ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕನೊಬ್ಬ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಬೆಂಗಳೂರಿನಲ್ಲಿ (Bengaluru News) ನಡೆದ ಭೀಕರ ಅಪಘಾತದಲ್ಲಿ (Road Accident) 4 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಶ್ವಿತ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಊರ್ವಶಿ ಥಿಯೇಟರ್ ಸಮೀಪ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಚಾಲಕನ ಎಡವಟ್ಟಿಗೆ ಅಶ್ವಿತ್ ಜೀವ ಬಿಟ್ಟಿದ್ದಾನೆ. ಟ್ಯಾಂಕರ್ ವಾಹನವನ್ನು ರಿವರ್ಸ್ ತೆಗೆಯುವಾಗ ಅಶ್ವಿತ್‌ಗೆ ಡಿಕ್ಕಿ ಹೊಡೆದಿದೆ. ನಂತರ ಕೆಳಗೆ ಬಿದ್ದ ಅಶ್ವಿತ್ ಟೈಯರ್‌ನಡಿ ಸಿಲುಕಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಅಶ್ವಿತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಬಸ್ ಏರುವಾಗ ಕೆಳಗೆ ಬಿದ್ದ ಮಹಿಳೆಯ ಕೈ ಅಪ್ಪಚ್ಚಿ
ರಶ್ ಇದ್ದ ಬಸ್‌ನಲ್ಲಿ ಹತ್ತಲು ಹೋಗಿ ಮಹಿಳೆಯೊಬ್ಬರು ಬಸ್ ಗಾಲಿಗೆ ಬಿದ್ದ ಘಟನೆ ಕೊಪ್ಪಳ ಬಸ್ ನಿಲ್ದಾಣದಲ್ಲಿ ಭಾನುವಾರ ಸಂಜೆ ನಡೆದಿದೆ. ಸಿಂಧನೂರು ಡಿಪೋಗೆ ಸೇರಿದ ಬಸ್‌ನಲ್ಲಿ ಸಂಜೆ ವಿಪರೀತ ರಶ್ ಇತ್ತು. ಆ ರಶ್‌ನಲ್ಲಿ ಬಸ್ ಹತ್ತಲು ಹೋದ ಮಹಿಳೆ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ.
ಈ ವೇಳೆ ಚಕ್ರದಡಿಗೆ ಕೈ ಸಿಲುಕಿ ಅಪ್ಪಚ್ಚಿ ಆಗಿದೆ. ಕೊಪ್ಪಳ ಜಿಲ್ಲೆಯ ಸಿದ್ದಾಪುರದ ಖಾಸಿಂಬಿ ಎಂಬ ಮಹಿಳೆ ಗಂಭೀರ ಗಾಯಗೊಂಡಿದ್ದು, ಕೂಡಲೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಪ್ಪಳ ನಗರಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:Kolar News : ಮಕ್ಕಳಿಬ್ಬರಿಗೆ ವಿಷ ಕುಡಿಸಿ, ನೇಣಿಗೆ ಶರಣಾದ ತಂದೆ
Road Accident: ಸವಾರನ ಮೇಲೆ ಹರಿದ ಖಾಸಗಿ ಬಸ್; ಹಂಪ್‌ನಲ್ಲಿ ಸ್ಕೂಟರ್ ಪಲ್ಟಿಯಾಗಿ ಯುವಕ ಸಾವು
ಬೆಂಗಳೂರು: ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ತುಮಕೂರು ರಸ್ತೆಯ ರಾಕ್ ಲೈನ್ ಮಾಲ್ ಮುಂಭಾಗ ಈ ಅಪಘಾತ ನಡೆದಿದೆ. ಯೋಗೇಶ್ (21) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.
ಖಾಸಗಿ ಬಸ್ ತುಮಕೂರು ಕಡೆಯಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿತ್ತು. ಈ ವೇಳೆ ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಬೈಕ್ ಸವಾರ ಯೋಗೇಶ್ ಮೇಲೆ ಬಸ್ ಹರಿದಿದೆ. ಯೋಗೇಶ್ ತಲೆಗೆ ಗಂಭೀರ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪೀಣ್ಯ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ: Physical Abuse : ದಾರಿಯುದ್ದಕ್ಕೂ ಪುಂಡರ ಚೇಸಿಂಗ್; ಕಾರಿನಲ್ಲಿದ್ದ ಯುವತಿಯರನ್ನು ಸುತ್ತುವರಿದು ಟಾರ್ಚರ್
ಸ್ವಯಂ ಅಪಘಾತಕ್ಕೆ ಯುವಕ ಬಲಿ
ಬೈಕ್ ಅಪಘಾತದಲ್ಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ರಾಜಸ್ಥಾನ ಮೂಲದ ಅರ್ಜುನ್ ಎಂಬಾತ ಅರಕೆರೆಯಲ್ಲಿ ವಾಸವಿದ್ದ. ರಾಜಸ್ಥಾನಕ್ಕೆ ಹೋಗಲೆಂದು ಟಿಕೆಟ್ ಬುಕ್ ಮಾಡಲು ಬಿಡಿಎ ಕಾಂಪ್ಲೆಕ್ಸ್ ಬಳಿ ತೆರಳುತ್ತಿದ್ದ. ಹೊಂಡಾ ಆ್ಯಕ್ಟಿವಾದಲ್ಲಿ ಹಂಪ್ ದಾಟುವಾಗ ಬೈಕ್‌ನಿಂದ ಕೆಳಗೆ ಬಿದ್ದಿದ್ದಾನೆ.
ಕಡಿಮೆ ಗುಣಮಟ್ಟದ ಹೆಲ್ಮೆಟ್ ಬಳಸಿದ್ದರಿಂದ ತಲೆಗೆ ಬಲವಾದ ಪೆಟ್ಟಾಗಿತ್ತು. ತೀವ್ರ ರಕ್ತಸ್ರಾವವಾಗಿ ಅರ್ಜುನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಜಯನಗರ 7 ನೇ ಬ್ಲಾಕ್ ಬಳಿ ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ