ಬೆಂಗಳೂರು: ರಾಜಧಾನಿಯಲ್ಲಿ ಸರಣಿ ಅಪಘಾತ (Road Accident) ಸಂಭವಿಸಿದ್ದು, ಒಬ್ಬರ ಜೀವಹಾನಿಯಾಗಿದೆ. ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಪ್ಲೈ ಓವರ್‌ನಲ್ಲಿ (electronic city fly over) ಕೊನಪ್ಪನ ಅಗ್ರಹಾರದ ಬಳಿ ಘಟನೆ ನಡೆದಿದೆ.
ಬೊಲೇರೊ ಪಿಕ್‌ಅಪ್ ವಾಹನಕ್ಕೆ ಕ್ಯಾಂಟರ್ ವೇಗವಾಗಿ ಬಂದು ಹಿಂಬದಿಯಿಂದ ಅಪ್ಪಳಿಸಿದೆ. ಘಟನೆಯಲ್ಲಿ ಪಿಕಪ್‌ನ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಚಾಲಕ ಮನ್ಸೂರು ಹಾಗು ಪಿಕಪ್ ಚಾಲಕ ಹರೀಶ್ ಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡವರನ್ನು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತ ಪರಿಣಾಮ ಫ್ಲೈ ಓವರ್ ಮೇಲ್ಭಾಗ ಬಹಳ ಹೊತ್ತು ಸಂಚಾರಕ್ಕೆ ಅಡಚಣೆಯುಂಟಾಯಿತು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸಂಚಾರಿ ಪೊಲೀಸರು ಅಫಘಾತಕ್ಕೆ ಒಳಗಾದ ವಾಹನಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಟ್ ಆ್ಯಂಡ್ ರನ್‌ಗೆ ಪಾದಚಾರಿ ಬಲಿ
ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ತೀವ್ರವಾಗಿ ಗಾಯಗೊಂಡ ಪಾದಚಾರಿಯೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಮದಿ ಅಳಗನ್ (50) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಾಯಂಡಹಳ್ಳಿ ಬಳಿ ಇರುವ ಬನಶಂಕರಿ ಟಿಫನ್ ಸೆಂಟರ್ ಬಳಿ ಘಟನೆ ನಡೆದಿದೆ.
ಭಾನುವಾರ ರಾತ್ರಿ 8 ಗಂಟೆ ಸಂದರ್ಭದಲ್ಲಿ ಹಿಟ್ ಆ್ಯಂಡ್ ರನ್ ಸಂಭವಿಸಿದೆ. ಡಿಕ್ಕಿ ಹೊಡೆ ವಾಹನ ಯಾವುದೆಂದು ಗೊತ್ತಾಗಿಲ್ಲ. ವ್ಯಕ್ತಿಯ ತಲೆ ಭಾಗಕ್ಕೆ ಗಂಭೀರವಾಗಿ ಏಟು ಬಿದ್ದಿತ್ತು. ತಕ್ಷಣ ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸಾವು
ಕಾರವಾರ: ಕಾರಿಗೆ ಹಿಂಬದಿಯಿಂದ ಸ್ಕೂಟಿ ಡಿಕ್ಕಿಯಾಗಿ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಕೂಟಿ ಸವಾರ ಸಾವಿಗೀಡಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಆರ್‌ಟಿಓ ಕಚೇರಿ ಬಳಿ ಘಟನೆ ನಡೆದಿದೆ.
ಗುರುದಾಸ್ ಬಾಂದೇಕರ್(55) ಮೃತ ಸ್ಕೂಟಿ ಸವಾರ. ಅರ್ಬನ್ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಆಗಿದ್ದ ಗುರುದಾಸ್ ಹಾಫ್ ಹೆಲ್ಮೆಟ್ ಧರಿಸಿದ್ದರಿಂದ ತಲೆಗೆ ಗಂಭೀರ ಗಾಯವಾಗಿತ್ತು. ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದ ಕಾರು ಚಾಲಕ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಗುರುದಾಸ್ ಕೊನೆಯುಸಿರೆಳೆದಿದ್ದರು. ಸ್ಥಳಕ್ಕೆ ಕಾರವಾರ ಸಂಚಾರಿ ಠಾಣಾ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: Pickup Van: ಮಕ್ಕಳಿಗೆ ಐಸ್‌ಕ್ರೀಮ್ ತಿನ್ನಿಸಲು ಅಂಗಡಿ ಎದುರು ಬೈಕ್ ನಿಲ್ಲಿಸಿದ ತಂದೆ; ಗುದ್ದಿದ ಪಿಕ್‌ಅಪ್ ವ್ಯಾನ್