ಬೆಂಗಳೂರು: ವರದಕ್ಷಿಣಿ ಕಿರುಕುಳಕ್ಕೆ ಬೇಸತ್ತು (Dowry case) ಟೆಕ್ಕಿಯೊಬ್ಬರು ಬೆಂಗಳೂರಲ್ಲಿ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾರೆ. ಪೂಜಾ (22) ಮೃತ ದುರ್ದೈವಿ.
ಮನೆಯಲ್ಲಿ ಯಾರು ಇಲ್ಲದ ವೇಳೆ ಪೂಜಾ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಗಂಗಮ್ಮನ ಗುಡಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ.
ಪೂಜಾ ಮೂಲತಃ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತೆಗ್ಗಿ ಬಸಾಪುರ ಮೂಲದವರು. 2022ರಲ್ಲಿ ಸುನೀಲ್ ಎಂಬುವವರ ಜತೆಗೆ ಪೂಜಾಳ ವಿವಾಹವಾಗಿತ್ತು. ಆದರೆ ಪತಿ ಸುನೀಲ್ ಹಾಗೂ ಮೈದುನಾ ಅನಿಲ್ ವರದಕ್ಷಿಣಿ ಕಿರುಕುಳ ಆರೋಪ ಕೇಳಿ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆತ್ಮಹತ್ಯೆಗೀಡಾದ ಟೆಕ್ಕಿ ಪೂಜಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಮೂರು ಎಕರೆ ಜಮೀನು, ಚಿನ್ನಾಭರಣ ತರುವಂತೆ ಪತಿ ಸುನೀಲ್ ಕಿರುಕುಳ ನೀಡುತ್ತಿದ್ದಂತೆ. ಪೂಜಾಗೆ ಬರುತ್ತಿದ್ದ 40 ಸಾವಿರ ಸಂಬಳದಲ್ಲಿ ದಿನಕ್ಕೆ 500 ರೂ. ಹಣ ಮಾತ್ರ ಖರ್ಚಿಗೆ ನೀಡುತ್ತಿದ್ದನಂತೆ. ಉಳಿದ ಸಂಬಳ ಭಾಮೈದುನಾ ಅನಿಲ್‌ಗೆ ನೀಡಬೇಕಿತ್ತು. ಪೂಜಾಗೆ ಮನೆಯಲ್ಲಿ ಊಟ ಮಾಡುವ ವಿಚಾರಕ್ಕೂ ಅವಮಾನ ಮಾಡುತ್ತಿದ್ದರಂತೆ. ಪೂಜಾ ಊಟ ಮಾಡುವ ವೇಳೆ ಜಾಸ್ತಿ ತಿನ್ನಬೇಡ ದಪ್ಪ ಆಗ್ತಿಯಾ ಎನ್ನುತ್ತಿದ್ದರಂತೆ. ಈ ಬಗ್ಗೆ ಪತಿ ಸುನೀಲ್ ಬಳಿ ಹೇಳಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಕುಟುಂಬಸ್ಥರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಸುನೀಲ್‌ನನ್ನು ವಶಕ್ಕೆ ಪಡೆದು ಗಂಗಮ್ಮ ಗುಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Actor Darshan: ದರ್ಶನ್ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!
ದಕ್ಷಿಣ ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣ?
ದಕ್ಷಿಣ ಕೊರಿಯಾದ ನಾಗರಿಕ ಸೇವಕ ರೋಬೋಟ್ ಆತ್ಮಹತ್ಯೆ (Robot Suicide) ಮಾಡಿಕೊಂಡಿದೆ. ಮೆಟ್ಟಿಲಿನಿಂದ ಹಾರಿ ಅದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಬಳಿಕ ಅದು ನಿಷ್ಕ್ರಿಯವಾಗಿದೆ. ವಿಶ್ವದ ಮೊದಲ ರೋಬೋಟ್ ಆತ್ಮಹತ್ಯೆ (Suicide) ಬಳಿಕ ದಕ್ಷಿಣ ಕೊರಿಯಾ (South Korea) ನಗರದ ಜನತೆ ಶೋಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಮಿ ಸಿಟಿ ಕೌನ್ಸಿಲ್ ನ ( Gumi City Council ) ಸೈಬೋರ್ಗ್ ಎಂಬ ರೋಬೋಟ್ ಜೂನ್ 26ರಂದು ಆರೂವರೆ ಅಡಿ ಮೆಟ್ಟಿಲಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ಬಳಿಕ ಅದನ್ನು ಪರೀಕ್ಷಿಸಿದ ಪ್ರಧಾನ ಆಡಳಿತ ಅಧಿಕಾರಿ ರೋಬೋಟ್ ಸತ್ತಿದೆ ಎಂದು ಘೋಷಿಸಿದರು.
ರೋಬೋಟ್ ಒಂದು ಸ್ಥಳದಲ್ಲಿ ‘ಏನೋ ಇದ್ದಂತೆ’ ಎಂಬಂತೆ ತಿರುಗುತ್ತಿತ್ತು. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. ರೋಬೋಟ್ ನ ತುಂಡುಗಳನ್ನು ಸಂಗ್ರಹಿಸಲಾಗಿದೆ. ಕಂಪನಿಯು ಈ ಬಗ್ಗೆ ವಿಶ್ಲೇಷಿಸುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.
ರೋಬೋಟ್ ದೈನಂದಿನ ದಾಖಲೆಗಳ ವಿತರಣೆ, ನಗರ ಪ್ರಚಾರ ಮತ್ತು ಸ್ಥಳೀಯ ನಿವಾಸಿಗಳಿಗೆ ಮಾಹಿತಿಯನ್ನು ತಲುಪಿಸಲು ಸಹಾಯ ಮಾಡುತಿತ್ತು. ಇದು ಅಧಿಕೃತವಾಗಿ ಸಿಟಿ ಹಾಲ್‌ನ ಒಂದು ಭಾಗವಾಗಿತ್ತು. ನಮ್ಮಲ್ಲಿ ಒಬ್ಬರಾಗಿತ್ತು ಎಂದು ಗುಮಿ ಸಿಟಿ ಕೌನ್ಸಿಲ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೋಬೋಟ್ ಶ್ರದ್ಧೆಯಿಂದ ಸೇವೆ ಸಲ್ಲಿಸಿತ್ತು. ಈ ರೀತಿಯಲ್ಲಿ ಬಳಸಲಾದ ಮೊದಲ ರೋಬೋಟ್ ಇದಾಗಿದೆ ಮತ್ತು ಇದನ್ನು ಅಕ್ಟೋಬರ್ 2023 ರಲ್ಲಿ ನೇಮಿಸಲಾಗಿತ್ತು ಎನ್ನುತ್ತಾರೆ ಅಧಿಕಾರಿಗಳು.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸಾಕಷ್ಟು ಮಂದಿ ನೆಟ್ಟಿಗರು ಈಗ ರೋಬೋಟ್‌ಗೆ ನಿಭಾಯಿಸಲು ಕೆಲಸದ ಹೊರೆ ಹೆಚ್ಚು ಎಂದು ಹೇಳಿದ್ದಾರೆ.
🚨 The world records the first case of robot suicide.
— Tom Valentino (@TomValentinoo) June 28, 2024
South Korea 🇰🇷
An investigation has started into a robot 'suicide.' The robot was seen idle at the bottom of some stairs, and later, witnesses saw it spinning on top of a building before falling off.
The robot worked in a… pic.twitter.com/aAmyRmgYSo
ಕೆಲಸದ ಹೊರೆ ಜಾಸ್ತಿಯಾಗಿ ತುಂಬಾ ಹೊತ್ತು ತಿರುಗಿ ಮೆಟ್ಟಿಲಿನಿಂದ ಹಾರಿತು ಎಂದು ಒಬ್ಬರು ಹೇಳಿದ್ದರೆ ಇನ್ನೊಬ್ಬರು ಸ್ಕ್ರಾಪ್ ಮೆಟಲ್ ಶಾಂತಿಯಿಂದ ವಿಶ್ರಾಂತಿ ಪಡೆಯಲಿ ಎಂದು ಹೇಳಿದ್ದಾರೆ. ಮತ್ತೊಬ್ಬರು ವಿರಾಮಗಳಿಲ್ಲ, ರಜೆಗಳಿಲ್ಲ, ಪ್ರಯೋಜನಗಳಿಲ್ಲ. ರೋಬೋಟ್‌ಗಳಿಗೆ ಒಕ್ಕೂಟದ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ರೋಬೋಟಿಕ್ ಸಹಾಯಕವನ್ನು ಕ್ಯಾಲಿಫೋರ್ನಿಯಾ ಮೂಲದ ಬೇರ್ ರೋಬೋಟಿಕ್ಸ್ ಎಂಬ ಸ್ಟಾರ್ಟಪ್ ತಯಾರಿಸಿದೆ. ಅದು ಉದ್ಯೋಗಿ ಕಾರ್ಡ್ ಅನ್ನು ಹೊಂದಿತ್ತು. ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಕೆಲಸ ಮಾಡುತ್ತಿತ್ತು. ಇತರ ರೋಬೋಟ್‌ಗಳಿಗಿಂತ ಭಿನ್ನವಾಗಿ ಸಾಮಾನ್ಯವಾಗಿ ಒಂದು ಮಹಡಿಯನ್ನು ಮಾತ್ರ ಬಳಸುತ್ತಿತ್ತು. ಸದ್ಯಕ್ಕೆ ಹೊಸ ರೋಬೋಟ್ ಅನ್ನು ಅಳವಡಿಸಿಕೊಳ್ಳುವ ಯಾವುದೇ ಯೋಜನೆ ಇಲ್ಲ. ದಕ್ಷಿಣ ಕೊರಿಯಾವು ವಿವಿಧ ವೃತ್ತಿಗಳಲ್ಲಿ ರೋಬೋಟ್‌ಗಳನ್ನು ಬಳಸುವುದಕ್ಕಾಗಿ ವ್ಯಾಪಕವಾಗಿ ಹೆಸರುವಾಸಿಯಾಗಿದೆ.
ಇದನ್ನೂ ಓದಿ: PM Modi Russia Visit: ಜುಲೈ 8ರಿಂದ ಮೋದಿ ರಷ್ಯಾ ಪ್ರವಾಸ; ಉಕ್ರೇನ್ ಆಕ್ರಮಣದ ಬಳಿಕ ಮೊದಲ ಭೇಟಿ
ಈ ಹಿಂದೆ ವಾಷಿಂಗ್ಟನ್ ಡಿಸಿಯ ನೀರಿನ ಕಾರಂಜಿಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ಭದ್ರತಾ ರೋಬೋಟ್ ಸ್ಟೀವ್ ಎಂದು ಕರೆಯಲಾಗುತ್ತಿತ್ತು. ಆದರೆ ಅದು ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿತ್ತು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ