಾಘವೇಂದ್ರ ರಾವ್‌ ತಿಳಿಸಿದರು.

ಹೆಚ್ಚುವರಿ ಭದ್ರತೆ, ಮೆಟಲ್‌ ಡಿಟೆಕ್ಟರ್‌ ಅಳವಡಿಕೆ

ಬಾಂಬ್‌ ಸ್ಫೋಟದ ಬಳಿಕ ಪೊಲೀಸರು ಕೆಲವೊಂದು ಹೆಚ್ಚುವರಿ ಸುರಕ್ಷಾ ವ್ಯವಸ್ಥೆಗಳನ್ನು ಸೂಚಿಸಿದ್ದಾರೆ. ಅದರಂತೆ ಕೆಫೆಯ ಪ್ರವೇಶ ದ್ವಾರದಲ್ಲಿ ಎರಡು ಮೆಟಲ್ ಡಿಟೆಕ್ಟರ್ ಕೂಡ ಅಳವಡಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.

ಏನಾಗಿತ್ತು ರಾಮೇಶ್ವರಂ ಕೆಫೆಯಲ್ಲಿ?

ಕಳೆದ ಮಾರ್ಚ್‌ 1ರಂದು ಮಧ್ಯಾಹ್ನ 12.55ಕ್ಕೆ ರಾಮೇಶ್ವರಂ ಕೆಫೆಯಲ್ಲಿ ಹತ್ತು ಸೆಕೆಂಡ್‌ಗಳ ಅಂತರದಲ್ಲಿ ಎರಡು ಬಾಂಬ್‌ಗಳು ಸ್ಫೋಟಿಸಿದ್ದವು. ಘಟನೆಯಲ್ಲಿ ಒಟ್ಟು 10 ಮಂದಿ ಗಾಯಗೊಂಡಿದ್ದು ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.

ಬಿಎಂಟಿಸಿಯಲ್ಲಿ ಬಂದಿದ್ದ ಟೋಪಿ ಧರಿಸಿದ್ದ, ಬ್ಯಾಗ್‌ ಹೊಂದಿದ್ದ ವ್ಯಕ್ತಿಯೊಬ್ಬ 11.34ಕ್ಕೆ ಈ ಹೋಟೆಲ್‌ ಪ್ರವೇಶ ಮಾಡಿ ರವೆ ಇಡ್ಲಿ ಆರ್ಡರ್‌ ಮಾಡಿ 11.43ಕ್ಕೆ ಹೊರಗೆ ಹೋಗಿದ್ದ. ಹೋಗುವ ಮುನ್ನ ಕಸದ ಡಬ್ಬಿ ಇರುವ ಜಾಗದಲ್ಲಿ ‌ ಬ್ಯಾಗ್‌ ಇಟ್ಟು ಹೋಗಿದ್ದ. ಅದು 12.55ಕ್ಕೆ ಸಿಡಿದಿತ್ತು.

ಬಾಂಬಿಟ್ಟು ಹೋದ ದುಷ್ಕರ್ಮಿಯ ಸಿಸಿಟಿವಿ ಫೂಟೇಜ್‌ಗಳು ಲಭ್ಯವಾಗಿದ್ದರೂ ಆತನನ್ನು ಇನ್ನೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆತ ಬಸ್‌ನಲ್ಲೇ ಪ್ರಯಾಣಿಸಿ ತುಮಕೂರು, ಬಳ್ಳಾರಿ ಮೂಲಕ ಸಾಗಿದ್ದಾನೆ ಎಂಬ ಮಾಹಿತಿ ಇದೆ. ಆತನ ಸುಳಿವಿಗಾಗಿ ಎನ್‌ಐಎ ಹತ್ತು ಲಕ್ಷ ರೂ. ಬಹುಮಾನ ಘೋಷಿಸಿದೆ. ಆತನ ಭಾವಚಿತ್ರವನ್ನೂ ಪ್ರಕಟಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest12 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest14 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest16 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest17 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌