Site icon Vistara News

SSLC Exam 3 Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ 3ರ ಫಲಿತಾಂಶ ಪ್ರಕಟ; ಮರುಎಣಿಕೆ, ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

SSLC Exam 3 Result Declared

ಬೆಂಗಳೂರು: ಆಗಸ್ಟ್‌ 2 ರಿಂದ 9ರವರೆಗೆ ನಡೆದಿದ್ದ ಎಸ್ಎಸ್ಎಲ್‌ಸಿ ಪರೀಕ್ಷೆ-3 (SSLC Exam- 3) ಫಲಿತಾಂಶ ಸೋಮವಾರ ಪ್ರಕಟಗೊಂಡಿದೆ. ಪರೀಕ್ಷೆ 3ರಲ್ಲಿ ಶೇ. 25.88ರಷ್ಟು ಫಲಿತಾಂಶ (SSLC Exam 3 Result 2024) ಬಂದಿದೆ. ರಾಜ್ಯಾದ್ಯಂತ 410 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ 97,952 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 25,347 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು ಫಲತಾಂಶವನ್ನು Karresults.nic.in ಹಾಗೂ Kseab.karnataka.gov.in ನೋಡಬಹುದು. ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ಸೋಮವಾರ ಮಧ್ಯಾಹ್ನ 12 ಗಂಟೆ ನಂತರ ಎಸ್‌ಎಂಎಸ್‌ ಮೂಲಕ ರವಾನಿಸಲಾಗುತ್ತದೆ.

ಇನ್ನೂ ಆ.13ರಿಂದ 16ರವರೆಗೆ ರಾಜ್ಯದ 21 ಶೈಕ್ಷಣಿಕ ಜಿಲ್ಲೆಗಳ 62 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಒಟ್ಟು 13,055 ಮೌಲ್ಯಮಾಪಕರು ಪಾಲ್ಗೊಂಡಿದ್ದರು. ಶಾಲೆಗಳ ಕ್ರೋಢೀಕೃತ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ನೀಡಲಾಗುತ್ತಿದೆ. ಶಾಲಾ ಹಂತದಲ್ಲೇ ಅಂದೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಫಲಿತಾಂಶವನ್ನು ಪ್ರೌಢಶಾಲೆಗಳಲ್ಲಿ ಆ ದಿನವೇ ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ: Assault Case : ಪಾನ್‌ಶಾಪ್‌ಗೆ ಬಂದವನ ಮೇಲೆ ಅಟ್ಯಾಕ್‌; ಸಿಕ್ಕ ಸಿಕ್ಕಂತೆ ಕೊಡಲಿಯಿಂದ ಹಲ್ಲೆ

ಸ್ಕ್ಯಾನ್‌ ಪ್ರತಿ ಪಡೆಯಲು ಆ.30 ಕೊನೆ ದಿನ

ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಸ್ಕ್ಯಾನ್‌ ಪ್ರತಿ, ಮರು ಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಮಂಡಳಿಯ ವೆಬ್‌ಸೈಟ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆ.26ರಿಂದ 30ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿಯನ್ನು ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆ.31ರವರಗೆ ಶುಲ್ಕ ಪಾವತಿಸಬೇಕು. ಉತ್ತರ ಪತ್ರಿಕೆಗಳ ಮರುಎಣಿಕೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆಗಸ್ಟ್‌ 31 ರಿಂದ ಸೆಪ್ಟೆಂಬರ್‌ 4ರವರೆಗೆ ಅರ್ಜಿ ಸಲ್ಲಿಸಬಹುದು. ಜತೆಗೆ ಸೆ.5ರೊಳಗಾಗಿ ಶುಲ್ಕವನ್ನು ಪಾವತಿಬಹುದಾಗಿದೆ.

ಇನ್ನೂ ನೇರವಾಗಿ ಮರು ಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ. ಬದಲಿಗೆ ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಿದೆ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಸ್ಕ್ಯಾನ್‌ ಪ್ರತಿಯನ್ನು ಪಡೆಯಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version