Robbery Case: ಬೆಂಗಳೂರು ಹೊರವಲಯದಲ್ಲಿ ರೌಡಿ ಶೀಟರ್‌ಗಳಿಂದ ಮನೆ ದರೋಡೆ - Vistara News

ಕ್ರೈಂ

Robbery Case: ಬೆಂಗಳೂರು ಹೊರವಲಯದಲ್ಲಿ ರೌಡಿ ಶೀಟರ್‌ಗಳಿಂದ ಮನೆ ದರೋಡೆ

ಬಸವೇಶ್ವರನಗರ ರೌಡಿ ಶೀಟರ್‌ಗಳಾದ ಕಿಶನ್, ನಿತೀನ್ ಅಲಿಯಾಸ್‌ ಲೊಡ್ಡೆ, ಶಿವರಾಜ್ ಅಲಿಯಾಸ್‌ ಶಿವು ಎಂಬ ರೌಡಿಶೀಟರ್‌ಗಳು ಸೇರಿ ಎಂಟು ಜನ ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ.

VISTARANEWS.COM

on

robbery soladevanahalli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಷ್ಟು ದಿನ ತಮ್ಮ ಗ್ಯಾಂಗ್‌ನ ಹುಡುಗರನ್ನು ಕಳಿಸಿ ದರೋಡೆ ಕೃತ್ಯ ಎಸಗುತ್ತಿದ್ದ ರೌಡಿ ಶೀಟರ್‌ಗಳು ಈಗ ತಾವಾಗಿ ಮನೆ ಡಕಾಯಿತಿಗೆ ಇಳಿದಿದ್ದಾರೆ. ರಾಜಧಾನಿಯ ಹೊರವಲಯದಲ್ಲಿ ನಡುರಾತ್ರಿ ಮನೆ ಬಾಗಿಲು ಬಡಿದು ದೋಚಿದ್ದಾರೆ.

ಬಸವೇಶ್ವರನಗರ ರೌಡಿ ಶೀಟರ್‌ಗಳಾದ ಕಿಶನ್, ನಿತೀನ್ ಅಲಿಯಾಸ್‌ ಲೊಡ್ಡೆ, ಶಿವರಾಜ್ ಅಲಿಯಾಸ್‌ ಶಿವು ಎಂಬ ರೌಡಿಶೀಟರ್‌ಗಳು ಸೇರಿ ಎಂಟು ಜನ ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ. ಸೋಲದೇವನಹಳ್ಳಿಯಲ್ಲಿ ನಡುರಾತ್ರಿ ಮನೆ ಬಾಗಿಲು ಬಡಿದು ತೆಗೆಸಿ, ಬಾಗಿಲು ತೆಗೆಯುತ್ತಿದ್ದಂತೆ ಒಳ ನುಗ್ಗಿ ಪೆಪ್ಪರ್ ಸ್ಪ್ರೇ ಮಾಡಿದೆ ಈ ಖೂಳರ ತಂಡ. ನಂತರ ಮನೆಯವರ ಕೈಕಾಲು ಕಟ್ಟಿ ಹಾಕಿದ್ದು, ವಿರೋಧಿಸಿದವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದೆ. ನಂತರ ಮನೆಯಲ್ಲಿದ್ದ ಚಿನ್ನಾಭರಣ, ಮೊಬೈಲ್ ದೋಚಿ ಪರಾರಿಯಾಗಿದೆ. ದೂರಿನನ್ವಯ ಶೋಧ ನಡೆಸಿದ ಸೋಲದೇವನಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Robbery Case: ಬೆಂಗಳೂರಿನಲ್ಲಿ 49 ಸಾವಿರ ರೂಪಾಯಿ ದರೋಡೆ ಮಾಡಿದ್ದ ರೌಡಿ ಶೀಟರ್ ಸೇರಿ 6 ಜನರ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Drowned: ನೀರಿನ ಸಂಪ್‌ನಲ್ಲಿ ಮುಳುಗಿ ತಾಯಿ- ಮಗು ಸಾವು, ಮುಚ್ಚಳ ಹಾಕದೆ ಬಿಟ್ಟಿದ್ದ ಮಾಲಿಕ

Drowned: ಮನೆಯ ಮಾಲಿಕ, ಉದ್ಯಮಿ ಸ್ಥಳದಲ್ಲಿ ನೀರಿನ ಸಂಪ್ ತೆಗೆಸಿ ಅದನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದರು. ಸಂಪ್‌ನ ತುಂಬಾ ನೀರು ಇದೆ ಎಂದು ಗೊತ್ತಿದ್ದರೂ ಅದನ್ನು ಮುಚ್ಚುವ ಕೆಲಸ ಮಾಡಿರಲಿಲ್ಲ.

VISTARANEWS.COM

on

open sump drowned
Koo

ಬೆಂಗಳೂರು: ಶ್ರೀಮಂತರ ಮನೆಯವರ ನಿರ್ಲಕ್ಷ್ಯಕ್ಕೆ ತಾಯಿ- ಮಗು (mother- child death) ಬಲಿಯಾಗಿದ್ದಾರೆ. ತೆರೆದೇ ಇದ್ದ ನೀರಿನ ಸಂಪ್‌ನಲ್ಲಿ ಬಿದ್ದು ಮುಳುಗಿ (Drowned) ತಾಯಿ ಮಗು ಸಾವಿಗೀಡಾಗಿದ್ದಾರೆ. ಯಲಹಂಕ ನ್ಯೂಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ಘಟನೆ ನಡೆದಿದೆ.

ಕವಿತಾ (40) ಹಾಗೂ ಪವನ್ (8) ಮೃತರು. ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ಶವಗಳನ್ನು ಹೊರಗೆ ತೆಗೆದಿದ್ದಾರೆ.

ಮೃತ ಕವಿತಾ ಅದೇ ಏರಿಯಾದ ಉದ್ಯಮಿಯೊಬ್ಬರ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದರು. ನಿನ್ನೆ‌ ಸಹ ಅದೇ ಮನೆಯವರ ‌ಮನೆಯ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಈಕೆ ಕಾಂಪೌಂಡ್ ಒಂದಕ್ಕೆ ನೀರು ಹಾಕಲು ಹೋಗಿದ್ದರು. ಮನೆಯ ಮಾಲಿಕ, ಉದ್ಯಮಿ ಸ್ಥಳದಲ್ಲಿ ನೀರಿನ ಸಂಪ್ ತೆಗೆಸಿ ಅದನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದರು. ಸಂಪ್‌ನ ತುಂಬಾ ನೀರು ಇದೆ ಎಂದು ಗೊತ್ತಿದ್ದರೂ ಅದನ್ನು ಮುಚ್ಚುವ ಕೆಲಸ ಮಾಡಿರಲಿಲ್ಲ.

ತಾಯಿ ಕಾಂಪೌಂಡ್‌ಗೆ ನೀರು ಹಾಕುತ್ತಿದ್ದಾಗ ಮಗು ಆಟವಾಡುತ್ತ ಹೋಗಿ ಸಂಪ್‌ಗೆ ಬಿದ್ದಿದೆ. ಮಗುವನ್ನು ಕಾಪಾಡಲು ಮುಂದಾದ ತಾಯಿ ತಾನೂ ಸಂಪ್‌ಗೆ ಇಳಿದಿದ್ದಾಳೆ. ನಂತರ ಮೇಲೆ ಬರುವುದಕ್ಕೆ ಆಗದೆ ತಾಯಿ ಮಗು ಸಂಪ್‌ನಲ್ಲಿಯೇ ಜೀವ ಬಿಟ್ಟಿದ್ದಾರೆ. ಸಂಪ್‌ಗೆ ಮುಚ್ಚಳವಾಗಲೀ ಯಾವುದೇ ಲಾಕ್ ಆಗಲೀ ಹಾಕದೆ ಬಿಟ್ಟಿದ್ದ ಸೈಟ್ ಮಾಲೀಕನ ನಿರ್ಲಕ್ಷ್ಯ ಈ ಪ್ರಕರಣದಲ್ಲಿ ಎದ್ದು ಕಂಡಿದೆ.

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

ಗದಗ: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

murder case gadag

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್‌ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.

ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.

ಶ್ವಾನದಳ, ಫಾರೆನ್ಸಿಕ್‌ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.‌

ಇದನ್ನೂ ಓದಿ: Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Continue Reading

ಕ್ರೈಂ

Murder Case: ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

Murder Case: ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

VISTARANEWS.COM

on

murder case gadag
ಕೊಲೆಯಾದ ಕುಟುಂಬ
Koo

ಗದಗ: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ (Murder Case) ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ (Crime news) ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ನೇಹಾ ಕೊಲೆ (Hubli Neha Murder) ಕೃತ್ಯ ಇನ್ನೂ ಹಸಿಯಾಗಿರುವಾಗಲೇ ಈ ಘಟನೆ ನಡೆದಿದೆ.

ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ ಸೇರಿದಂತೆ ವಿವಿಧ ಆಯಾಮಗಳನ್ನು ತನಿಖೆ ನಡೆಸಲಾಗುತ್ತಿದೆ.

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್‌ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.

ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.

ಶ್ವಾನದಳ, ಫಾರೆನ್ಸಿಕ್‌ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕಾರ್ಪೊರೇಟರ್‌ ಪತ್ನಿಯನ್ನು ಕೊಂದ ಪಾಗಲ್‌

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿಯೊಬ್ಬ ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ವೊಬ್ಬರ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿಯಾಗಿದ್ದಾಳೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ. ಫೈಜಲ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.‌

ಇದನ್ನೂ ಓದಿ: Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Continue Reading

ದೇಶ

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Physical Abuse : ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳವನ್ನು ವೀಡಿಯೊ ಬಹಿರಂಗಪಡಿಸಿದೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

VISTARANEWS.COM

on

Physical Abuse
Koo

ರಾಂಚಿ: ಜಾರ್ಖಂಡ್​ನ ದುಮ್ಕಾ ಜಿಲ್ಲೆಯಲ್ಲಿ ಸ್ಪೇನ್​ನಿಂದ ಬಂದಿದ್ದ ಪ್ರವಾಸಿ ಮಹಿಳೆಯೊಬ್ಬಳ ಮೇಲೆ ಏಳು ಜನರು ಸಾಮೂಹಿಕ ಅತ್ಯಾಚಾರ (Physical Abuse) ಎಸಗಿದ ಭಯಾನಕ ಘಟನೆ ನಡೆದಿದೆ. ಈ ಘಟನೆ ಮಾರ್ಚ್​ನಲ್ಲಿ ನಡೆದಿದೆ. ಮಹಿಳೆ ಹಾಗೂ ಆಕೆಯ ಪತಿ ಆಘಾತಕಾರಿ ಘಟನೆಗ ಮತ್ತು ನಂತರದ ವಿವರಗಳನ್ನು ದಾಖಲಿಸುವ ವೀಡಿಯೊವೊಂದನ್ನು ತಮ್ಮ ದೇಶಕ್ಕೆ ಮರಳಿದ ಬಳಿಕ ಬಿಡುಗಡೆ ಮಾಡಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ವಿವರ ನೀಡಿದ್ದು, ಭಾರತದಲ್ಲಿ ಆಗಿರುವ ಕಹಿಘಟನೆಯನ್ನು ವಿವರಿಸಿದ್ದಾರೆ.

ವಿಡಿಯೊದ ಆರಂಭದಲ್ಲಿ ದಂಪತಿ “ಈ ಸುದೀರ್ಘ ಅಧ್ಯಾಯದ ನಂತರ ನಾವು ಈ ಅಹಿತಕರ ಹಂತವನ್ನು ದಾಟಿದ್ದೇವೆ. ಮತ್ತೆ ನಮ್ಮ ಪ್ರವಾಸ ಆರಂಭಿಸುತ್ತೇವೆ. ಆದರೆ ನಮಗಿದು ಮರುಹುಟ್ಟು. ನಾವು ಇದುವರೆಗೆ ಪಡೆದ ಈ ವಿರಾಮಕ್ಕೆ ಕಾರಣವಿದೆ ಎಂದು ಹೇಳಿ ಭಾರತದಲ್ಲಿ ಆದ ಘಟನೆಗಳನ್ನು ವಿವರಿಸಿದ್ದಾರೆ. ಅಲ್ಲದೆ, ಇಂದಿನಿಂದ ನಾವು ವಾರಕ್ಕೊಮ್ಮೆ ನಮ್ಮ ವೀಡಿಯೊಗಳನ್ನು ಪೋಸ್ಟ್ ಮಾಡುವುದನ್ನು ಮುಂದುವರಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಅವರಿಬ್ಬರೂ ಯೂಟ್ಯೂಬರ್​ಗಳಾಗಿದ್ದು ಬೈಕ್​ ಮೂಲಕ ಹಲವು ದೇಶಗಳನ್ನು ಸುತ್ತುತ್ತಿರುತ್ತಾರೆ.

ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳದಲ್ಲಿದ್ದ ವೇಳೆ ಚಿತ್ರೀಕರಿಸಿದ ವೀಡಿಯೊ ಬಹಿರಂಗಪಡಿಸಿದ್ದಾರೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

ದಂಪತಿ ಅತ್ಯಾಚಾರ ಮಾಡಿದವರಲ್ಲಿ ಒಬ್ಬನ ಗುರುತನ್ನು ಬಹಿರಂಗಪಡಿಸಿದ್ದಾರೆ. ಮಹಿಳೆ ಕಡಲೆಕಾಯಿ ತಿನ್ನುತ್ತಿದ್ದಾಗ ಆ ವ್ಯಕ್ತಿ ಮಾತನಾಡಿಸಿದ್ದ. ಅಲ್ಲದೆ ಅವರ ಜತೆ ಅನುಚಿತವಾಗಿ ವರ್ತಿಸಿದ್ದ. ಬಳಿಕ ದಂಪತಿ ಆ ಪ್ರದೇಶವನ್ನು ತೊರೆದು ಕೆಲವು ಗಂಟೆಗಳ ನಂತರ ತಮ್ಮ ಕ್ಯಾಂಪ್​ಗೆ ಮರಳಿದ್ದರು. ಅವರು ತಂಗಿದ್ದ ಜಾಗ ನಿರ್ಜನವಾಗಿತ್ತು. ಆ ಬಳಿಕ ಅವರು ‘ತಮ್ಮ ಜೀವನದ ಭಯಾನಕ 3 ಗಂಟೆಗಳನ್ನು’ ನೆನಪಿಸಿಕೊಂಡಿದ್ದಾರೆ. “ರಾತ್ರಿ 8 ಗಂಟೆಗೆ ಪ್ರಾರಂಭವಾದ ತೊಂದರೆ ರಾತ್ರಿ 11 ಗಂಟೆಗೆ ಕೊನೆಗೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

“ನಾನು ಏನು ಮಾಡಬೇಕೆಂದು ಆ ವೇಳೆ ನನಗೆ ತಿಳಿಯಲಿಲ್ಲ. ಪತ್ನಿ ಪೊದೆಯ ಮಧ್ಯೆ ಬಿದ್ದಿದ್ದಳು. ನಾನು ಎದ್ದು ಅವಳ ಬಳಿ ಓಡಿದೆ ಎಂದು ಪತಿ ವಿಡಿಯೊದಲ್ಲಿ ಹೇಳಿದ್ದಾರೆ. ನಂತರ ಇಬ್ಬರೂ ಆಸ್ಪತ್ರೆಗೆ ತೆರಳಿದೆವು ಏಳು ಜನರು ಅವಳ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದರು. ಅವರು ಅವಳನ್ನು ಹೊಡೆದಿದ್ದರು.. ಅವರು ನನಗೂ ಹೆಲ್ಮೆಟ್​ನಿಂದ ಹಲವು ಬಾರಿ ಹೊಡಿದಿದ್ದಾರೆ. ಕಲ್ಲುಗಳಿಂದ ಹಲ್ಲೆ ನಡೆಸಿದರು” ಎಂದು ಸಂತ್ರಸ್ತೆಯ ಪತಿ ಹೇಳಿದ್ದಾರೆ.

ನಂತರ ಅವರು ಪೊಲೀಸ್ ರಕ್ಷಣೆ ಪಡೆದು ಮೂರು ದಿನಗಳ ಕಾಲ ಇದ್ದರು. ನಾವು ಮುಂದುವರಿಯಲಿದ್ದೇವೆ, ವಿಧಿ ನಮಗೆ ಎರಡನೇ ಅವಕಾಶವನ್ನು ನೀಡಿದೆ. ನಾವು ಸಾವನ್ನು ಹತ್ತಿರದಿಂದ ನೋಡಿದ್ದೇವೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಾರ್ಖಂಡ್ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಇದಲ್ಲದೆ, ಸಂತ್ರಸ್ತೆಯ ಪತಿಗೆ ಪೊಲೀಸರು 10 ಲಕ್ಷ ರೂ.ಗಳ ಪರಿಹಾರವನ್ನು ಸಹ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Moral policing: ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

VISTARANEWS.COM

on

Moral policing
Koo

ಚಿತ್ರದುರ್ಗ: ಜತೆಗೆ ಕೆಲಸ ಮಾಡುವ ಮುಸ್ಲಿಂ ಯುವತಿಯೊಬ್ಬಳನ್ನು ಬೈಕ್​ನಲ್ಲಿ ಡ್ರಾಪ್ ಮಾಡಿರುವುದನ್ನು ಆಕ್ಷೇಪಿಸಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್​ಗಿರಿ (Moral policing) ಪ್ರದರ್ಶಿಸಿದ ಪ್ರಕರಣ ಚಿತ್ರದುರ್ಗದಲ್ಲಿ ವರದಿಯಾಗಿದೆ. ಈ ಬಗ್ಗೆ ವಿರೋಧ ವ್ಯಕ್ತಗೊಂಡಿದ್ದು ನೈತಿಕ ಪೊಲೀಸ್​ಗಿರಿ ಪ್ರದರ್ಶಿಸಿದವರನ್ನು ಶಿಕ್ಷಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ.

ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

ಉಮೇಶ್ ನ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸತತವಾಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ತೆಲೆ, ಮರ್ಮಾಂಗ ಭಾಗಕ್ಕೆ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮೇಶ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ

ಕಾರ್ಪೋರೇಟರ್‌ ಮಗಳ ಕೊಲೆ; ಪ್ರೀತಿಸಲು ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಫಯಾಜ್‌!

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿಯೊಬ್ಬ ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ವೊಬ್ಬರ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿಯಾಗಿದ್ದಾಳೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ. ಫೈಜಲ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಿದ್ದಾರೆ.

Continue Reading
Advertisement
virat kohli
ಕ್ರೀಡೆ8 mins ago

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Pruthvi Ambaar new movie direction by Rathaavara Director
ಸಿನಿಮಾ11 mins ago

Pruthvi Ambaar: ʻದಿಯಾʼ ಹೀರೊಗೆ `ರಥಾವರʼ ಡೈರೆಕ್ಟರ್ ಆ್ಯಕ್ಷನ್ ಕಟ್!

Kantara Movie Rishab Shetty And Pragathi Shetty Met Mohanlal
ಸಿನಿಮಾ32 mins ago

Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

Solution For Pimple
ಆರೋಗ್ಯ36 mins ago

Solution For Pimples: ಈ ಆಹಾರಗಳ ಸಹವಾಸ ಬಿಡಿ; ಮೊಡವೆಯನ್ನು ದೂರವಿಡಿ!

indian navy chief of naval staff dinesh tripathi
ಪ್ರಮುಖ ಸುದ್ದಿ45 mins ago

Indian Navy: ನೌಕಾಪಡೆ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ

IPL 2024
ಕ್ರೀಡೆ49 mins ago

IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

Masaba Gupta, Satyadeep Misra expecting 1st child
ಸಿನಿಮಾ56 mins ago

Masaba Gupta: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನೀನಾ ಗುಪ್ತಾ ಮಗಳು ಮಸಾಬಾ!

Modi in Karnataka on April 20 Massive rallies in Chikkaballapura and Bengaluru
Lok Sabha Election 202457 mins ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

IPL 2024 Points Table
ಕ್ರೀಡೆ1 hour ago

IPL 2024 Points Table: 3ನೇ ಗೆಲುವು ಸಾಧಿಸಿದ ಬಳಿಕ ಮುಂಬೈಗೆ ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ?

open sump drowned
ಕ್ರೈಂ1 hour ago

Drowned: ನೀರಿನ ಸಂಪ್‌ನಲ್ಲಿ ಮುಳುಗಿ ತಾಯಿ- ಮಗು ಸಾವು, ಮುಚ್ಚಳ ಹಾಕದೆ ಬಿಟ್ಟಿದ್ದ ಮಾಲಿಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ5 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌