Site icon Vistara News

ಜೈನ್ ‘ಸ್ಕೂಲ್ ಆಫ್ ಸೈನ್ಸಸ್‌’ನಲ್ಲಿ ಯಶಸ್ವಿಯಾಗಿ ನೆರವೇರಿದ SciCon-2024; 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

Jain (Deemed-to-be University)

ಬೆಂಗಳೂರು: ಜೈನ್ (ಡೀಮ್ಡ್-ಟು-ಬಿ ಯೂನಿವರ್ಸಿಟಿ)ಯ ಸ್ಕೂಲ್ ಆಫ್ ಸೈನ್ಸಸ್‌ನ ವಿಜ್ಞಾನ ವೇದಿಕೆ-ನೂಕ್ಲಿಯಸ್ ಮತ್ತು ನಾಲೆಡ್ಜಿಯಮ್ ಅಕಾಡೆಮಿಯ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಿದ್ದ SciCon-2024 ಕಾರ್ಯಕ್ರಮವು ನಗರದ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಉತ್ಸಾಹದ ಭಾಗವಹಿಸುವಿಕೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.

ಜೈನ್ (ಡೀಮ್ಡ್-ಟು-ಬಿ ಯೂನಿವರ್ಸಿಟಿ) ಸ್ಕೂಲ್ ಆಫ್ ಸೈನ್ಸಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ವೈಜ್ಞಾನಿಕ ಪ್ರತಿಭೆ ಮತ್ತು ನವೀನ ಯೋಜನೆಗಳನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಾಯತ್ತ ಸಂಸ್ಥೆಯಿಂದ ಗುರುತಿಸಲ್ಪಟ್ಟಿದೆ.

ಕಾರ್ಯಕ್ರಮದಲ್ಲಿ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (ADE), DRDO ವಿಜ್ಞಾನಿಯಾದ ಸುಬ್ರಹ್ಮಣ್ಯ ಎನ್ ಅವರು, ತಮ್ಮ ಆಳವಾದ ಒಳನೋಟ, ಅನುಭವ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತಿಯೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸಿದರು. ಅವರ ಭಾಷಣವು ಅತ್ಯಾಧುನಿಕ ಪ್ರಗತಿಗಳು ಮತ್ತು ಸಂಶೋಧನೆಯ ಬಗ್ಗೆ ಒಂದು ಅನನ್ಯ ದೃಷ್ಟಿಕೋನವನ್ನು ಒದಗಿಸಿತು. ಜತೆಗೆ ವಿಜ್ಞಾನ ಮತ್ತು ನಾವೀನ್ಯತೆಯ ಕ್ಷೇತ್ರಗಳಲ್ಲಿ ಆಳವಾಗಿ ಅಧ್ಯಯನ ಮಾಡಲು ಪಾಲ್ಗೊಳ್ಳುವವರನ್ನು ಪ್ರೇರೇಪಿಸಿತು.

SciEnact ವಿಜ್ಞಾನ ನಾಟಕ ಸ್ಪರ್ಧೆಯಿಂದ ಸಂವಾದಾತ್ಮಕ Scientifico ಸೈನ್ಸ್ ಎಕ್ಸ್‌ಪೋ ಮತ್ತು ಬೌದ್ಧಿಕವಾಗಿ ಉತ್ತೇಜಿಸುವ SciBattle ಚರ್ಚಾ ಸ್ಪರ್ಧೆ ಮತ್ತು SciQuest ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ತಮ್ಮ ಪ್ರತಿಭೆ, ಜ್ಞಾನ ಮತ್ತು ವಿಜ್ಞಾನದ ಉತ್ಸಾಹವನ್ನು ಸ್ಪರ್ಧೆಗಳಲ್ಲಿ ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ 7 ರಿಂದ 12 ನೇ ತರಗತಿ ಮತ್ತು UG/PG ಹಂತದವರೆಗಿನ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.

ಇದನ್ನೂ ಓದಿ | Scholarships: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಎಲ್‌ಐಸಿ ಸ್ಕಾಲರ್‌ಶಿಪ್‌ಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು. ಕಾರ್ಯಕ್ರಮದುದ್ದಕ್ಕೂ ವಿದ್ಯಾರ್ಥಿಗಳು ಪ್ರದರ್ಶಿಸಿದ ಪ್ರತಿಭೆ ಮತ್ತು ಹೊಸತನಕ್ಕೆ ಈ ಸಮಾರಂಭ ಸಾಕ್ಷಿಯಾಯಿತು.

Exit mobile version