Oramax | ಕನ್ನಡದ ಟಾಪ್ 5 ನಟಿಯರ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ ಪದ್ಮಾವತಿ - Vistara News

ಬೆಂಗಳೂರು

Oramax | ಕನ್ನಡದ ಟಾಪ್ 5 ನಟಿಯರ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ ಪದ್ಮಾವತಿ

ಕನ್ನಡದ ಟಾಪ್ 5 ನಟಿಮಣಿಯರ ಲಿಸ್ಟ್‌ನಲ್ಲಿ ರಮ್ಯಾ ಆಯ್ಕೆಯಾಗಿದ್ದಾರೆ. ಇದರ ಮಾಹಿತಿ ಇಲ್ಲಿದೆ.

VISTARANEWS.COM


on

ಕನ್ನಡದ ಟಾಪ್ 5 ನಟಿಮಣಿಯರ ಲಿಸ್ಟ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒರಾಮ್ಯಾಕ್ಸ್ ಸಂಸ್ಥೆಯು ಕನ್ನಡದ ಜನಪ್ರಿಯ ನಟಿಯರ ಪಟ್ಟಿ ಬಿಡುಗೆ ಮಾಡಿದ್ದು, ಅದರಲ್ಲಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ನಾಲ್ಕನೇ ಸ್ಥಾನ ಪಡೆದಿದ್ದಾರೆ. ತಮ್ಮ ಹೆಸರನ್ನು ಪರಿಗಣಿಸಿದ್ದಕ್ಕೆ ರಮ್ಯಾ ಅವರು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಆ ಸಂಭ್ರಮವನ್ನು ಟ್ವೀಟ್‌ ಮಾಡಿ ಹಂಚಿಕೊಂಡಿದ್ದಾರೆ. “ನಾನು ಕಳೆದ 8 ವರ್ಷಗಳಿಂದ ಸಿನಿಮಾರಂಗದಿಂದ ದೂರ ಇದ್ದೇನೆ. ಆದರೂ ಈ ಪಟ್ಟಿಯಲ್ಲಿ ನನ್ನನ್ನು ಪರಿಗಣಿಸಿದ್ದಕ್ಕೆ ಧನ್ಯವಾದ ಎಂದು ಹೇಳಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಕನ್ನಡದ ಟಾಪ್ 5 ನಟಿಮಣಿಯರ ಲಿಸ್ಟ್‌

ಒರಾಮ್ಯಾಕ್ಸ್‌ ಸಂಸ್ಥೆ ಬಿಡುಗಡೆ ಮಾಡಿರುವ ಟಾಪ್ 5 ನಟಿಯರ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಮೊದಲನೇ ಸ್ಥಾನ ಪಡೆದಿದ್ದು, ರಚಿತಾ ರಾಮ್ ಎರಡನೇ ಸ್ಥಾನ, ರಾಧಿಕಾ ಪಂಡಿತ್ ಮೂರನೇ ಸ್ಥಾನ, ರಮ್ಯಾ ನಾಲ್ಕನೇ ಸ್ಥಾನ ಮತ್ತು ಆಶಿಕಾ ರಂಗನಾಥ್ 5ನೇ ಸ್ಥಾನ ಪಡೆದಿದ್ದಾರೆ.

ಇದನ್ನು ಓದಿ| Lucky Man Movie | ನಟ ಪುನೀತ್ ರಾಜಕುಮಾರ್ ಅಭಿನಯದ ಲಕ್ಕಿ ಮ್ಯಾನ್ ಸಿನಿಮಾದ ಟೀಸರ್ ಔಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

CM Siddaramaiah: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಅರ್ಧ ಗಂಟೆಯಿಂದ ನಿರ್ಬಂಧವನ್ನು ವಿಧಿಸಲಾಗಿತ್ತು. ಮೊದಲೇ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮತ್ತೆ ಕಾಯುವುದು ಶಿಕ್ಷೆಯಾಗಿ ಪರಿಣಮಿಸಿತು. ಸಿಎಂ, ಡಿಸಿಎಂ ಬರಲು ಸಾಕಷ್ಟು ಸಮಯ ಇದ್ದರೂ ಅವಧಿಗೆ ಮುನ್ನವೇ ಭಕ್ತರನ್ನು ತಡೆಯಲಾಗಿತ್ತು. ಕಾದು ಕಾದು ಸುಸ್ತಾಗಿದ್ದ ಭಕ್ತರ ಸಿಟ್ಟು ನೆತ್ತಿಗೇರಿತ್ತು. ರಾಜಕಾರಣಿಗಳ ಕಾರಣದಿಂದಾಗಿ ದೇವರ ದರ್ಶನಕ್ಕೂ ಇಷ್ಟು ಕಾಯಬೇಕಲ್ಲ ಎಂದು ಹಿಡಿಶಾಪ ಹಾಕಿದರು. ಅದಾಗಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ಸಾಲಿನಲ್ಲಿ ನಿಂತು ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.

VISTARANEWS.COM


on

Devotees chant Jai Shri Ram as CM Siddaramaiah enters Dharmasthala temple
Koo

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಭೇಟಿ ನೀಡಿದ ವೇಳೆ ಭಕ್ತರು ಜೈಶ್ರೀರಾಮ್‌ (Jai Shreeram), ಮೋದಿ ಕೀ ಜೈ, ಅಬ್‌ ಕೀ ಬಾರ್‌ ಮೋದಿ ಸರ್ಕಾರ್‌, ಭಾರತ್‌ ಮಾತಾಕೀ ಜೈ ಘೋಷಣೆಯನ್ನು ಕೂಗಿದ್ದಾರೆ. ಏಕಾಏಕಿ ಭಕ್ತರು ಹೀಗೆ ಕೂಗಿದ್ದರಿಂದ ಸಿಎಂ ಹಾಗೂ ಡಿಸಿಎಂಗೆ ಕಸಿವಿಸಿಯಾದರೂ ತೋರಿಸಿಕೊಳ್ಳದೇ ಶಾಂತಚಿತ್ತದಿಂದ ಶ್ರೀ ಮಂಜುನಾಥನ ದರ್ಶನಕ್ಕೆ ತೆರಳಿದರು.

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಅರ್ಧ ಗಂಟೆಯಿಂದ ನಿರ್ಬಂಧವನ್ನು ವಿಧಿಸಲಾಗಿತ್ತು. ಮೊದಲೇ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮತ್ತೆ ಕಾಯುವುದು ಶಿಕ್ಷೆಯಾಗಿ ಪರಿಣಮಿಸಿತು. ಸಿಎಂ, ಡಿಸಿಎಂ ಬರಲು ಸಾಕಷ್ಟು ಸಮಯ ಇದ್ದರೂ ಅವಧಿಗೆ ಮುನ್ನವೇ ಭಕ್ತರನ್ನು ತಡೆಯಲಾಗಿತ್ತು.

ಕಾದು ಕಾದು ಸುಸ್ತಾಗಿದ್ದ ಭಕ್ತರ ಸಿಟ್ಟು ನೆತ್ತಿಗೇರಿತ್ತು. ರಾಜಕಾರಣಿಗಳ ಕಾರಣದಿಂದಾಗಿ ದೇವರ ದರ್ಶನಕ್ಕೂ ಇಷ್ಟು ಕಾಯಬೇಕಲ್ಲ ಎಂದು ಹಿಡಿಶಾಪ ಹಾಕಿದರು. ಅದಾಗಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ಸಾಲಿನಲ್ಲಿ ನಿಂತು ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಹೀಗಾಗಿ ಸಿಎಂ ಹಾಗೂ ಪೊಲೀಸ್ ಇಲಾಖೆ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.

Devotees chant Jai Shri Ram as CM Siddaramaiah enters Dharmasthala temple

ಸಿಎಂಗೆ ಪೂರ್ಣಕುಂಭ ಸ್ವಾಗತ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಧರ್ಮಸ್ಥಳದ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸ್ವಾಗತವನ್ನು ಮಾಡಲಾಯಿತು. ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಭವ್ಯ ಸ್ವಾಗತ ಸಿಕ್ಕಿತು. ವಾದ್ಯ ಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಪರವಾಗಿ ಧರ್ಮಸ್ಥಳ ಧರ್ಮದರ್ಶಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಹೆಗ್ಗಡೆ ಸ್ವಾಗತಿಸಿದರು.

ಜೈ ಶ್ರೀರಾಮ್‌ ಘೋಷಣೆ

ಈ ವೇಳೆ ಮುಖ್ಯ ದ್ವಾರದಿಂದ ನಡೆದುಕೊಂಡೇ ದೇವಸ್ಥಾನ ಪ್ರವೇಶಿಸಿದ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಕಂಡ ಭಕ್ತರು ತೀವ್ರ ಅಸಹನೆಯನ್ನು ಹೊಂದಿದ್ದರು. ಹೀಗಾಗಿ ಕೆಲವರು ಇದೇ ವೇಳೆ ಜೈ ಶ್ರೀರಾಮ್‌ ಘೋಷಣೆಯನ್ನು ಕೂಗಿದರು. ಇನ್ನೂ ಕೆಲವರು ಮೋದಿ ಕೀ ಜೈ, ಭಾರತ್‌ ಮಾತಾಕೀ ಜೈ, ಅಬ್‌ ಕೀ ಬಾರ್‌ ಮೋದಿ ಸರ್ಕಾರ್‌ ಘೋಷಣೆ ಕೂಗಿದರು.

ವಿಶೇಷ ಪೂಜೆ, ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಕೆಲ ಹೊತ್ತು ಚರ್ಚೆ ನಡೆಸಿದರು.

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ; ಡಾ. ವೀರೇಂದ್ರ ಹೆಗ್ಗಡೆ ಹರ್ಷ: ಡಿಕೆ ಶಿವಕುಮಾರ್

“ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಧರ್ಮಸ್ಥಳ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಆರೋಪ ಸುಳ್ಳಾ: FIR ಸಮರ್ಥಿಸಿಕೊಂಡ ಸಿಎಂ

ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತಾಧಿಗಳು ತಮಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹ ಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಈ ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ ಎಂಬುದಾಗಿ ಡಿ.ಕೆ. ಶಿವಕುಮಾರ್‌ ಹೇಳಿದರು.

Continue Reading

ಕರ್ನಾಟಕ

Bengaluru News: ಇದು ಎಷ್ಟು ಪರ್ಸೆಂಟ್ ಸರ್ಕಾರ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

Bengaluru News: ಇಡೀ ದೇಶದಲ್ಲಿ ನಡೆಯುವ ಚುನಾವಣೆಗೆ ಕರ್ನಾಟಕ ಎಟಿಎಂ ಆಗಿದೆ ಎಂದು ಆರೋಪಿಸಿರುವ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಪಂಚರಾಜ್ಯ ಚುನಾವಣೆಗೆ ದುಡ್ಡು ಕೊಟ್ಟಿದ್ದಾಯ್ತು. ಈಗ ಸಂಸತ್ ಚುನಾವಣೆಗೂ ದುಡ್ಡು ಕೊಟ್ಟಿದ್ದಾಯ್ತು. ನಮ್ಮ ಮೇಲೆ 40 ಪರ್ಸೆಂಟ್ ಸರ್ಕಾರ ಎಂದು ಹೇಳಿದ ನೀವು, ಈಗ ನಿಮ್ಮದು ಎಷ್ಟು ಪರ್ಸೆಂಟ್ ಸರ್ಕಾರ ಎಂದು ಉತ್ತರ ಕೊಡಿ ಎಂದು ಅವರು ಆಗ್ರಹಿಸಿದ್ದಾರೆ.

VISTARANEWS.COM


on

MLC Chalavadi Narayanaswamy latest statement
Koo

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಾಂಗ್ರೆಸ್ ಸರ್ಕಾರ (Congress Government) ಕೊಟ್ಟ ಬೆಲೆ ಏನು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ (Bengaluru News) ಪ್ರಶ್ನಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷ, ವಿಪಕ್ಷದ ನಾಯಕರು ಒಂದು ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ ತಕ್ಷಣ ಎಚ್ಚೆತ್ತುಕೊಳ್ಳಬೇಕು, ಅದನ್ನು ಪರಿಹರಿಸಬೇಕು. ಆದರೆ ಈ ಸರ್ಕಾರ ಅತ್ತ ಗಮನ ಕೊಟ್ಟಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

ಕಾನೂನು ಸುವ್ಯವಸ್ಥೆ ತೀವ್ರವಾಗಿ ಹದಗೆಟ್ಟ ಕುರಿತು ತಿಂಗಳುಗಟ್ಟಲೆ ಕಾಲ ಬಿಜೆಪಿ ತಿಳಿಸಿದ್ದರೂ ಈ ಮಾನಗೇಡಿ ಸರ್ಕಾರ ಎಚ್ಚೆತ್ತುಕೊಂಡಿಲ್ಲ, ಅದನ್ನು ಸರಿಪಡಿಸುವ ಕೆಲಸ ಮಾಡಿಲ್ಲ ಎಂದು ಟೀಕಿಸಿದರು.

ಅತ್ಯಾಚಾರ, ಲವ್ ಜಿಹಾದ್ ವಿಚಾರದಲ್ಲಿ ಸರ್ಕಾರ ಗಮನ ಕೊಡುತ್ತಿಲ್ಲ. ಕೊಲೆಗಳೂ ಹೆಚ್ಚಾಗಿವೆ. ನಿನ್ನೆ ಕಸ್ಟಡಿ ಸಾವು ಸಂಭವಿಸಿದೆ. ಯಾರಾದರೂ ಇವುಗಳ ಕುರಿತು ಪ್ರಶ್ನಿಸಿದರೆ ಎಲ್ರೀ ಹದಗೆಟ್ಟಿದೆ ಎಂದು ಉಡಾಫೆ ಮಾತನಾಡುತ್ತಾರೆ ಎಂದು ದೂರಿದರು.

ಗುಲ್ಬರ್ಗಕ್ಕೆ ಪಿಎಚ್‍ಡಿ ಮಾಡಲೆಂದು ಹೋಗಿದ್ದ ದಲಿತ ಸಾಹಿತಿ ಆನಂದ್ ಸಾವನ್ನಪ್ಪಿದ್ದು ಯಾಕೆ? ಇದರ ಬಗ್ಗೆ ಜಿಲ್ಲಾ ಸಚಿವರು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ತಲೆಕೆಡಿಸಿಕೊಂಡಿಲ್ಲ. ಏನಾದರೂ ಕೇಳಿದರೆ ಬೇರೆ ಸರ್ಕಾರ ಇದ್ದಾಗ ಮರ್ಡರ್ ಆಗಿಲ್ವ? ಎಂದು ಕೇಳುತ್ತಾರೆ. ಇದು ಉಡಾಫೆ ಉತ್ತರವಲ್ಲವೇ ಎಂದು ಕೇಳಿದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

ನೀವು ಕೇವಲ ಲೂಟಿ ಮಾಡಲೆಂದು ಬಂದಿದ್ದೀರಾ? ಎಂದರಲ್ಲದೆ, ಇಡೀ ದೇಶದಲ್ಲಿ ನಡೆಯುವ ಚುನಾವಣೆಗೆ ಕರ್ನಾಟಕ ಎಟಿಎಂ ಆಗಿದೆ ಎಂದು ಆರೋಪಿಸಿದ ಅವರು, ಪಂಚರಾಜ್ಯ ಚುನಾವಣೆಗೆ ದುಡ್ಡು ಕೊಟ್ಟಿದ್ದಾಯ್ತು. ಈಗ ಸಂಸತ್ ಚುನಾವಣೆಗೂ ದುಡ್ಡು ಕೊಟ್ಟಿದ್ದಾಯ್ತು. ನಮ್ಮ ಮೇಲೆ 40 ಪರ್ಸೆಂಟ್ ಸರ್ಕಾರ ಎಂದು ಹೇಳಿದ ನೀವು, ಈಗ ನಿಮ್ಮದು ಎಷ್ಟು ಪರ್ಸೆಂಟ್ ಸರ್ಕಾರ ಎಂದು ಉತ್ತರ ಕೊಡಿ ಎಂದು ಆಗ್ರಹಿಸಿದರು.

Continue Reading

ಕರ್ನಾಟಕ

Bengaluru News: ರೈತರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತೇ ಹೋಗಿದೆ; ರೈತ ಮೋರ್ಚಾ ಆಕ್ರೋಶ

Bengaluru News: ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಅತ್ಯಂತ ಕಡಿಮೆ ದರದಲ್ಲಿ ಬಿತ್ತನೆ ಬೀಜವನ್ನು ವಿತರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಸರ್ಕಾರವು ಬಿತ್ತನೆ ಬೀಜಕ್ಕೂ ಅತಿ ಹೆಚ್ಚು ದರ ವಿಧಿಸುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ಅವರು, ಈಗ ಮುಂಗಾರು ಸಂದರ್ಭದಲ್ಲಿ ಬೆಳೆಯುವ ಹೆಸರು, ಶೇಂಗಾ, ಉದ್ದು, ಮೆಕ್ಕೆಜೋಳ ಮೊದಲಾದವುಗಳ ದರವನ್ನು ಅತಿ ಹೆಚ್ಚು ಪ್ರಮಾಣದಲ್ಲಿ ಏರಿಸಿದ್ದಾರೆ ಎಂದು ಅವರು ಖಂಡಿಸಿದ್ದಾರೆ.

VISTARANEWS.COM


on

BJP Raitha Morcha State President Former MLA A S Patil Nadahalli latest Statement
Koo

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು (State Congress Government) ರೈತರ ಪಾಲಿಗೆ ಸತ್ತು ಹೋಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ (Bengaluru News) ಟೀಕಿಸಿದರು.

ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಸುಮಾರು ಒಂದು ವರ್ಷದಿಂದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರವು ಸಾವಿರಾರು ಕೋಟಿ ರೂ. ಬರಗಾಲದ ಪರಿಹಾರ ಧನ ಕೊಟ್ಟಿದೆ. ಆದರೆ, ದೇವರು ಕೊಟ್ಟರೂ ಕೂಡ ಪೂಜಾರಿ ಕೊಡಲು ತಯಾರಿಲ್ಲ ಎಂಬಂತೆ ಕೇಂದ್ರ ಸರ್ಕಾರ, ನರೇಂದ್ರ ಮೋದಿಯವರು ಬರಗಾಲದ ಮೊತ್ತವನ್ನು ಕೊಟ್ಟಿದ್ದರೂ ಅದನ್ನು ಸುಮಾರು 2 ಲಕ್ಷಕ್ಕಿಂತ ಹೆಚ್ಚು ರೈತರ ಖಾತೆಗಳಿಗೆ ಇಂದಿಗೂ ನೀಡಿಲ್ಲ. ಇದು ರೈತರ ಪಾಲಿಗೆ ಸತ್ತು ಹೋದ ಸರ್ಕಾರದಂತಿದೆ ಎಂದು ಆರೋಪಿಸಿಸಿದರು.

ಇದನ್ನೂ ಓದಿ: KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

ಬರಗಾಲದಿಂದ ಬೆಂದಿರುವ ರೈತರಿಗೆ ಅತ್ಯಂತ ಕಡಿಮೆ ದರದಲ್ಲಿ ಬಿತ್ತನೆ ಬೀಜವನ್ನು ವಿತರಿಸುವ ಕೆಲಸವನ್ನು ಈ ಸರ್ಕಾರ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಸರ್ಕಾರವು ಬಿತ್ತನೆ ಬೀಜಕ್ಕೂ ಅತಿ ಹೆಚ್ಚು ದರ ವಿಧಿಸುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ ಅವರು, ಈಗ ಮುಂಗಾರು ಸಂದರ್ಭದಲ್ಲಿ ಬೆಳೆಯುವ ಹೆಸರು, ಶೇಂಗಾ, ಉದ್ದು, ಮೆಕ್ಕೆಜೋಳ ಮೊದಲಾದವುಗಳ ದರವನ್ನು ಅತಿ ಹೆಚ್ಚು ಪ್ರಮಾಣದಲ್ಲಿ ಏರಿಸಿದ್ದಾರೆ ಎಂದು ಖಂಡಿಸಿದರು.

ಉದ್ದು ಬೀಜ ಪ್ರತಿ ಕೆಜಿಗೆ 43 ರೂ, ತೊಗರಿಗೆ 48 ರೂ., ಮೆಕ್ಕೆಜೋಳ ಬೀಜ 5 ಕೆಜಿ ಪೊಟ್ಟಣಕ್ಕೆ 24 ರೂ. ಹೆಚ್ಚಿಸಿದ್ದಾರೆ. ಸರ್ಕಾರ ಈ ಹಿಂದಿನ ಬಿತ್ತನೆ ಬೀಜದ ದರವನ್ನೇ ಮುಂದುವರಿಸಬೇಕು. ಬಿತ್ತನೆ ಬೀಜ, ಗೊಬ್ಬರ ಸಮರ್ಪಕವಾಗಿ ಎಲ್ಲ ರೈತರಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಕೊಬ್ಬರಿಯನ್ನು ಎಂಎಸ್‍ಪಿ ಅಡಿ ಖರೀದಿ ಮಾಡಲು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮುಂದಾಗಿದೆ. ಪ್ರತಿ ಕ್ವಿಂಟಲ್‍ಗೆ ಸುಮಾರು 12 ಸಾವಿರ ರೂ. ಕೊಟ್ಟು ಖರೀದಿ ಅವಕಾಶ ನೀಡಿದ್ದು, ಈ ಸರ್ಕಾರ ಚೀಲ ಇಲ್ಲ ಎಂಬ ನೆಪ ಹೇಳುತ್ತಿದೆ. ಇದು ಅತ್ಯಂತ ನಾಚಿಕೆಗೇಡು ಎಂದು ಹೇಳಿದರು.

ಈಗಾಗಲೇ ಖರೀದಿಸಿದ 35 ಸಾವಿರ ಟನ್ ಕೊಬ್ಬರಿಗೆ ಹಣವನ್ನೂ ನೀಡಿಲ್ಲ ಎಂದು ದೂರಿದ ಅವರು. ರೈತರು ಹಣ ಕೇಳಿದರೆ ಕೊಬ್ಬರಿ ತೆಗೆದುಕೊಂಡು ಹೋಗುವಂತೆ ಅಧಿಕಾರಿಗಳು ದರ್ಪದಿಂದ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ: Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

ಹಿಂದೆ ಹೈನುಗಾರರಿಗೆ ನಮ್ಮ ಸರ್ಕಾರ ಹಾಲು ಉತ್ಪಾದನೆಗೆ ಪ್ರೋತ್ಸಾಹಧನ ನೀಡುತ್ತಿತ್ತು. ಆದರೆ, ಈಗ ಹೈನುಗಾರಿಕೆಗೆ ಸಂಬಂಧಿಸಿ ಪ್ರತಿ ಲೀಟರ್‌ಗೆ 5 ರೂ. ಪ್ರೋತ್ಸಾಹಧನ ಸ್ಥಗಿತಗೊಂಡಿದೆ ಎಂದರಲ್ಲದೆ, ರೈತರಿಗೆ ಬಾಕಿ ಇರುವ 700 ರಿಂದ 800 ಕೋಟಿ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಅವರು ಒತ್ತಾಯಿಸಿದರು.

Continue Reading

ಬೆಂಗಳೂರು

R. Jayakumar: ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಅನಾರೋಗ್ಯದಿಂದ ನಿಧನ

R. Jayakumar: ಕೊಡಗಿನವರಾದ ಜಯಕುಮಾರ್ ಅವರು ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಇವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

VISTARANEWS.COM


on

R. Jayakumar
Koo

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64) ಅವರು ಅನಾರೋಗ್ಯದಿಂದ ಶನಿವಾರ ನಿಧನರಾದರು. ಕೊಡಗಿನವರಾದ ಜಯಕುಮಾರ್ (R. Jayakumar), ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಇವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ಇವರು ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಜನಪರ ಹೋರಾಟದಲ್ಲಿ ಭಾಗವಹಿಸಿದ್ದ ಕಾಮ್ರೆಡ್ ಜಯಕುಮಾರ್ ಅವರು ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು. ಅವರ ದೇಹವನ್ನು ಬೆಂಗಳೂರು ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಹೋರಾಟದ ಹಾದಿ ಆರಿಸಿಕೊಂಡಿದ್ದ ಜಯಕುಮಾರ್: ಸಿಎಂ

ಹಿರಿಯ ಪತ್ರಕರ್ತ ಜಯಕುಮಾರ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹಿರಿಯ ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ಆರ್. ಜಯಕುಮಾರ್ ನಿಧನದಿಂದ ದು:ಖಿತನಾಗಿದ್ದೇನೆ.
ಕಮ್ಯುನಿಸ್ಟ್ ಸಿದ್ಧಾಂತಕ್ಕೆ ಒಲಿದು ಸಂಘಟನೆ ಮತ್ತು ಹೋರಾಟದ ಹಾದಿಯನ್ನು ಆರಿಸಿಕೊಂಡಿದ್ದ ಜಯಕುಮಾರ್ ಬದುಕಿನುದ್ದಕ್ಕೂ ಬಡವರು, ಶೋಷಿತರು ಮತ್ತು ಅವಕಾಶ ವಂಚಿತರ ಪರವಾಗಿ ದನಿ ಎತ್ತುತ್ತಾ ಬಂದವರು.
ಜಯಕುಮಾರ್ ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಕೆಯುಡಬ್ಲ್ಯುಜೆ ಸಂತಾಪ

ಹಿರಿಯ ಮತ್ತು ಕ್ರಿಯಾಶೀಲ ಪತ್ರಕರ್ತರಾಗಿದ್ದ ಆರ್.ಜಯಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡ ಮಾಡುವ ಪ್ರಶಸ್ತಿಗೆ ಆರ್.ಜಯಕುಮಾರ್ ಭಾಜನರಾಗಿದ್ದರು. ಅನಾರೋಗ್ಯದ ಕಾರಣದಿಂದ ಚಿತ್ರದುರ್ಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದ ಕಾರಣ, ಮೈಸೂರಿನ ಅವರ ತೋಟದ ಮನೆಗೆ ಹೋಗಿ ಅಲ್ಲಿ ಕೆಯುಡಬ್ಲೂಜೆ ಪ್ರಶಸ್ತಿ ಪ್ರದಾನ ಮಾಡಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

ಜಯಕುಮಾರ್ ನಿಧನದಿಂದ ಕ್ರಿಯಾಶೀಲ ಪತ್ರಕರ್ತನನ್ನು ಸುದ್ದಿಮನೆ ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ಕರುಣಿಸಲಿ ಎಂದು ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.

Continue Reading
Advertisement
Indigo Flight
ದೇಶ22 mins ago

IndiGo Flight: ಗಾಂಜಾ ಮತ್ತಿನಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು?

Labours fall sick
ಕರ್ನಾಟಕ45 mins ago

Workers Fall Sick: ಹಲ್ಲಿ ಬಿದ್ದ ಆಹಾರ ಸೇವಿಸಿ ಒಬ್ಬ ಕಾರ್ಮಿಕ ತೀವ್ರ ಅಸ್ವಸ್ಥ, ಹಲವರಿಗೆ ವಾಂತಿ-ಭೇದಿ

Natasa Stankovic
ಪ್ರಮುಖ ಸುದ್ದಿ50 mins ago

Natasa Stankovic : ಡೈವೋರ್ಸ್​ ಗಾಸಿಪ್​ ನಡುವೆಯೇ ಬೇರೊಬ್ಬರ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

Fire Accident
ದೇಶ57 mins ago

Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 7 ಮಂದಿ ದಾರುಣ ಸಾವು

Devotees chant Jai Shri Ram as CM Siddaramaiah enters Dharmasthala temple
ದಕ್ಷಿಣ ಕನ್ನಡ1 hour ago

CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

IPL 2024
ಪ್ರಮುಖ ಸುದ್ದಿ1 hour ago

IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

MLC Chalavadi Narayanaswamy latest statement
ಕರ್ನಾಟಕ1 hour ago

Bengaluru News: ಇದು ಎಷ್ಟು ಪರ್ಸೆಂಟ್ ಸರ್ಕಾರ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

BJP Raitha Morcha State President Former MLA A S Patil Nadahalli latest Statement
ಕರ್ನಾಟಕ1 hour ago

Bengaluru News: ರೈತರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತೇ ಹೋಗಿದೆ; ರೈತ ಮೋರ್ಚಾ ಆಕ್ರೋಶ

Former Minister Araga jnanendra latest statement in Shivamogga
ಶಿವಮೊಗ್ಗ1 hour ago

Araga jnanendra: ಠಾಣೆಗೇ ನುಗ್ಗಿ ಜನ ಪೊಲೀಸರಿಗೆ ಹೊಡೆಯುವಂತಾಗಿದೆ; ಆರಗ ಜ್ಞಾನೇಂದ್ರ ಟೀಕೆ

Uttara Kannada DC Gangubai Manakar statement
ಉತ್ತರ ಕನ್ನಡ1 hour ago

Uttara Kannada News: ಕಾರವಾರ ನಗರಸಭೆ ತೆರಿಗೆ ಸಂಗ್ರಹಕ್ಕೆ ವೇಗ: ಡಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌