Sowmya Reddy : ಬೆಂಗಳೂರು ದಕ್ಷಿಣ ಕೈ ಅಭ್ಯರ್ಥಿಯಾಗಲು ಕೊನೆಗೂ ಒಪ್ಪಿದ ಸೌಮ್ಯ ರೆಡ್ಡಿ! - Vistara News

ಬೆಂಗಳೂರು

Sowmya Reddy : ಬೆಂಗಳೂರು ದಕ್ಷಿಣ ಕೈ ಅಭ್ಯರ್ಥಿಯಾಗಲು ಕೊನೆಗೂ ಒಪ್ಪಿದ ಸೌಮ್ಯ ರೆಡ್ಡಿ!

Sowmya Reddy : ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಲು ಒಪ್ಪಿದ್ದಾರೆ. ಬುಧವಾರ ನಡೆದ ಪ್ರಮುಖರ ಸಭೆಯಲ್ಲಿ ಕೇಳಿಬಂದ ಒತ್ತಡದ ಹಿನ್ನೆಲೆಯಲ್ಲಿ ಅವರು ಸ್ಪರ್ಧೆಗೆ ಒಪ್ಪಿದರು.

VISTARANEWS.COM


on

Sowmya Reddy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore Central Constituency) ಕಾಂಗ್ರೆಸ್ ಅಭ್ಯರ್ಥಿಯಾಗಬೇಕು ಎಂಬ ನಾಯಕರ ಬೇಡಿಕೆಯನ್ನು (Parliament Election) ತಿರಸ್ಕರಿಸುತ್ತಲೇ ಬಂದಿದ್ದ ಮಾಜಿ ಶಾಸಕಿ ಸೌಮ್ಯ ರೆಡ್ಡಿ (Sowmya Reddy) ಅವರು ಕೊನೆಗೂ ಸ್ಪರ್ಧೆ ಮಾಡಲು ಒಪ್ಪಿದ್ದಾರೆ. ಎಲ್ಲ ಕಡೆಯಿಂದ ಬಂದ ಒತ್ತಡದ ಬಳಿಕ ಸೌಮ್ಯ ರೆಡ್ಡಿ ಅವರ ತಂದೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅವರು ಬುಧವಾರ ಬೆಂಗಳೂರು ದಕ್ಷಿಣ ಕ್ಷೇತ್ರದ ಪ್ರಮುಖರ ಸಭೆಯನ್ನು ಕರೆದಿದ್ದರು. ಅದರಲ್ಲಿ ಸೌಮ್ಯ ರೆಡ್ಡಿ ಅವರೇ ಸ್ಪರ್ಧೆ ಮಾಡಬೇಕು ಎಂಬ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಸೌಮ್ಯ ರೆಡ್ಡಿ ಅವರು ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದ್ದಾರೆ.

ಕಳೆದ ವಿಧಾನಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಿ ಮತ ಎಣಿಕೆ ಗೊಂದಲದ ಬಳಿಕ ಅಂತಿಮವಾಗಿ 16 ಮತಗಳಿಂದ ಸೌಮ್ಯ ರೆಡ್ಡಿ ಸೋಲನುಭವಿಸಿದ್ದರು. ಅಂದಿನಿಂದಲೇ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಎಂದು ಕಾಂಗ್ರೆಸ್‌ ವಲಯದಲ್ಲಿ ಸುದ್ದಿಯಾಗಿತ್ತು. ಆದರೆ, ರಾಮಲಿಂಗಾ ರೆಡ್ಡಿ ಮತ್ತು ಸೌಮ್ಯಾ ರೆಡ್ಡಿ ಇಬ್ಬರೂ ಸ್ಪರ್ಧೆಗೆ ಮಾಡುವುದಿಲ್ಲ ಎಂದು ಹೇಳುತ್ತಲೇ ಬರುತ್ತಿದ್ದರು. ಇದೀಗ ಸಭೆಯ ಬಳಿಕ ಅವರಿಗೆ ಒಂದು ಮಟ್ಟದ ಸ್ಪಷ್ಟತೆ ಸಿಕ್ಕಿದೆ.

Sowmya Reddy

Sowmya Reddy : ಸರ್ವೇಗಳಲ್ಲಿ ಸೌಮ್ಯ ರೆಡ್ಡಿ ಪರ ಒಲವು ಇತ್ತು ಎಂದ ರೆಡ್ಡಿ

ವಿಸ್ತಾರ ನ್ಯೂಸ್‌ ಜತೆಗೆ ಮಾತನಾಡಿದ ಸೌಮ್ಯ ರೆಡ್ಡಿ ಅವರ ತಂದೆ, ಸಾರಿಗೆ ಸಚಿವ ರಾಮ ಲಿಂಗಾ ರೆಡ್ಡಿ ಅವರು, ವಿಧಾನ ಸಭಾ ಚುನಾವಣೆಯ ಫಲಿತಾಂಶದ ವಿಚಾರದಲ್ಲಿ ಕೋರ್ಟ್ ಹೋಗಿದ್ದೇವೆ. ಕೋರ್ಟ್‌ನಲ್ಲಿ ನಮ್ಮ ಪರವಾಗಿ ತೀರ್ಪು ಬರುವ ನಿರೀಕ್ಷೆ ಇದೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿ ನಡೆಸಿದ ಸರ್ವೇಗಳಲ್ಲಿ ಸೌಮ್ಯ ರೆಡ್ಡಿ ಪರವಾಗಿ ಯೇ ಹೆಚ್ಚಿನ ಒಲವು ಕಂಡುಬಂದಿದೆ. ಹೀಗಾಗಿ ಸೌಮ್ಯ ರೆಡ್ಡಿ ಅಭ್ಯರ್ಥಿ ಆಗಬೇಕು ಅಂತ ಕಾಂಗ್ರೆಸ್‌ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಒತ್ತಡ ಮಾಡಿದರು. ಬುಧವಾರ ಆರು ವಿಧಾನ ಸಭಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಿದೆ. ಬಹುತೇಕ ಎಲ್ಲ ಮುಖಂಡರು ಸಹ ಸೌಮ್ಯ ರೆಡ್ಡಿ ಅಭ್ಯರ್ಥಿ ಆಗಬೇಕು ಅಂತ ಹೇಳಿದ್ದಾರೆ. ಮುಖಂಡರು ಸಹ ಅದನ್ನೇ ಹೇಳಿದ್ದರಿಂದ ಅವರ ಅಭಿಪ್ರಾಯವನ್ನು ಸುರ್ಜೇವಾಲಾ ಮತ್ತು ಪಕ್ಷದ ಗಮನಕ್ಕೆ ತರುತ್ತೇನೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ಇದನ್ನೂ ಓದಿ : MP Pratap Simha: ನಾನು ಜೀವ ಇರುವವರೆಗೂ ಮೋದಿ ಭಕ್ತ, ಬಂಡಾಯ ಸ್ಪರ್ಧೆ ಮಾಡಲ್ಲ ಎಂದ ಪ್ರತಾಪ್‌ ಸಿಂಹ

ಲೋಕಸಭೆ ಸ್ಪರ್ಧೆ ಯೋಜನೆಯೇ ಮಾಡಿರಲಿಲ್ಲ ಎಂದ ಸೌಮ್ಯ ರೆಡ್ಡಿ

ʻʻಬೆಂಗಳೂರು ದಕ್ಷಿಣ ಕ್ಷೇತ್ರದ ಎಲ್ಲ ಮುಖಂಡರ ಬಂದಿದ್ದರು. ಸುಮಾರು ಆರು ತಿಂಗಳಿಂದ ನನ್ನನ್ನು ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡುತ್ತಲೇ ಇದ್ದರು. ನಮ್ಮ ಉಸ್ತುವಾರಿ ರಣದೀಪ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿಲ್ಲಬೇಕು ಎಂದು ಹೇಳಿದರು. ಸಭೆಗೆ ಬಂದ ಎಲ್ಲಾ ಮುಖಂಡರು ನಿಲ್ಲಬೇಕು ಎಂದು ಒತ್ತಾಯ ಮಾಡಿದರುʼʼ ಎಂದು ಸಭೆಯ ಬಳಿಕ ವಿಸ್ತಾರ ನ್ಯೂಸ್‌ ಜತೆ ಮಾತನಾಡಿದ ಸೌಮ್ಯ ರೆಡ್ಡಿ ಹೇಳಿದರು.

ʻʻಪಕ್ಷದ ಒಬ್ಬ ಸಿಪಾಯಿಯಾಗಿ ಪಕ್ಷದ ಮುಖಂಡರು, ಕಾರ್ಯಕರ್ತ ಹೇಳಿದಂತೆ ನಾನು ಮಾಡುತ್ತೇನೆ. ನಾನು ಎಲ್ಲಿ ಹೋಗುತ್ತೇನೋ ಅಲ್ಲಿ ಎಲ್ಲರೂ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದರು. ಕೋರ್ಟ್‌ನಲ್ಲಿ ನ್ಯಾಯ ಸಿಗುತ್ತದೆ ಎಂದು ನಂಬಿ ಲೊಕಸಭೆ ಸ್ಪರ್ಧೆ ಯೋಚನೆ ಮಾಡಿರಲಿಲ್ಲ. ಮೊನ್ನೆ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ತಂದೆ ಸಮಯ ಕೇಳಿದ್ಧರು. ಬುಧವಾರ ಬೆಳಗ್ಗೆ ನಡೆದ ಕಾರ್ಯಕರ್ತರ ಸಭೆಯಲ್ಲೂ ಅಭಿಪ್ರಾಯ ವ್ಯಕ್ತವಾಗಿದೆʼʼ ಎಂದು ಸೌಮ್ಯ ರೆಡ್ಡಿ ಹೇಳಿದರು.

ʻʻಸುಮಾರು ಹತ್ತು ವರ್ಷದಿಂದ ಬಿಜೆಪಿ ಅವಕಾಶ ಕೊಟ್ಟು ಜನ ನೋಡಿದ್ದಾರೆ‌. ನೋಡಿ ನೋಡಿ ಜನರಿಗೆ ಬೇಸರ ಆಗಿದೆ. ಜನಪ್ರತಿನಿಧಿಯಾಗಿ ಜನರನ್ನ ಪ್ರತಿನಿಧಿಸಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡೋರು ಬರಬೇಕು ಎಂಬ ಅಭಿಪ್ರಾಯ ಜನರಿಗಿದೆ‌. ನಾನು 100% ನಂಬಿದ್ದೇನೆ, ಜನರ ಕೈಯಲ್ಲಿದೆ. ಖಂಡಿತ ಆಶೀರ್ವಾದ ಮಾಡುತ್ತಾರೆ ಎಂದುಕೊಂಡಿದ್ದೇನೆʼʼ ಎಂದು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ ಬಳಿಕ ಸೌಮ್ಯ ರೆಡ್ಡಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading

ಕರ್ನಾಟಕ

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

Chaya Singh: ನಟಿ ಛಾಯಾ ಸಿಂಗ್‌ ಅವರ ತಾಯಿ ಮನೆಯಲ್ಲಿ 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಈ ಸಂಬಂಧ ಮನೆಕೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Chaya Singh
Koo

ಬೆಂಗಳೂರು: ಕನ್ನಡದ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ (Chaya Singh) ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಇದನ್ನೂ ಓದಿ | Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಛಾಯಾ ಸಿಂಗ್ ಪ್ರಸ್ತುತ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ ನಾಯಕಿ ಭೂಮಿಕಾ ಪಾತ್ರಧಾರಿಯಾಗಿ ನಟಿಸುತ್ತಿದ್ದಾರೆ. ಇನ್ನು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್ ಸಿನಿಮಾದಲ್ಲಿ ಛಾಯಾ ಸಿಂಗ್ ಅಭಿನಯಿಸಿದ್ದು, ಈ ವರ್ಷಾಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ.

ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

Vaishnavi Gowda
Vaishnavi Gowda

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸದ್ಯ ಝೀ ಕನ್ನಡ ವಾಹಿನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ʼಸೀತಾ ರಾಮʼ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ನಾಯಕಿ ಸೀತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2023ರ ಜುಲೈ 17ರಂದು ಆರಂಭವಾದ ಈ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಿದೆ. ಆರಂಭವಾಗಿ ಸುಮಾರು 10 ತಿಂಗಳು ಕಳೆದಿದ್ದರೂ ಈಗಲೂ ಟಾಪ್‌ ಲಿಸ್ಟ್‌ನಲ್ಲಿದೆ. ಉತ್ತಮ ಟಿಆರ್‌ಪಿ ಪಡೆದುಕೊಳ್ಳುತ್ತಿರುವ ಈ ಧಾರಾವಾಹಿಯ ದೃಶ್ಯವೇ ಸದ್ಯ ವೈಷ್ಣವಿ ಗೌಡ ಅವರಿಗೆ ಫಜೀತಿ ತಂದಿಟ್ಟಿದೆ.

ಏನಿದು ಪ್ರಕರಣ?

ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ವೈಷ್ಣವಿ ಗೌಡ ಟ್ರಾಫಿಕ್‌ ರೂಲ್ಸ್‌ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಪೊಲೀಸರಿಗೆ ಬಳಿಕ ಧಾರಾವಾಹಿಯ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದ ವಿಚಾರ ಗೊತ್ತಾಗಿತ್ತು. ಬಳಿಕ ಇದನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಸದ್ಯ ಸ್ಕೂಟರ್‌ ಮಾಲೀಕರಾದ ಸವಿತಾ ಹಾಗೂ ವೈಷ್ಣವಿ ಅವರಿಗೆ ತಲಾ 500 ರೂ. ದಂಡ ವಿಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಹಿಂದಿಗೆ ರಿಮೇಕ್‌

ಸದ್ಯ ʼಸೀತಾ ರಾಮʼ ಧಾರಾವಾಹಿ ಹಿಂದಿಗೆ ರಿಮೇಕ್‌ ಆಗುತ್ತಿದೆ. ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕನ್ನಡದಲ್ಲಿ ವೈಷ್ಣವಿ ಗೌಡ ಜತೆಗೆ ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಇದರ ಜತೆಗೆ ʼಸೀತಾ ರಾಮʼ ಮಲೆಯಾಳಂಗೂ ಡಬ್‌ ಆಗುತ್ತಿದೆ. ಝೀ ಕೇರಳಂ ವಾಹಿನಿಯಲ್ಲಿ ಇದು ಪ್ರಸಾರವಾಗಲಿದೆ.

ಇದನ್ನೂ ಓದಿ: Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬೆಂಗಳೂರು

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

Bengaluru News: ಶಾಲಾ ಶಿಕ್ಷಣ ವ್ಯವಸ್ಥೆಯಡಿ ರಾಜ್ಯ ಪಠ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 9 ಲಕ್ಷದಷ್ಟು ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಸರ್ಕಾರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಇಲಾಖೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. 1 ಕೋಟಿ ಮಕ್ಕಳ ಭವಿಷ್ಯವನ್ನು ಅತಂತ್ರಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಆರೋಪಿಸಿದ್ದಾರೆ.

VISTARANEWS.COM


on

former MLC Arun Shahapur latest Statement
Koo

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ (Congress Party) ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ದುರಾಡಳಿತದ ಮೂಲಕ ಶಿಕ್ಷಣ (Education) ಕ್ಷೇತ್ರವನ್ನು ಹಾಳುಗೆಡವಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ (Bengaluru News) ಆರೋಪಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಶಿಕ್ಷಣ ವ್ಯವಸ್ಥೆಯಡಿ ರಾಜ್ಯ ಪಠ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 9 ಲಕ್ಷದಷ್ಟು ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಸರ್ಕಾರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಇಲಾಖೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ ಎಂದು ಟೀಕಿಸಿದ ಅವರು, 1 ಕೋಟಿ ಮಕ್ಕಳ ಭವಿಷ್ಯವನ್ನು ಅತಂತ್ರಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

10ನೇ ತರಗತಿ ಪರೀಕ್ಷೆ ಬರೆದ 9 ಲಕ್ಷದಷ್ಟು ವಿದ್ಯಾರ್ಥಿಗಳು ಮತ್ತು ಪಾಲಕರು ಆತಂಕದಲ್ಲಿದ್ದಾರೆ. ಕೆಎಸ್‍ಇಎಪಿ ಮೂಲಕ ಪರೀಕ್ಷೆ ನಡೆಸಿದ್ದಾರೆ. ಯಶಸ್ವಿ ಪರೀಕ್ಷೆ ನಡೆಸಿದ್ದಾಗಿ ಹೇಳಿದ್ದಾರೆ. ಸ್ವಾತಂತ್ರ್ಯ ಬಂದ ಬಳಿಕ ಅತ್ಯಂತ ಕೆಟ್ಟ ಪರೀಕ್ಷೆ ನಡೆದಿದ್ದರೆ ಅದು ಮಧು ಬಂಗಾರಪ್ಪ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂದು ಟೀಕಿಸಿದರು.

ಸೂತ್ರದ ಗೊಂಬೆಯಾಗಿದ್ದ ಶಿಕ್ಷಣ ಸಚಿವರು

ಪಠ್ಯಪುಸ್ತಕದಲ್ಲಿನ ಪಾಠಗಳನ್ನು ಕಿತ್ತು ಹಾಕುವುದಾಗಿ ಹೇಳುವ ಮೂಲಕ ಈ ಸರ್ಕಾರ ಕಾರ್ಯಾರಂಭ ಮಾಡಿದೆ. ಶಿಕ್ಷಣ, ಪಠ್ಯದ ವಿಚಾರ ಶಿಕ್ಷಣ ತಜ್ಞರ ಮಟ್ಟದಲ್ಲಿ, ಇಲಾಖೆ ಮಟ್ಟದಲ್ಲಿ ನಿರ್ಧಾರವಾಗುತ್ತಿತ್ತು. ಆದರೆ, ಕಳೆದ ವರ್ಷ ಅದು ಕ್ಯಾಬಿನೆಟ್‍ನಲ್ಲಿ ನಿರ್ಧಾರವಾಗಿದೆ. ಇವರು ಕನ್ನಡದ 10 ಪಾಠ, ಸಮಾಜ ವಿಜ್ಞಾನದ 10 ಪಾಠಗಳನ್ನು ತೆಗೆದುಹಾಕಿ ಮೊಟ್ಟ ಮೊದಲ ಬಾರಿಗೆ ರಾಜಕೀಯಕರಣಗೊಳಿಸುವ ಕಾರ್ಯಕ್ಕೆ ಈಗಿನ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಕೈ ಹಾಕಿದ್ದರು. ಶಿಕ್ಷಣ ಸಚಿವರು ಸೂತ್ರದ ಗೊಂಬೆಯಾಗಿದ್ದರು ಎಂದು ಅರುಣ್ ಶಹಾಪುರ ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಇವತ್ತು ಇಡೀ ಕರ್ನಾಟಕದಲ್ಲಿ ಚುನಾವಣಾ ಚಾಣಕ್ಯರ ಕಪಿಮುಷ್ಟಿಗೆ ಸಿಲುಕಿದೆ. ಚುನಾವಣಾ ಚಾಣಕ್ಯರೇ ಕಾಂಗ್ರೆಸ್ಸಿನ ನೀತಿ ನಿರೂಪಿಸುತ್ತಿದ್ದಾರೆ. ಪಾಠಗಳು ಯಾವುದೇ ಶಾಲೆಯಲ್ಲಿ ಮಕ್ಕಳ ವರೆಗೆ ತಲುಪಲಿಲ್ಲ. ಎನ್‍ಇಪಿ ಜಾರಿ ಇಲ್ಲ ಎಂಬ ಗೊಂದಲಗಳಿಗೆ ಕೈಹಾಕಿದ್ದರು. ಕೊನೆಗೆ ಪರೀಕ್ಷೆಯು ಪ್ರಹಸನ ಎಂಬಂತೆ ನಡೆದಿದೆ ಎಂದು ತಿಳಿಸಿದರು. 5ನೇ ತರಗತಿ, 8ನೇ ತರಗತಿ, 9ನೇ ತರಗತಿ, 11ನೇ ತರಗತಿ ಪರೀಕ್ಷೆ ನಡೆಯುತ್ತದೆಯೋ ಇಲ್ಲವೋ ಎಂಬ ವಿಚಾರ ದಿನವೂ ಬೆಳಿಗ್ಗೆ ಪಾಲಕರಿಗೆ ತಲೆನೋವಾಗಿ ಪರಿಗಣಮಿಸಿತ್ತು ಎಂದರು.

ಇದನ್ನೂ ಓದಿ: Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

ಈ ಪರೀಕ್ಷೆಗಳ ಬಗ್ಗೆ ಈಗಲೂ ದೃಢ ನಿಲುವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿಲ್ಲ. 10ನೇ ತರಗತಿ ಹಾಗೂ ಪಿಯುಸಿಗೆ 3 ಪರೀಕ್ಷೆ (10- 1,2,3), (ಪಿಯು- 1,2,3) ಮಾಡಲು ಹೊರಟವರು ಮಕ್ಕಳ, ಪಾಲಕರ ಒತ್ತಡ, ಗೊಂದಲವನ್ನು ಯೋಚಿಸಿಲ್ಲ. ಯಾವ ಪರೀಕ್ಷೆ, ಪರೀಕ್ಷೆ ಬರೆದವರು ಯಾರು, ಯಾರಿಂದ ಮೌಲ್ಯಮಾಪನ ಎಂಬ ದೊಡ್ಡ ಗೊಂದಲಕ್ಕೆ ಇದು ಕಾರಣವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇಲಾಖೆಗೂ ಈ ಕುರಿತು ಸ್ಪಷ್ಟತೆ ಇಲ್ಲ. 3 ಪರೀಕ್ಷೆ ಇವರೇನು ಪುಕ್ಕಟೆ ಮಾಡುತ್ತಾರಾ ಎಂದರು.

ಪರೀಕ್ಷೆ ಎಂದರೆ ಸರ್ಕಾರಕ್ಕೆ ಒಂದು ಉದ್ಯಮವೇ?

ಒಂದು ಪರೀಕ್ಷೆಗೆ ರೂ. 410, 2 ಪರೀಕ್ಷೆಗೆ 510, 3 ಆದರೆ 710 ರೂ. ಪಾವತಿಸಬೇಕು. ಪರೀಕ್ಷೆ ಎಂದರೆ ಸರ್ಕಾರಕ್ಕೆ ಒಂದು ಉದ್ಯಮವೇ? ಪ್ರತಿಯೊಂದು 10ನೇ ಪರೀಕ್ಷೆ ನಡೆಯುವ ಕೇಂದ್ರಕ್ಕೆ ವೆಬ್ ಕಾಸ್ಟಿಂಗ್ ಅಳವಡಿಸಲು ಆದೇಶ ಮಾಡಿ ಒತ್ತಡ ಹೇರುವ ಹಾಗೂ ಯಾಕಾದರೂ ಪರೀಕ್ಷಾ ಕೇಂದ್ರ ಮಾಡಿದ್ದೇವೋ ಎಂದು ಯೋಚಿಸುವ ಪರಿಸ್ಥಿತಿಯನ್ನು ಸರ್ಕಾರ ನಿರ್ಮಿಸಿತ್ತು ಎಂದು ದೂರಿದರು.

ಪರೀಕ್ಷೆ ಸಂದರ್ಭದಲ್ಲಿ ಎಲ್ಲಿ ತಮ್ಮ ನೌಕರಿಗೆ ಕುತ್ತಾಗುವುದೋ ಎಂಬ ಆತಂಕ ಶಿಕ್ಷಕರಲ್ಲಿತ್ತು. ವೆಬ್ ಕಾಸ್ಟಿಂಗ್ ಬಗ್ಗೆ ಯಾವುದೇ ಶಿಕ್ಷಕರಿಗೆ ಪರಿಕಲ್ಪನೆ ಇರಲಿಲ್ಲ. ತರಬೇತಿ, ಮಾಹಿತಿಯೂ ಇರಲಿಲ್ಲ ಎಂದರು.

10ನೇ ತರಗತಿ ಪರೀಕ್ಷೆ ಎಂದರೆ ಮಕ್ಕಳನ್ನು ಭಯದ ವಾತಾವರಣದಲ್ಲಿ ಇಡಲಾಯಿತು. 10ನೇ ತರಗತಿ ಪರೀಕ್ಷೆಯಲ್ಲಿ ನೈಜ ಮೌಲ್ಯಮಾಪನ ಮಾಡಿದ್ದರೆ ಫಲಿತಾಂಶ ಪಾತಾಳಕ್ಕೆ ಕುಸಿಯಲಿದೆ ಎಂಬುದು ಅವರಿಗೆ ಅರ್ಥವಾಯಿತು. ಇಡೀ ರಾಜ್ಯದ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಡಯಟ್ ಮತ್ತು ಇಲಾಖೆಯನ್ನು ಕತ್ತಲಲ್ಲಿ ಇಡಲಾಯಿತು. ಇವರು ಸ್ಥಾಪಿಸಿದ ಕೆಎಸ್‍ಇಇ ಮೂಲಕ ಉತ್ತೀರ್ಣ ಅಂಕವನ್ನು 35ರಿಂದ 25ಕ್ಕೆ ಇಳಿಸಿದ್ದಾರೆ. ಇದು ಶಿಕ್ಷಣ ಕ್ಷೇತ್ರ ಹಾಳು ಮಾಡಿದ ಈ ಸರ್ಕಾರದ ಸಾಧನೆ ಎಂದು ಟೀಕಿಸಿದರು.

ಇದನ್ನೂ ಓದಿ: Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ. ರಾಜೀವ್, ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಇದ್ದರು.

Continue Reading

ರಾಜಕೀಯ

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released: ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಎಚ್.ಡಿ. ರೇವಣ್ಣ ಹೇಳಿದ್ದಾರೆ.

VISTARANEWS.COM


on

HD Revanna Released first reaction after release will be acquitted of all charges
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

ರೇವಣ್ಣ ಅವರು ತಂದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (HD Devegowda) ನಿವಾಸಕ್ಕೆ ತೆರಳಿದ್ದು, ಅವರನ್ನು ಕಂಡ ಕೂಡಲೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಬ್ಬಿಕೊಂಡು ಸ್ವಾಗತಿಸಿದರು. ಇನ್ನು ಕುಟುಂಬಸ್ಥರನ್ನು ಕಂಡಕೂಡಲೇ ರೇವಣ್ಣ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

ಹನ್ನೊಂದು ದಿನಗಳ ಹಿಂದೆ ಇದೇ ದೇವೇಗೌಡರ ಮನೆಯಲ್ಲಿ ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಸೀದಾ ಅಲ್ಲಿಗೇ ಎಚ್‌.ಡಿ. ರೇವಣ್ಣ ಬಂದಿದ್ದಾರೆ. ಇದಕ್ಕಿಂತ ಮುಂಚಿತವಾಗಿ ಎಚ್‌.ಡಿ. ದೇವೇಗೌಡರು ಮನೆಯಲ್ಲಿ ವಿಶೇಷ ಪೂಜೆಯನ್ನು ಮಾಡಿಸಿದ್ದರು. ರೇವಣ್ಣ ಮನೆಗೆ ಎಂಟ್ರಿ ಆದ ತಕ್ಷಣ ಅವರನ್ನು ತಬ್ಬಿಕೊಂಡ ಕುಮಾರಸ್ವಾಮಿ ಸಂತೈಸಿದರು. ಅಲ್ಲಿಂದ ಸೀದಾ ಒಳಗೆ ಹೋದ ರೇವಣ್ಣ ಅವರು ಎಚ್‌.ಡಿ. ದೇವೇಗೌಡರ ಕೋಣೆಗೆ ಎಂಟ್ರಿ ಕೊಟ್ಟರು.
ದೇವೇಗೌಡರನ್ನು ನೋಡಿ ಕಾಲಿಗೆ ಬಿದ್ದು ಕಣ್ಣೀರು ಹಾಕಿದರು ಎನ್ನಲಾಗಿದೆ. ಜತೆಗೆ ತಾಯಿ ಚನ್ನಮ್ಮ ಅವರ ಆಶೀರ್ವಾದವನ್ನೂ ಈ ವೇಳೆ ರೇವಣ್ಣ ಪಡೆದುಕೊಂಡರು.

ಭವಾನಿ ರೇವಣ್ಣ ನೆಗ್ಲೆಟ್‌?

ಎಚ್‌.ಡಿ. ರೇವಣ್ಣ ಅವರಿಗೆ ಸೋಮವಾರ ಸಂಜೆಯೇ ಬೇಲ್‌ ಸಿಕ್ಕರೂ ಭವಾನಿ ರೇವಣ್ಣ ಅವರ ಸುದ್ದಿಯೇ ಇಲ್ಲವಾಘಿದೆ. ಇನ್ನು ಪದ್ಮನಾಭ ನಗರದ ದೇವೇಗೌಡರ ನಿವಾಸಕ್ಕೂ ಅವರು ಆಗಮಿಸಲಿಲ್ಲ. ರೇವಣ್ಣ ಜೈಲಿಗೆ ಹೋದಾಗಲೂ ನೋಡಲು ಹೋಗಲಿಲ್ಲ. ರೇವಣ್ಣ ಎಸ್ಐಟಿ ಕಸ್ಟಡಿಯಲ್ಲಿ ಇದ್ದಾಗಲೂ ಬರಲಿಲ್ಲ. ಬಿಡುಗಡೆ ಆಗಿ ದೇವೇಗೌಡರ ನಿವಾಸಕ್ಕೆ ರೇವಣ್ಣ ಬಂದರೂ ಅತ್ತ ಕಡೆ ಸುಳಿಯದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಂತರ ಕಾಯ್ದುಕೊಂಡರಾ ಭವಾನಿ ಹಾಗೂ ಸೂರಜ್ ರೇವಣ್ಣ?

ಭವಾನಿ ರೇವಣ್ಣ ಹಾಗೂ ಸೂರಜ್ ರೇವಣ್ಣ ಅಂತರ ಕಾಯ್ದುಕೊಂಡರಾ ಎಂಬ ಪ್ರಶ್ನೆ ಮೂಡುತ್ತಿದೆ. ಈ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಗ್ಗೆ ಅಸಹನೆಯಾ? ಇಲ್ಲವೇ ಪ್ರಜ್ವಲ್ ಕೇಸ್‌ ಬಗ್ಗೆ ಸಮರ್ಥನೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೀಗೆ ಮಾಡುತ್ತಿದ್ದಾರಾ? ಎಂಬ ಪ್ರಶ್ನೆ ಮೂಡಿದೆ.

ದೇವೇಗೌಡರ ಜತೆ ಊಟಕ್ಕೆ ಕುಳಿತ ಮಕ್ಕಳು; ಕಂಪ್ಲೇಂಟ್‌ ಹೇಳಿದರಾ ರೇವಣ್ಣ?

ಮನೆಗೆ ಧಾವಿಸಿದ ಹಿರಿಯ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಮೊದಲಿಗೆ ಬೆಳಗ್ಗೆ ಮನೆಯಲ್ಲಿ ಮಾಡಿಸಲಾಗಿದ್ದ ದೇವರ ಪೂಜೆಯ ಪ್ರಸಾದವನ್ನು ಕೊಡಲಾಯಿತು. ಬಳಿಕ ಎಲ್ಲರೂ ಒಟ್ಟಿಗೆ ಊಟಕ್ಕೆ ಕುಳಿತರು. ಊಟದ ಸಮಯದಲ್ಲಿ ರೇವಣ್ಣ ಅವರು ಎಸ್‌ಐಟಿ ವಶ ಹಾಗೂ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಹೇಳಿಕೊಂಡಿದ್ದಾರೆನ್ನಲಾಗಿದೆ.

ಎಸ್ಐಟಿ ಅಧಿಕಾರಿಗಳು ತನಿಖೆ ನೆಪದಲ್ಲಿ ಏನೆಲ್ಲ ಪ್ರಶ್ನೆಗಳನ್ನು ಕೇಳಿದರು? ಯಾವ ಮಾದರಿಯ ಪ್ರಶ್ನೆಗಳು ಇದ್ದವು? ಯಾವೆಲ್ಲ ಒತ್ತಡವನ್ನು ನೀಡಿದರು? ಎಂಬಿತ್ಯಾದಿ ವಿಷಯಗಳ ಬಗ್ಗೆ ಎಚ್‌.ಡಿ. ರೇವಣ್ಣ ಅವರು ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯ ಷಡ್ಯಂತ್ರದ ಬಗ್ಗೆ ಚರ್ಚೆ?

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ನಿಷ್ಪಕ್ಷಪಾತ ತನಿಖೆಯನ್ನು ನಡೆಸಲಾಗುತ್ತಿಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮಧ್ಯಪ್ರವೇಶ ಮಾಡಿದ್ದಾರೆ. ರಾಜಕೀಯವಾಗಿ ಏನೆಲ್ಲ ಷಡ್ಯಂತ್ರ ನಡೆಯುತ್ತಿದೆ ಎಂಬ ಬಗ್ಗೆ ಈಗಾಗಲೇ ಆರೋಪ ಮಾಡಿರುವ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯವನ್ನು ರೇವಣ್ಣ ಮುಂದೆ ಪ್ರಸ್ತಾಪ ಮಾಡಿದ್ದಾರೆನ್ನಲಾಗಿದೆ. ಅಲ್ಲದೆ, ರಾಜಕೀಯ ಷಡ್ಯಂತ್ರದ ಜತೆಗೆ ಮುಂದಿನ ನಡೆ ಏನು ಎಂಬ ಬಗ್ಗೆಯೂ ತಂದೆ ಮತ್ತು ಮಕ್ಕಳು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

ಜೆಡಿಎಸ್‌ ಶಾಸಕರು, ಮುಖಂಡರ ಜತೆ ರೇವಣ್ಣ ಚರ್ಚೆ

ಈ ವೇಳೆ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಜೆಡಿಎಸ್‌ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಕೆ ಆರ್ ಪೇಟೆ ಶಾಸಕ ಎಚ್.ಡಿ. ಮಂಜುನಾಥ್, ಮಾಗಡಿ ಮಾಜಿ ಶಾಸಕ ಮಂಜುನಾಥ್ ಸೇರಿದಂತೆ ಹಲವರು ಆಗಮಿಸಿದ್ದಾರೆ. ಇನ್ನು ಎಚ್‌.ಡಿ. ರೇವಣ್ಣ ಸಹ ಕೆಲವು ಪ್ರಮುಖರ ಜತೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

Continue Reading
Advertisement
Bank Loan Fraud
ಪ್ರಮುಖ ಸುದ್ದಿ5 mins ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ19 mins ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ36 mins ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ56 mins ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ1 hour ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ1 hour ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Narendra Modi
ಪ್ರಮುಖ ಸುದ್ದಿ2 hours ago

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Viral Video
ವೈರಲ್ ನ್ಯೂಸ್2 hours ago

Viral Video: 25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಹುಟ್ಟಿಕೊಂಡಿದ್ದು ಹೇಗೆ ಗೊತ್ತೇ?

Chaya Singh
ಕರ್ನಾಟಕ2 hours ago

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

former MLC Arun Shahapur latest Statement
ಬೆಂಗಳೂರು2 hours ago

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Released first reaction after release will be acquitted of all charges
ರಾಜಕೀಯ2 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20248 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ9 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು10 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ16 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಟ್ರೆಂಡಿಂಗ್‌