Sharan Prakash Patil: ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ : ಸಚಿವ ಶರಣಪ್ರಕಾಶ್‌ ಪಾಟೀಲ್‌ - Vistara News

ಬೆಂಗಳೂರು

Sharan Prakash Patil: ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ : ಸಚಿವ ಶರಣಪ್ರಕಾಶ್‌ ಪಾಟೀಲ್‌

Sharan Prakash Patil : ಈಗಾಗಲೇ ಬೆಂಗಳೂರು ಹಾಗೂ ಮೈಸೂರಿನಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಕಲುಬುರುಗಿ, ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿಯೂ ಆರಂಭವಾಗಲಿದ್ದು, ವಿಕ್ಟೋರಿಯಾ ಹಾಗೂ ಸಂಜಯ್‌ ಗಾಂಧೀ ಆಸ್ಪತ್ರೆಯಲ್ಲಿಯೂ ವಿಭಾಗ ತೆರೆಯುವ ಉದ್ದೇಶವಿಟ್ಟುಕೊಂಡಿದ್ದೇವೆ ಎಂದರು.

VISTARANEWS.COM


on

Sharan Prakash Patil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವ್ಯಾಸ್ಕ್ಯುಲಾರ್‌ ಸಮಸ್ಯೆಗಳನ್ನು ಪತ್ತೆ ಹಚ್ಚಲು ಹಾಗೂ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ನೀಡಲು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ (Sharan Prakash Patil) ತಿಳಿಸಿದರು. ಅವರು ವ್ಯಾಸ್ಕ್ಯುಲಾರ್‌ ಸೊಸೈಟಿ ಆಫ್‌ ಇಂಡಿಯಾ ಹಾಗೂ ವ್ಯಾಸ್ಕಾರ್‌ ವತಿಯಿಂದ ನಗರದ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ವಾಕಥಾನ್‌ ಗೆ ಚಾಲನೆ ನೀಡಿ ಮಾತನಾದಡಿದರು.

ಈಗಾಗಲೇ ಬೆಂಗಳೂರು ಹಾಗೂ ಮೈಸೂರಿನಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಕಲುಬುರುಗಿ, ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿಯೂ ಆರಂಭವಾಗಲಿದ್ದು, ವಿಕ್ಟೋರಿಯಾ ಹಾಗೂ ಸಂಜಯ್‌ ಗಾಂಧೀ ಆಸ್ಪತ್ರೆಯಲ್ಲಿಯೂ ವಿಭಾಗ ತೆರೆಯುವ ಉದ್ದೇಶವಿಟ್ಟುಕೊಂಡಿದ್ದೇವೆ ಎಂದರು.

ಹಿರಿಯ ವ್ಯಾಸ್ಕ್ಯುಲಾರ್‌ ಸರ್ಜನ್‌ ಡಾ.ಕೆ.ಆರ್.ಸುರೇಶ್‌ ಮಾತನಾಡಿ ಹೃದಯಾಘಾತದಂತೆ(ಹಾರ್ಟ್‌ ಅಟ್ಯಾಕ್‌) ಲೆಗ್‌ ಅಟ್ಯಾಕ್‌ ಕೂಡ ಮನುಷ್ಯನಿಗೆ ಪ್ರಾಣಾಂತಿಕವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿದಿದ್ದರೆ ಕಾಲು ಕತ್ತರಿಸುವ ಸಂದರ್ಭ ಉಂಟಾಗಿ ಜೀವಕ್ಕೆ ಹಾನಿಯಾಗಲಿದೆ. ಧೂಮಪಾನ, ಮಧುಮೇಹ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಉತ್ತಮ. ನಡೆಯುವಾಗ ಕಾಲಿನಲ್ಲಿ ನೋವು ಕಂಡು ಬಂದರೆ, ಕಾಲಿನಲ್ಲಿ ಜೋಮು ಹಾಗೂ ತಂಪಿನಂತಹ ಲಕ್ಷಣಗಳು ಕಂಡು ಬಂದಾಗ ಹತ್ತಿರದ ವ್ಯಾಸ್ಕ್ಯುಲಾರ್‌ ಸರ್ಜನ್‌ ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Spandana Vijay Raghavendra: ಸ್ಪಂದನ ಅಗಲಿ ಒಂದು ವರ್ಷ, ಭಾವುಕ ಪೋಸ್ಟ್‌ ಮಾಡಿದ ವಿಜಯ್‌ ರಾಘವೇಂದ್ರ

ವ್ಯಾಸ್ಕಾರ್ ಅಧ್ಯಕ್ಷರಾದ ಡಾ.ವೆಂಕಟೇಶ್‌ ರೆಡ್ಡಿ ಮಾತನಾಡಿ ಕಳೆದ ಮೂರು ದಶಕಗಳಿಂದ ವ್ಯಾಸ್ಕ್ಯುಲರ್‌ ಸರ್ಜನ್ ಅಸೋಸಿಯೇಷನ್‌ ನಿರಂತರ ಸೇವೆ ಸಲ್ಲಿಸುತ್ತಾ ಬಂದಿದ್ದು, ದಿವಂಗತ ಡಾ.ಎನ್.ಕೆ ಭಗವಾನ್‌ ದೂರದೃಷ್ಠಿ ಹಾಗೂ ಪ್ರಸ್ತುತ ಡಾ.ಕೆ.ಆರ್.ಸುರೇಶ್‌ರವರ ಮಾರ್ಗದರ್ಶನದಲ್ಲಿ ಸಹಸ್ತ್ರಾರು ಶಸ್ತ್ರಚಿಕಿತ್ಸೆಗಳ ಮೂಲಕ ಸಾವಿರಾರು ರೋಗಿಗಳು ಶ್ವಾಶ್ವತ ಅಂಗವಿಕಲರಾಗುವುದನ್ನು ತಪ್ಪಿಸಿರುವುದು ಹೆಮ್ಮೆಯ ಸಂಗತಿಯಾಗಿದ್ದು ವ್ಯಾಸ್ಕಾರ್‌ ಅರಿವು ಕಾರ್ಯಕ್ರಮ ನಿರಂತರವಾಗಿರಲಿದೆ ಎಂದು ಎಂದರು.

ಕಂಠೀರವ ಸ್ಟೇಡಿಯಂನಿಂದ ಆರಂಭವಾದ ವಾಕಥಾನ್‌ ಕಸ್ತೂರ್ಬಾ ರಸ್ತೆ, ವಿಧಾನಸೌಧ, ನೃಪತುಂಗ ರಸ್ತೆ ಮುಖಾಂತರ ಕಂಠೀರವ ಸ್ಟೇಡಿಯಂನಲ್ಲಿ ಅಂತ್ಯಗೊಂಡಿತು. ರಾಜ್ಯದ ಸಾವಿರಕ್ಕೂ ಹೆಚ್ಚು ವೈದ್ಯರು, ವೈದ್ಯಕೀಯ ವಿದ್ಯಾರ್ಥಿ, ಶೂಶ್ರೂಷಕ ಸಿಬ್ಬಂಧಿ ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.

ರಾಜೀವ್‌ ಗಾಂಧೀ ಆರೋಗ್ಯ ವಿಶ್ವವಿದ್ಯಾಲಯ ಕುಲಪತಿ ರಮೇಶ್‌ ಎಂ.ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ,ಜಯದೇವ ಕಾರ್ಡಿಯಾಕ್‌ ಆಸ್ಪತ್ರೆಯ ವ್ಯಾಸ್ಕ್ಯುಲಾರ್‌ ಸರ್ಜನ್‌ ಡಾ.ಮುರುಳಿ ಕೃಷ್ಣ,ರಾಷ್ಟ್ರೀಯ ಭದ್ರತೆ ಮಾಜಿ ಸಲಹೆಗಾರರಾದ ಪದ್ಮವಿಭೂಷಣ ವಿ.ಕೆ.ಆತ್ರೆ, ವಿಎಸ್‌ಐನ ಅಧ್ಯಕ್ಷರಾದ ಡಾ.ವಿವೇಕಾನಂದ್‌, ರಾಜ್ಯ ವ್ಯಾಸ್ಕರ್‌ ಸೊಸೈಟಿ ಕಾರ್ಯದರ್ಶಿ ಡಾ.ವಿಷ್ಣು, ಚಿತ್ರನಟಿ ಸಂಜನಾ ಗಲ್ರಾನಿ ಮುಂತಾದವರಿದ್ದರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Women PG: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಇನ್ನು ಮುಂದೆ ಕಟ್ಟುನಿಟ್ಟಿನ ರೂಲ್ಸ್! ಫಾಲೋ ಮಾಡದಿದ್ದರೆ ಕೇಸ್

Women PG: ಹೊಸ ನಿಯಮಗಳ ಪ್ರಕಾರ ನಗರದಲ್ಲಿರುವ ಪಿಜಿಗಳು ಇನ್ನು ಮುಂದೆ ಕಡ್ಡಾಯವಾಗಿ ಪಾಲಿಕೆ ಪರವಾನಗಿ ಪಡೆದುಕೊಳ್ಳಬೇಕು. ಪಿಜಿಗೆ ಬರುವ ಎಲ್ಲಾ ವ್ಯಕ್ತಿಗಳ ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರ ಪಡೆಯಬೇಕು. ರಕ್ತ ಸಂಬಂಧಿಕರು ಹಾಗೂ ಸ್ನೇಹಿತರ ವಿವರಗಳು ಹಾಗೂ ಮೊಬೈಲ್‌ ಸಂಖ್ಯೆಗಳನ್ನೂ ಪಡೆದುಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ.

VISTARANEWS.COM


on

women PG bangalore
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜಧಾನಿಯಲ್ಲಿರುವ ಮಹಿಳಾ ಪಿಜಿಗಳಿಗೆ (Women PG) ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಲು ಬಿಬಿಎಂಪಿ (BBMP) ಹಾಗೂ ಪೊಲೀಸ್‌‍ ಇಲಾಖೆ (Bangalore Police) ನಿರ್ಧರಿಸಿವೆ. ಕೆಲ ದಿನಗಳ ಹಿಂದೆ ಕೋರಮಂಗಲದಲ್ಲಿರುವ ಮಹಿಳಾ ಪಿಜಿಗೆ ವ್ಯಕ್ತಿಯೊಬ್ಬ ನುಗ್ಗಿ ಯುವತಿಯೊಬ್ಬರನ್ನು ಕೊಲೆ (Murder in PG) ಮಾಡಿ ಪರಾರಿಯಾಗಿದ್ದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರಕ್ಕೆ ಬರಲಾಗಿದೆ.

ಹೊಸ ನಿಯಮಗಳ ಪ್ರಕಾರ ನಗರದಲ್ಲಿರುವ ಪಿಜಿಗಳು ಇನ್ನು ಮುಂದೆ ಕಡ್ಡಾಯವಾಗಿ ಪಾಲಿಕೆ ಪರವಾನಗಿ ಪಡೆದುಕೊಳ್ಳಬೇಕು. ಪಿಜಿಗೆ ಬರುವ ಎಲ್ಲಾ ವ್ಯಕ್ತಿಗಳ ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರ ಪಡೆಯಬೇಕು. ರಕ್ತ ಸಂಬಂಧಿಕರು ಹಾಗೂ ಸ್ನೇಹಿತರ ವಿವರಗಳು ಹಾಗೂ ಮೊಬೈಲ್‌ ಸಂಖ್ಯೆಗಳನ್ನೂ ಪಡೆದುಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ. ಪಿಜಿಗೆ ಭೇಟಿ ನೀಡಲು ಬರುವ ಸಂಬಂಧಿಕರು, ಸ್ನೇಹಿತರು ಸೇರಿದಂತೆ ಯಾರೇ ಬಂದರು ಅವರ ಎಲ್ಲಾ ವಿವರಗಳನ್ನು ಪ್ರತ್ಯೇಕವಾಗಿ ಪಡೆಯಬೇಕು ಎಂದು ಸೂಚಿಸಲಾಗಿದೆ.

ಪಿಜಿಯಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಬೇಕು. ಅಗ್ನಿ ಅನಾಹುತದ ಕುರಿತಂತೆ ಅಗತ್ಯ ಸುರಕ್ಷತೆ ಕ್ರಮಗಳನ್ನು ಅನುಸರಿಸಬೇಕು. ಮಾದಕ ವಸ್ತುಗಳ ಸೇವನೆ ಮತ್ತು ಸಂಗ್ರಹಣೆ ಕಾನೂನು ಬಾಹಿರ. ಇಂತಹದಕ್ಕೆ ಪಿಜಿ ಒಳಗೆ ಅವಕಾಶ ನೀಡಬಾರದು. ಸ್ಥಳೀಯ ಪೊಲೀಸ್‌‍ ಠಾಣೆ, ತುರ್ತು ಸ್ಪಂದನೆಯ-112, ವೈದ್ಯಕೀಯ ಸೇವೆಯ-103, ಮತ್ತು ಸೈಬರ್‌ ಅಪರಾಧಕ್ಕೆ ಸಂಬಂಧಪಟ್ಟ – 1930 ಮುಂತಾದ ಅಗತ್ಯ ಸೇವೆಗಳ ದೂರವಾಣಿ ಸಂಖ್ಯೆಗಳನ್ನು ಎಲ್ಲರಿಗೂ ಕಾಣುವಂತೆ ಹಾಕಬೇಕು. ಪ್ರಥಮ ಚಿಕಿತ್ಸೆ ಸಲಕರಣೆಗಳನ್ನು ಇಟ್ಟುಕೊಳ್ಳಬೇಕು.

ಪಿಜಿಯಲ್ಲಿ ಕೆಲಸ ಮಾಡುವ ಅಡುಗೆಯವರು, ಸೆಕ್ಯೂರಿಟಿ ಗಾರ್ಡ್‌ ಹಾಗೂ ಇನ್ನಿತರೇ ವ್ಯಕ್ತಿಗಳ ಪೂರ್ವಾಪರಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು. ವಿದೇಶಿ ಪ್ರಜೆಗಳು ಪಿ.ಜಿ ಯಲ್ಲಿ ನೆಲೆಸಿದ್ದಲ್ಲಿ, ಅವರ ಮಾಹಿತಿಯನ್ನು ಸ್ಥಳೀಯ ಪೊಲೀಸ್‌‍ ಠಾಣೆಗೆ ನೀಡುವುದು. ಪಿಜಿಯಲ್ಲಿ ವಾಸಕ್ಕೆ ಪ್ರವೇಶ ಪಡೆದಿರುವವರನ್ನು ಹೊರತು ಪಡಿಸಿ ಇತರೇ ಯಾರಿಗೂ ವಾಸ್ತವ್ಯಕ್ಕೆ ಅವಕಾಶ ನೀಡಲೇಬಾರದು.

ಸರ್ವೋಚ್ಚ ನ್ಯಾಯಾಲಯದ ಆದೇಶದ ಅನುಸಾರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕಗಳನ್ನು ನಿಷೇಧಿಸಬೇಕು. ಆಹಾರ ಗುಣಮಟ್ಟದ ಬಗ್ಗೆ ಪಿಜಿ ಮಾಲೀಕರು ನಿಗಾ ವಹಿಸಬೇಕು. ತಿಂಗಳಲ್ಲಿ ಒಂದು ದಿನ ಸ್ಥಳೀಯ ಪೊಲೀಸರು ಪಿಜಿಯನ್ನೂ ಪರಿಶೀಲನೆ ನಡೆಸಬೇಕು. ಒಂದು ವೇಳೆ ಸುರಕ್ಷತಾ ಕ್ರಮ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅಹಿತಕರ ಘಟನೆ ಸಂಭವಿಸಿದರೆ ಸಂಬಂಧಪಟ್ಟ ಪಿಜಿ ಮಾಲೀಕರು ಅಥವಾ ಅದರ ವ್ಯವಸ್ಥಾಪಕರ ವಿರುದ್ಧ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕೆಲವು ದಿನಗಳ ಹಿಂದೆ ಕೋರಮಂಗಲದ ಪಿಜಿಯೊಂದಕ್ಕೆ ನುಗ್ಗಿದ ವ್ಯಕ್ತಿ ಅಲ್ಲಿದ್ದ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಆತನನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿತ್ತು. ಆ ಪಿಜಿಯಲ್ಲಿದ್ದ ಸಿಸಿಟಿವಿ ಫೂಟೇಜ್‌ನ ಮೂಲಕ ವ್ಯಕ್ತಿಯ ಗುರುತು ಪತ್ತೆಹಚ್ಚಲಾಗಿತ್ತು.

ಇದನ್ನೂ ಓದಿ: Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Continue Reading

ಕರ್ನಾಟಕ

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Kannada New Movie: ‘ಸಿ’ ಸಿನಿಮಾದಿಂದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಇದು ಕಿರಣ್ ಸುಬ್ರಮಣಿ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದ್ದು, ಕಿರಣ್ ನಿರ್ದೇಶನದ ಜತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

VISTARANEWS.COM


on

C Kannada movie release on August 23
Koo

ಬೆಂಗಳೂರು: ʼಸಿʼ ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು ‘ಸಿ’ ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ ಅಕ್ಷರದ ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ಈ ಸಿನಿಮಾ (Kannada New Movie) ಈಗಾಗಲೇ ಟೀಸರ್ ಮತ್ತು ಕಂದಾ ಕಂದಾ ಎನ್ನುವ ಹಾಡಿನ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಇದರ ಜತೆಗೆ ಸಿ ಸಿನಿಮಾಗೆ ನಟ ಯೋಗಿ ಮತ್ತು ಖ್ಯಾತ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಅವರ ಬೆಂಬಲ ಕೂಡ ಸಿಕ್ಕಿದೆ‌.

ಅಂದಹಾಗೆ ‘ಸಿ’ ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ಸಿನಿಮಾ. ಕಿರಣ್ ನಿರ್ದೇಶನದ ಜತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಸಿನಿಮಾದಿಂದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ.

ವಿಶೇಷ ಎಂದರೆ ಈ ಹಾಡನ್ನು ಲೂಸ್ ಮಾದ ಖ್ಯಾತಿಯ ನಟ ಯೋಗಿ ರಿಲೀಸ್ ಮಾಡಿದ್ದಾರೆ. ಹಾಡಿನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಯೋಗಿ ಹೊಸ ಸಿನಿಮಾ ತಂಡದ ಬೆನ್ನಿಗೆ ನಿಂತಿರುವುದು ಸಿ ಚಿತ್ರತಂಡಕ್ಕೆ ಖುಷಿ ತಂದಿದೆ. ಇನ್ನು ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಕೂಡ ಸಿ ಸಿನಿಮಾದ ಹಾಡನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಇಡೀ ಸಿನಿಮಾಗೆ ಒಳ್ಳೆದಾಗಲಿ, ಕನ್ನಡ ಚಿತ್ರರಂಗ ಬೆಳೆಯಲಿ ಎಂದು ಅವರು ಹಾರೈಸಿದ್ದಾರೆ.

‘ಸಿ’ ಚಿತ್ರವು ಕಣ್ಣು ಕಾಣದ ಮಗಳು ಹಾಗೂ ಅಪ್ಪನ ನಡುವಿನ ಬಾಂಧವ್ಯದ ಬಗ್ಗೆ ಇದೆ. ಕಣ್ಣು ಕಾಣದ ಮಗಳ ಆಸೆಯನ್ನು ನೆರವೇರಿಸಲು ಅಪ್ಪ ಎಷ್ಟೆಲ್ಲ ಕಷ್ಟ ಪಡುತ್ತಾರೆ, ಮಗಳಿಗಾಗಿ ಅಪ್ಪನ ಹೋರಾಟದ ಕಥೆಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಕಿರಣ್ ಸುಬ್ರಮಣಿ.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ಸಿ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

ಇದನ್ನೂ ಓದಿ: Gold Rate Today: ಕೊನೆಗೂ ಇಳಿಯಿತು ಬಂಗಾರದ ದರ; ಇಂದು ಚಿನ್ನ ಇಷ್ಟು ಅಗ್ಗ

ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ. ಸದ್ಯ ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿ ಸಿನಿಮಾ ಆಗಸ್ಟ್‌ 23ಕ್ಕೆ ತೆರೆಗೆ ಬರುತ್ತಿದೆ.

Continue Reading

ಪ್ರಮುಖ ಸುದ್ದಿ

Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

Gruha Lakshmi Scheme: ಇವತ್ತಿನಿಂದ ಗೃಹಲಕ್ಷ್ಮೀ ಯೋಜನೆಯ 2000 ರೂ. ಸಹಾಯಧನ ಖಾತೆಗೆ ಜಮೆಯಾಗಲಿದೆ. ತಾಂತ್ರಿಕ ಕಾರಣದಿಂದ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

VISTARANEWS.COM


on

Gruha Lakshmi Scheme
Koo

ಬೆಂಗಳೂರು: ವರಲಕ್ಷ್ಮೀ ಹಬ್ಬಕ್ಕೆ ರಾಜ್ಯ ಮಹಿಳೆಯರಿಗೆ ಕಾಂಗ್ರೆಸ್‌ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಹಣ ಖಾತೆಗೆ ಬಾರದಿರುವುದಕ್ಕೆ ಮಹಿಳೆಯರು ಅಸಮಾಧಾನ ಹೊರಹಾಕುತ್ತಿದ್ದರು. ಆದರೆ, ಇದೀಗ ಕಳೆದ ಎರಡು ತಿಂಗಳ ಹಣವನ್ನು ಒಮ್ಮೆಲೆ ಜಮೆ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಈ ಬಗ್ಗೆ ಮಂಡ್ಯದಲ್ಲಿ ಆಯೋಜಿಸಿರುವ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಹಿತಿ ನೀಡಿದ್ದಾರೆ. ಇವತ್ತಿನಿಂದ ಗೃಹಲಕ್ಷ್ಮೀ ಯೋಜನೆಯ 2000 ರೂ. ಸಹಾಯಧನ ಖಾತೆಗೆ ಜಮೆಯಾಗಲಿದೆ. ತಾಂತ್ರಿಕ ಕಾರಣದಿಂದ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಘೋಷಿಸಿದ್ದಾರೆ.

ಕಳೆದ ಎರಡು ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿರಲಿಲ್ಲ. ಈಗ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು, ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಗೃಹಲಕ್ಷ್ಮಿ ಹಣಹಣ ಬಿಡುಗಡೆ ಮಾಡದೇ ಇರುವುದಕ್ಕೆ ವಿಪಕ್ಷಗಳು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದವು. ಉಚಿತ ಭರವಸೆಗಳನ್ನು ಈಡೇರಿಸಲು ಹೋಗಿ ಸರ್ಕಾರ ದಿವಾಳಿಯಾಗಿದ್ದು, ಯೋಜನೆಗಳನ್ನು ಮುಂದುವರೆಸುವುದು ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೈ ನಾಯಕರು, ಏನೇ ಆದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಸರ್ಕಾರ ಇದಕ್ಕೆ ಹಣವನ್ನು ಹೊಂದಿಸುತ್ತದೆ. ಎರಡು ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ಬರಲಿದೆ ಎಂದು ಇತ್ತೀಚೆಗೆ ತಿಳಿಸಿದ್ದರು.

ಇದನ್ನೂ ಓದಿ | Sharan Prakash Patil: ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ : ಸಚಿವ ಶರಣಪ್ರಕಾಶ್‌ ಪಾಟೀಲ್‌

ಈ ಬಗ್ಗೆ ಕಳೆದ ತಿಂಗಳು ಸ್ಪಷ್ಟನೆ ನೀಡಿದ್ದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ ಎಂದು ಹೇಳಿದ್ದರು.

Continue Reading

ಕರ್ನಾಟಕ

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

MUDA scam: ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ.
ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

VISTARANEWS.COM


on

MUDA scam
Koo

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.

ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಸಿಎಂಗೆ ಪ್ರಾಸಿಕ್ಯೂಷನ್‌ ಭಯ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

thawar chand gehlot cm siddaramaiah Governor versus state
thawar chand gehlot cm siddaramaiah Governor versus state

ಬೆಂಗಳೂರು: ಬಹುಕೋಟಿ ಮುಡಾ ಹಗರಣ (MUDA Scam) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮೂರನೇ ನೋಟೀಸ್ (Notice) ಅನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thawar Chand Gehlot) ಜಾರಿ ಮಾಡಿದ್ದಾರೆ.

ಮೊದಲ ನೋಟೀಸ್ ಅನ್ನು ಜುಲೈ ಮೂರನೇ ವಾರದಲ್ಲಿ ಜಾರಿ ಮಾಡಿದ್ದ ರಾಜ್ಯಪಾಲರು, ಬಂದು ಮಾಹಿತಿ ಕೊಡುವಂತೆ ಸೂಚಿಸಿದ್ದರು. ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕವಾಗಿ ಚರ್ಚೆ ಆಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕೊಡುವಂತೆ ಸೂಚಿಸಿದ್ದರು.

ಜುಲೈ 26ನೇ ತಾರೀಕು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿದ ದೂರು ಆಧರಿಸಿ ಎರಡನೇ ನೋಟೀಸ್ ಕಳಿಸಲಾಗಿತ್ತು. ಅಬ್ರಹಾಂ ಸಲ್ಲಿಸಿದ್ದ ದೂರಿನಲ್ಲಿ, ಈ ಪ್ರಕರಣವನ್ನು ಪ್ರಾಸಿಕ್ಯೂಶನ್‌ಗೆ ಯಾಕೆ ಕೊಡಬಾರದು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್ ಶೋಕಾಸ್ ನೋಟೀಸ್ ನೀಡಿದ್ದರು.

ಆಗಸ್ಟ್ 5ನೇ ತಾರೀಕು ರಾಜ್ಯಪಾಲರು ಮೂರನೇ ನೋಟೀಸ್ ಜಾರಿ ಮಾಡಿದ್ದಾರೆ. ಕಳೆದ ವಾರ ಕ್ಯಾಬಿನೆಟ್‌ ಸಭೆಯಲ್ಲಿ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದ ಸಂಪುಟ, ನೋಟೀಸ್‌ ಹಿಂಪಡೆಯುವಂತೆ ಹೇಳಿತ್ತು. ಹೀಗಾಗಿ ಮತ್ತೆ ಕೇಸ್‌ನಲ್ಲಿ ಕ್ಲಾರಿಫಿಕೇಷನ್ ಕೊಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

ರಾಜ್ಯಪಾಲರು ಪದೇ ಪದೆ ನೋಟೀಸ್ ಕೊಡುತ್ತಿರುವುದೇಕೆ?

ಈ ಹಿಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರಕರಣದಲ್ಲಿ ಆದುದೇ ರಾಜ್ಯಪಾಲರ ಈಗಿನ ನಡೆಗೆ ಕಾರಣ ಎನ್ನಲಾಗಿದೆ. ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಆದೇಶವನ್ನು ಯಡಿಯೂರಪ್ಪ ಪ್ರಶ್ನೆ ಮಾಡಿದ್ದರು. ರಾಜ್ಯಪಾಲರು ಅನುಮತಿ ಕೊಡುವಾಗ ಆರೋಪದ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆಯನ್ನು ಸರಿಯಾಗಿ ನಡೆಸಿಲ್ಲ. ಆತುರಾತುರವಾಗಿ ನಿರ್ಧಾರ ಮಾಡಿ ನೋಟೀಸ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವನ್ನು ಅಭದ್ರ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಹೀಗಾಗಿ ಪೊಲಿಟಿಕಲ್ ಮೈಲೇಜ್ ಪಡೆಯಲು ಈ ನಿರ್ಧಾರ ಮಾಡಿದ್ದರು ಎಂದು ಯಡಿಯೂರಪ್ಪ ವಾದ ಮಾಡಿದ್ದರು. ಯಡಿಯೂರಪ್ಪ ವಾದವನ್ನು ಹೈಕೋರ್ಟ್ ಒಪ್ಪಿತ್ತು. ಜನಪ್ರತಿನಿಧಿಗಳ ಸರ್ಕಾರದ ನೇತೃತ್ವ ವಹಿಸಿರುವವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಡುವಾಗ ಮೂರು ಬಾರಿ ನೋಟೀಸ್ ಹಾಗೂ ಮೂರು ಬಾರಿ ಲೀಗಲ್ ಓಪಿನಿಯನ್ ಪಡೆದು ಮುಂದುವರಿಯಬೇಕು ಎಂದು ಹೈಕೋರ್ಟ್ ಆದೇಶ ಮಾಡಿತ್ತು. ನಂತರ ಯಡಿಯೂರಪ್ಪ ಈ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದರು.

ಇದನ್ನೂ ಓದಿ: CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಆರೋಪ ಕೇಳಿ ಬಂದಿರುವುದರಿಂದ, ಕಾನೂನು ಪ್ರಕ್ರಿಯೆ ಮಾಡುವಾಗ ಯಾವುದೇ ಲೋಪ ಆಗದಂತೆ ರಾಜ್ಯಪಾಲರು ಪದೇ ಪದೆ ನೋಟೀಸ್ ನೀಡುತ್ತಿದ್ದಾರೆ. ನಿನ್ನೆ ದೆಹಲಿಯಿಂದ ರಾಜ್ಯಕ್ಕೆ ಮರಳಿರುವ ರಾಜ್ಯಪಾಲರು ಲೀಗಲ್‌ ಪ್ರಕ್ರಿಯೆ ಚುರುಕುಗೊಳಿಸಿದ್ದಾರೆ. ಇದಕ್ಕೆ ಕ್ಯಾಬಿನೆಟ್‌ ಹಾಗೂ ಮುಖ್ಯಮಂತ್ರಿಗಳ ಕಡೆಯಿಂದ ಪ್ರತಿಕ್ರಿಯೆ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ವಾರವಿಡೀ ಮುಖ್ಯಮಂತ್ರಿಗಳು ಕಾನೂನು ತಜ್ಞರು, ವಕೀಲರ ಜೊತೆಗೆ ಈ ವಿಚಾರವನ್ನು ಚರ್ಚಿಸಿದ್ದರು. ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ಗೆ ತೆರಳುವ ಸಾಧ್ಯತೆ ಇದೆ.

Continue Reading
Advertisement
Paris Olympics
ಕ್ರೀಡೆ2 mins ago

Paris Olympics: ಫೈನಲ್​ ಪ್ರವೇಶಿಸಿದ ನೀರಜ್​ ಚೋಪ್ರಾ; ಕುಸ್ತಿಯಲ್ಲಿ ವಿನೇಶ್ ಕ್ವಾರ್ಟರ್​ ಫೈನಲ್​ಗೆ

LK advani
ದೇಶ6 mins ago

L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

women PG bangalore
ಪ್ರಮುಖ ಸುದ್ದಿ32 mins ago

Women PG: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಇನ್ನು ಮುಂದೆ ಕಟ್ಟುನಿಟ್ಟಿನ ರೂಲ್ಸ್! ಫಾಲೋ ಮಾಡದಿದ್ದರೆ ಕೇಸ್

IND vs SL
ಕ್ರೀಡೆ32 mins ago

IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

Gadag News
ಗದಗ34 mins ago

Gadag News : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು!

Sheikh Hasina
ವಿದೇಶ39 mins ago

Sheikh Hasina: ತಂದೆ, ತಾಯಿ, ಮೂವರು ಸಹೋದರರ ಬರ್ಬರ ಹತ್ಯೆ; ಕಠಿಣ ಹಾದಿಯಲ್ಲಿ ಸಾಗಿ ಪ್ರಧಾನಿಯಾಗಿದ್ದ ಶೇಖ್‌ ಹಸೀನಾ

shocker news
ಪ್ರಮುಖ ಸುದ್ದಿ39 mins ago

Shocker News : ಯುಪಿ ಸಿಎಂ ಯೋಗಿ ಅಧಿಕೃತ ನಿವಾಸದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

Hasin Jahan
ಕ್ರೀಡೆ1 hour ago

Hasin Jahan: ಮೊಹಮ್ಮದ್​ ಶಮಿ ಕುಟುಂಬದ ವಿರುದ್ಧ ವ್ಯಂಗ್ಯವಾಡಿದ ವಿಚ್ಛೇದಿತ ಪತ್ನಿ

Unique Village
Latest1 hour ago

Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ!

C Kannada movie release on August 23
ಕರ್ನಾಟಕ2 hours ago

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌