Site icon Vistara News

SSLC Result | BBMP ವತಿಯಿಂದ ಟಾಪರ್ಸ್‌ಗೆ ₹25,000 ಪ್ರೋತ್ಸಾಹ ಧನ

SSLC Result

ಬೆಂಗಳೂರು: SSLC Result ಪ್ರಕಟವಾಗಿದ್ದು, ಈ ಬಾರಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 144 ವಿದ್ಯಾರ್ಥಿಗಳಿಗೆ ಬಿಬಿಎಂಪಿ ಮೂಲಕ ₹25,000 ಪ್ರೋತ್ಸಾಹ ಧನ ವಿತರಣೆ ಮಾಡುವುದಾಗಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿದ್ಯಾ ಇಲಾಖೆಯಲ್ಲಿ ಒಟ್ಟು 33 ಪ್ರೌಢಶಾಲೆಗಳಿದ್ದು, 2021-2ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 1,991 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 1,419 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 71% ಫಲಿತಾಂಶ ಬಂದಿರುತ್ತದೆ. ಈ ಪೈಕಿ 144 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಬಿಬಿಎಂಪಿಯ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ಬಿಬಿಎಂಪಿ ಶ್ರೀರಾಮಪುರ ಬಾಲಕಿಯರ ಪ್ರೌಢಶಾಲೆಗಳಲ್ಲಿ ಓದುತ್ತಿದ್ದ ಎಂ.ಸಿ. ಉಜ್ವಲ 625ಕ್ಕೆ 616 ಅಂಕಗಳನ್ನು ಪಡೆದು ಪಾಲಿಕೆ ಪ್ರೌಢಶಾಲೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿರುತ್ತಾರೆ.

ಪಾಲಿಕೆಯ ಶಾಂತಿನಗರ ಪ್ರೌಢಶಾಲೆಯು 100% ರಷ್ಟು ಫಲಿತಾಂಶವನ್ನು ನೀಡಿ ಮೊದಲ ಸ್ಥಾನ ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ಭೈರವೇಶ್ವರ ನಗರ ಪ್ರೌಢಶಾಲೆ, ಹಾಗೂ ಹೇರೋಹಳ್ಳಿ ಪ್ರೌಢಶಾಲೆ ಮೂರನೇ ಸ್ಥಾನ ಪಡೆದುಕೊಂಡಿದೆ. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 144 ವಿದ್ಯಾರ್ಥಿಗಳಿಗೂ ಪಾಲಿಕೆ ವತಿಯಿಂದ ತಲಾ ₹25,000 ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ‌SSLC RESULT | ಬಡತನದಲ್ಲಿ ಅರಳಿದ ಪ್ರತಿಭೆಗಳು: ಕಷ್ಟಪಟ್ಟು ಟಾಪರ್‌ಗಳಾದರು

Exit mobile version