Site icon Vistara News

Self Harming : ವೆಗಾ ಸಿಟಿ ಮಾಲ್‌ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ

Self Harming

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ವೆಗಾ ಸಿಟಿ ಮಾಲ್‌ (Vega City Mall) ಮೇಲಿಂದ ಬಿದ್ದು ಯುವಕನೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಶುಕ್ರವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸುಹಾಸ್ ಅಡಿಗ ಎಂಬಾತ ಮಾಲ್‌ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ಹಾಗೂ ಮಾಲ್‌ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದಾರೆ. ಆದರೆ ನಾಲ್ಕನೇ ಮಹಡಿಯಿಂದ ಬಿದ್ದ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿತ್ತು. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಮೈಕೋ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಮಾಲ್‌ಗೆ ಇವನೊಬ್ಬನೇ ಬಂದಿದ್ದನ್ನಾ ಅಥವಾ ಈತನೊಟ್ಟಿಗೆ ಬೇರೆಯಾರಾದರೂ ಇದ್ದರಾ ಎಂಬುದರ ಕುರಿತು ಸಿಸಿ ಟಿವಿ ಪರಿಶೀಲನೆ ಮಾಡಲಾಗುತ್ತಿದೆ.

ಇದನ್ನೂ ಓದಿ: Rooftop collapse : ಕುಸಿದು ಬಿದ್ದ ಮನೆಯ ಚಾವಣಿ; ಮಣ್ಣಿನಡಿ ಸಿಲುಕಿ ಮಕ್ಕಳಿಬ್ಬರು ಸಾವು

ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

ಕೊಪ್ಪಳ: ಹುಲಿಗೆಮ್ಮ ದೇವಿ ಜಾತ್ರೆ (Huligemma Temple) ನಿಮಿತ್ತ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಲಾರಿಯೊಂದು (Lorry Hit) ಹರಿದಿದೆ. ಪಾದಯಾತ್ರೆ ಹೊರಟಿದ್ದವರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ರಭಸಕ್ಕೆ ಓರ್ವ ಭಕ್ತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಕೊಪ್ಪಳ ತಾಲೂಕಿನ ಕೆರಳ್ಳಿ ಫ್ಲೈಓವರ್ ಬಳಿ ಘಟನೆ ನಡೆದಿದೆ. ಯಮನೂರಪ್ಪ ಸಣ್ಣಮನಿ (34) ಮೃತ ದುರ್ದೈವಿ. ಯಮನೂರಪ್ಪ ಬಾಗಲಕೋಟಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿ ಆಗಿದ್ದಾರೆ. ಯಮನೂರಪ್ಪ ಹಾಗೂ ಮಹಾಂತೇಶ್‌ ಹುಲಿಗೆಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ದೇವಸ್ಥಾನಕ್ಕೆ ಹೊರಟ್ಟಿದ್ದರು.

ಈ ವೇಳೆ ಹಿಂಬದಿಯಿಂದ ಬಂದ ಲಾರಿಯು ಪಾದಯಾತ್ರಿಗಳಿಗೆ ಡಿಕ್ಕಿ ಹೊಡೆದಿದೆ. ಯಮನೂರಪ್ಪ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟರೆ, ಮಹಾಂತೇಶ್‌ ಫ್ಲೈಓವರ್‌ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಬಿದ್ದ ರಭಸಕ್ಕೆ ಅವರ ಕಾಲಿನ ಪಾದವೇ ತುಂಡಾಗಿ ಬಿದ್ದಿತ್ತು. ಸದ್ಯ ಸಾವು- ಬದುಕಿನ ಮಧ್ಯೆ ಹೋರಾಡುತ್ತಿರುವ ಗಾಯಾಳು ಮಹಾಂತೇಶ್‌ನನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version