SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌! - Vistara News

ಬೆಂಗಳೂರು

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024: ರಾಜ್ಯಾದ್ಯಂತ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದರೆ, ಅತ್ತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಿಕ್ಸರ್‌ ಬಾರಿಸಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಹಿಂದಿಕ್ಕಿರುವ ಅನುದಾನರಹಿತ ಶಾಲೆಗಳು ಫಲಿತಾಂಶದಲ್ಲಿ ಮುನ್ನುಗಿವೆ.

VISTARANEWS.COM


on

SSLC Result 2024 78 schools get zero results in SSLC exams
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾರ್ಚ್‌-ಏಪ್ರಿಲ್ 2024ರ ಎಸ್ಎಸ್‌ಎಲ್‌ಸಿ ಪರೀಕ್ಷೆಯನ್ನು (SSLC Result 2024) ಮಾ. 25 ರಿಂದ ಏ. 06 ರವರೆಗೆ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ನಡೆಸಲಾಗಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಏ.15ರಿಂದ 24ರವರೆಗೆ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 237 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಒಟ್ಟು 61,160 ಮೌಲ್ಯಮಾಪಕರು ಪಾಲ್ಗೊಂಡಿದ್ದರು. ಈ ಬಾರಿ ಪರೀಕ್ಷೆಗೆ ಒಟ್ಟು 8,59,967 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 6,31,204 ಮಂದಿ ಉತ್ತೀರ್ಣರಾಗಿದ್ದು, ಶೇ. 73.40ರಷ್ಟು ಫಲಿತಾಂಶ ಬಂದಿದೆ. ಇನ್ನೂ ಈ ಬಾರಿ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದರೆ, ಅತ್ತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಿಕ್ಸರ್‌ ಬಾರಿಸಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಹಿಂದಿಕ್ಕಿರುವ ಅನುದಾನರಹಿತ ಶಾಲೆಗಳು ಫಲಿತಾಂಶದಲ್ಲಿ ಮುನ್ನುಗಿವೆ.

Sslc exam Result 2024

ಬಾಲಕಿಯರೇ ಫಸ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 2,87,416‌ ಹುಡುಗರು, 3,43,788 ಹುಡುಗಿಯರು ಪಾಸ್‌ ಆಗಿದ್ದಾರೆ. ಈ ಮೂಲಕ ಬಾಲಕರು ಶೇ. 65.90 ಹಾಗೂ ಬಾಲಕಿಯರು ಶೇ. 81.11 ಫಲಿತಾಂಶದ ಮೂಲಕ ಮೇಲುಗೈ ಸಾಧಿಸಿದ್ದಾರೆ.

ಸಿಕ್ಸರ್‌ ಬಾರಿಸಿದ ಗ್ರಾಮೀಣ ವಿದ್ಯಾರ್ಥಿಗಳು

ಇನ್ನೂ ಪ್ರತಿ ಬಾರಿಯಂತೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಫಲಿತಾಂಶದಲ್ಲಿ ಮುಂದಿದ್ದಾರೆ. ನಗರ ಪ್ರದೇಶದಲ್ಲಿ 4,93,900 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 3,59,703 ವಿದ್ಯಾರ್ಥಿಗಳು ಪಾಸ್‌ ಆಗಿದ್ದು ಶೇ. 72ರಷ್ಟು ಫಲಿತಾಂಶ ಬಂದಿದೆ. ಗ್ರಾಮೀಣ ಭಾಗದಲ್ಲಿ 3,66,067 ವಿದ್ಯಾರ್ಥಿಗಳು ಹಾಜರಾಗಿದ್ದು, 2,71,501 ಉತ್ತೀರ್ಣರಾಗಿದ್ದು, ಶೇ. 74.17 ರಷ್ಟು ಫಲಿತಾಂಶ ಬಂದಿದೆ.

Sslc exam Result 2024

ಸರ್ಕಾರಿ ಶಾಲೆಗಳನ್ನು ಹಿಂದಿಕ್ಕಿದ ಅನುದಾನರಹಿತ ಶಾಲೆ

ಈ ಬಾರಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಹಿಂದಿಕ್ಕಿ ಅನುದಾನರಹಿತ ಶಾಲೆಗಳು ಮುಂದಿದೆ. 5906 ಸರ್ಕಾರಿ ಶಾಲೆಗಳಿಂದ 3,36,533 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 2,43, 851 ವಿದ್ಯಾರ್ಥಿಗಳು ಪಾಸ್‌ ಆಗಿದ್ದು, 72.46% ಶೇಕಡಾವಾರು ಫಲಿತಾಂಶ ಬಂದಿದೆ. 3,606 ಅನುದಾನಿತ ಶಾಲೆಗಳಿಂದ 2,07,821 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,50,094 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 72.22ರಷ್ಟು ಫಲಿತಾಂಶ ಬಂದಿದೆ. 6144 ಅನುದಾನರಹಿತ ಶಾಲೆಗಳಿಂದ 2,58,753 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 2,23,720 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್‌ ಆಗಿದ್ದು, 86.46 ರಷ್ಟು ಫಲಿತಾಂಶ ಬಂದಿದೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ

ರಾಜ್ಯದಲ್ಲಿ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. 3 ಸರ್ಕಾರಿ ಶಾಲೆಗಳು ಹಾಗೂ 13 ಅನುದಾನಿತ ಶಾಲೆಗಳು ಸೇರಿದಂತೆ 62 ಅನುದಾನಿತ ಶಾಲೆಗಳು ಶೂನ್ಯ ಫಲಿತಾಂಶ ಬಂದಿದೆ. ಕಳೆದ ಬಾರಿ 34 ಶಾಲೆಗಳು ಶೂನ್ಯ ಫಲಿತಾಂಶ ಬಂದಿತ್ತು. ಈ ಬಾರಿ ಶೂನ್ಯ ಫಲಿತಾಂಶವು ದುಪ್ಪಟ್ಟಾಗಿದೆ.

ಎಸ್‌ಎಂಎಸ್‌ ಮೂಲಕವೂ ಬರುತ್ತೆ ರಿಸಲ್ಟ್‌

ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು https://karresults.nic.in ವೀಕ್ಷಿಸಬಹುದು. ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ಮೇ 9ರ ಬೆಳಗ್ಗೆ 10.30 ರ ನಂತರ ಎಸ್.ಎಂ.ಎಸ್ ಮೂಲಕ ರವಾನಿಸಲಾಗುತ್ತದೆ. ಶಾಲೆಗಳ ಕ್ರೋಢೀಕೃತ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಲಿಯ ಜಾಲತಾಣ https://kseab.karnataka.gov.in ಗುರುವಾರ 1 ಗಂಟೆಯ ನಂತರ ನೀಡಲಾಗುವುದು. ಶಾಲಾ ಹಂತದಲ್ಲಿ ಅಂದೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಫಲಿತಾಂಶವನ್ನು ಪ್ರೌಢಶಾಲೆಗಳಲ್ಲಿ ಆ ದಿನವೇ ಪ್ರಕಟಿಸಲಾಗುವುದು.

ವೆಬ್‌ ಕಾಸ್ಟಿಂಗ್‌ ಪದ್ಧತಿ

ಪ್ರಪ್ರಥಮ ಬಾರಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಈ ಕ್ರಮವು ವಿನೂತನವಾಗಿದ್ದು, ಪರೀಕ್ಷೆಯ ಸಮಗ್ರತೆಯನ್ನು ಪುನರ್‌ಸ್ಥಾಪಿಸಲು ಸಹಾಯಕವಾಗಿದೆ. ಈ ಮೂಲಕ ಪರೀಕ್ಷಾ ಅಕ್ರಮಗಳನ್ನು ಆಶ್ರಯಿಸದೆ ಪರೀಕ್ಷೆಗಳನ್ನು ಬರೆಯುವ ಅಭ್ಯಾಸವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಸಫಲವಾಗಿದ್ದು, ಈ ಕ್ರಮವನ್ನು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನೊಳಗೊಂಡಂತೆ ಎಲ್ಲರೂ ಸ್ವಾಗತಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

CM Siddaramaiah: ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದು, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

One year for the government Cm Siddaramaiah reveals many dreams and media interaction live
Koo

ಬೆಂಗಳೂರು: ಇಂದಿಗೆ (ಮೇ 20) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಾಧ್ಯಮದ ಸಂವಾದದ ಮೂಲಕ ರಾಜ್ಯದ ಜನರಿಗೆ ಧನ್ಯವಾದ ಹೇಳಿದ್ದಾರೆ. ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದು ಹೇಳಿದ್ದಾರೆ. ಅಲ್ಲದೆ, ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವ ಗುರಿ ಇದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದು, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಡಿ

ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ. ಅಭಿವೃದ್ಧಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದಾಗಿದೆ. ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧ ಪಕ್ಷಗಳು ಜಾತಿ – ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆಯಾಗಿದೆ. ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ಸಿಎಂ ಸಿದ್ದರಾಮಯ್ಯ ಭರವಸೆಯನ್ನು ನೀಡಿದ್ದಾರೆ.

ಸಿಎಂ ಮಾಧ್ಯಮ ಸಂವಾದ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಸೋಮವಾರ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ನುಡಿದಂತೆ ನಡೆದಿದ್ದೇವೆ, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದೇವೆ ಎಂದು ಹೇಳಿದರು. ಅಲ್ಲದೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಎಂಬಿತ್ಯಾದಿ ಯೋಜನೆಗಳ ಬಗ್ಗೆ ಅಂಕಿ-ಅಂಶಗಳ ಸಹಿತ ಮಾಹಿತಿ ನೀಡಿದರು.

Continue Reading

ಬೆಂಗಳೂರು

Drowned In water : ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

Drowned In water : ಬಾಗಲಕೋಟೆಯಲ್ಲಿ ಬಾಲಕರಿಬ್ಬರು ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿರುವ ದುರ್ಘಟನೆ ನಡೆದಿದೆ. ಉಡುಪಿಯಲ್ಲಿ ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ.

VISTARANEWS.COM


on

By

Drowned in water
Koo

ಬಾಗಲಕೋಟೆ: ಸೋಮವಾರ ಬೆಳಗ್ಗೆ ಈಜಲು ಕೆರೆಗೆ (Drowned In water) ಇಳಿದ ಬಾಲಕರಿಬ್ಬರು ಹೆಣವಾಗಿ ವಾಪಸ್‌ ಆಗಿದ್ದಾರೆ. ಬಾಗಲಕೋಟೆಯ ಬನಹಟ್ಟಿ ಕೆರೆಯಲ್ಲಿ ದುರ್ಘಟನೆ ನಡೆದಿದೆ. ಸಂಜಯ್ ಲಕ್ಷ್ಮಣ ತಳವಾರ್ (12), ಸಮರ್ಥ ಸದಾಶಿವ ತಳವಾರ್ (10) ಮೃತ ದುರ್ದೈವಿಗಳು.

ಸಂಜಯ್‌ ಹಾಗೂ ಸಮರ್ಥ ಈಜಲು ಕೆರೆ ಬಳಿ ಹೋಗಿದ್ದಾರೆ. ಈ ವೇಳೆ ಸಮರ್ಥ್‌ ನೀರಿನಿಂದ ಹೊರಬರಲು ಆಗದೆ ಪರದಾಡಿದ್ದಾನೆ. ಇದನ್ನು ಗಮನಿಸಿದ ಸಂಜಯ್‌ ಮುಳುಗುತ್ತಿದ್ದ ಸಮರ್ಥ್‌ನನ್ನು ಹಿಡಿಯಲು ಹೋಗಿದ್ದಾನೆ. ಆದರೆ ಇಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಹಾಯದಿಂದ ಪೊಲೀಸರು ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Lok Sabha Election 2024: ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ; ಬಂಧಿತರಾಗಿದ್ದ 46 ಮಂದಿಗೆ ಜಾಮೀನು

Drowned in water.. road Accident

ಉಡುಪಿಯಲ್ಲಿ ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿ; ಸವಾರ ಸಾವು

ಉಡುಪಿಯ ಕಾರ್ಕಳ ಸಮೀಪದ ಬಳ್ಳಿ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಮಲ್ (32) ಮೃತ ದುರ್ದೈವಿ. ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿ ಹೊಡೆದ ಪರಿಣಾಮ ಕಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊರ್ವ ಸ್ಕೂಟರ್ ಸವಾರ ಪ್ರಸನ್ನ ಎಂಬಾತ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನೈಸ್ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಸವಾರ ಸಾವು

ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಬೈಕ್‌ ಸವಾರ ಮೃತಪಟ್ಟಿದ್ದಾನೆ. ವಿನಾಯಕ ಎಸ್ ಪಲ್ಲೆದ್ (20) ಮೃತ ದುರ್ದೈವಿ. ಹಿಂಬದಿ ಸವಾರ ಗಿರೀಶ್ (22) ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ನೈಸ್ ರಸ್ತೆಯ ಮಂಗನಹಳ್ಳಿಯ ಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: 22 ಕ್ಯಾರಟ್‌ ಚಿನ್ನದ ಬೆಲೆ 500 ರೂ. ಏರಿಕೆ; ಇಂದಿನ ಬಂಗಾರದ ಧಾರಣೆ ಹೀಗಿದೆ

Gold Rate Today: ಬೆಂಗಳೂರು, ದಿಲ್ಲಿ ಹಾಗೂ ಚೆನ್ನೈಯ ಬಂಗಾರದ ಧಾರಣೆಗಳು ಯಾವಾಗಲೂ ಪ್ರತ್ಯ ಪ್ರತ್ಯೇಕವಾಗಿದ್ದು ವ್ಯತ್ಯಾಸ ಹೊಂದಿವೆ. ಚೆನ್ನೈ ಹಾಗೂ ದಿಲ್ಲಿಯಲ್ಲಿ ಬೆಂಗಳೂರಿಗಿಂತ ಸದಾ ದರ ಹೆಚ್ಚಿರುವುದು ಕಂಡುಬಂದಿದೆ. ಇಂದಿನ ದರ ಹೀಗಿವೆ.

VISTARANEWS.COM


on

gold rate today sai pallavi
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) 1 ಗ್ರಾಂಗೆ ಕ್ರಮವಾಗಿ ₹50 ಹಾಗೂ ₹54 ಏರಿಕೆಯಾಗಿವೆ. 10 ಗ್ರಾಂಗೆ ಇದು ₹500 ಹಾಗೂ ₹540. ಬೆಂಗಳೂರು, ದಿಲ್ಲಿ ಹಾಗೂ ಚೆನ್ನೈಯ ಬಂಗಾರದ ಧಾರಣೆಗಳು ಯಾವಾಗಲೂ ಪ್ರತ್ಯ ಪ್ರತ್ಯೇಕವಾಗಿದ್ದು ವ್ಯತ್ಯಾಸ ಹೊಂದಿವೆ. ಚೆನ್ನೈ ಹಾಗೂ ದಿಲ್ಲಿಯಲ್ಲಿ ಬೆಂಗಳೂರಿಗಿಂತ ಸದಾ ದರ ಹೆಚ್ಚಿರುವುದು ಕಂಡುಬಂದಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,890ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹55,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,900 ಮತ್ತು ₹6,89,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,516 ಆಗಿದ್ದರೆ, ಎಂಟು ಗ್ರಾಂ ಬೆಲೆ ₹60,128 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹75,160 ಮತ್ತು ₹7,51,600 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹96.50, ಎಂಟು ಗ್ರಾಂ ₹772 ಮತ್ತು 10 ಗ್ರಾಂ ₹965ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,650 ಮತ್ತು 1 ಕಿಲೋಗ್ರಾಂಗೆ ₹96,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ69,05075,310
ಮುಂಬಯಿ68,900 75,160
ಬೆಂಗಳೂರು68,900 75,160
ಚೆನ್ನೈ69,00075,280

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Continue Reading

ಕ್ರೈಂ

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Prajwal Revanna Case: ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳಿಂದ ಮೊಟ್ಟೆ ಎಸೆತ ನಡೆದಿದೆ. ಕಾರಿನಲ್ಲಿ ಬಂದ ಐದಾರು ಮಂದಿ, ಮನೆಯ ಮುಂದಿದ್ದ ಪೊಲೀಸರನ್ನು ಕಂಡು ಪೊಲೀಸರ ಕಣ್ತಪ್ಪಿಸಿ ಐದಾರು ಮೊಟ್ಟೆ ಎಸೆದು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.

VISTARANEWS.COM


on

lr Shivarame gowda prajwal revanna case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ (Prajwal Revanna Case) ಸಂಬಂಧಿಸಿ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರನ್ನು (HD Deve Gowda) ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿರುವ, ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ (LR Shivarame Gowda) ಮನೆ ಮೊಟ್ಟೆ ದಾಳಿಗೆ (Egg throw) ಯತ್ನ ನಡೆಸಲಾಗಿದೆ.

ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳಿಂದ ಮೊಟ್ಟೆ ಎಸೆತ ನಡೆದಿದೆ. ಕಾರಿನಲ್ಲಿ ಬಂದ ಐದಾರು ಮಂದಿ, ಮನೆಯ ಮುಂದಿದ್ದ ಪೊಲೀಸರನ್ನು ಕಂಡು ಪೊಲೀಸರ ಕಣ್ತಪ್ಪಿಸಿ ಐದಾರು ಮೊಟ್ಟೆ ಎಸೆದು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ಮೊಟ್ಟೆ ಎಸೆಯಲು ಯತ್ನಿಸಿ ಪರಾರಿ ಆದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸಿಸಿಟಿವಿ ವಿಷ್ಯುವಲ್ಸ್ ಆಧರಿಸಿ ಹುಡುಕಾಟ ನಡೆಸಿದ್ದಾರೆ. ಮೊಟ್ಟೆ ಎಸೆತದ ಬಳಿಕ ಎಲ್ಆರ್‌ಎಸ್ ಮನೆ ರಸ್ತೆ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ.

ಪೆನ್ ಡ್ರೈವ್ ಪ್ರಕರಣ (Pen drive Case) ವಿಚಾರದಲ್ಲಿ ವಕೀಲ ದೇವರಾಜೇಗೌಡ ಜೊತೆ ಮಾತನಾಡುವಾಗ ಜೆಡಿಎಸ್ ವರಿಷ್ಠರ ಬಗ್ಗೆ ಎಲ್ ಆರ್ ಶಿವರಾಮೇಗೌಡ ಅವಹೇಳನಕಾರಿ ಮಾತನಾಡಿದ್ದರು ಎಂದು ವರದಿಯಾಗಿದೆ. ಈ ಬಗ್ಗೆ ಆಡಿಯೋವನ್ನು ನಿನ್ನೆ ಬಿಡುಗಡೆ ಮಾಡಲಾಗಿತ್ತು.

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್.ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಬಯಲಾಗಿದ್ದು, “ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಷ್ಟಕ್ಕೂ, ದೇವೇಗೌಡ ಅವರು ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ಲವಲ್ಲ” ಎಂಬುದಾಗಿ ಶಿವರಾಮೇಗೌಡ ಹೇಳಿದ್ದಾರೆ.

“ನೀವು ಡಿ.ಕೆ.ಶಿವಕುಮಾರ್‌ ಅವರ ಜತೆ ಕೈಜೋಡಿಸಿದರೆ ಯಾವ ಸಹಾಯ ಬೇಕೋ ಎಲ್ಲವನ್ನೂ ಮಾಡುತ್ತಾರೆ. ಜೆಡಿಎಸ್‌ಅನ್ನು ಎನ್‌ಡಿಎಯಿಂದ ಆಚೆಗೆ ಹಾಕಲು ನಾನೇ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇನೆ. ಇನ್ನೇನು ವಿಡಿಯೊಗಳು ಇವೆಯೋ, ಎಲ್ಲವನ್ನೂ ನಮಗೆ ಕೊಡಿ. ದೇವೇಗೌಡ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೀವು ಯಾವುದಕ್ಕೂ ಹೆದರಬೇಡಿ. ನಿಮಗೆ ಏನು ಹೆಲ್ಪ್‌ ಬೇಕೋ ಅದನ್ನು ಡಿಕೆಶಿ ಮಾಡುತ್ತಾರೆ” ಎಂಬುದಾಗಿ ಶಿವರಾಮೇಗೌಡ ಭರವಸೆ ನೀಡಿರುವುದು ಆಡಿಯೊದಲ್ಲಿದೆ.

ವಿಡಿಯೊ ಕೊಡಿ ಎಂಬುದಕ್ಕೆ ಉತ್ತರಿಸಿದ ದೇವರಾಜೇಗೌಡ, “ಅಣ್ಣ ಇದು ಹೆಣ್ಣುಮಕ್ಕಳ ಮಾನ ಮರ್ಯಾದೆ ಪ್ರಶ್ನೆ ಅಲ್ಲವೇ? ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದಿದ್ದಾರೆ. ಅದಕ್ಕೆ ಶಿವರಾಮೇಗೌಡ, “ನಿನಗೆ ಏನು ಸಹಾಯ ಬೇಕೋ ಅದನ್ನು ಮಾಡುತ್ತಾರೆ. ಅಷ್ಟಕ್ಕೂ, ನೀನೇನೂ ಹಾಸನದಲ್ಲಿ ಪೆನ್‌ಡ್ರೈವ್‌ ಹಂಚಿಲ್ಲ. ಹಂಚಿದರೂ ಅದರಲ್ಲಿ ತಪ್ಪೇನಿಲ್ಲ. ನೀನೊಬ್ಬ ವಕೀಲನಾಗಿ ಹೀಗೆ ಹೆದರಿದರೆ ಹೇಗೆ? ಏನೂ ಆಗುವುದಿಲ್ಲ. ಯಾವ ವಿಡಿಯೊ ಇದೆ ನಮಗೆ ಕೊಡು” ಎಂದಿದ್ದಾರೆ.

ಗೌಡರು ಸೂಸೈಡ್‌ ಮಾಡಿಕೊಂಡಿಲ್ವಲ್ಲ

“ಕುಮಾರಸ್ವಾಮಿ ಅವರೇ ವಿಡಿಯೊಗಳನ್ನು ಬಿಟ್ಟಿದ್ದಾರೆ ಎಂಬುದಾಗಿ ಹೇಳು. ಆ ದೇವೇಗೌಡರ ಮಕ್ಕಳು ಏನೂ ಕಡಿಮೆ ಇಲ್ಲ. ದೇವೇಗೌಡರು ಇಷ್ಟಾದರೂ ಆತ್ಮಹತ್ಯೆ ಮಾಡಕೊಂಡಿಲ್ಲವಲ್ಲ. ಪ್ರಜ್ವಲ್‌ ರೇವಣ್ಣ ಬೆಳೆಯುತ್ತಿದ್ದಾನೆ. ಕುಮಾರಸ್ವಾಮಿ ಅವರಿಗೆ ತಮ್ಮ ಮಗ ಮುಂದೆ ಬರಬೇಕು ಎಂಬ ಆಸೆ ಇದೆ. ಹಾಗಾಗಿ, ಕುಮಾರಸ್ವಾಮಿ ಅವರೇ ವಿಡಿಯೊಗಳನ್ನು ಹಂಚಿದ್ದಾರೆ ಎಂಬುದಾಗಿ ಹೇಳಿ” ಎಂದು ದೇವರಾಜೇಗೌಡ ಅವರಿಗೆ ಶಿವರಾಮೇಗೌಡ ಹೇಳಿರುವುದು ಆಡಿಯೊದಲ್ಲಿ ದಾಖಲಾಗಿದೆ. ಇದು ಈಗ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ನೀಡಿದೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Continue Reading
Advertisement
One year for the government Cm Siddaramaiah reveals many dreams and media interaction live
ರಾಜಕೀಯ1 min ago

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

Drowned in water
ಬೆಂಗಳೂರು19 mins ago

Drowned In water : ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

gold rate today sai pallavi
ಚಿನ್ನದ ದರ48 mins ago

Gold Rate Today: 22 ಕ್ಯಾರಟ್‌ ಚಿನ್ನದ ಬೆಲೆ 500 ರೂ. ಏರಿಕೆ; ಇಂದಿನ ಬಂಗಾರದ ಧಾರಣೆ ಹೀಗಿದೆ

Murder case
ದೇಶ50 mins ago

Murder Case: ತಾಜ್‌ ಮಹಲ್‌ ಸಮೀಪದಲ್ಲೇ ಘೋರ ಕೃತ್ಯ; ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

Mohan Lal watching dr rajkumars super hit song
ಮಾಲಿವುಡ್1 hour ago

Mohan Lal: ಅಣ್ಣಾವ್ರ ಹಾಡನ್ನು ಎಂಜಾಯ್‌ ಮಾಡಿದ ಮೋಹನ್ ಲಾಲ್; ವಿಡಿಯೊ ವೈರಲ್‌!

Lok Sabha Election 2024
Lok Sabha Election 20241 hour ago

Lok Sabha Election 2024: ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ; ಬಂಧಿತರಾಗಿದ್ದ 46 ಮಂದಿಗೆ ಜಾಮೀನು

actor Chetan Kumar Ahimsa
ಸಿನಿಮಾ2 hours ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ2 hours ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್2 hours ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್2 hours ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ21 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ23 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌