Site icon Vistara News

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Exit mobile version