ಆ.3ರಂದು ಬೆಂಗಳೂರಿನಲ್ಲಿ ಸಮಾನ ಸಂಸ್ಕಾರ ಕಾರ್ಯಾಗಾರ - Vistara News

ನೋಟಿಸ್ ಬೋರ್ಡ

ಆ.3ರಂದು ಬೆಂಗಳೂರಿನಲ್ಲಿ ಸಮಾನ ಸಂಸ್ಕಾರ ಕಾರ್ಯಾಗಾರ

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಹಿಂದು ಸಾದರ ಕ್ಷೇಮಾಭಿವೃದ್ಧಿ ಸಂಘದಲ್ಲಿ ಆ.3ರಂದು ‘ಸಮಾನ ಸಂಸ್ಕಾರ ಕಾರ್ಯಾಗಾರʼ ನಡೆಯಲಿದೆ.

VISTARANEWS.COM


on

Samana Samskara workshop
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸನಾತನ ಹಿಂದು ಸಮಾಜ ಪರಿಷತ್‌ ವತಿಯಿಂದ ಆಗಸ್ಟ್‌ 3ರಂದು ಬೆಳಗ್ಗೆ 10.30ಕ್ಕೆ ವ್ಯಕ್ತಿತ್ವದ ಪರಿಪೂರ್ಣ ವಿಕಸನಕ್ಕಾಗಿ ಮತ್ತು ವಿಶ್ವಮಾನವ ತತ್ವದ ಜಾಗೃತಿಗಾಗಿ ‘ಸಮಾನ ಸಂಸ್ಕಾರ ಕಾರ್ಯಾಗಾರʼ ವನ್ನು ನಗರದ ಮಹಾಲಕ್ಷ್ಮಿ ಲೇಔಟ್‌ನ ಹಿಂದು ಸಾದರ ಕ್ಷೇಮಾಭಿವೃದ್ಧಿ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ.

ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿ ಅವರು ದಿವ್ಯ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಲಿದ್ದಾರೆ. ವಿಸ್ತಾರ ನ್ಯೂಸ್‌ ಸಿಇಒ ಮತ್ತು ಪ್ರಧಾನ ಸಂಪಾದಕರಾದ ಹರಿಪ್ರಕಾಶ್‌ ಕೋಣೆಮನೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಭು ಅಕಾಡೆಮಿಯ ಡಾ. ಆರತಿ ವಿ.ಬಿ. ಅವರು ದಿಕ್ಸೂಚಿ ಭಾಷಣ ಮಾಡಿ, ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ.

ಇದನ್ನೂ ಓದಿ | ರಾಜ ಮಾರ್ಗ ಅಂಕಣ : ಇಡೀ ಭಾರತಕ್ಕೆ ರಾಮ ಮಂದಿರದ ಕನಸು ಹಂಚಿದ ಅಶೋಕ್‌ ಸಿಂಘಾಲ್

ಮುಖ್ಯ ಅತಿಥಿಗಳಾಗಿ ಶಾಸಕ ಹಾಗೂ ಚಾತುರ್ಮಾಸ್ಯ ಮಹೋತ್ಸವ ಸೇವಾ ಸಮಿತಿ ಗೌರವಾಧ್ಯಕ್ಷರಾದ ಕೆ.ಗೋಪಾಲಯ್ಯ, ಶಿಕ್ಷಣ ತಜ್ಞ ಎನ್.‌ ಸತ್ಯ ಪ್ರಕಾಶ್, ಹರಿಹರಪುರ ಶ್ರೀಮಠದ ಆಡಳಿತಾಧಿಕಾರಿ ಬಿ.ಎಸ್‌.ರವಿಶಂಕರ್‌, ಚಾತುರ್ಮಾಸ್ಯ ಮಹೋತ್ಸವ ಸೇವಾ ಸಮಿತಿ ಪ್ರಧಾನ ಸಂಚಾಲಕ ಡಾ. ಬಿ.ಎಸ್‌.ರಾಘವೇಂದ್ರ ಭಟ್‌ ಭಾಗವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Parking Restrictions: ಮೆಜೆಸ್ಟಿಕ್ ಸುತ್ತಮುತ್ತ ಪಾರ್ಕಿಂಗ್ ಮಾಡುವವರಿಗೆ ಶಾಕ್; ಈ ಸ್ಥಳಗಳಲ್ಲಿ ವಾಹನ ನಿಲ್ಲಿಸಿದರೆ ಭಾರಿ ದಂಡ!‌

Parking Restrictions: ಬೆಂಗಳೂರಿನ ಫ್ರೀಡಂ ಪಾರ್ಕ್‌ ಬಳಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಕಾಂಪ್ಲೆಕ್ಸ್‌ ಉದ್ಘಾಟನೆಯಾದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಗಾಂಧಿನಗರ, ಆನಂದ್ ರಾವ್ ಸರ್ಕಲ್ ಸುತ್ತಮುತ್ತ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.

VISTARANEWS.COM


on

Parking Restrictions
Koo

ಬೆಂಗಳೂರು: ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ (Parking Restrictions) ಮಾಡುತ್ತಿದ್ದವರಿಗೆ ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ಶಾಕ್ ನೀಡಿದೆ. ಫ್ರೀಡಂ ಪಾರ್ಕ್‌ನಲ್ಲಿ ಸ್ಮಾರ್ಟ್ ಪಾರ್ಕಿಂಗ್ ಕಾಂಪ್ಲೆಕ್ಸ್ ಉದ್ಘಾಟನೆಯಾದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಗಾಂಧಿನಗರ, ಆನಂದ್ ರಾವ್ ಸರ್ಕಲ್ ಸುತ್ತಮುತ್ತ ಪಾರ್ಕಿಂಗ್ ನಿಷೇಧಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದರೆ ಭಾರಿ ದಂಡ ವಿಧಿಸುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.

ಉಪ್ಪಾರಪೇಟೆ ಸಂಚಾರ ಠಾಣೆ ವ್ಯಾಪ್ತಿಗೆ ಸಂಬಂಧಿಸಿ ವಿವಿಧ ರಸ್ತೆಗಳಿಗೆ ಹೊರಡಿಸಿರುವ ವಾಹನ ನಿಲುಗಡೆ ನಿಷೇಧ ಪ್ರದೇಶಗಳನ್ನು ಮಾರ್ಪಡಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಆದೇಶ ಸಂಬಂಧ ಅಗತ್ಯ ಸೂಚನಾ ಫಲಕ ಅಳವಡಿಕೆ ಹಾಗೂ ಇತ್ಯಾದಿ ಕ್ರಮಕ್ಕೆ ಅವರು ಸೂಚನೆ ನೀಡಿದ್ದು, ಯಾವ ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ ಹಾಗೂ ಯಾವ ಸ್ಥಳಗಳಲ್ಲಿ ವಾಹನ ನಿಲ್ಲಿಸಬಹುದು ಎಂಬ ವಿವರ ಇಲ್ಲಿದೆ.

ವಾಹನ ನಿಲುಗಡೆ ನಿಷೇಧ ರಸ್ತೆಗಳು

ಇದನ್ನೂ ಓದಿ | Job Recruitment: ಮೈಸೂರು ಮಹಾನಗರ ಪಾಲಿಕೆ; ಗ್ರೂಪ್​ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading

ಕರ್ನಾಟಕ

KAS Exam: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಪರೀಕ್ಷೆ ಬರೆಯಲು ಒಂದು ಬಾರಿ ಹೆಚ್ಚುವರಿ ಅವಕಾಶ

KAS Exam: 2023-24ನೇ ಸಾಲಿನ ಕೆಎಎಸ್ ಪರೀಕ್ಷೆ ಬರೆಯಲು ಈಗಾಗಲೇ ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿತ್ತು. ಆದರೆ, ಇದೀಗ 2017-18 ನೇ ಸಾಲಿನ ಕೆಎಎಸ್‌ ಪರೀಕ್ಷೆ ಬರೆದಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ಹೆಚ್ಚುವರಿ ವಿಶೇಷ ಅವಕಾಶ ನೀಡಲಾಗಿದೆ.

VISTARANEWS.COM


on

KAS Exam
Koo

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ಕೆಪಿಎಸ್‌ಸಿ ಗುಡ್‌ ನ್ಯೂಸ್‌ (Job News) ನೀಡಿದೆ. 2023-24 ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (KAS Exam) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ, ರಾಜ್ಯ ಸರ್ಕಾರವು 2023-24ನೇ ಸಾಲಿಗೆ ಈಗಾಗಲೇ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದೆ. ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೆ ಹೆಚ್ಚುವರಿ ವಿಶೇಷ ಅವಕಾಶ ನೀಡುವಂತೆ ಕೋರಿದ್ದಾರೆ.

ಈ ಅಂಶಗಳನ್ನು ಸರ್ಕಾರವು ಪರಿಶೀಲಿಸಿ 2023-24 ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 26ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲು ತೀರ್ಮಾನಿಸಿದೆ ಎಂದು ತಿಳಿಸಿದೆ.

ಕೆಎಎಸ್‌ ಸೇರಿ ಇತರ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಜುಲೈ 21ರಂದು ನಡೆಸಲಾಗುವುದು ಎಂದು ಈಗಾಗಲೇ ಕೆಪಿಎಸ್‌ಸಿ ತಿಳಿಸಿದೆ. ಅಭ್ಯರ್ಥಿಗಳ ಮನವಿ ಮೇರೆಗೆ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು.

ಇದನ್ನೂ ಓದಿ | Job Recruitment: ಎಚ್‌ಎಎಲ್‌ನಲ್ಲಿ ಉದ್ಯೋಗ; ನಾಳೆಯೇ ಕೊನೆಯ ದಿನಾಂಕ

Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

Job Recruitment

ಬೆಂಗಳೂರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಬೆಂಗಳೂರು (bengaluru) ಮೆಟ್ರೋ ರೈಲು (metro train) ಕಾರ್ಪೋರೇಷನ್ ಲಿಮಿಟೆಡ್ (Bengaluru Metro Rail Corporation Limited)​ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 69 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಕುರಿತು ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಅಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ. ಹುದ್ದೆಯ ಕುರಿತು ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆಯ ವಿವರ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನ ಒಟ್ಟು 69 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾಸಿಕ 35,000- 82,660 ರೂ. ಸಂಬಳ ನೀಡಲಾಗುತ್ತದೆ.

ಅರ್ಹತೆ ಏನು?

ಮೆಟ್ರಿಕ್ಯುಲೇಷನ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಟೆಲಿಕಮ್ಯುನಿಕೇಷನ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2024ರ ಜೂನ್ 14ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ

ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಸೈಕೋಮೆಟ್ರಿಕ್ ಟೆಸ್ಟ್ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ ಬಳಿಕ ಸೂಕ್ತವೆನಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಪ್ರಕ್ರಿಯೆ

ಆಸಕ್ತ ಅಭ್ಯರ್ಥಿಗಳು 2024ರ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು- 560027 ಇವರಿಗೆ ಸಲ್ಲಿಸಬೇಕು. ಆನ್ ;ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://recruitr.bmrc.co.in/frminstructions.aspx ಈ ಲಿಂಕ್ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

Continue Reading

ಬೆಂಗಳೂರು

Bengaluru Power Cut: ಜೂನ್‌ 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಇರಲ್ಲ

Bengaluru Power Cut: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಸ್ಕಾಂ ಬೆಂಗಳೂರು ಪೂರ್ವ ಭಾಗದ ವ್ಯಾಪ್ತಿಯಲ್ಲಿ ಜೂನ್‌ 20ರಂದು ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

VISTARANEWS.COM


on

Bengaluru Power Cut
Koo

ಬೆಂಗಳೂರು: ‘66/11ಕೆ.ವಿ ಎಚ್.ಬಿ.ಆರ್’ ಸ್ಟೇಷನ್ ಮತ್ತು 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಸ್ಕಾಂ ಬೆಂಗಳೂರು ಪೂರ್ವ ಭಾಗದ (Bengaluru Power Cut) ವ್ಯಾಪ್ತಿಯಲ್ಲಿ ಜೂನ್‌ 20ರಂದು ವಿದ್ಯುತ್‌ ವ್ಯತ್ಯಯ (Power outage) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಎಚ್.ಬಿ.ಆರ್’ ಸ್ಟೇಷನ್‌ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

‘66/11ಕೆ.ವಿ ಎಚ್.ಬಿ.ಆರ್’ ಸ್ಟೇಷನ್‌ನಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 10:30ರಿಂದ 4 ಗಂಟೆಯವರೆಗೆ ಎಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್‌ ಕಾಲೋನಿ, ಎಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ.

ಎಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಎಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಎಚ್.ಆರ್.ಬಿ.ಆರ್. 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ ಸ್ಟ್ರೀಟ್, ಎ.ಕೆ.ಕಾಲೋನಿ, ಎಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾರ‍್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ., ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡ್‌ ಭಾಗದಲ್ಲಿ ವಿದ್ಯುತ್‌ ಕಡಿತವಾಗಲಿದೆ.

ಇದನ್ನೂ ಓದಿ | PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

ಆಸ್ಟಿನ್ ಟೌನ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸ್ಥಳಗಳು

66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿದ ಮಧ್ಯಾಹ್ನ 03 ಗಂಟೆಯವರೆಗೆ ರಿಚ್ಮಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟ್‌ಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ ರಸ್ತೆ, ವಿಜಯ ಬ್ಯಾಂಕ್, ಬ್ರಿಗೇಡ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಟಾಟಾ ಲೇನ್, ಉದಯ ಟಿವಿ, ಐಟಿಸಿ, ಫೋರ್ ಸೀಸನ್ ಅಪಾರ್ಟ್‌ಮೆಂಟ್, ಕೆಎಸ್‌ಆರ್‌ಪಿ, ರಿಚ್‌ಮಂಡ್ ರಸ್ತೆ, ರತ್ನ ಅವೆನ್ಯೂ, ಹೇಯ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್‌ ರಸ್ತೆ, ಲ್ಯಾವೆಲ್ಲೆ ರಸ್ತೆ, ಬ್ರಿಗೇಡ್ ರಸ್ತೆ, ವಿಟ್ಠಲ್ ಮಲ್ಯ ರಸ್ತೆ, ಫುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ಶಾಪರ್ ಸ್ಟಾಪ್, ಮ್ಯಾಗ್ರತ್ ರಸ್ತೆ, ಆಲ್ಬರ್ಟ್‌ ಸ್ಟ್ರೀಟ್, ಕಾನ್ವೆಂಟ್ ರಸ್ತೆ, ರಿಚ್ಮಂಡ್ ಸರ್ಕಲ್, ಎಂಬಸ್ಸಿ ಕಚೇರಿ, ಕಮಿಷನರೇಟ್ ರಸ್ತೆ, ಬ್ರಂಟನ್ ರಸ್ತೆ, ಗರುಡಾ ಮಾಲ್, ಅಶೋಕನಗರ, ಪೀರನ್, ಮಾರ್ಕ್ಹಮ್ ರಸ್ತೆ , ಬೋವೀ ಲೇನ್, ಮ್ಯೂಸಿಯಂ ರಸ್ತೆ, ಮದ್ರಾಸ್ ಬ್ಯಾಂಕ್ ರಸ್ತೆ ಮತ್ತು ಸುತ್ತಮುತ್ತಲಿನ ರಸ್ತೆ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಸಂಬಂಧಿತ ಯಾವುದೇ ದೂರಿಗಾಗಿ ಗ್ರಾಹಕರು ಬೆಸ್ಕಾಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸಬಹುದು ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ಕರ್ನಾಟಕ

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Govt Employees: ರೈತರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

VISTARANEWS.COM


on

Govt Employees
Koo

ಬೆಂಗಳೂರು: ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು (Govt Employees) ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಚೇರಿಗಳಿಗೆ ಆಗಮಿಸುವ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಅವರು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕವು ಕೃಷಿ ಪ್ರಧಾನವಾದ ರಾಜ್ಯವಾಗಿದ್ದು, ಸಾಮಾನ್ಯವಾಗಿ ಕೃಷಿಕರು ಸೋಮವಾರದ ದಿನದಂದು ತುಸುಮಟ್ಟಿಗೆ ಕೃಷಿ ಚಟುವಟಿಕೆಗಳಿಗೆ ಬಿಡುವು ನೀಡಿ, ಸಂತೆ, ಪೇಟೆ ಕೆಲಸಗಳು ಹಾಗೂ ಕಚೇರಿಗಳಿಗೆ ತಮ್ಮ ಕೆಲಸಗಳಿಗಾಗಿ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ವಾಡಿಕೆಯಾಗಿದೆ.

ಈ ಹಿಂದೆ, ಪ್ರತಿ ಸೋಮವಾರಗಳಂದು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಾದಿಯಾಗಿ ಎಲ್ಲರೂ ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿದ್ದು, ಜನರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ, ಕೃಷಿಯೇತರ ಹಿನ್ನೆಲೆಯಿಂದ ಅಧಿಕಾರಿಗಳು, ನೌಕರರು ಸರ್ಕಾರಿ ಸೇವೆಗೆ ಬರುವ ಪ್ರಮಾಣ ಹೆಚ್ಚಿದ ಮೇಲೆ ಈ ಪದ್ಧತಿಯಲ್ಲಿ ಸ್ವಲ್ಪ ಮಟ್ಟಿಗೆ ಏರು ಪೇರಾಗಿದೆ. ಆದ್ದರಿಂದ, ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಎಲ್‌ಸಿ ಅಡಗೂರು ಎಚ್.ವಿಶ್ವನಾಥ್ ಮನವಿ ಕೋರಿದ್ದರು. ಈ ಬಗ್ಗೆ ಸಕಾರಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕ್ರಮವಹಿಸಲು ಸೂಚನೆ ನೀಡಿದ್ದಾರೆ.

ಸಾರಿಗೆ ನಿಗಮಕ್ಕೂ ಅನ್ವಯ

ಪ್ರತಿ ಸೋಮವಾರಗಳಂದು ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂಬ ರಾಜ್ಯ ಸರ್ಕಾರ ಸೂಚನೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಕ್ಕೂ ಅನ್ವಯವಾಗಿದೆ. ನಿಗಮ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ತುರ್ತು ಕಾರ್ಯಗಳನ್ನು ಹೊರತುಪಡಿಸಿ. ಪ್ರತಿ ಸೋಮವಾರಗಳಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಸೇವೆ ಒದಗಿಸಬೇಕು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸುತ್ತೋಲೆ ಹೊರಡಿಸಿದ್ದಾರೆ.

Continue Reading
Advertisement
Actor Darshan
ಕರ್ನಾಟಕ24 seconds ago

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Swamji Murder
ಪ್ರಮುಖ ಸುದ್ದಿ16 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ23 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್40 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ47 mins ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Job Alert
ಉದ್ಯೋಗ54 mins ago

Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

ITMS Corridor
Latest1 hour ago

Mysore News in Kannada: ಬೆಂಗಳೂರು-ಮೈಸೂರು ಸಂಚಾರ ನಿಯಂತ್ರಣ ಜು.1ರಿಂದ ಸಂಪೂರ್ಣ ಹೈಟೆಕ್‌

DCM D K Shivakumar statement about new advertising policy
ಕರ್ನಾಟಕ1 hour ago

DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

2nd Puc Exam 3
ಶಿಕ್ಷಣ1 hour ago

2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

Actor darshan Satish Reddy On Darshan Case
ರಾಜಕೀಯ1 hour ago

Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌