Site icon Vistara News

Road Accident : ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಲಾರಿ ಛಿದ್ರ ಛಿದ್ರ; ಉಸಿರು ಚೆಲ್ಲಿದ ಚಾಲಕ

Lorry Accident

ಬೆಂಗಳೂರು: ಭಾನುವಾರ ರಾತ್ರಿ ಬಳ್ಳಾರಿ ರಸ್ತೆಯಲ್ಲಿ ಬರುತ್ತಿದ್ದ ಲಾರಿಯೊಂದು (lorry Accident) ಮೆಟ್ರೋ ಪಿಲ್ಲರ್‌ಗೆ (Metro pillar) ಡಿಕ್ಕಿ (Road Accident ) ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಪಿಲ್ಲರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯ ಮುಂಭಾಗ ಛಿದ್ರ ಛಿದ್ರಗೊಂಡಿತ್ತು.

ಇತ್ತ ಅಪಘಾತದಲ್ಲಿ ಲಾರಿ ಚಾಲಕ ಸಾಹಿದ್ ಖಾನ್ (44) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಧ್ಯಪ್ರದೇಶ ಮೂಲದ ಸಾಹಿದ್ ಖಾನ್ ರಾತ್ರಿ 9 ಗಂಟೆ ಸುಮಾರಿಗೆ ಲಾರಿಯಲ್ಲಿ ಬರುತ್ತಿದ್ದಾಗ, ಏಕಾಏಕಿ ನಿಯಂತ್ರಣ ತಪ್ಪಿದೆ. ವೇಗವಾಗಿ ಇದ್ದಿದ್ದರಿಂದ ನೇರವಾಗಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾಗಿದೆ. ಲಾರಿ ಮುಂಭಾಗವು ಛಿದ್ರ ಛಿದ್ರವಾಗಿದ್ದು, ಗಂಭೀರ ಗಾಯಗೊಂಡಿದ್ದ ಸಾಹಿದ್‌ ಸ್ಥಳದಲ್ಲೇ ಮೃಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Fire Accident :ಕಣ್ಣೆದುರೇ ಹೊತ್ತಿ ಉರಿದ ಬೆಳೆ, ನಂದಿಸಲು ಹೋಗಿ ತಾನೇ ಆಹುತಿಯಾದ ರೈತ ಮಹಿಳೆ

Road Accident: ಬೈಕ್‌ಗಳ ಮುಖಾಮುಖಿ ಡಿಕ್ಕಿ; ಹೆಲ್ಮೆಟ್‌ರಹಿತ ಸವಾರಿಗೆ ಇಬ್ಬರ ಬಲಿ

ಮೈಸೂರು: ಎರಡು ಬೈಕುಗಳ ನಡುವೆ (bike hit) ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ (two death) ಸಾವಿಗೀಡಾಗಿದ್ದಾರೆ. ಈ ದುರಂತ ತಿರುಮಕೂಡಲು ನರಸೀಪುರ ತಾಲೂಕಿನ (Mysore news) ಹೆಳವರಹುಂಡಿ ಬಳಿ ನಡೆದಿದೆ. ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ ಎಂದು ಗೊತ್ತಾಗಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಬಿಳಿಗಿರಿ (30‌) ಹಾಗೂ ತಿ.ನರಸೀಪುರ ತಾಲ್ಲೂಕಿನ ಆದಿಬೆಟ್ಟಳ್ಳಿ ಗ್ರಾಮದ ನಾಗರಾಜು (35) ಮೃತ ದುರ್ದೈವಿಗಳು. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನ ಹಿಂಬದಿಯಲ್ಲಿಯೂ ಇಬ್ಬರು ಸವಾರರು ಕುಳಿತಿದ್ದು, ಅಪಘಾತದಲ್ಲಿ (road accident) ಅವರಿಗೂ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಮೃತರ ಕುಟುಂಬಸ್ಥರ ಆಕ್ರಂದನ ಕಂಡುಬಂತು. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್‌ ಅಪಘಾತ ನಡೆದ ಸ್ಥಳದಲ್ಲಿ ಯಾವುದೇ ತಿರುವು ಇಲ್ಲ. ಹಾಗಿದ್ದರೂ ಎರಡು ಬೈಕ್‌ಗಳು ಡಿಕ್ಕಿ ಹೊಡೆದುಕೊಂಡದ್ದು ಹೇಗೆ ಎಂಬುದು ಗೊತ್ತಾಗಿಲ್ಲ. ಬೈಕ್‌ಗಳಿಗೆ ಹೆಚ್ಚಿನ ಹಾನಿಯಾಗಿಲ್ಲ. ಇಬ್ಬರೂ ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ.

ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು

ಯಲಹಂಕ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Bike Accident) ಬೆಂಗಳೂರು ಹೊರಹೊಲವಯದ ಯಲಹಂಕ ತಾಲೂಕಿನ ಚಲ್ಲಹಳ್ಳಿ ಸಮೀಪ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಮೂಲದ ಯೋಗೇಶ್ (19) ಮೃತ ದುರ್ದೈವಿ.

ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುವ ವೇಳೆ ಅಪಘಾತ ನಡೆದಿದೆ. ವೇಗವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದಿದ್ದಿಂದ ಗಂಭೀರವಾಗಿ ಗಾಯಗೊಂಡ ಸವಾರ ಮೃತಪಟ್ಟಿದ್ದಾನೆ. ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ನಡುವಿನ ಜಾಹೀರಾತು ಫಲಕಕ್ಕೆ ಕಾರು ಡಿಕ್ಕಿ; ನಾಲ್ವರಿಗೆ ಗಂಭೀರ ಗಾಯ

ಯಲಹಂಕ: ರಸ್ತೆ ನಡುವಿನ ಜಾಹೀರಾತು ಫಲಕಕ್ಕೆ ಕಾರು ಡಿಕ್ಕಿಯಾಗಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಯಲಹಂಕ-ದೊಡ್ಡಬಳ್ಳಾಪುರ ರಸ್ತೆಯ ಪುಟ್ಟೇನಹಳ್ಳಿ ಬಳಿ ನಡೆದಿದೆ. ರಸ್ತೆ ವಿಭಜಕದಲ್ಲಿದ್ದ ನಾಮಫಲಕಕ್ಕೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ದೊಡ್ಡಬಳ್ಳಾಪುರ ಕಡೆಯಿಂದ ತೆರಳುತ್ತಿದ್ದ ಸ್ಕೋಡಾ ಕಾರು ಡಿವೈಡರ್‌ನಲ್ಲಿದ್ದ ಜಾಹೀರಾತು ಫಲಕಕ್ಕೆ ಡಿಕ್ಕಿಯಾಗಿದ್ದರಿಂದ ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು ದಾಖಲಿಸಿದ್ದಾರೆ. ಅಪಘಾತ ಹಿನ್ನೆಲೆಯಲ್ಲಿ ಯಲಹಂಕ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ರೇನ್ ಮೂಲಕ ಕಾರನ್ನು ತೆರವು ಮಾಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version