Road Accident: ವ್ಯಕ್ತಿಯ ಕಾಲಿನ ಮೇಲೆ ಹರಿದ ಬಿಎಂಟಿಸಿ ಬಸ್, ಕಾಲು ಕಟ್ - Vistara News

ಬೆಂಗಳೂರು

Road Accident: ವ್ಯಕ್ತಿಯ ಕಾಲಿನ ಮೇಲೆ ಹರಿದ ಬಿಎಂಟಿಸಿ ಬಸ್, ಕಾಲು ಕಟ್

ಯಶವಂತಪುರದಲ್ಲಿ ನಡೆದ ಅಪಘಾತದ ಬಳಿಕ ರೋಡ್‌ ಸ್ಕಿಡ್ ಆಗುತ್ತಿರುವುದರಿಂದ ಬೈಕ್‌ ಸವಾರರು ನಿಯಂತ್ರಣ ಕಳೆದುಕೊಂಡು ಬೀಳುತ್ತಿದ್ದು, 20ಕ್ಕೂ ಹೆಚ್ಚು ಬೈಕ್ ಸವಾರರು ಬಿದ್ದು ಸಣ್ಣ ಪುಟ್ಟ ಗಾಯ ಮಾಡಿಕೊಂಡಿದ್ದಾರೆ.

VISTARANEWS.COM


on

waste accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವ್ಯಕ್ತಿಯೊಬ್ಬರ ಕಾಲಿನ ಮೇಲೆ ಬಿಎಂಟಿಸಿ ಬಸ್ ಹರಿದು ಎರಡೂ ಕಾಲುಗಳು ತುಂಡಾಗಿವೆ. ಬೆಂಗಳೂರಿನ ಯಶವಂತಪುರ ಸರ್ಕಲ್‌ನಲ್ಲಿ ಈ ದುರ್ಘಟನೆ ನಡೆದಿದೆ.

ರಾತ್ರಿ 9.30ಕ್ಕೆ ನಡೆದಿರುವ ಈ ಘಟನೆಯಲ್ಲಿ ಸರಿಸುಮಾರು 60 ವರ್ಷದ ವ್ಯಕ್ತಿಯ ಎರಡೂ ಕಾಲುಗಳು ಕತ್ತರಿಸಿಹೋಗಿವೆ. ವ್ಯಕ್ತಿ ಅರೆಪ್ರಜ್ಞಾವಸ್ಥೆಯಲ್ಲಿದ್ದು, ಅವರ ಬಗ್ಗೆ ಇನ್ನಷ್ಟು ವಿವರಗಳು ತಿಳಿದುಬರಬೇಕಿವೆ. ಕೆಸಿ‌ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಸದ ವಾಹನಕ್ಕೆ ಗುದ್ದಿದ ಲಾರಿ, ಚೆಲ್ಲಾಡಿದ ಕಸಕ್ಕೆ ಹೈರಾಣಾದ ಸವಾರರು

ಯಶವಂತಪುರದಲ್ಲಿರುವ ಇಸ್ಕಾನ್ ದೇವಾಲಯದ ಮುಂದೆ ನೀರಿನ ಲಾರಿ ಮತ್ತು ಕಸ ಸಾಗಿಸುತ್ತಿದ್ದ ಮಹೇಂದ್ರ ಬೋಲೇರೋ ನಡುವೆ ಅಪಘಾತವಾಗಿದೆ. ಬೆಳಗ್ಗೆ 5.30ರ ಹೊತ್ತಿಗೆ ಹೋಟಲ್ ತ್ಯಾಜ್ಯ ತೆಗೆದುಕೊಂಡು ಹೋಗುತ್ತಿದ್ದ ಬೊಲೇರೋ ಪಿಕ್‌ಅಪ್‌ ಗಾಡಿಗೆ ವಾಟರ್ ಟ್ಯಾಂಕರ್ ಗುದ್ದಿದ್ದು, ಅಪಘಾತಕ್ಕೆ ಬೊಲೇರೋದಲ್ಲಿದ್ದ ತ್ಯಾಜ್ಯ ಸಂಪೂರ್ಣ ರಸ್ತೆಗೆ ಬಿದ್ದಿದೆ. ರಸ್ತೆ ತುಂಬಾ ಹೋಟಲ್ ತ್ಯಾಜ್ಯ ಚೆಲ್ಲಾಡಿದ್ದು, ಹಲವಾರು ಬೈಕ್‌ ಸವಾರರು ಇದರಿಂದಾಗಿ ಜಾರಿ ಬಿದ್ದರು.

ರೋಡ್‌ ಸ್ಕಿಡ್ ಆಗುತ್ತಿರುವುದರಿಂದ ಬೈಕ್‌ ಸವಾರರು ನಿಯಂತ್ರಣ ಕಳೆದುಕೊಂಡು ಬೀಳುತ್ತಿದ್ದು, 20ಕ್ಕೂ ಹೆಚ್ಚು ಬೈಕ್ ಸವಾರರು ಬಿದ್ದು ಸಣ್ಣ ಪುಟ್ಟ ಗಾಯ ಮಾಡಿಕೊಂಡಿದ್ದಾರೆ. ಸ್ಥಳೀಯರು ಜಾಗದಲ್ಲಿ ನಿಂತು ಬೈಕ್‌ ಸವಾರರಿಗೆ ನಿಧಾನವಾಗಿ ಚಲಿಸಿ ಎಂದು ಗೈಡ್ ಮಾಡಿದರು.

ಇದನ್ನೂ ಓದಿ: Kumta News: ಮೀನು ಸಾಗಾಣಿಕೆ ವಾಹನದಲ್ಲಿ ಗೋ ಮಾಂಸ ಸಾಗಾಟ; ಅಪಘಾತದಿಂದಾಗಿ ಪ್ರಕರಣ ಬಯಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

KSET Updates: ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಆ.17ಕ್ಕೆ ದಾಖಲೆ ಪರಿಶೀಲನೆ

KSET Updates : ಇದೇ ಆ.17 ರಂದು ಹಾಜರಾಗಿ ಕೆಸೆಟ್ ಪ್ರಮಾಣ ಪತ್ರ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

VISTARANEWS.COM


on

By

KSET updates
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕೆಸೆಟ್ (KSET 2024) ಪರೀಕ್ಷೆಯಲ್ಲಿ ಅರ್ಹತೆ ಪಡೆದು, ವಿವಿಧ ಕಾರಣಗಳಿಂದ ಮೂಲ ದಾಖಲೆಗಳ ಪರಿಶೀಲನೆಗೆ ಒಳಪಡದವರ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ (ಆ.12) ಪ್ರಕಟಿಸಿದೆ. ಅಂತಹವರು ಇದೇ ಆ.17 ರಂದು ಹಾಜರಾಗಿ ಕೆಸೆಟ್ ಪ್ರಮಾಣ ಪತ್ರ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಜುಲೈ 11 ರಿಂದ 22 ಹಾಗೂ 31ರಂದು ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಿ, ಪ್ರಮಾಣ ಪತ್ರ ಕೂಡ ನೀಡಲಾಗಿದೆ. ಕೆಲವರು ಆ ಸಂದರ್ಭದಲ್ಲಿ ಹಾಜರಾಗಿದ್ದರೂ ಪ್ರಮಾಣ ಪತ್ರ ಕೊಟ್ಟಿರಲಿಲ್ಲ. ಅಂತಹವರು ನಂತರ ಮೂಲ ದಾಖಲೆಗಳನ್ನು ಕೊಟ್ಟು ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ಪರಿಶೀಲಿಸಿ, ಯಾರೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಹರು ಎಂಬುದನ್ನು ತೀರ್ಮಾನಿಸಿದೆ. ಅಂತಹವರ ಪಟ್ಟಿಯನ್ನು ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಆ.17ರಂದು ಬೆಳಗ್ಗೆ 10ಗಂಟೆಗೆ ಮೂಲ ದಾಖಲೆ ಸಮೇತ ಹಾಜರಾಗಿ ಪ್ರಮಾಣ ಪತ್ರ ಪಡೆಯಬಹುದು. ಅನಿವಾರ್ಯ ಕಾರಣಗಳಿಂದ ಪರಿಶೀಲನೆ ಸಂದರ್ಭದಲ್ಲಿ ಗೈರುಹಾಜರಾಗಿದ್ದವರೂ ಅಂದು ಬಂದು ಪ್ರಮಾಣ ಪತ್ರಗಳನ್ನು ಪಡೆಯಬಹುದು.

ಇದನ್ನೂ ಓದಿ:KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

ಆಗಸ್ಟ್‌ 5ರಿಂದ ನೀಟ್‌ ರೋಲ್‌ ನಂಬರ್‌ ದಾಖಲಿಸಲು ಅವಕಾಶ, ಲಿಂಕ್‌ ಪಡೆಯಲು ಹೀಗೆ ಮಾಡಿ

ಬೆಂಗಳೂರು: ಈಗಾಗಲೇ ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ (NEET 2024) ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್‌ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ಲಿಂಕ್ ಬಿಡುಗಡೆ ಮಾಡಲಿದೆ. ಆಗಸ್ಟ್ 5ರ ಬೆಳಗ್ಗೆ 11ಕ್ಕೆ ಕೆಇಎ ವೆಬ್‌ಸೈಟ್‌ನಲ್ಲಿ (KEA Website) ಯುಜಿ ನೀಟ್-2024 ಲಿಂಕ್ ಬಿಡುಗಡೆ ಮಾಡಲಾಗುತ್ತದೆ. ಆಗಸ್ಟ್ 7 ರಂದು ಬೆಳಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್‌ಅನ್ನು ಎನ್‌ಟಿಎ ಡೇಟಾದೊಂದಿಗೆ ತಾಳೆ ಮಾಡಿ ಯುಜಿ ನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೇರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಆ.7ರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವವರು ಇನ್ನೂ ಅರ್ಜಿ ಸಲ್ಲಿಸದೇ ಇದ್ದಲ್ಲಿ ಅಂತಹವರು ಆ.7ರಿಂದ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್‌ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜುಲೈ 26ರಂದು ನೀಟ್‌ ಯುಜಿ 2024 ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Teachers Protest: ಶಿಕ್ಷಕರ ಪ್ರತಿಭಟನೆ; ಬಡ್ತಿ, ವರ್ಗಾವಣೆ, ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ಆಗ್ರಹ

Teachers Protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದ ವಿವಿಧೆಡೆಯಿಂದ ಸಾವಿರಾರು ಶಾಲಾ ಶಿಕ್ಷಕರು ಆಗಮಿಸಿದ್ದಾರೆ.

VISTARANEWS.COM


on

Teachers Protest
Koo

ಬೆಂಗಳೂರು: ಬಡ್ತಿ, ವರ್ಗಾವಣೆ ಹಾಗೂ ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ (Teachers Protest) ನಡೆಸಲಾಗಿದೆ. ಹೋರಾಟದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಸಾವಿರಾರು ಶಿಕ್ಷಕರು ಭಾಗಿಯಾಗಿದ್ದರು.

2017ರ ನಂತರ ನೇಮಕ ಆದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಬೇಕು. ಅರ್ಹತೆ ಆಧಾರದ ಮೇಲೆ ಶಿಕ್ಷಕರ ಮುಂಬಡ್ತಿ ನೀಡುವುದು, ಎಲ್ಲ ಶಿಕ್ಷಕರನ್ನು ಮುಖ್ಯ ಗುರುಗಳ ಹುದ್ದೆಗೆ ಸೇವಾ ಜ್ಯೇಷ್ಠತೆ ಆಧಾರದ ಮುಂಬಡ್ತಿ ನೀಡಬೇಕು ಎಂದು ಶಿಕ್ಷಕರು ಒತ್ತಾಯಿಸಿದ್ದಾರೆ.

1ರಿಂದ 5ನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರು ಪದವೀಧರರಾಗಿದ್ದಲ್ಲಿ, ಅವರನ್ನು 6ರಿಂದ 8ನೇ ತರಗತಿವರೆಗೆ ಪಾಠ ಮಾಡುವ ಜಿಪಿಟಿ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು. ಈ ಬಡ್ತಿಗೆ ಅಡ್ಡಿಯಾಗಿರುವ ವೃಂದ ನೇಮಕಾತಿ ನಿಯಮ-2017ಕ್ಕೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಈ ಹೋರಾಟಕ್ಕೆ ಸರ್ಕಾರ ಸ್ಪಂದಿಸದೆ ಇದ್ದಲ್ಲಿ ಪ್ರತಿಭಟನೆ ಮುಂದಿನ ಹಂತಕ್ಕೆ ಹೋಗಲಿದೆ. ಬೋಧನೆ ಹಾಗೂ ಇತರೆ ಚಟುವಟಿಕೆ ಬಂದ್ ಮಾಡುವುದಾಗಿ ಸರ್ಕಾರಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್‌, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಶಿಕ್ಷಕರು ಇದ್ದರು.

ಶಿಕ್ಷಕರ ಹಕ್ಕೋತ್ತಾಯಗಳು

  1. 2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಉಲ್ಲೇಖ (1)ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜ್ಯೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು” ಪದನಾಮೀಕರಿಸುವುದು.
  2. ಉಲ್ಲೇಖ (1)ರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ: 1-7,8ನೇ ತರಗತಿಗೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1-5 ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು.
  3. ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು.
  4. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜ್ಯೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.

ಇದನ್ನೂ ಓದಿ | DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Continue Reading

ಕರ್ನಾಟಕ

DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

DK Shivakumar: ಸಿಬಿಐ ಎಫ್ಐಆರ್‌ನ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಸಿಬಿಐ ತನಿಖೆ ಮುಂದುವರಿಸಲು ಅವಕಾಶ ನೀಡಬೇಕು, ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಆದೇಶ ರದ್ದು‌ಮಾಡಬೇಕು ಎಂದು ಶಾಸಕ ಯತ್ನಾಳ್ ಪರ ವಕೀಲ ವೆಂಕಟೇಶ ದಳವಾಯಿ‌ ವಾದ ಮಂಡಿಸಿದ್ದಾರೆ. ಇದಕ್ಕೆ ಡಿಕೆಶಿ ಪರ ವಕೀಲ ಕಪಿಲ್‌ ಸಿಬಲ್‌ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜಕೀಯ ದುರುದ್ದೇಶದಿಂದ ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ನೀಡಲಾಗಿದೆ. ಇದನ್ನು ಸ್ಥಳೀಯ ಪೊಲೀಸರು ಮತ್ತು ಲೋಕಾಯುಕ್ತರು ಏಕೆ ತನಿಖೆ ನಡೆಸಬಾರದು ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ (DK Shivakumar) ಸಿಬಿಐ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆದಿದೆ. ನ್ಯಾ.ಕೆ ಸೋಮಶೇಖರ್‌ ಮತ್ತು ನ್ಯಾ. ಉಮೇಶ್‌ ಎಂ. ಅಡಿಗ ಅವರಿದ್ದ ವಿಭಾಗೀಯ ಪೀಠ ಪ್ರಕರಣದ ವಿಚಾರಣೆ ನಡೆಸಿ, ತೀರ್ಪು ಕಾಯ್ದಿರಿಸಿದೆ.

ಸಿಬಿಐ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿ, ನಿರ್ದಿಷ್ಟ ಒಪ್ಪಿಗೆ ಮತ್ತು ಸಾಮಾನ್ಯ ಒಪ್ಪಿಗೆಯ ಬಗ್ಗೆ ಸಂವಿಧಾನದ 131ನೇ ವಿಧಿಗೆ ಸಂಬಂಧಿಸಿದ ಮಾಹಿತಿ ದಾಖಲೆ ಸಲ್ಲಿಸಲಾಗಿದೆ. ಡಿಕೆಶಿ ಎಫ್‌ಐಆರ್‌ ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು. ಈ ಪ್ರಕರಣಕ್ಕೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದಿಲ್ಲ. ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ಈಗ ಸರ್ಕಾರ ಒಪ್ಪಿಗೆ ಹಿಂಪಡೆದಿದೆ. ಇನ್ನು ಎಫ್‌ಐಆರ್‌ ಏನಾಗಲಿದೆ ಎಂಬ ಪ್ರಶ್ನೆ ಹೈಕೋರ್ಟ್‌ ಮುಂದಿದೆ. ಅಗತ್ಯವಾದ ಎಲ್ಲರೂ ನ್ಯಾಯಾಲಯದ ಮುಂದೆ ಇದ್ದಾರೆ. ಇಲ್ಲಿ ಔಪಚಾರಿಕ ಪಕ್ಷಕಾರರು ಸಹ ಇಲ್ಲ. ಹೀಗಾಗಿ ಸಂವಿಧಾನದ 131ನೇ ವಿಧಿ ಅನ್ವಯಿಸಲ್ಲ ಎಂದು ತಿಳಿಸಿದರು.

ಯತ್ನಾಳ್ ಪರ ವಕೀಲ ವೆಂಕಟೇಶ ದಳವಾಯಿ‌ ವಾದ ಮಂಡಿಸಿ, ಆರ್ಟಿಕಲ್ 131 ರಾಜ್ಯಕ್ಕೆ ಅನ್ವಯ ಆಗುತ್ತದೆ, ಒಬ್ಬ ವ್ಯಕ್ತಿಗೆ ಅಲ್ಲ. ಇಲ್ಲಿ ರಾಜ್ಯ ಸರ್ಕಾರ ಪ್ರಕರಣ ವಾಪಸ್‌ ಪಡೆದಿರುವುದು ಕಾನೂನು ಬಾಹಿರ. ಸರ್ಕಾರ ಇದನ್ನು ಲೋಕಾಯುಕ್ತಕ್ಕೆ ನೀಡಿದೆ. ಮತ್ತೊಂದೆಡೆ ಸಿಬಿಐ ಎಫ್ಐಆರ್ ಸಹ ಇನ್ನೂ ಹಾಗೇ ಇದೆ. ಒಮ್ಮೆ ಸಿಬಿಐ ಎಫ್ಐಆರ್ ರಿಜಿಸ್ಟರ್ ಮಾಡಿದರೆ ಕೇಂದ್ರ ಸರ್ಕಾರಕ್ಕೂ ವಾಪಸ್‌ ಪಡೆಯಲು‌ ಅಧಿಕಾರ ಇಲ್ಲ. ಕೇವಲ ನ್ಯಾಯಾಲಯಕ್ಕೆ ಮಾತ್ರ ಅಂತಹ ಅಧಿಕಾರ ಇರುತ್ತದೆ. ಒಮ್ಮೆ ಸಿಬಿಐ ತನಿಖೆ ಆರಂಭವಾದ ಮೇಲೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ. ಸಿಬಿಐ ಎಫ್ಐಆರ್‌ನ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಭ್ರಷ್ಟಾಚಾರ ನಿಷೇಧ ಕಾಯ್ದೆಯಡಿಯ ಕ್ರೈಂ‌ ತನಿಖೆಯ ವೇಳೆ ಸಿಬಿಐ ಸ್ವತಂತ್ರವಾಗಿರುತ್ತದೆ ಎಂದು ತಿಳಿಸಿದರು.

ಈ ವೇಳೆ ಲೋಕಾಯುಕ್ತರು ದಾಖಲಿಸುವ ಎಫ್‌ಐಆರ್‌ ಏನಾಗಲಿದೆ ಎಂದು ಯತ್ನಾಳ್ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನೆ ಮಾಡಿತು. ಇದಕ್ಕೆ ವಕೀಲ‌ ದಳವಾಯಿ ಉತ್ತರಿಸಿ, ಲೋಕಾಯುಕ್ತ ಎಫ್‌ಐಆರ್‌ ಸ್ವತಂತ್ರವಾಗಿ ನಿಲ್ಲುವುದಿಲ್ಲ. ಸರ್ಕಾರ ಸಿಬಿಐಗೆ ನೀಡಿದ ಅನುಮತಿಯನ್ನು ಅಕ್ರಮವಾಗಿ ಹಿಂಪಡೆದಿದೆ. ಇದರಿಂದ ಸಿಬಿಐ ಎಫ್‌ಐಆರ್‌ ರದ್ದು ಮಾಡಲಾಗಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಸಿಬಿಐ ತನಿಖೆ ಮುಂದುವರಿಸಲು ಅವಕಾಶ ನೀಡಬೇಕು, ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಆದೇಶ ರದ್ದು‌ಮಾಡಬೇಕು ಎಂದು ಕೋರಿದರು.

ಡಿಕೆಶಿ ಪರ ಖ್ಯಾತ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿ, ನಾವು ರಾಜ್ಯ ಸರ್ಕಾರ ಕೇವಲ ಅನುಮತಿಗೆ ಮಾತ್ರ ಸೀಮಿತ. ನಮಗೂ ಎಫ್‌ಐಆರ್‌ ರದ್ದು ಕೋರಿದ್ದಕ್ಕೂ ಸಂಬಂಧವಿಲ್ಲ. ಇಲ್ಲಿ ವೈಯುಕ್ತಿಕ ಪ್ರಕರಣಕ್ಕೂ ರಾಜ್ಯ ಸರ್ಕಾರಕ್ಕೆ ಏನು ಸಂಬಂಧವಿಲ್ಲ. ಇಲ್ಲಿ ಸಿಬಿಐ ಹೇಗೆ ಅನುಮತಿ ಪಡೆದಿದೆ? ಅದನ್ನ ಎಲ್ಲಿಯೂ ಬಹಿರಂಗಪಡಿಸಿಲ್ಲ. ಇದನ್ನು ಕೋರ್ಟ್‌ಗೆ ತಿಳಿಸದೇ ವಂಚಿಸಲಾಗಿದೆ. ಈ ಹಿಂದೆ ಸಿಎಂ ಬಿ.ಎಸ್‌. ಯಡಿಯೂರಪ್ಪರ ಮೌಖಿಕ ಆದೇಶ ಆಧರಿಸಿ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ಇಡಿ ದಾಖಲೆಗಳನ್ನು ಸ್ಥಳೀಯ ಪೊಲೀಸರಿಗೆ ಕಳುಹಿಸಬೇಕಿತ್ತು. ಆದರೆ ಅವರು ಸಿಬಿಐಗೆ ಕಳುಹಿಸಿದ್ದಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ | Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

ಆದಾಯ ತೆರಿಗೆ ಇಲಾಖೆಯ ಎಫ್‌ಐಆರ್‌ನ ಕೋರ್ಟ್ ರದ್ದು ಮಾಡಿದೆ. ಆದ್ದರಿಂದ ಇದು ಸಿಬಿಐಗೆ ಅನುಮತಿ ವಿಚಾರವೇ ಅಲ್ಲ. ಆದರೂ ಕಾನೂನಾತ್ಮಕ ವಿಚಾರವಾಗಿದೆ. ಇದನ್ನು ಸ್ಥಳೀಯ ಪೊಲೀಸರು ಮತ್ತು ಲೋಕಾಯುಕ್ತರು ಏಕೆ ತನಿಖೆ ನಡೆಸಬಾರದು? ಸಿಬಿಐ ಏಕೆ ತನಿಖೆ ನಡೆಸಬೇಕು? ಇದರಲ್ಲಿ ಸಂಪೂರ್ಣ ರಾಜಕೀಯ ದುರುದ್ದೇಶ ಅಡಗಿದೆ ಎಂದು ವಾದಿಸಿದರು. ವಾದಿ-ಪ್ರತಿವಾದ ಆಲಿಸಿದ ವಿಭಾಗೀಯ ಪೀಠ, ವಿಚಾರಣೆ ಮುಕ್ತಾಯ ಮಾಡಿತೀರ್ಪು ಕಾಯ್ದಿರಿಸಿದೆ.

Continue Reading

ಬೆಂಗಳೂರು

Road Accident : ಟಿಪ್ಪರ್ ಲಾರಿಗೆ ಸಿಲುಕಿ ಸವಾರ ದುರ್ಮರಣ; ಬಸ್ ಪಲ್ಟಿಯಾಗಿ 13 ಪ್ರಯಾಣಿಕರು ಗಂಭೀರ

Road Accident : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನೊಬ್ಬ ಮೃತಪಟ್ಟರೆ, ಚಿಕ್ಕಬಳ್ಳಾಪುರದಲ್ಲಿ ಆಂಧ್ರಗೆ ಸೇರಿದ ಬಸ್‌ವೊಂದು ಪಲ್ಟಿ ಹೊಡೆದಿದೆ.

VISTARANEWS.COM


on

By

Road Accident
Koo

ಬೆಂಗಳೂರು: ಟಿಪ್ಪರ್ ಲಾರಿಗೆ ಸಿಲುಕಿ ಬೈಕ್‌ ಸವಾರರೊಬ್ಬರು ದುರ್ಮರಣ (Road Accident) ಹೊಂದಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ ಜಂಕ್ಷನ್ ಬಳಿ ಸೋಮವಾರ ಮಧ್ಯಾಹ್ನ ಅಪಘಾತ ನಡೆದಿದೆ. ಕೂಡ್ಲು ನಿವಾಸಿ ವೇಣುಗೋಪಾಲ್ (53) ಮೃತ ದುರ್ದೈವಿ.

ಬೊಮ್ಮನಹಳ್ಳಿಯಿಂದ ಮಡಿವಾಳ ಕಡೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಲಾರಿಯ ಎಡಭಾಗದಲ್ಲಿ ಹೋಗುತ್ತಿದ್ದ ಬೈಕ್‌ಗೆ ಟಚ್ ಆಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ವೇಣುಗೋಪಾಲ್‌ ಕೆಳಗಡೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ಲಾರಿ ಹರಿದಿದೆ. ಕೂಡಲೇ ಸಹಾಯ ಧಾವಿಸಿದ ಸ್ಥಳೀಯರು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಮಾರ್ಗ ಮಧ್ಯೆ ವೇಣುಗೋಪಾಲ್ ಕೊನೆಯುಸಿರೆಳೆದಿದ್ದಾರೆ.

ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಲಾರಿ ಚಾಲಕನನ್ನು ಸಂಚಾರ ಪೊಲೀಸರು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಆಂಧ್ರ ಬಸ್‌ ಪಲ್ಟಿ; ಪ್ರಯಾಣಿಕರು ಗಂಭೀರ

ಬೆಂಗಳೂರಿನಿಂದ ಪುಟ್ಟಪರ್ತಿ ಕಡೆಗೆ ಹೋಗುತ್ತಿದ್ದ ಆಂಧ್ರ ಬಸ್‌ವೊಂದು ಪಲ್ಟಿಯಾಗಿದೆ. ಆಂಧ್ರ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44 ಚೆಂಡೂರಿನ ಬಳಿ ಎಪಿಎಸ್ ಆರ್ ಸಿ ಬಸ್ ಪಲ್ಟಿಯಾಗಿದೆ. ಗಾಯಾಳುಗಳಿಗೆ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Techie Missing: ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

ಮೈಸೂರಿನಲ್ಲಿ ರಸ್ತೆಗೆ ಅಡ್ಡ ಬಂದ ಮೊಸಳೆ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಂಬದಕೊಲ್ಲಿ ಗ್ರಾಮದ ಬಳಿ ಮೊಸಳೆ ಪ್ರತ್ಯಕ್ಷಗೊಂಡಿದೆ. ಹುಲ್ಲಹಳ್ಳಿ ಮತ್ತು ಕಂಬದಕೊಲ್ಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದ ಕಾರಿಗೆ ಮೊಸಳೆ ಅಡ್ಡ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಚಿಕ್ಕೋಡಿಯಲ್ಲಿ ಮೊಸಳೆಯನ್ನು ಹಿಡಿದ ಗ್ರಾಮಸ್ಥರು

ಪ್ರವಾಹ ತಗ್ಗುತ್ತಿದ್ದಂತೆ ನದಿ ತೀರದ ಜನರಿಗೆ ಮೊಸಳೆ ಕಾಟ ಶುರುವಾಗಿದೆ. ಕೃಷ್ಣಾ ನದಿ ತೀರದಲ್ಲಿ ಗ್ರಾಮಸ್ಥರು ಮೊಸಳೆ ಸೆರೆ ಹಿಡಿದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಮಾಂಜರಿ ಗ್ರಾಮದಲ್ಲಿ ಘಟನೆ ನಡೆದಿದೆ. ನದಿ ತೀರದ ಜಮೀನಿನಲ್ಲಿದ್ದ 6 ಅಡಿ ಮೊಸಳೆ ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rent Agreement
ವಾಣಿಜ್ಯ3 mins ago

Rent Agreement: ಬಾಡಿಗೆ ಒಪ್ಪಂದ 11 ತಿಂಗಳ ಅವಧಿಗೆ ಮಾತ್ರ ಯಾಕೆ ಅನ್ನೋದು ಗೊತ್ತಾ?

NIRF 2024 Rank
ಶಿಕ್ಷಣ21 mins ago

NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

Rakshabandhan Shopping 2024
ಫ್ಯಾಷನ್29 mins ago

Rakshabandhan Shopping 2024: ವಾರಕ್ಕೆ ಮುನ್ನವೇ ಶುರುವಾಯ್ತು ರಕ್ಷಾ ಬಂಧನದ ಶಾಪಿಂಗ್‌!

Viral News
Latest31 mins ago

Viral News : ಪತ್ನಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪತಿ

Teachers Recruitment
ಕರ್ನಾಟಕ32 mins ago

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

Hindenburg Report
ಪ್ರಮುಖ ಸುದ್ದಿ44 mins ago

Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

Independence Day 2024
ದೇಶ58 mins ago

Independence Day 2024: ಈ ಬಾರಿ ಆಚರಿಸುತ್ತಿರುವುದು ಎಷ್ಟನೇ ಸ್ವಾತಂತ್ರ್ಯೋತ್ಸವ? 77 or 78?

KSET updates
ಬೆಂಗಳೂರು1 hour ago

KSET Updates: ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಆ.17ಕ್ಕೆ ದಾಖಲೆ ಪರಿಶೀಲನೆ

Indian Dessert 2024
Latest1 hour ago

Indian Dessert 2024: ವಿಶ್ವದ ಪ್ರಸಿದ್ಧ ʼಸಿಹಿತಿಂಡಿ ತಾಣʼಗಳ ಪಟ್ಟಿಯಲ್ಲಿ ಸ್ಥಾನ ಪಡೆದ 10 ಭಾರತೀಯ ಸ್ವೀಟ್‌ ಸ್ಟಾಲ್‌ಗಳಿವು

Teachers Protest
ಕರ್ನಾಟಕ1 hour ago

Teachers Protest: ಶಿಕ್ಷಕರ ಪ್ರತಿಭಟನೆ; ಬಡ್ತಿ, ವರ್ಗಾವಣೆ, ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ಆಗ್ರಹ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌