Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌ - Vistara News

ಬೆಂಗಳೂರು

Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌

Robbery Case: ಬೆಂಗಳೂರು ನಗರದಲ್ಲಿ ಹೊಸ ರೀತಿಯ ಕಳ್ಳತನ ಆರಂಭವಾಗಿದೆ. ಇದೀಗ ಕಳ್ಳರು ತುಪ್ಪವನ್ನೇ ಟಾರ್ಗೆಟ್‌ ಮಾಡಿ ಕಾರ್ಯ ಪ್ರವೃತ್ತರಾಗಿದ್ದಾರೆ. ನಂದಿನಿ ಪಾರ್ಲರ್‌ಗಳು, ಸೂಪರ್ ಮಾರ್ಕೆಟ್‌ಗಳೇ ಇವರ ಮುಖ್ಯ ಗುರಿ. ಅದಕ್ಕೆ ಇತ್ತೀಚಿನ ಉದಾಹರಣೆ ಎಂಬಂತೆ ಅನ್ನಪೂರ್ಣೇಶ್ವರಿ ನಗರದಲ್ಲಿ 15 ಲೀಟರ್ ತುಪ್ಪ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ. ತುಪ್ಪ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತುಪ್ಪ ದುಬಾರಿಯಾಗಿರುವುದರಿಂದ ಕಳ್ಳರು ಇದನ್ನೇ ಟಾರ್ಗೆಟ್‌ ಮಾಡಿದ್ದಾರೆ.

VISTARANEWS.COM


on

Robbery Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದಲ್ಲಿ ಹೊಸ ರೀತಿಯ ಕಳ್ಳತನ ಆರಂಭವಾಗಿದೆ. ಇದೀಗ ಕಳ್ಳರು ತುಪ್ಪವನ್ನೇ ಟಾರ್ಗೆಟ್‌ ಮಾಡಿ ಕಾರ್ಯ ಪ್ರವೃತ್ತರಾಗಿದ್ದಾರೆ. ನಂದಿನಿ ಪಾರ್ಲರ್‌ಗಳು, ಸೂಪರ್ ಮಾರ್ಕೆಟ್‌ಗಳೇ ಇವರ ಮುಖ್ಯ ಗುರಿ. ಅದಕ್ಕೆ ಇತ್ತೀಚಿನ ಉದಾಹರಣೆ ಎಂಬಂತೆ ಅನ್ನಪೂರ್ಣೇಶ್ವರಿ ನಗರದಲ್ಲಿ 15 ಲೀಟರ್ ತುಪ್ಪ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ. ತುಪ್ಪ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ (Robbery Case).

ಒಬ್ಬರೇ ಇರುವ ಅಂಗಡಿಗಳನ್ನ ಟಾರ್ಗೆಟ್‌ ಮಾಡುವ ಕಳ್ಳರು ಕೆಜಿಗಟ್ಟಲೇ ತುಪ್ಪ ಖರೀದಿಸುವ ನೆಪದಲ್ಲಿ ಆಗಮಿಸುತ್ತಾರೆ. ವಳಿಕ ಮತ್ತೊಂದು ವಸ್ತು ಕೇಳಿ ಮಾಲೀಕರು ಅತ್ತ ತಿರುಗುವಷ್ಟರಲ್ಲಿ ತಂದಿಟ್ಟ ತುಪ್ಪವನ್ನು ಎತ್ತಿಕೊಂಡು ಪರಾರಿಯಾತ್ತಾರೆ. ಕಳೆದ ಒಂದು ತಿಂಗಳ ಹಿಂದೆ ಇದೇ ರೀತಿ ನಂದಿನಿ ಪಾರ್ಲರ್‌ ಒಂದರಿಂದ 15 ಕೆಜಿ ತುಪ್ಪ ಖರೀದಿಸಿ ಖದೀಮರು ಪಾರಾರಿಯಾಗಿದ್ದರು.

ಅಂದು ಕೆಂಗೇರಿ ಕೊಮ್ಮಘಟ್ಟ ನಂದಿನಿ ಪಾರ್ಲರ್‌ನಲ್ಲಿ ಕೈಚಳಕ ತೋರಿದ್ದ ಕಳ್ಳರು ಪೇಡ ಖರೀದಿ ನೆಪದಲ್ಲಿ ತುಪ್ಪ ಕದ್ದೊಯ್ದಿದ್ದರು. ಇದೀಗ ಅದೇ ರೀತಿಯಲ್ಲಿ ಅನ್ನಪೂರ್ಣೇಶ್ವರಿ ನಗರದಲ್ಲಿ ಕಳ್ಳರು ಕೈ ಚಳಕ ತೋರಿದ್ದಾರೆ. ಅನ್ನಪೂರ್ಣೇಶ್ವರಿ ನಗರದ ಪೇರ್ ಪ್ರೈಸ್ ಎಂಬ ಸೂಪರ್ ಮಾರ್ಕೇಟ್‌ನಲ್ಲಿ ಈ ಘಟನೆ ನಡೆದಿದೆ. ಇಲ್ಲಿಂದಲೂ 15 ಲೀಟರ್ ತುಪ್ಪ ಖರೀದಿಸಿದ ಇಬ್ಬರು ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಟಿವೆ ಕ್ಯಾ,ಮೆರಾದಲ್ಲಿ ಸೆರೆಯಾಗಿದೆ.

ಕಾರಿಗೆ ಬೈಕ್ ಅಡ್ಡ ಹಾಕಿ ಬಾನೆಟ್‌ಗೆ ಒದ್ದ ಬೈಕ್ ಸವಾರ

ಬೆಂಗಳೂರು: ದಾರಿ ಬಿಡುವ ಸಂದರ್ಭದಲ್ಲಿ ಬೈಕ್‌ ಮತ್ತು ಕಾರು ಚಾಲಕನ ಮಧ್ಯೆ ಜಗಳ ನಡೆದಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಮೂಲಕ ನಗರದಲ್ಲಿ ನಡೆಯುತ್ತಿರುವ ರೋಡ್ ರೇಜ್‌ಗೆ ಮತ್ತೊಂದು ಘಟನೆ ಸೇರ್ಪಡೆಯಾದಂತಾಗಿದೆ.

ಜಕ್ಕೂರಿನಲ್ಲಿ ಯೂ ಟರ್ನ್ ಮಾಡುವ ವೇಳೆ ಕಾರು ಚಾಲಕ ಪ್ರವೀಣ್ ಹಾಗೂ ದ್ವಿಚಕ್ರ ವಾಹನ ಸವಾರನ ನಡುವೆ ಕಿರಿಕ್ ನಡೆದಿದೆ. ಈ ವೇಳೆ ಕಾರನ್ನು ಅಡ್ಡ ಹಾಕಿ ಕಾರ್‌ನ ಬಾನೆಟ್‌ಗೆ ಒದ್ದು ಬೈಕ್‌ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಫಾಲೋ ಮಾಡಿಕೊಂಡು ಬಂದಿದ್ದ ದ್ವಿಚಕ್ರ ವಾಹನ ಸವಾರ ಶ್ರೀರಾಮಪುರ ವಿಲೇಜ್ ಬಳಿಯೂ ಕಿರಿಕ್‌ ಮಾಡಿದ್ದಾನೆ. ಕಾರ್ ಡ್ಯಾಷ್ ಕ್ಯಾಮ್‌ ಬೈಕ್‌ ಸವಾರನ ಕೃತ್ಯ ಸೆರೆಯಾಗಿದೆ.

ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

ಬೆಂಗಳೂರು: ರಾಜಧಾನಿ ಬೆಂಗಳೂರಿ‌ನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್‌ ರಾಡ್‌ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Appu Cup Badminton: ʼಅಪ್ಪು ಕಪ್ ಸೀಸನ್ 2ʼ; ಟೀಮ್ ಬಿಲ್ಡಿಂಗ್‌ಗೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

appu cup badminton: ಚೇತನ್ ಸೂರ್ಯ ಅವರ ಸ್ಟೆಲ್ಲರ್‌ ಸ್ಟುಡಿಯೋ ಮತ್ತು ಇವೆಂಟ್‌ ಮ್ಯಾನೇಜ್‌ಮೆಂಟ್ ಸಂಸ್ಥೆ, ಪಿ.ಆರ್‌.ಕೆ. ಆಡಿಯೋ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿರುವ ʼಅಪ್ಪು ಕಪ್ ಸೀಸನ್ 2ʼ (ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಜುಲೈ ಅಂತ್ಯದಲ್ಲಿ ನಡೆಯಲಿದ್ದು, ಈ ಟೂರ್ನಿಯ ಟೀಮ್ ಬಿಲ್ಡಿಂಗ್ ಇವೆಂಟ್ ಈಚೆಗೆ ನಡೆಯಿತು. ಅಶ್ವಿನಿ ಪುನೀತ್ ರಾಜಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಶುಭ ಕೋರಿದರು.

VISTARANEWS.COM


on

Appu Cup Season 2 to be held in July A team building event was held in Bengaluru
Koo

ಬೆಂಗಳೂರು: ಕನ್ನಡ ಚಿತ್ರರಂಗದೊಂದಿಗೆ (appu cup badminton) ಒಂದು ದಶಕದಿಂದ ಒಡನಾಟ ಹೊಂದಿರುವ ಚೇತನ್ ಸೂರ್ಯ ಅವರ ಸ್ಟೆಲ್ಲರ್‌ ಸ್ಟುಡಿಯೋ ಮತ್ತು ಇವೆಂಟ್‌ ಮ್ಯಾನೇಜ್‌ಮೆಂಟ್ ಸಂಸ್ಥೆ (STELLER STUDIO & EVENT MANAGEMENT) ಮತ್ತು ಪಿಆರ್‌ಕೆ ಆಡಿಯೋ (PRK Audio) ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿರುವ ʼಅಪ್ಪು ಕಪ್ ಸೀಸನ್ 2ʼ (ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಜುಲೈ ಅಂತ್ಯದಲ್ಲಿ ನಡೆಯಲಿದ್ದು, ಈ ಟೂರ್ನಿಯ ಟೀಮ್ ಬಿಲ್ಡಿಂಗ್ ಇವೆಂಟ್ ಈಚೆಗೆ (Bengaluru News) ನಡೆಯಿತು.

ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಶುಭ ಕೋರಿದರು. ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕರು ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಸೇರಿದಂತೆ ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ಸತತವಾಗಿ ಮೂರು ವರ್ಷಗಳ ಕಾಲ ಗೆದ್ದ ತಂಡಕ್ಕೆ ಅಪ್ಪು ಅವರ ಭಾವಚಿತ್ರವುಳ್ಳ ಬೆಳ್ಳಿಯ ಐದು ಕೆಜಿ ತೂಕದ ಟ್ರೋಫಿ ನೀಡಲಾಗುವುದು ಎಂದು ತಿಳಿಸಿದ ರೋಲಿಂಗ್ ಟ್ರೋಫಿ ಪ್ರಯೋಜಕರಾಗಿರುವ ಶ್ರೀಸಾಯಿ ಗೋಲ್ಡ್ ಪ್ಯಾಲೆಸ್‌ನ ಮಾಲೀಕರು ಹಾಗೂ ವಿಧಾನ ಪರಿಷತ್ ಸದಸ್ಯ ಶರವಣ ಅವರು, ಈ ಬಾರಿ ಮೊದಲ ವಿಜೇತರಿಗೆ ನೂರು ಗ್ರಾಮ್ ಚಿನ್ನ, ಎರಡನೇ ವಿಜೇತರಿಗೆ ಐವತ್ತು ಗ್ರಾಮ್ ಚಿನ್ನ ಹಾಗೂ ಮೂರನೇ ವಿಜೇತರಿಗೆ ಇಪ್ಪತ್ತೈದು ಗ್ರಾಮ್ ಚಿನ್ನ ನೀಡುವುದಾಗಿ ಈ ವೇಳೆ ತಿಳಿಸಿದರು.

ಈ ಸಂದರ್ಭದಲ್ಲಿ ಟೂರ್ನಿಯ ಆಯೋಜಕ ಚೇತನ್ ಸೂರ್ಯ ಮಾತನಾಡಿ, ನಾನು ಕಳೆದ ಹನ್ನೆರಡು ವರ್ಷಗಳಿಂದ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಸಕ್ರಿಯನಾಗಿದ್ದೇನೆ. ನಾಲ್ಕು ಸಿನಿಮಾಗಳಲ್ಲಿ ನಾಯಕನಾಗೂ ನಟಿಸಿರುವ ನನಗೆ, ಸಾಕಷ್ಟು ಇವೆಂಟ್‌ಗಳನ್ನು ಆಯೋಜಿಸಿರುವ ಅನುಭವವಿದೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ನಮ್ಮ ಸಂಸ್ಥೆಯ ಮೂಲಕ ಕಳೆದ ವರ್ಷ “ಅಪ್ಪು ಕಪ್” (ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಆಯೋಜಿಸಲಾಗಿತ್ತು. ಟೂರ್ನಿ ಬಹಳ ಯಶಸ್ವಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಸಹ ” ಅಪ್ಪು ಕಪ್” ಬಗ್ಗೆ ಪ್ರಶಂಸೆಯ ಮಾತುಗಳಾಡಿ, ಈ ಟೂರ್ನಿಗೆ PRK audio ದ ಸಹಯೋಗವಿದೆ ಎಂದು ತಿಳಿಸಿದ್ದಾರೆ. ಈ ಬಾರಿಯ ಟೀಮ್‌ ಬಿಲ್ಡಿಂಗ್‌ಗೆ ಸಹ ಬಂದು ಶುಭ ಕೋರಿದ್ದು, ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

“ಅಪ್ಪು ಕಪ್” ಶಟಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಒಟ್ಟು ಹತ್ತು ತಂಡಗಳಿರುತ್ತದೆ. ಒಂದೊಂದು ತಂಡದಲ್ಲಿ ಹದಿಮೂರು ಆಟಗಾರರಿರುತ್ತಾರೆ. ಹಿರಿತೆರೆ, ಕಿರುತೆರೆ ಹಾಗೂ ವಿವಿಧ ಕ್ಷೇತ್ರಗಳ ತಾರೆಯರು ಈ ತಂಡಗಳಲ್ಲಿರುತ್ತಾರೆ. ಪುನೀತ್ ಅವರಿಗೆ ಸಂಬಂಧಿಸಿದ ಹಾಗೆ ಹತ್ತು ತಂಡಗಳ ಹೆಸರುಗಳಿವೆ. ಹತ್ತು ತಂಡಗಳಿಗೂ ಮಾಲೀಕರಿರುತ್ತಾರೆ‌. ಈ ಬಾರಿ ಜುಲೈ 13 ರಂದು ಅದ್ದೂರಿ ಸಮಾರಂಭದ ಮೂಲಕ ಟೂರ್ನಿಗೆ ಚಾಲನೆ ನೀಡಲಾಗುವುದು. ಆದರೆ ಟೂರ್ನಿಯ ಪಂದ್ಯಗಳು ಜುಲೈ ಕೊನೆಯಲ್ಲಿ ನಡೆಯುವುದು ಎಂದು ಟೂರ್ನಿಯ ಆಯೋಜಕ ಚೇತನ್ ಸೂರ್ಯ ತಿಳಿಸಿದರು.

Continue Reading

ಕರ್ನಾಟಕ

Fact Check: ಹೊಲದಲ್ಲಿ ಟ್ರಾನ್ಸ್‌ಫಾರ್ಮರ್‌ ಇದ್ದರೆ ರೈತರಿಗೆ ಪರಿಹಾರ? ಬೆಸ್ಕಾಂ ಹೇಳಿದ್ದೇನು?

BESCOM: ಜಮೀನಿನಲ್ಲಿರುವ ವಿದ್ಯುತ್‌ ಕಂಬ ಅಥವಾ ಟ್ರಾನ್ಸ್‌ಫಾರ್ಮರ್‌ಗೆ ಸರ್ಕಾರದಿಂದ ರೈತರಿಗೆ ಪರಿಹಾರ ನೀಡಲಾಗುತ್ತದೆ ಎಂಬ ಸುಳ್ಳು ಮಾಹಿತಿ ಇರುವ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ವಿರುದ್ಧ ಬೆಸ್ಕಾಂ ದೂರು ಸಲ್ಲಿಸಿದೆ.

VISTARANEWS.COM


on

Bescom complaint against false information video about electricity compensation for farmers
Koo

ಬೆಂಗಳೂರು: ಜಮೀನಿನಲ್ಲಿರುವ (Fact Check) ವಿದ್ಯುತ್‌ ಕಂಬ ಅಥವಾ ಟ್ರಾನ್ಸ್‌ಫಾರ್ಮರ್‌ಗೆ (BESCOM) ಸರ್ಕಾರದಿಂದ ರೈತರಿಗೆ (Farmers) ಪರಿಹಾರ ನೀಡಲಾಗುತ್ತದೆ ಎಂಬ ಸುಳ್ಳು ಮಾಹಿತಿ ಇರುವ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ವಿರುದ್ಧ ಬೆಸ್ಕಾಂ (BESCOM) ದೂರು ಸಲ್ಲಿಸಿದೆ.

ರೈತರು ತಮ್ಮ ಜಮೀನಿನಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್‌ಫಾರ್ಮರ್ ಅಳವಡಿಸಿಕೊಂಡಿದ್ದರೆ ಸರ್ಕಾರ ದಿನಕ್ಕೆ 50 ರೂ. ಪರಿಹಾರ ನೀಡಲಿದೆ. ಗೃಹಬಳಕೆದಾರರು ಪ್ರತಿನಿತ್ಯ 2000ರಿಂದ 5000 ಯೂನಿಟ್ ವಿದ್ಯುತ್ ಬಳಸಿಕೊಳ್ಳಬಹುದು. ಅದಕ್ಕೆ ಸರ್ಕಾರ 5000 ರೂ. ಪರಿಹಾರ ಧನ ನೀಡಲಿದೆ ಎಂಬ ಸಂದೇಶ ನೀಡುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Pralhad Joshi: ಮುಂಬೈ-ಹುಬ್ಬಳ್ಳಿ ನಡುವೆ Indigo ವಿಮಾನಯಾನ ಜು.15ರಿಂದ ಪುನರಾರಂಭ

ಖಾಸಗಿ ಯುಟ್ಯೂಬ್‌ ಚಾನೆಲ್‌ವೊಂದರಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಗಳನ್ನೊಳಗೊಂಡ 5 ನಿಮಿಷ ಅವಧಿಯ ಒಂದು ವೀಡಿಯೊ ತುಣುಕನ್ನು ಹರಿಬಿಟ್ಟಿದ್ದಾರೆ. ಇದನ್ನು ಮಾಡಿದವರ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.

ವೀಡಿಯೊದಲ್ಲಿರುವ ಮಾಹಿತಿ ಸುಳ್ಳು

ಕೃಷಿಕರ ಜಮೀನಿನಲ್ಲಿ ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್‌ಫಾರ್ಮರ್ ಇದ್ದರೆ ಅವರಿಗೆ ಸರ್ಕಾರ ಪ್ರತಿ ವಾರ 100 ರೂ.ಗಳ ಪರಿಹಾರ ನೀಡಲಿದೆ. ಅಂತಹ ರೈತರಿಗೆ ತಿಂಗಳಿಗೆ 2000ರಿಂದ 5000 ಯೂನಿಟ್‌ವರೆಗೆ ಮನೆ ಬಳಕೆ ಹಾಗೂ ನೀರಾವರಿ ವಿದ್ಯುತ್ ಉಚಿತವಾಗಿ ನೀಡಲಾಗುವುದು. ರೈತರ ಹೊಲಗಳಲ್ಲಿರುವ ವಿದ್ಯುತ್ ಕಂಬಗಳಲ್ಲಿ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳು ಕಂಡುಬಂದಲ್ಲಿ 44 ಗಂಟೆಗಳೊಳಗೆ ಪರಿಹರಿಸದಿದ್ದರೆ ಅಂತಹ ರೈತರಿಗೆ ದಿನಕ್ಕೆ 50 ರೂ. ಪರಿಹಾರ ನೀಡಲಾಗುವುದು ಎಂದು ವಿಡಿಯೊ ಮಾಡಲಾಗಿತ್ತು.

ರೈತರು ತಮ್ಮ ಹೊಲಗಳಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ಸಂಬಂಧ ಇಂಧನ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ನಿರಾಕ್ಷೇಪಣಾ ಪತ್ರ ನೀಡಿದರೆ ಅವರಿಗೆ 5000 ರೂ. ಪರಿಹಾರ ಹಣ ನೀಡಲಾವುದು. ಇಂತಹ ರೈತರು ಹೊಸ ವಿದ್ಯುತ್ ಸಂಪರ್ಕ ಪಡೆಯಬಯಸಿದರೆ ಅವರಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಇಂತಹ ಯೋಜನೆ ಸದುಪಯೋಗ ಪಡೆಯಲು ಇಚ್ಚಿಸುವ ರೈತರು ಹತ್ತಿರದ ಎಲೆಕ್ಟ್ರಿಸಿಟಿ ಕಚೇರಿಗೆ ಹೋಗಿ ಎನ್.ಓ.ಸಿ ಪಡೆದುಕೊಳ್ಳಬಹುದು ಹಾಗೂ ಹೆಚ್ಚಿನ ವಿವರಗಳಿಗಾಗಿ ಕೆ.ಪಿ.ಟಿ.ಸಿ.ಎಲ್. ವೆಬ್‌ಸೈಟ್‌ಗೆ ಹೋಗಿ ಮಾಹಿತಿ ಪಡೆದುಕೊಳ್ಳಬಹುದು ಎಂದು ವೀಡಿಯೊದಲ್ಲಿ ಹೇಳಲಾಗಿತ್ತು.

ಇದನ್ನೂ ಓದಿ: Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

ಬೆಸ್ಕಾಂ ಸ್ಪಷ್ಟನೆ

ಯೂಟ್ಯೂಬ್ ಹಾಗೂ ಕೆಲ ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಸುದ್ದಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ. ವೀಡಿಯೊದಲ್ಲಿನ ಎಲ್ಲಾ ಹೇಳಿಕೆಗಳು ಸಂಪೂರ್ಣ ಸುಳ್ಳು ಮಾಹಿತಿಯಿಂದ ಕೂಡಿದ್ದು, ರೈತರನ್ನು ತಪ್ಪು ದಾರಿಗೆ ಎಳೆಯುವ ದುರುದ್ದೇಶ ಹೊಂದಿದೆ. ಈ ರೀತಿಯ ತಪ್ಪು ಮಾಹಿತಿಯನ್ನು ಹರಿಬಿಟ್ಟಿರುವ ಮಹಿಳೆ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ವಿಧಾನಸೌಧ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Continue Reading

ಕರ್ನಾಟಕ

DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

DK Shivakumar: ನನ್ನ ತಮ್ಮ ಡಿ.ಕೆ. ಸುರೇಶ್‌ಗೆ ಸೋಲಾಗಿದೆ ಎಂದರೆ ನನ್ನಲ್ಲೇ ಏನೂ ನ್ಯೂನ್ಯತೆ ಇದೆ ಎಂದು ಕ್ಷೇತ್ರದ ಜನ ಅರ್ಥ ಮಾಡಿಸಿದ್ದಾರೆ. ನನಗೆ ಬುದ್ಧಿವಾದ ಹೇಳಲು ಜನರು ಈ ತೀರ್ಮಾನ ನೀಡಿದ್ದಾರೆ. ಇದನ್ನು ನಾನು ಅರಿತುಕೊಂಡಿದ್ದೇನೆ. ಈ ವಿಚಾರದಲ್ಲಿ ನಾನು ಯಾರನ್ನೂ ದೂಷಣೆ ಮಾಡಲು ಹೋಗುವುದಿಲ್ಲ. ಗೆದ್ದಿರುವ ವ್ಯಕ್ತಿ ತುಂಬು ಹೃದಯದಿಂದ ಸುರೇಶ್‌ಗಿಂತ ಹೆಚ್ಚಿನ ಜನರ ಸೇವೆ ಮಾಡಲಿ ಎಂದು ಶುಭ ಕೋರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM DK Shivakumar visit Kengal Anjaneya temple
Koo

ಚನ್ನಪಟ್ಟಣ: ನನ್ನ ರಾಜಕೀಯ ಜೀವನದಲ್ಲಿ ಮಹತ್ವದ ಬದಲಾವಣೆಯಾಗಿದ್ದು ಚನ್ನಪಟ್ಟಣದಿಂದ. ಈಗ ಇಲ್ಲಿನ ಕೆಂಗಲ್ ಆಂಜನೇಯಸ್ವಾಮಿಯ ದೇವಸ್ಥಾನದಿಂದ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಕೆಂಗಲ್ ಆಂಜನೇಯ ದೇವಾಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಮನ ಬಂಟ ಆಂಜನೇಯ ಸೇವೆಯ ಪ್ರತೀಕ. ಅದೇ ರೀತಿ ನಾನು ನಿಮ್ಮ ಸೇವೆ ಮಾಡಲು ಮತ್ತೊಮ್ಮೆ ಬಂದಿದ್ದೇನೆ. ಅತಿ ಚಿಕ್ಕ ವಯಸ್ಸಿಗೆ ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದು ನಿಮ್ಮ ಆಶೀರ್ವಾದದಿಂದ. ಚನ್ನಪಟ್ಟಣದ ಮಹಾಜನತೆಯ ಆಶೀರ್ವಾದ ನಮಗೆ ಬೇಕಾಗಿದೆ. ಜನರು ಪಕ್ಷಭೇದವನ್ನು ಮರೆತು ಸರ್ಕಾರದ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ನನ್ನ ಅಧಿಕಾರವನ್ನು ಚನ್ನಪಟ್ಟಣದ ಬದಲಾವಣೆಗೆ ಉಪಯೋಗಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: MLC By Election: ಕರ್ನಾಟಕದಲ್ಲಿ ವಿಧಾನ ಪರಿಷತ್‌ ಉಪ ಚುನಾವಣೆ ಜುಲೈ 12ರಂದು

ನನಗೆ ಬುದ್ಧಿವಾದ ಹೇಳಲು ಜನರು ಸೋಲಿಸಿದ್ದಾರೆ

ನನ್ನ ತಮ್ಮ ಡಿ.ಕೆ. ಸುರೇಶ್‌ಗೆ ಸೋಲಾಗಿದೆ ಎಂದರೆ ನನ್ನಲ್ಲೇ ಏನೋ ನ್ಯೂನ್ಯತೆ ಇದೆ ಎಂದು ಕ್ಷೇತ್ರದ ಜನ ಅರ್ಥ ಮಾಡಿಸಿದ್ದಾರೆ. ನನಗೆ ಬುದ್ಧಿವಾದ ಹೇಳಲು ಜನರು ಈ ತೀರ್ಮಾನ ನೀಡಿದ್ದಾರೆ. ಇದನ್ನು ನಾನು ಅರಿತುಕೊಂಡಿದ್ದೇನೆ. ಈ ವಿಚಾರದಲ್ಲಿ ನಾನು ಯಾರನ್ನೂ ದೂಷಣೆ ಮಾಡಲು ಹೋಗುವುದಿಲ್ಲ. ಗೆದ್ದಿರುವ ವ್ಯಕ್ತಿ ತುಂಬು ಹೃದಯದಿಂದ ಸುರೇಶ್‌ಗಿಂತ ಹೆಚ್ಚಿನ ಜನರ ಸೇವೆ ಮಾಡಲಿ ಎಂದು ಶುಭ ಕೋರುತ್ತೇನೆ ಎಂದು ಹೇಳಿದರು.

ನಾನು ಧೈರ್ಯ ಕಳೆದುಕೊಳ್ಳುವವನಲ್ಲ

ನಾನು ಧೈರ್ಯ ಕಳೆದುಕೊಳ್ಳುವವನು, ಹೆದರಿ ಓಡಿ ಹೋಗುವವನಲ್ಲ. ಹೋರಾಟ ಮಾಡುವವನು. ಎಲ್ಲಿ ಶ್ರಮವಿದೆಯೋ ಅಲ್ಲಿ ಫಲವಿದೆ. ಭಕ್ತಿ ಇರುವ ಕಡೆ ಭಗವಂತ ಇದ್ದಾನೆ. ಪ್ರತಿ ಪಂಚಾಯ್ತಿಗೂ ಭೇಟಿ ನೀಡಿ ಚನ್ನಪಟ್ಟಣದ ಬದಲಾವಣೆಗೆ ನನಗೆ ಇರುವ ಶಕ್ತಿಯಲ್ಲಿ ಪ್ರಯತ್ನಿಸುತ್ತೇನೆ ಎಂದರು.

ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ

ಸರ್ಕಾರದಲ್ಲಿ ನಾನು ಉತ್ತಮ ಸ್ಥಾನದಲ್ಲಿದ್ದು, ಚನ್ನಪಟ್ಟಣದ ಅಭಿವೃದ್ದಿಗೆ ರೂಪುರೇಷೆಯನ್ನು ಸಿದ್ಧಪಡಿಸಿದ್ದೇನೆ. ಭೂಮಿ ಋಣ, ತಾಯಿ ಋಣ, ಅನ್ನದ ಋಣ, ಜನರ ಋಣ ತೀರಿಸಬೇಕಾಗಿರುವುದು ನಮ್ಮ ಕರ್ತವ್ಯ. ಈಗ ಮತ್ತೊಮ್ಮೆ ನಿಮ್ಮ ಋಣ ತೀರಿಸುವ ಅವಕಾಶ ದೊರೆತಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಖಾಲಿಯಿದ್ದು ಮುಂದಿನ ದಿನಗಳಲ್ಲಿ ಯಾರು ಅಭ್ಯರ್ಥಿ ಎಂಬುದನ್ನು ತಿಳಿಸುತ್ತೇನೆ ಎಂದರು.

ಇದನ್ನೂ ಓದಿ: CM Siddaramaiah: ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ಹುಷಾರ್!‌ ಸಿಎಂ ಎಚ್ಚರಿಕೆ

ನಾನು ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ಚನ್ನಪಟ್ಟಣದ ಒಂದು ಭಾಗ ನನ್ನ ಕ್ಷೇತ್ರದಲ್ಲಿತ್ತು. ನಿಮ್ಮ ಆಶೀರ್ವಾದದಿಂದ ಇಂದು ಉನ್ನತ ಸ್ಥಾನಕ್ಕೆ ಏರಿದ್ದೇನೆ. ಈ ಕ್ಷೇತ್ರದ ಮರುವಿಂಗಡಣೆ ಸಂದರ್ಭದಲ್ಲಿ ಬಿಟ್ಟು ಹೋಗುವಾಗ ನೋವು ಉಂಟಾಗಿತ್ತು. ನಾನು ಹೋದರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ದು ಇತಿಹಾಸ. ಎಲ್ಲಾ ಜಾತಿ, ಧರ್ಮ, ಜನಾಂಗಗಳು ಇರುವ ಪ್ರಜ್ಞಾವಂತರ ಕ್ಷೇತ್ರವಿದು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 16 ಸಾವಿರ ಮತಗಳು ಮಾತ್ರ ಬಂದಿತ್ತು. ಇದರಿಂದ ನನಗೆ ನೋವಾಗಿತ್ತು. ಜನರ ತೀರ್ಮಾನ ಪ್ರಶ್ನೆ ಮಾಡಲು ಆಗುವುದಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಆಗಿರಬಹುದು ಆದರೆ ನಿಮ್ಮ ಮನೆ ಮಗ ಎಂದು ತಿಳಿಸಿದರು.

ದೇಶದ ಪ್ರಧಾನಮಂತ್ರಿಯಾದವರಿಂದ ತೆರವಾದ ರಾಮನಗರ ಕ್ಷೇತ್ರದಲ್ಲಿ ಸಿ.ಎಂ.ಲಿಂಗಪ್ಪ ಅವರನ್ನು ಕಣಕ್ಕೆ ಇಳಿಸಲಾಗಿತ್ತು. ಅವರನ್ನು 9 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದ್ದು ಈಗ ಇತಿಹಾಸ. ಲೋಕಸಭೆ ಚುನಾವಣೆಯಲ್ಲಿ 85 ಸಾವಿರ ಮತಗಳು ಕಾಂಗ್ರೆಸ್ ಅಭ್ಯರ್ಥಿಗೆ ಬಂದಿವೆ. ಅಂದರೆ ಸುಮಾರು 70 ಸಾವಿರದಷ್ಟು ಹೆಚ್ಚಿನ ಮತಗಳು ಬಂದಿದ್ದು. ಇದಕ್ಕೆ ಜನತಾದಳ, ರೈತಸಂಘ ಸೇರಿದಂತೆ ಎಲ್ಲಾ ವರ್ಗಗಳ ಜನರು ಸಹಾಯ ಮಾಡಿದ್ದಾರೆ ಎಂದರು.

ಇದನ್ನೂ ಓದಿ: Nalanda University: ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ನಲ್ಲಿ ಏನೇನಿವೆ?

ಚನ್ನಪಟ್ಟಣವನ್ನು ಚಿನ್ನದ ನಾಡು ಮಾಡುತ್ತೇನೆ

ರಾಮನಗರಕ್ಕೆ ಸುಮಾರು 1 ಸಾವಿರ ಕೋಟಿ ಅನುದಾನ ಕೊಟ್ಟಿದ್ದೇನೆ. ಚನ್ನಪಟ್ಟಣವನ್ನು ಚಿನ್ನದ ನಾಡನ್ನಾಗಿ ಮಾಡುತ್ತೇನೆ. ಮದ್ದೂರು ಗಡಿ, ಸಂಗಮ, ಹುಲಿಯೂರುದುರ್ಗ, ಕೋಲಾರ ಗಡಿ, ನಂದಿ ಬೆಟ್ಟದ ತನಕ ನಾವೆಲ್ಲಾ ಬೆಂಗಳೂರಿಗೆ ಸೇರಿದವರು. ಬೆಂಗಳೂರಿನ ಸುತ್ತ ಹೊಸ ನಾಮಕರಣ ಮಾಡಲಾಗುತ್ತದೆ. ಈ ವಿಚಾರವಾಗಿ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು. ಚನ್ನಪಟ್ಟಣದ 15 ಕ್ಕೂ ಹೆಚ್ಚು ಗ್ರಾಮ ದೇವರುಗಳಿಗೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆಯುತ್ತೇನೆ ಎಂದು ತಿಳಿಸಿದರು.

Continue Reading

ಕರ್ನಾಟಕ

Lakshmi Hebbalkar: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ‌ ಆದೇಶ ರದ್ದು? ಲಕ್ಷ್ಮೀ ಹೆಬ್ಬಾಳಕರ್ ಸುಳಿವು

Lakshmi Hebbalkar: ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ಜಾರಿಗೊಳಿಸುವ ಸಂಬಂಧ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಂಗನವಾಡಿ ನೌಕರರಿಗೆ ಯಾವುದೇ ರೀತಿಯಿಂದಲೂ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

VISTARANEWS.COM


on

Minister Lakshmi Hebbalkar visit Anganawadi workers protest place
Koo

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ಜಾರಿಗೊಳಿಸುವ ಸಂಬಂಧ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನಡೆಸುತ್ತಿರುವ ಅನಿರ್ದಿಷ್ಟ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅಂಗನವಾಡಿ ನೌಕರರಿಗೆ ಯಾವುದೇ ರೀತಿಯಿಂದಲೂ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಇದನ್ನೂ ಓದಿ: Lakshmi Hebbalkar: ಪೌಷ್ಟಿಕ ಆಹಾರ ತಯಾರಿಕೆ ಘಟಕಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ

ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಆರಂಭಿಸುವ ಎಲ್‌ಕೆಜಿ, ಯುಕೆಜಿ‌ ಆದೇಶ ರದ್ದು ಮಾಡುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಲಾಗಿದೆ. ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ನನ್ನ ಸಮ್ಮತಿಯಿಲ್ಲ ಎಂದು ಸಚಿವರು ಹೇಳಿದರು.

ಕಳೆದ 48 ವರ್ಷಗಳಲ್ಲಿ ಈವರೆಗೂ ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಒಂದು ಮಗುವೂ ಅನಾರೋಗ್ಯದಿಂದ ಬಳಲಿ ಅಥವಾ ಸಾವನ್ನಪ್ಪಿರುವ ಘಟನೆಗಳು ನಡೆದಿಲ್ಲ. ಗೃಹಲಕ್ಷ್ಮೀ ಸೇರಿದಂತೆ ನಮ್ಮ ಇಲಾಖೆಯ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಕಾರ್ಯವೈಖರಿ ಇಡೀ ದೇಶಕ್ಕೆ ಮಾದರಿ ಎಂದರು.

ಇದೇ ವೇಳೆ ಸಚಿವರು, ಅಂಗನವಾಡಿ ನೌಕರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಇರಲಿದೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather: ಸಿಡಿಲು ಬಡಿದು ಹಸು ಸಾವು; ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ. ಪ್ರಕಾಶ್, ಹಿರಿಯ ನಾಗರಿಕರ ಹಾಗೂ ವಿಕಲಾಂಗ ಚೇತನರ ಇಲಾಖೆಯ ನಿರ್ದೇಶಕ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷೆ ಸುನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Blacklist contractors who do not complete work within time says Minister Mankala Vaidya
ಉತ್ತರ ಕನ್ನಡ45 seconds ago

Uttara Kannada News: ಅವಧಿಯೊಳಗೆ ಕಾಮಗಾರಿ ಮುಕ್ತಾಯಗೊಳಿಸದ ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸಿ: ಸಚಿವ ಮಂಕಾಳ ವೈದ್ಯ

Appu Cup Season 2 to be held in July A team building event was held in Bengaluru
ಬೆಂಗಳೂರು3 mins ago

Appu Cup Badminton: ʼಅಪ್ಪು ಕಪ್ ಸೀಸನ್ 2ʼ; ಟೀಮ್ ಬಿಲ್ಡಿಂಗ್‌ಗೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

RSA vs USA
ಕ್ರೀಡೆ14 mins ago

SA vs USA: ಮಿಂಚಿದ ಡಿಕಾಕ್; ಯುಎಸ್‌ಎ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 18 ರನ್‌ಗಳ ಜಯ

NET 2024
ದೇಶ47 mins ago

NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

Hajj Pilgrims
ದೇಶ2 hours ago

Hajj Pilgrims: ಬಿಸಿಗಾಳಿ, ಬಿಸಿಲಿನ ಹೊಡೆತ; ಹಜ್‌ ಯಾತ್ರೆ ಕೈಗೊಂಡ 68 ಭಾರತೀಯರ ಸಾವು

Bescom complaint against false information video about electricity compensation for farmers
ಕರ್ನಾಟಕ2 hours ago

Fact Check: ಹೊಲದಲ್ಲಿ ಟ್ರಾನ್ಸ್‌ಫಾರ್ಮರ್‌ ಇದ್ದರೆ ರೈತರಿಗೆ ಪರಿಹಾರ? ಬೆಸ್ಕಾಂ ಹೇಳಿದ್ದೇನು?

Murder Case
ಕರ್ನಾಟಕ3 hours ago

Murder Case: 3 ವರ್ಷದ ಬಾಲಕನ ಕತ್ತು ಸೀಳಿ ಕೊಂದ ಚಿಕ್ಕಪ್ಪ; ನದಿಯಲ್ಲಿ ಈಜಲು ಹೋಗಿ ಇಬ್ಬರು ನಾಪತ್ತೆ

Suniel Shetty
ಬಾಲಿವುಡ್3 hours ago

Suniel Shetty: ಅಪ್ಪ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ ರೆಸ್ಟೋರೆಂಟ್‌ಗೆ ಈಗ ಸುನೀಲ್‌ ಶೆಟ್ಟಿ ಒಡೆಯ; ಇದಪ್ಪ Success ಅಂದ್ರು ಜನ!

DCM DK Shivakumar visit Kengal Anjaneya temple
ಕರ್ನಾಟಕ3 hours ago

DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

Minister Lakshmi Hebbalkar visit Anganawadi workers protest place
ಕರ್ನಾಟಕ3 hours ago

Lakshmi Hebbalkar: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ‌ ಆದೇಶ ರದ್ದು? ಲಕ್ಷ್ಮೀ ಹೆಬ್ಬಾಳಕರ್ ಸುಳಿವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ3 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌