ಮೈಸೂರು/ಬೆಂಗಳೂರು: ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಅಪಘಾತ (Road Accident) ನಡೆದಿದ್ದು, ಇಬ್ಬರು ಮೃತಪಟ್ಟರೆ, ಬೆಂಗಳೂರಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಯುವಕ ಸ್ವಯಂ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.
ಬೈಕ್‌ಗಳ ನಡುವೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿಯಲ್ಲಿ ಅಪಘಾತ ನಡೆದಿದೆ.
ಹುಣಸೂರು ತಾಲೂಕಿನ ಮರೂರುಕಾವಲ್ ಗ್ರಾಮದ ನಿವಾಸಿ ಸಾಗರ್ (35) ಮೃತ ದುರ್ದೈವಿ. ಹಿಂಬದಿ ಕುಳಿತಿದ್ದ ಅರಸು ಕಲ್ಲಹಳ್ಳಿ ಗ್ರಾಮದ ಹರೀಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಹರೀಶ್‌ನನ್ನು ಹುಣಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮತ್ತೊಂದು ವಾಹನದ ಸವಾರ ಕೆಸ್ತೂರು ಕೊಪ್ಪಲು ಗ್ರಾಮದ ನಿವಾಸಿ ಕೆಂಡಗಣ್ಣ ಅವರು ತೀವ್ರ ಗಾಯವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಕಾರು-ಸ್ಕೂಟರ್ ಅಪಘಾತ; ಮಹಿಳೆ ಸಾವು
ಕಾರು- ಸ್ಕೂಟರ್ ನಡುವೆ ಭೀಕ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಹೆಬ್ಬಾಳು ಬಡಾವಣೆ ನಿವಾಸಿ ರಾಧಾ (34) ಮೃತ ದುರ್ದೈವಿ.
ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: Student Death : ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ; ಕಾಲೇಜು ಕಿರುಕುಳಕ್ಕೆ ಬೇಸತ್ತಳೇ?
ಹೆಲ್ಮೆಟ್‌ರಹಿತ ಸವಾರಿಗೆ ಯುವಕ ಬಲಿ
ಬೆಂಗಳೂರಿನ ನಾಗವಾರ ಕಡೆಯಿಂದ ಮೂಡಲಪಾಳ್ಯ ಕಡೆಗೆ ಬೈಕ್‌ನಲ್ಲಿ ಬರುವಾಗ ಯುವಕನೊರ್ವ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ವರುಣ್ ಮೃತ ದುರ್ದೈವಿ.
ಮೂಲತಃ ಕೋಲಾರದ ವರುಣ್ ಬೆಂಗಳೂರು ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಏಷಿಯನ್ ಪೈಂಟ್ಸ್‌ನಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಸ್ನೇಹಿತನ ಬರ್ತ್ ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ವರುಣ್ ಬಳಿಕ ಹಾಸ್ಟೆಲ್‌ಗೆ ತೆರಳಿ ಸ್ನೇಹಿತರ ಭೇಟಿಯಾಗಿ ಬರುತ್ತಿದ್ದ. ಈ ವೇಳೆ ಮಾಳಗಾಳ ಬಳಿ ಸೆಲ್ಫ್ ಆ್ಯಕ್ಸಿಡೆಂಟ್ ಆಗಿದೆ. ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ವರುಣ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ತಂದೆ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದಾರೆ. ವರುಣ್ ತಮ್ಮ ಇನ್ನೂ ವಿದ್ಯಾಭ್ಯಾಸ ಮಾಡುತ್ತಿದ್ದು, ಇಡೀ ಕುಟುಂಬಕ್ಕೆ ವರುಣ್ ಆಧಾರವಾಗಿದ್ದ. ತಾಯಿಯ ಆಸ್ಪತ್ರೆ ಖರ್ಚಿಗೂ ಈತನೇ ಆಧಾರವಾಗಿದ್ದ. ವರುಣ್ ಸಾವು ಇಡೀ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ