Site icon Vistara News

Teachers Protest : ಶಿಕ್ಷಕರ ಪ್ರತಿಭಟನೆ ವೇಳೆ ವಿಷ ಸೇವಿಸಿದ್ದ ನಿವೃತ್ತ ಶಿಕ್ಷಕ ಸಾವು

Retired teacher died after consuming poison during teachers' protest

#image_title

ಬೆಂಗಳೂರು: ಅನುದಾನಿತ ಶಾಲೆಗಳ ಶಿಕ್ಷಕರ ಸಂಘ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ನಡೆಸುತ್ತಿರುವ ಪ್ರತಿಭಟನೆ ನಡುವೆ (Teachers Protest) ವಿಷ ಸೇವಿಸಿದ್ದ ನಿವೃತ್ತ ಶಿಕ್ಷಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ನಿವೃತ್ತ ಶಿಕ್ಷಕ ಸಿದ್ದಯ್ಯ ಹಿರೇಮಠ (65) ಮೃತಪಟ್ಟವರು.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ನಿವೃತ್ತ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದರು. ಅವರಲ್ಲಿ ಒಬ್ಬರಾದ ಸಿದ್ದಯ್ಯ ಅವರು ಗುರುವಾರ ರಾತ್ರಿ ವಿಷ ಸೇವಿಸಿದ್ದರು. ಸ್ಥಳದಲ್ಲಿದ್ದವರು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಅವರು ಮೃತಪಟ್ಟಿದ್ದಾರೆ.

Exit mobile version