Site icon Vistara News

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Renukaswamy murder case 17th accused files bail plea

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ ಪ್ರಕರಣದ ಆರೋಪಿಯೊಬ್ಬ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ 17ನೇ ಆರೋಪಿ ನಿಖಿಲ್ ನಾಯಕ್ ಶರಣಾಗಿದ್ದ.

ಒಟ್ಟಾರೆ 17 ಆರೋಪಿಗಳ ಪೈಕಿ ನಿಖಿಲ್‌ ನಾಯಕ್‌ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‌ನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಬನ್ನೇರುಘಟ್ಟ ರಸ್ತೆ ಕೆಂಬತ್ತಹಳ್ಳಿ ನಿವಾಸಿ ನಿಖಿಲ್ ನಾಯಕ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ರೇಣುಕಾಸ್ವಾಮಿ ಕೊಲೆ ಬಳಿಕ ಪಟ್ಟಣಗೆರೆ ಶೆಡ್‌ನಿಂದ ಮೃತದೇಹವನ್ನು ಸಾಗಿಸಿದ್ದ ಆರೋಪವಿದೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

ಕೊಲೆಯಾದ ರೇಣುಕಾಸ್ವಾಮಿ ಹಾಗೂ ಕೊಲೆ ಕೇಸ್‌ನಲ್ಲಿ ಬಂಧಿತನಾಗಿರುವ ನಿಖಿಲ್‌ ನಾಯಕ್

ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ್ದ ನಿಖಿಲ್‌ ನಾಯಕ್‌

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಅದರಲ್ಲಿ ನಿಖಿಲ್‌ ನಾಯಕ್‌ ಸೇರಿ ರವಿಶಂಕರ್, ಕಾರ್ತಿಕ್, ಕೇಶವ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದರು.

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿತ್ತು.

ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ ದರ್ಶನ್‌. ದರ್ಶನ್ ಪರ ಒಲವು ತೋರಿದವರ (Actor Darshan) ಸಂಖ್ಯೆ ತೀರಾ ಕಡಿಮೆ. ಇದೀಗ ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಇದೀಗ ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದಾರೆ. ʻʻಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾʼʼಎಂದು ಬರೆದುಕೊಂಡಿದ್ದಾರೆ. ಇದೀಗ ಅವರ ಪೋಸ್ಟ್‌ ವೈರಲ್‌ ಆಗುತ್ತಿದೆ.

ʻʻಮನಸೇ ಮನಸೇ,,, ಸೋಲೋ ಗೆಲುವೋ, ನೋವೋ ನಲಿವೋ, ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,, ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ…. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು.. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,, ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,
ಶಿಕ್ಷೆ ಇದೇʼʼಎಂದು ಬರೆದುಕೊಂಡಿದ್ದಾರೆ.

ʻʻ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,, ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,
ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,, ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,
ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,, ಕಾಯೋಣ ,, ಸಮಾಧಾನದಿಂದ..ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ…ʼʼಎಂದು ಬರೆದುಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. 

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version