ಬೆಂಗಳೂರು: ಇತ್ತೀಚೆಗಂತೂ ಚಿತ್ರ-ವಿಚಿತ್ರದಲ್ಲಿ ಕ್ರೈಂಗಳು ನಡೆಯುತ್ತಿವೆ. ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ ಹಾಗೂ ವಿಡಿಯೊಗಳನ್ನು ಡಿಲೀಟ್ ಮಾಡಿಸಲೆಂದು ಪ್ರಿಯತಮೆಯೇ ರಾಬರಿ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮೀಯ ರೀತಿ ಪ್ರಿಯತಮೆಯೇ ಪ್ರಿಯಕರನ ಮೇಲೆ ರಾಬರಿ ಮಾಡಿಸಿ, ಟೆಕ್ಕಿ ಯುವತಿ ಸಿಕ್ಕಿಬಿದ್ದಿದ್ದಾಳೆ. ಬೆಂಗಳೂರಿನ ಬೆಳ್ಳಂದೂರು ಪೊಲೀಸರಿಂದ ಟೆಕ್ಕಿ ಶೃತಿ ಸೇರಿ ಮೂವರನ್ನು ಬಂಧಿಸಿದ್ದಾರೆ.
ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶೃತಿ ಭೇಟಿಗೆ ತೆರಳಿದ್ದ. ಭೇಟಿಯಾಗಿ ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದ ಅಪರಿಚಿತರು ವಂಶಿಕೃಷ್ಣರೆಡ್ಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಜಗಳ ತೆಗೆದು ಆತನ ಬಳಿಯಿದ್ದ ಮೊಬೈಲ್ ಕಸಿದಿದ್ದರು. ವಂಶಿ ಜತೆಯಲ್ಲಿಯೇ ಇದ್ದ ಶೃತಿಯ ಮೊಬೈಲ್ ಅನ್ನು ಕಸಿದುಕೊಂಡಿದ್ದರು. ಬಳಿಕ ದೂರು ಕೊಡುವುದು ಬೇಡ ಮೊಬೈಲ್ ಹೋದರೆ ಹೋಯಿತು ಎಂದು ಬಾಯ್‌ಫ್ರೆಂಡ್ ವಂಶಿ ಮುಂದೆ ಶೃತಿ ಡ್ರಾಮಾ ಮಾಡಿದ್ದಳು.
ಆದರೆ ಇಷ್ಟಕ್ಕೆ ಸುಮ್ಮನಾಗದ ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ತೆರಳಿ ಕಾರಿನ ನಂಬರ್ ಸಮೇತ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರಣೆ ನಡೆಸಿದಾಗ, ಶೃತಿಯದ್ದೆ ಇದೆಲ್ಲ ಪ್ಲ್ಯಾನ್ ಎಂದು ತಿಳಿಸಿದ್ದರು. ಬೈಕ್‌ಗೆ ಡಿಕ್ಕಿ ಹೊಡೆದು ಮೊಬೈಲ್ ಕಸಿದುಕೊಳ್ಳಲು ಹೇಳಿದ್ದು ಎಂದು ತಿಳಿಸಿದ್ದಾರೆ.
ಪ್ರಿಯತಮನಿಂದ ದೂರವಾಗಲು ತೀರ್ಮಾನಿಸಿದ್ದ ಶೃತಿ
ಇತ್ತೀಚೆಗೆ ಪ್ರಿಯತಮ ವಂಶಿಕೃಷ್ಣನಿಂದ ದೂರವಾಗಲು ಶೃತಿ ಯತ್ನಿಸ್ತಿದ್ದಳು. ಆದರೆ ವಂಶಿಕೃಷ್ಣನ ಮೊಬೈಲ್‌ನಲ್ಲಿ ಶೃತಿಯ ಫೋಟೊಗಳಿದ್ದವು. ನೇರವಾಗಿ ಹೇಳಿದರೆ ಎಲ್ಲಿ ವಂಶಿಕೃಷ್ಣ ವಿರೋಧ ವ್ಯಕ್ತಪಡಿಸುತ್ತಾನೋ ಎಂದು ತಿಳಿದ ಶೃತಿ ಮೊಬೈಲ್ ರಾಬರಿ ಮಾಡುವ ಖರ್ತನಾಕ್ ಪ್ಲ್ಯಾನ್ ಮಾಡಿದ್ದಳು. ಸದ್ಯ ಆರೋಪಿ ಟೆಕ್ಕಿ ಶೃತಿ ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ. ಬೆಳ್ಳಂದೂರು ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ