ಬೆಂಗಳೂರು: ಆಂಧ್ರಪ್ರದೇಶದ ಮೂವರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಬುಧವಾರ (ಏ.25) ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಘಟನೆ ನಡೆದಿದೆ.
ಗುರುವಾರ ಬೆಳಗ್ಗೆ ಸ್ಥಳೀಯರು ಆಗಮನಿಸಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ತಿಳಿದು ಬಂದಿದೆ. ಶಶಿಕುಮಾರ್ (23), ಲೋಕೇಶ್ (25) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.
ರೈಲ್ವೆ ಟ್ರ್ಯಾಕ್ ಇರುವ ಕಾರಣ ರಾತ್ರಿಯಲ್ಲಿ ಯುವಕರು ಮೊಬೈಲ್ ಹಾಗೂ ಹೆಡ್‌ಫೋನ್ ಹಾಕಿಕೊಂಡು ಟ್ರ್ಯಾಕ್ ಮೇಲೆ ಕುಳಿತುಕೊಳ್ಳುತ್ತಾರೆ. ಪೊಲೀಸರು ಬಂದಾಗ ಇಲ್ಲಿಂದ ತೆರಳುತ್ತಾರೆ, ನಂತರ ಮತ್ತೆ ವಾಪಸ್ ಬಂದು ಇಲ್ಲೇ ಕೂರುತ್ತಾರೆ ಎಂದು ಸ್ಥಳೀಯ ನಿವಾಸಿ ಮಲ್ಲೇಶ್ ಆರೋಪಿಸಿದ್ದಾರೆ. ನಿನ್ನೆ ರಾತ್ರಿ 8:30ಕ್ಕೆ ಈ ಘಟನೆ ನಡೆದಿರಬಹುದು. ಕೆಲಸಕ್ಕೆ ಹೋಗಿ ಬರುವವರು ಈ ಹಳಿಯನ್ನು ದಾಟಿ ಓಡಾಡುತ್ತಾರೆ.
ಇದನ್ನೂ ಓದಿ: Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!
Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್ ಟೈರ್ ಸ್ಫೋಟ
ಚಾಮರಾಜನಗರ/ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು (Road Accident) ಸಂಭವಿಸಿವೆ. ಮೈಸೂರಿನ ಹೊರವಲಯದ ನಾಡನಹಳ್ಳಿಯಲ್ಲಿ ಶಾಸಕ ಎಆರ್ ಕೃಷ್ಣಮೂರ್ತಿ (MLA A R Krishnamurthy) ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೊಳ್ಳೆಗಾಲದ ಕಾಂಗ್ರೆಸ್ ಶಾಸಕ ಎಆರ್ ಕೃಷ್ಣಮೂರ್ತಿ ಬುಧವಾರ ತಡರಾತ್ರಿ ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣಕ್ಕೆ ಸಿಗದೇ ಕಾರು ರಸ್ತೆ ಬಿಟ್ಟು ಪಕ್ಕಕ್ಕೆ ಇಳಿದಿದೆ.
ಇದನ್ನೂ ಓದಿ: IPL 2024: ಸಿಕ್ಸರ್ನಿಂದ ಗಾಯಗೊಂಡ ಕ್ಯಾಮೆರಮನ್ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್ ಪಂತ್
ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿ, ಇಬ್ಬರು ಸಾವು
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಪರಿಣಾಮ ಬೊಲೆರೋ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತ ದುರ್ದೈವಿ. ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ.
ದ್ರಾಕ್ಷಿ ತುಂಬಿಸಿಕೊಂಡು ಬೆಂಗಳೂರು ಕಡೆ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಬೊಲೆರೋ ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ