ಬೆಂಗಳೂರು: ಪರಿಚಯಸ್ಥ ಮಹಿಳೆಯರು ಮನೆಗೆ ಬಂದಾಗ ಸ್ಪೈ ಕ್ಯಾಮೆರಾದಿಂದ ಕದ್ದು ಅವರ ವಿಡಿಯೋ ಮಾಡಿಕೊಂಡು ನಂತರ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ನಗರ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಮಹೇಶ್ (30) ಬಂಧಿತ ಆರೋಪಿ. ಪರಿಚಯಸ್ಥ ಮಹಿಳೆಯರು ಮನೆಗೆ ಬಂದಾಗ ಈತ ರಹಸ್ಯವಾಗಿ ವಿಡಿಯೋ ಮಾಡಿಕೊಂಡಿದ್ದು, ನಂತರ ಮಹಿಳೆಗೆ ಇನ್‌ಸ್ಟಾಗ್ರಾನಲ್ಲಿ ಮೆಸೇಜ್ ಮಾಡಿದ್ದ. ಫೇಕ್ ಅಕೌಂಟ್‌ನಿಂದ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿದ್ದು, ಅಶ್ಲೀಲವಾಗಿ ಮಾತಾಡುವಂತೆ ಒತ್ತಾಯಿಸಿದ್ದ. ಕೆಲ ವಿಡಿಯೋ ತುಣುಕುಗಳನ್ನು ಕಳಿಸಿ, ಇವುಗಳನ್ನು ಬಹಿರಂಗ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಹೀಗೆ ಚಿತ್ರೀಕರಣ ಮಾಡಲು ಆತ ಮೊಬೈಲ್ ಚಾರ್ಜರ್‌ನಲ್ಲಿ ಇರುವ ಅತಿ ಸೂಕ್ಷ್ಮವಾದ ಕ್ಯಾಮೆರಾವನ್ನು ಬಳಸಿಕೊಂಡಿದ್ದ ಎಂದು ಗೊತ್ತಾಗಿದೆ. ಈ ಸಂಬಂಧ ಈಶಾನ್ಯ ವಿಭಾಗದ ಸೈಬರ್ ಠಾಣೆಗೆ ಮಹಿಳೆ ದೂರು ನೀಡಿದ್ದರು. ಆರೋಪಿಯನ್ನು ಬಂಧಿಸಿರುವ ಪೊಲೀಸರು ಬಂಧಿತನಿಂದ ಎರಡು ಸ್ಪೈ ಕ್ಯಾಮೆರಾ, ಲ್ಯಾಪ್‌ಟಾಪ್, 2 ಪೆನ್‌ಡ್ರೈವ್, 2 ಮೆಮೊರಿ ಕಾರ್ಡ್, ಎರಡು ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ. ಈಶಾನ್ಯ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಥುರಾ ದೇವಳದಲ್ಲಿ ಕೃಷ್ಣ ಜನ್ಮಾಷ್ಟಮಿ ವೇಳೆ ಗುಂಪಿನಲ್ಲಿ ಉಸಿರುಗಟ್ಟಿ ಇಬ್ಬರ ಬಲಿ