Self Harming: ನೇಣಿಗೆ ಶರಣಾದ ಕ್ಯಾಬ್‌ ಚಾಲಕ; ಮಗನ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದ ತಾಯಿ - Vistara News

ಬೆಂಗಳೂರು

Self Harming: ನೇಣಿಗೆ ಶರಣಾದ ಕ್ಯಾಬ್‌ ಚಾಲಕ; ಮಗನ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದ ತಾಯಿ

Bengaluru News : ರಾಜಧಾನಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ನಡೆದಿದೆ. ಭಾನುವಾರ ಕ್ಯಾಬ್‌ ಚಾಲಕನೊಬ್ಬ (Cab Driver) ಆತ್ಮಹತ್ಯೆಗೆ (Self Harming) ಶರಣಾಗಿದ್ದ. ಮಗನ ಶವಕೊಂಡು ಆಘಾತಕ್ಕೆ ಒಳಗಾದ ತಾಯಿ ಕಣ್ಣೀರುಡುತ್ತಲೇ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆ ಮಹಿಳೆ ಭಾನುವಾರ ಅಂತ ಕೊಂಚ ತಡವಾಗಿಯೇ ಎದ್ದಿದ್ದರು. ಬಿಸಿ ಬಿಸಿ ಕಾಫಿ ಮಾಡಿಕೊಂಡು ಮಗನಿಗೆ ಕೊಡಲು ಹೋದಾಕೆಗೆ ಬರಸಿಡಿಲು ಬಡಿದಂತಾಗಿತ್ತು. ಯಾಕೆಂದರೆ ಬಾಳಿ ಬದುಕಬೇಕಿದ್ದ ಮಗ ಫ್ಯಾನಿಗೆ ಕೊರಳೊಡ್ಡಿದ. ಫ್ಯಾನಿನಲ್ಲಿ ನೇತಾಡುತ್ತಿದ್ದ ಮಗನ ಶವ ಕಂಡೊಡನೇ ಹೌಹಾರಿದ್ದರು. ಚೀರಾಡುತ್ತಾ ಅಕ್ಕ-ಪಕ್ಕದವರನ್ನು ಕರೆದಿದ್ದರು. ಆದರೆ ಮಗನ ಶವ ಕಂಡು ಕಣ್ಣೀರುಡುತ್ತಿದ್ದ ಆ ತಾಯಿ ಆ ನೋವಿನಲ್ಲೇ ಜೀವ ಬಿಟ್ಟಿದ್ದಾರೆ. ಈ ಮನಕಲಕುವ ಘಟನೆ ಬೆಂಗಳೂರಿನಲ್ಲಿ (Self Harming) ನಡೆದಿದೆ.

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನೊರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅರುಣ್ ಕುಮಾರ್ ಮೃತ ದುರ್ದೈವಿ. ಬೆಂಗಳೂರಿನ ಕಾವೇರಿಪುರದ ನಿವಾಸಿಯಾದ ಅರುಣ್‌ ಕುಮಾರ್‌ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರುಣ್ ಕುಮಾರ್ ಭಾನುವಾರ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಮಗನ ಅಗಲಿಕೆಯಿಂದ ನೊಂದಿದ್ದ ತಾಯಿ ಮಗನ ಶವದ ಮುಂದೆ ಕಣ್ಣೀರಿಡುತ್ತಾ ಗೋಳಾಡುತ್ತಿದ್ದರು. ಮಗನ ನೋಡುತ್ತಲೆ ತಾಯಿಯು ಕೊನೆಯುಸಿರೆಳೆದಿದ್ದಾರೆ. ಅರುಣ್ ಕುಮಾರ್ ತಾಯಿ ಸರಸ್ವತಿ (78) ಮೃತಪಟ್ಟಿದ್ದಾರೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಅರುಣ್‌ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನೀರವ ಮೌನ ಆವರಿಸಿದೆ.

ಇದನ್ನೂ ಓದಿ: Physical Abuse : ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್; ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

ಆನೇಕಲ್: ಪ್ರೀತಿಗೆ ಪೋಷಕರ (Love Case) ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಪ್ರಿಯಕರನ ಮನೆಯ ಫ್ಯಾನಿಗೆ ಇಬ್ಬರು ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ.

ಗೌತಾಲಂ ಗ್ರಾಮದ ನರಸಿಂಹಮೂರ್ತಿ (22), ಬಾಚಪ್ಪನಟ್ಟಿ ಗ್ರಾಮದ ಯುವಶ್ರೀ (17) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ನರಸಿಂಹಮೂರ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಯುವಶ್ರೀ ಕೃಷ್ಣಗಿರಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.

Love case
Love case

ಕೆಲ ವರ್ಷಗಳಿಂದ ನರಸಿಂಹ ಮೂರ್ತಿ ಹಾಗೂ ಯುವಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿ ವಿಚಾರ ತಿಳಿದ ಯುವತಿ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಾತ್ರವಲ್ಲದೇ ಕಳೆದ ತಿಂಗಳು ಯುವತಿ ಪೋಷಕರಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನರಸಿಂಹಮೂರ್ತಿ ಯುವಶ್ರೀಗೆ ಕಿರುಕುಳ ನೀಡುತ್ತಿದ್ದಾನೆಂದು ದೂರು ಕೊಟ್ಟಿದ್ದರು.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವತಿ ಪೋಷಕರು ಪ್ರಕರಣ ದಾಖಲಿಸಿದ್ದರು. ಪೊಲೀಸರು ನರಸಿಂಹಮೂರ್ತಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಕಳೆದ ಹತ್ತು‌ ದಿನಗಳ ಹಿಂದೆಯಷ್ಟೇ ನರಸಿಂಹಮೂರ್ತಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ.

ಜೈಲಿನಿಂದ ಹೊರಬಂದ ಬಳಿಕ ಯುವತಿ ಜತೆ ನರಸಿಂಹಮೂರ್ತಿ ನಿರಂತರ ಫೋನ್‌ ಸಂಪರ್ಕ ಬೆಳೆಸಿದ್ದ. ನಿನ್ನೆ ಶನಿವಾರ ಸಂಜೆ ಕಾಲೇಜು ಮುಗಿಸಿ ನರಸಿಂಹಮೂರ್ತಿ ಮನೆಗೆ ಹೋಗಿದ್ದ ಯುವಶ್ರೀ ಇಬ್ಬರು ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಪ್ರೀತಿಗೆ ಯುವತಿ ಪೋಷಕರು ವಿರೋಧದಿಂದ ಬೇಸತ್ತ ಇವರಿಬ್ಬರು ಬಾಗಿಲು ಹಾಕಿಕೊಂಡು ಮನೆಯೊಳಗೆ ಇಬ್ಬರು ಫ್ಯಾನಿಗೆ ನೇಣಿಗೆ ಶರಣಾಗಿದ್ದಾರೆ.

ಮನೆಯ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡ ಯುವಕನ ಪೋಷಕರು, ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಡೆಂಕಣಿಕೋಟೆ ಡಿವೈಎಸ್‌ಪಿ ಶಾಂತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಡೆಂಕಣಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

UGCET 2024 : ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್‌ಗಳ ಅಣುಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

UGCET 2024 : ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸುಗಳ ಅಣುಕು ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಿದೆ. ನಿಗದಿಯಂತೆ ಮೊ‌ದಲ ಸುತ್ತಿನ‌ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಸೆ.1ರಂದು ಪ್ರಕಟಿಸಲಾಗುವುದು

VISTARANEWS.COM


on

By

UGCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ (UGCET 2024) ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಎರಡನೇ ಅಣಕು ಸೀಟು‌ ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ಸಂಜೆ ಪ್ರಕಟಿಸಿದೆ.

ಕೆಇಎ ವೆಬ್ ಸೈಟ್‌ನಲ್ಲಿ ಅಣಕು ಫಲಿತಾಂಶ ಲಭ್ಯ‌ ಇದ್ದು, ಅದನ್ನು ನೋಡಿದ ನಂತರ ಆಗಸ್ಟ್ 27ರ ಬೆಳಗ್ಗೆ 11ರವರೆಗೆ ಅಭ್ಯರ್ಥಿಗಳು ತಮ್ಮ‌ ಇಚ್ಛೆಯನುಸಾರ ಕಾಲೇಜು/ಕೋರ್ಸ್ ಗಳನ್ನು ಅಧಿಕೃತ ಮೊದಲ ಸುತ್ತಿನ ಆಯ್ಕೆಗೆ ಬದಲಿಸಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿಗದಿಯಂತೆ ಮೊ‌ದಲ ಸುತ್ತಿನ‌ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಸೆ.1ರಂದು ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದ್ದಾರೆ. ಆಗಸ್ಟ್ 22ರ ಸಂಜೆ 5ಗಂಟೆವರೆಗೆ ಆದ್ಯತಾ ಕ್ರಮದಲ್ಲಿ ದಾಖಲಿಸಿರುವ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ, ಮೆರಿಟ್ ಮತ್ತು ರೋಸ್ಟರ್ ಪದ್ಧತಿ ಅನುಸಾರ ಅಣಕು ಸೀಟು ಹಂಚಿಕೆಯನ್ನು ಮಾಡಲಾಗಿದೆ. ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ ಇತ್ಯಾದಿ ಕೋರ್ಸುಗಳ ಸೀಟು ಹಂಚಿಕೆಯನ್ನು ಮಾಡಲಾಗಿದೆ.

ಇದನ್ನೂ ಓದಿ: UGCET 2024: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ರಿಸ್ಟಲ್‌ ಅನೌನ್ಸ್‌; ಆಪ್ಶನ್ ಎಂಟ್ರಿಗೆ ಇವತ್ತೆ ಲಾಸ್ಟ್

ಇಲ್ಲಿಯವರೆಗೆ ಇಚ್ಚೆ / ಆಯ್ಕೆಗಳನ್ನು ದಾಖಲಿಸದೇ ಇರುವ ಅರ್ಹ ಅಭ್ಯರ್ಥಿಗಳು ಇಷ್ಟವಿದ್ದಲ್ಲಿ ಆ.27ರ ಬೆಳಗ್ಗೆ 11ರೊಳಗೆ ಮೊದಲನೆ ಸುತ್ತಿನ ಸೀಟು ಹಂಚಿಕೆಗೆ ಕಾಲೇಜು ಮತ್ತು ಕೋರ್ಸುಗಳ ಆಯ್ಕೆಗಾಗಿ ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು ಎಂದರು.

ಅಭ್ಯರ್ಥಿಗಳು ಕೇಳಬಹುದಾದ ಪುನರಾವರ್ತಿತ ಪ್ರಶ್ನೆಗಳನ್ನು ಕ್ರೋಡೀಕರಿಸಿ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಉತ್ತರಗಳನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಅದನ್ನು ಓದಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ ಭೇಟಿ ನೀಡಬಹುದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಶಿವಮೊಗ್ಗದಲ್ಲಿ ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ; ನಾಳೆಗೂ ಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Rain : ಶಿವಮೊಗ್ಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮನೆಯೊಂದು ಕುಸಿದು ಬಿದ್ದಿದೆ. ಇತ್ತ ಚಿತ್ರದುರ್ಗದ ಮಳೆ ಹಾನಿ ಪ್ರದೇಶಕ್ಕೆ ಶಾಸಕ ವೀರೇಂದ್ರ ಪಪ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

By

Karnataka Rain House collapses due to heavy rains in Shivamogga
Koo

ಶಿವಮೊಗ್ಗ: ನಿನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಗೆ (Karnataka rain) ವಾಸದ ಮನೆಯೊಂದು ಕುಸಿದು ಬಿದ್ದಿದೆ. ಶಿವಮೊಗ್ಗದ ಮಿಳಘಟ್ಟದಲ್ಲಿ ಘಟನೆ ನಡೆದಿದೆ. ಕುಲುಶುಂಬಿ ಎನ್ನುವವರಿಗೆ ಸೇರಿದ ಮನೆ ಕುಸಿದ ಕಾರಣಕ್ಕೆ ಇಡೀ ಕುಟುಂಬ ಬೀದಿಗೆ ಬಿದ್ದಿದೆ.

ಮನೆ ಕುಸಿತದಿಂದ ಕುಲುಶುಂಬಿ ಕುಟುಂಬಸ್ಥರು ಸಂಕಷ್ಟಕ್ಕೆ ಸಿಲುಕಿದ್ದು, ಕಂಗಲಾಗಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರ್ಕಾರಕ್ಕೆ ಮನೆ ಕಟ್ಟಿಸಿಕೊಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಮನೆಯಿಲ್ಲದೆ ಇಡೀ ಕುಟುಂಬ ಬೀದಿಯಲ್ಲಿ ವಾಸ ಮಾಡುವಂತಾಗಿದೆ.

ಚಿತ್ರದುರ್ಗದಲ್ಲಿ ತುಕ್ಕು ಹಿಡಿದ ಬ್ಯಾರೇಜ್‌ ಗೇಟ್‌ಗಳು

ಬರದ ನಾಡಲ್ಲಿ ಸುರಿದ ಭರ್ಜರಿ ವರ್ಷಧಾರೆಯಿಂದಾಗಿ ಕೆರೆ ಕಟ್ಟೆ ಸಂಪೂರ್ಣ ಭರ್ತಿಯಾಗಿದೆ. ರೈತರ ಮೊಗದಲ್ಲಿ ಮಳೆರಾಯ ಮಂದಹಾಸ ಮೂಡಿಸಿದ್ದರೆ, ಮತ್ತೊಂದು ಕಡೆ ಬ್ಯಾರೇಜ್ ಗೇಟ್‌ಗಳು ರೈತರಲ್ಲಿ ಆತಂಕ ಮೂಡಿಸುತ್ತಿದೆ. ಚಿತ್ರದುರ್ಗದ ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕುಂತಿ& ಚಿಕ್ಕೋಬನಹಳ್ಳಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬ್ಯಾರೇಜ್ ಗೇಟ್‌ಗಳು ತುಕ್ಕು ಹಿಡಿಯುತ್ತಿವೆ.

ಬ್ಯಾರೇಜ್ ಗೇಟ್ ತುಕ್ಕು ಹಿಡಿದು ಅಪಾರ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಚಿನ್ನ ಹಗರಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಬ್ಯಾರೇಜ್ ಗೇಟ್‌ನಿಂದ ನೀರು ಸೋರಿಕೆ ಆಗುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ರೈತರ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ; ಓವರ್‌ ಸ್ಪೀಡ್‌ ಯಡವಟ್ಟು, ಪ್ರಾಣಕ್ಕೆ ತಂತು ಕುತ್ತು

ಮಳೆ ಹಾನಿ ಪ್ರದೇಶಕ್ಕೆ ಶಾಸಕ ವೀರೇಂದ್ರ ಪಪ್ಪಿ ಭೇಟಿ

ಮಳೆ ಹಾನಿ ಪ್ರದೇಶಕ್ಕೆ ಭಾನುವಾರ ಶಾಕ ವೀರೇಂದ್ರ ಪಪ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಓಬಣ್ಣನಹಳ್ಳಿ ಗ್ರಾಮದಲ್ಲಿ ಸತತ ಮಳೆಯಿಂದ ಪ್ರವಾಹ ಸ್ಥಿತಿ ಉಂಟಾಗಿತ್ತು. ಹೀಗಾಗಿ ಗ್ರಾಮಕ್ಕೆ ಭೇಟಿ ನೀಡಿ ಹಾನಿಗೊಂಡ ಪ್ರದೇಶದ ವೀಕ್ಷಣೆ ಮಾಡಿದರು. ಕೂಡಲೇ ಮೂಲಸೌಕರ್ಯ ನೀಡುವುದಾಗಿ ಭರವಸೆ ನೀಡಿದರು.

ಧಾರವಾಡದಲ್ಲಿ ಜಿಟಿಜಿಟಿ ಮಳೆ

ಧಾರವಾಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದ್ದು, ವಾತಾವರಣ ತಂಪಾಗಿದೆ. ತಂಪು‌ ವಾತಾವರಣದಿಂದ ಹೆಸರು, ಉದ್ದು ಹಾಗೂ ಇತರೆ ಬೆಳೆ ಬೆಳೆದ ರೈತರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ಕಟಾವಿಗೆ ಬಂದಿದ್ದ ಬೆಳೆಗಳು ಜಿಟಿಜಿಟಿ ಮಳೆಗೆ ಬೆಳೆಗಳು ಮೊಳಕೆ ಒಡೆಯುವ ಸಾಧ್ಯತೆ ಇದೆ. ಸುಮಾರು 60 ಸಾವಿರ ಹೆಕ್ಟೇರ್‌ನಲ್ಲಿ ಹೆಸರು, ಉದ್ದು ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದಾರೆ. ನವಲಗುಂದ ಭಾಗದಲ್ಲಿ ರೈತರು ಈಗಾಗಲೇ ಹೆಸರು ಬೆಳೆ ಕಟಾವ್ ಮಾಡಿದ್ದಾರೆ. ಧಾರವಾಡ ಹಾಗೂ ಅಳ್ನಾವರ ಭಾಗದಲ್ಲಿ ಬೆಳೆ ಇನ್ನು ಕಟಾವು ಆಗಬೇಗಬೇಕು. ಹೀಗಾಗಿ ಸರಿಯಾಗಿ ಸಮೀಕ್ಷೆ ಮಾಡಿ ಬೆಳೆ ವಿಮೆ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

ಆ.26ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ತಲುಪುವ ಸಾಧ್ಯತೆಯಿದೆ. ಇನ್ನೂ ಬೆಳಗಾವಿ ಜಿಲ್ಲೆಯ ಪ್ರತ್ಯೇಕವಾಗಿ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 40-50 ಕಿ.ಮೀ ಇರಲಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ಇರಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Basavaraj Bommai: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ: ಬೊಮ್ಮಾಯಿ ಕಿಡಿ

Basavaraj Bommai: ಸಂಕಷ್ಟದಲ್ಲಿರೋ ಜನತೆಗೆ ಸ್ಪಂದನೆ ಮಾಡದ ಸರ್ಕಾರ ರಾಜ್ಯದಲ್ಲಿದೆ. ಇಂತಹ ಸರ್ಕಾರ ಬೇಕೆ ಅನ್ನುವ ಪ್ರಶ್ನೆ ಉದ್ಭವವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

Basavaraj Bommai
Koo

ಹುಬ್ಬಳ್ಳಿ: ಕಾಂಗ್ರೆಸ್‌ನಲ್ಲಿ ಏನು ನಡೆಯುತ್ತಿದೆಯೋ ಅದು ಅವರ ಆಂತರಿಕ ವಿಚಾರ, ರಾಜ್ಯದಲ್ಲಿ ಏನು ನಡೆಯುತ್ತಿದೆ ಅನ್ನುವುದು ಮುಖ್ಯ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತೇ ಅನ್ನುವುದು ಅವರಿಗೆ ಬಿಟ್ಟದ್ದು. ವಿರೋಧ ಪಕ್ಷದ ಆರೋಪಗಳನ್ನು ನಿಭಾಯಿಸಲು ಸಿಎಂ ಸಭೆಗಳ ಮೇಲೆ ಸಭೆ ಮಾಡ್ತಿದಾರೆ. ಒಳ್ಳೆಯ ಆಡಳಿತ ನೀಡಲಿ ಅಂತ ಜನತೆ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟಿದೆ. ಸರ್ಕಾರದಲ್ಲಿ ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರಗಾಲ ಬಂದರೂ ಸರಿಯಾದ ಪರಿಹಾರ ಕೊಡುತ್ತಿಲ್ಲ. ಮುಳುಗಡೆಯಾದ ಪ್ರದೇಶಗಳಿಗೆ ಪರಿಹಾರ ಕೊಟ್ಟಿಲ್ಲ. ಒಂದು ವಿಡಿಯೋ ಕಾಲ್ ಬಿಟ್ಟರೆ ಬೇರೇನೂ ಮಾಡಿಲ್ಲ. ಸಂಕಷ್ಟದಲ್ಲಿರೋ ಜನತೆಗೆ ಸ್ಪಂದನೆ ಮಾಡದ ಸರ್ಕಾರ ರಾಜ್ಯದಲ್ಲಿದೆ. ಇಂತಹ ಸರ್ಕಾರ ಬೇಕೆ ಅನ್ನುವ ಪ್ರಶ್ನೆ ಉದ್ಭವವಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಬೆಂಬಲ ಇರುವ ಕುರಿತು ಕೇಳಿದ ಪ್ರಶ್ನೆಗೆ, ಹೈಕಮಾಂಡ್ ಶ್ರೀರಕ್ಷೆ ಎಲ್ಲಿವರೆಗೆ ಅನ್ನುವುದು ಅವರಿಗೇ ಬಿಟ್ಟ ವಿಚಾರ. ಒಂದು ವರದಿಯಲ್ಲಿ ಸಿಎಂಗೆ ರಕ್ಷೆ ಎನ್ನಲಾಗುತ್ತಿದೆ. ಮತ್ತೊಂದು ವರದಿಯಲ್ಲಿ ಪ್ರಾದೇಶಿಕ ಪಕ್ಷದ ರೀತಿಯಲ್ಲಿ ನಡೆದುಕೊಳ್ಳಲಾಗಲ್ಲ ಎನ್ನಲಾಗುತ್ತಿದೆ ಎಂದಿರುವುದಾಗಿ ಹೇಳಿದರು.

KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಂಸರಾಜ್ ಭಾರದ್ವಾಜ್ ಒಬ್ಬ ರಾಜಕಾರಣಿ ಗವರ್ನರ್ ಆಗಿದ್ದರು. ಅವರು ರಾಜಕಾರಣ ಬಿಟ್ಟರೆ ಬೇರೇನು ಮಾಡಲಿಲ್ಲ. ದಿನ‌ ಬೆಳಗಾದರೆ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಂಡಿತು. ಅವತ್ತು ರಾಜ್ಯಪಾಲರ ಭಾಷೆ, ರಾಜ್ಯಪಾಲರ ನಿರ್ಧಾರ ಇವರಿಗೆ ಬೇಕಾಗಿತ್ತು. ಈಗ ಅದೇ ಪರಿಸ್ಥಿತಿ ಇವರಿಗೆ ಬಂದಾಗ ರಾಜ್ಯಪಾಲರ ವಿರುದ್ಧ ಮಾತನಾಡುತ್ತಿದ್ದಾರೆ. ಇದು ಸಂವಿಧಾನ ಮತ್ತು ರಾಜ್ಯಾಂಗದ ಪ್ರಶ್ನೆ ಇದೆ. ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಗಳು, ಆ ಸ್ಥಾನ ಬಹಳ ಮುಖ್ಯವಾದದ್ದು. ಅವರ ಕಾರ್ಯ ವೈಖರಿ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಹೇಳುವುದಕ್ಕೆ ರೀತಿ ನೀತಿ ಇದೆ. ಆ ರೀತಿ ನಡೆದುಕೊಂಡರೆ ರಾಜ್ಯ ಸರ್ಕಾರಕ್ಕೆ ಗೌರವ ಸಿಗುತ್ತದೆ. ರಾಜ್ಯಪಾಲರನ್ನು ಬೈಯುವುದರಿಂದ ಕಾಂಗ್ರೆಸ್ ಏನು ಲಾಭ ಆಗಲ್ಲ ಎಂದು ಹೇಳಿದರು.

ಅಹಿಂದ ಸಂಘಟನೆಯಿಂದ ರಾಜಭವನ ಚಲೋ ಕುರಿತ ಕೇಳಿದ ಪ್ರಶ್ನೆಗೆ ಇದೆಲ್ಲವೂ ಕಾಂಗ್ರೆಸ್ ಪ್ರೇರಿತ ಹೋರಾಟ ಎಂದರು.

ಇದನ್ನೂ ಓದಿ | Jindal Steels: ಬಿಜೆಪಿ ಸರ್ಕಾರವೇ ಜಿಂದಾಲ್ ಕಂಪನಿಗೆ ಭೂಮಿ ನೀಡಲು ತೀರ್ಮಾನಿಸಿತ್ತು: ಎಂ.ಬಿ. ಪಾಟೀಲ್

ಭರತ್ ಶಿಗ್ಗಾಂವಿಯಿಂದ ಸ್ಪರ್ಧಿಸಲ್ಲ

ಶಿಗ್ಗಾಂವಿ ಕ್ಷೇತ್ರದಿಂದ ಭರತ್ ಬೊಮ್ಮಾಯಿ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭರತ್ ಬೊಮ್ಮಾಯಿಗೆ ಶಿಗ್ಗಾಂವಿ ಟಿಕೆಟ್ ಕೇಳಿಲ್ಲ. ಶಿಗ್ಗಾಂವಿ ಸವಣೂರು ಕ್ಷೇತ್ರದ ಜನ ಭರತ್‌ಗೆ ಟಿಕೆಟ್ ಕೊಡಲು ಒತ್ತಡ ತಂದಿಲ್ಲ. ಜೋಶಿಯವರನ್ನು ಭೇಟಿಯಾಗಲು ಶಿಗ್ಗಾಂವಿ ಕ್ಷೇತ್ರದ ಜನ ಹೋಗಿದ್ದ ಉದ್ದೇಶವೇ ಬೇರೆ. ಆದರೆ ಅದು ಬೇರೆ ರೀತಿಯ ಪ್ರಚಾರವಾಗಿದೆ. ಪಕ್ಷಕ್ಕೆ ಕೆಲಸ ಮಾಡಿದ ನಿಷ್ಠರಿಗೆ ಟಿಕೆಟ್ ಕೊಡುವಂತೆ ಕೇಳಿದ್ದಾರೆ. ಕಷ್ಟದಲ್ಲಿ ಪಕ್ಷ ಕಟ್ಟಿದವರಿಗೆ ಟಿಕೆಟ್ ಕೊಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಜೋಶಿಯವರು ಭರತ್ ಹೆಸರು ಹೇಳಿದ್ದಾರೆ. ನಾನು ನನ್ನ ಮಗನಿಗೆ ಟಿಕೇಟ್ ಕೇಳಿಲ್ಲ. ನನ್ನ ಮಗ ಸ್ಪರ್ಧೆ ಮಾಡುವ ವಿಚಾರವಿಲ್ಲ ಎಂದು ಹೇಳಿದರು.

Continue Reading

ಕರ್ನಾಟಕ

Jindal Steels: ಬಿಜೆಪಿ ಸರ್ಕಾರವೇ ಜಿಂದಾಲ್ ಕಂಪನಿಗೆ ಭೂಮಿ ನೀಡಲು ತೀರ್ಮಾನಿಸಿತ್ತು: ಎಂ.ಬಿ. ಪಾಟೀಲ್

Jindal Steels: ಬಿಜೆಪಿ ಸರ್ಕಾರವೇ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿತ್ತು. ಅದರಂತೆ ಜಿಂದಾಲ್ ಕಂಪನಿಗೆ ಭೂಮಿ ನೀಡಲಾಗಿದೆ. ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ ಎಂದು ಸಚಿವ ಎಂ‌.ಬಿ. ಪಾಟೀಲ್ ತಿಳಿಸಿದ್ದಾರೆ.

VISTARANEWS.COM


on

Jindal Steels
Koo

ಬೆಂಗಳೂರು: ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ (Jindal Steels) 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ ಜಾರಿ ಮಾಡಲು ಮಾ.12ರಂದು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌.ಬಿ. ಪಾಟೀಲ್ ಭಾನುವಾರ ಸ್ಪಷ್ಟಪಡಿಸಿದರು.

ಜಿಂದಾಲ್‌ಗೆ ಭೂಮಿ ನೀಡಿರುವುದಕ್ಕೆ ವಿಪಕ್ಷಗಳಿಂದ ಆಕ್ಷೇಪ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವರು, ಈ ವಿಷಯದಲ್ಲಿ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರ ಆರೋಪ ನಿರಾಧಾರ. ಆಗೊಂದು ವೇಳೆ ಒಳ ಒಪ್ಪಂದ ಆಗಿದ್ದರೆ ಅದು ಅವರದ್ದೇ ಪಕ್ಷದ ಸರ್ಕಾರದ ಜತೆ ಆಗಿರಬೇಕು ಎಂದು ತಿರುಗೇಟು ನೀಡಿದರು.

ಯಡಿಯೂರಪ್ಪ ಸರ್ಕಾರದ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್‌ಗೆ ಹೋಯಿತು. ಬಳಿಕ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಅದರಂತೆ ನಮ್ಮ ಸರ್ಕಾರ ನಡೆದುಕೊಂಡಿದೆ ಎಂದು ವಿವರಿಸಿದರು.

ಇಷ್ಟಕ್ಕೂ ಜಿಂದಾಲ್ ಕಂಪನಿ ರಾಜ್ಯದಲ್ಲಿ 90 ಸಾವಿರ‌ ಕೋಟಿ ರೂ. ಹೂಡಿಕೆ‌ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ. ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ’ ಎಂದು ಎಚ್ಚರಿಸಿದರು.

ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ ನಮ್ಮ ಸರ್ಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿಯನ್ನೂ ಕೊಟ್ಟಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿ‌ಯೇ ಭೂಮಿ ದರ ನಿಗದಿಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರ್ಕಾರವು ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂಪಾಯಿಗೆ ಭಾರಿ ರಿಯಾಯಿತಿ ದರದಲ್ಲಿ ಕೊಟ್ಟಿದೆ. ಅದರ ನೈಜ ಬೆಲೆ ಅಂದು 187 ಕೋಟಿ ರೂಪಾಯಿ ಇತ್ತು. ಇದರಲ್ಲಿ 137 ಕೋಟಿ ರೂಪಾಯಿ ಮೇಲ್ನೋಟಕ್ಕೇ ನಷ್ಟವಾಗಿದೆ. ಈ ಹಣ ಇಲ್ಲಿಯವರೆಗೂ ಕೆಐಎಡಿಬಿಗೂ ಸಂದಾಯವಾಗಿಲ್ಲ. ಇದರ ಬಗ್ಗೆ ಬೆಲ್ಲದ ಅವರ ಜಾಣಮೌನ ಯಾಕೆ ಎಂದು ಪಾಟೀಲ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಉದ್ಯಮ ಸಂಸ್ಥೆಗಳಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದು,

Continue Reading
Advertisement
Gruha Lakshmi Scheme
ಕರ್ನಾಟಕ33 mins ago

Gruha Lakshmi Scheme: ಗೃಹಲಕ್ಷ್ಮೀ ದುಡ್ಡಿನಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿದ ಲಕ್ಷ್ಮಿ ಹೆಬ್ಬಾಳ್ಕರ್

crime news
ಪ್ರಮುಖ ಸುದ್ದಿ38 mins ago

Crime News : ತನ್ನನ್ನು ಬಿಟ್ಟು ಹೆಂಡತಿಗೆ ಹೆಚ್ಚು ಹಣ ಕೊಡುತ್ತಿ ದ್ದ ಪ್ರಿಯತಮನ ಮರ್ಮಾಂಗ ಕತ್ತರಿಸಿದ ಮಹಿಳೆ

UGCET 2024
ಬೆಂಗಳೂರು1 hour ago

UGCET 2024 : ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್‌ಗಳ ಅಣುಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

Actor Darshan
ಕರ್ನಾಟಕ1 hour ago

Actor Darshan: ದರ್ಶನ್‌ಗೆ ರಾಜಾತಿಥ್ಯ ನೋಡಿ ರೇಣುಕಾಸ್ವಾಮಿ ತಂದೆ ಕಣ್ಣೀರು; ಜೈಲು ರೆಸಾರ್ಟ್‌ ಆಗಬಾರ್ದು ಎಂದು ಕಿಡಿ

Karnataka Rain House collapses due to heavy rains in Shivamogga
ಮಳೆ2 hours ago

Karnataka Rain : ಶಿವಮೊಗ್ಗದಲ್ಲಿ ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ; ನಾಳೆಗೂ ಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Delhi News
ಪ್ರಮುಖ ಸುದ್ದಿ2 hours ago

Delhi News : ಆಟಿಕೆಯೆಂದು ಭಾವಿಸಿ ಅಪ್ಪನ ಪಿಸ್ತೂಲ್‌ ಶಾಲೆಗೆ ತೆಗೆದುಕೊಂಡು ಹೋದ 10 ವರ್ಷದ ಬಾಲಕ

Basavaraj Bommai
ಕರ್ನಾಟಕ2 hours ago

Basavaraj Bommai: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ: ಬೊಮ್ಮಾಯಿ ಕಿಡಿ

ಕ್ರೀಡೆ2 hours ago

Fatima Sana: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಾಕ್​; 22 ವರ್ಷದ ಫಾತಿಮಾ ನಾಯಕಿ

Self Harming
ಬೆಂಗಳೂರು2 hours ago

Self Harming: ನೇಣಿಗೆ ಶರಣಾದ ಕ್ಯಾಬ್‌ ಚಾಲಕ; ಮಗನ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದ ತಾಯಿ

Shocking Video
ವೈರಲ್ ನ್ಯೂಸ್3 hours ago

Shocking Video : ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಪೊಲೀಸ್‌ ವಶಕ್ಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌