Site icon Vistara News

Road Accident: ಮೈಸೂರು ರಸ್ತೆಯಲ್ಲಿ ಟಿಪ್ಪರ್‌ ವಾಹನದಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಅಪ್ಪಚ್ಚಿ

Bike rider dies after tipper runs over him in Bengaluru; Driver escapes after leaving the lorry

ಬೆಂಗಳೂರು: ಮೈಸೂರು ರಸ್ತೆಯಲ್ಲಿ (mysore road) ಟಿಪ್ಪರ್‌ ವಾಹನ ಡಿಕ್ಕಿ ಹೊಡೆದು (Road Accident) ದ್ವಿಚಕ್ರ ವಾಹನ ಸವಾರರೊಬ್ಬರು (two wheeler rider) ಮೃತಪಟ್ಟಿದ್ದಾರೆ. ಇಬ್ಬರು ಬೈಕ್‌ ಸವಾರರಲ್ಲಿ ಒಬ್ಬಾತ ಅಪ್ಪಚ್ಚಿಯಾಗಿ ಮೃತಪಟ್ಟಿದ್ದು, ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿವೆ.

ಕೆಂಗೇರಿ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದುರಂತದಲ್ಲಿ ಅನ್ವರ್ ಶೇಖ್ ಎಂಬ 34 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ ಮೊಹಮ್ಮದ್ ನಾದಿರ್ ಅಲಂ ಎಂಬವರ ಜೊತೆಗೆ 10.40ರ ಸುಮಾರಿಗೆ ಉತ್ತರಹಳ್ಳಿ ಕಡೆಯಿಂದ ಮೈಸೂರು ರಸ್ತೆಯಲ್ಲಿ ಕೆಂಗೇರಿ ಕಡೆ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಬೈಕ್‌ನಲ್ಲಿ ಕೂತಿದ್ದ ಇಬ್ಬರೂ ಕೆಳ ಬಿದ್ದಿದ್ದು, ಹಿಂಬದಿ ಕೂತಿದ್ದ ಶೇಕ್ ಅನ್ವರ್ ಮೇಲೆ ಟಿಪ್ಪರ್ ಚಕ್ರ ಹರಿದು ಅಪ್ಪಚ್ಚಿ ಮಾಡಿದೆ. ಇಬ್ಬರನ್ನೂ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶೇಕ್ ಅನ್ವರ್ ಸಾವಿಗೀಡಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಮೊಹಮ್ಮದ್ ನಾದಿರ್ ಆಲಂಗೆ ಚಿಕಿತ್ಸೆ ಮುಂದುವರಿದಿದೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಟಿಪ್ಪರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕೆಂಗೇರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳೆಗೆ ಬಿದ್ದ ಬೆಂಕಿ ನಂದಿಸಲು ಹೋಗಿ ಹುತಿಯಾದ ರೈತ ಮಹಿಳೆ

ಹಾಸನ: ತನ್ನ ಕಣ್ಣೆದುರೇ ಜಮೀನಿನ ಬೆಳೆ (Agriculture field) ಬೆಂಕಿಗೆ ಆಹುತಿಯಾಗಿ (Fire Accident) ಹೊತ್ತಿ ಉರಿಯುತ್ತಿದ್ದುದನ್ನು ಕಂಡು ಏನು ಮಾಡುವುದೆಂದು ತಿಳಿಯದೆ ರೈತ ಮಹಿಳೆ (Woman Farmer) ಬೆಂಕಿಯನ್ನು ನಂದಿಸಲು ಮುನ್ನುಗ್ಗಿ ತಾನೇ ಬೆಂಕಿಗೆ ಆಹುತಿಯಾಗಿದ್ದಾರೆ.

ಹಾಸನ ಜಿಲ್ಲೆ (Hasana News) ಆಲೂರು ತಾಲ್ಲೂಕಿನ ಹಾಚಗೋಡನಹಳ್ಳಿ ಗ್ರಾಮದಲ್ಲಿ ಬೆಂಕಿ ಆರಿಸಲು ಹೋದ ರೈತ ಮಹಿಳೆಯೇ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ರತ್ನಮ್ಮ (63) ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ ರೈತ ಮಹಿಳೆ.

ಮಾರ್ಚ್‌ 24ರ ಭಾನುವಾರ ರಾತ್ರಿ ರತ್ನಮ್ಮ ಅವರು ತಮ್ಮ ಜಮೀನಿಗೆ ಬೆಂಕಿ ಬಿದ್ದ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ್ದರು. ಕಣ್ಣೆದುರೇ ಬೆಳೆ ನಾಶವಾಗುತ್ತಿತ್ತು. ಏನು ಮಾಡುವುದೆಂದು ತಿಳಿಯದಾದ ರತ್ನಮ್ಮ ತಾವೇ ಮುನ್ನುಗ್ಗಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಅದು ಅವರ ಕೈ ಮೀರಿದ ಬೆಂಕಿಯಾಗಿತ್ತು. ಜೋರಾಗಿ ಉರಿಯುತ್ತಿದ್ದ ಬೆಂಕಿಗೆ ಸಿಲುಕಿದ ರತ್ನಮ್ಮ ಬೆಂಕಿಯಿಂದ ಹೊರಬರಲಾರದೆ ಸ್ಥಳದಲ್ಲೇ ಮೃತಪಟ್ಟರು.

ಸ್ಥಳೀಯರು ಅವರನ್ನು ರಕ್ಷಿಸಲು ಯತ್ನಿಸಿದರೂ ಫಲ ಸಿಗಲಿಲ್ಲ. ರತ್ನಮ್ಮ ಅವರ ಮೃತದೇಹವನ್ನು ಆಲೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಇದಾಗಿದೆ. ಇದೇ ಠಾಣೆ ವ್ಯಾಪ್ತಿಯಲ್ಲಿ ವಾರದ ಹಿಂದೆ ಮತ್ತೊಬ್ಬರು ಬೆಂಕಿ ಆರಿಸಲು ಹೋಗಿ ಪ್ರಾಣ ಕಳೆದುಕೊಂಡಿದ್ದರು.

ಇದನ್ನೂ ಓದಿ: Murder Case : ಹೊಸ ಮನೆ ಕಟ್ಟಲು ದುಡ್ಡಿಗಾಗಿ 9 ವರ್ಷದ ಬಾಲಕನನ್ನೇ ಅಪಹರಿಸಿ ಕೊಂದ ಮೌಲ್ವಿ

Exit mobile version