SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ - Vistara News

ಬೆಂಗಳೂರು

SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ

SSLC Students Fight: ಬ್ಯಾಗ್‌ ಇಡುವ ವಿಚಾರಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಪರೀಕ್ಷೆ ಮುಗಿಸಿ ಮನೆಗೆ ಹೋಗುವಾಗ ಮೂವರು ವಿದ್ಯಾರ್ಥಿಗಳಿಗೆ ಚಾಕು (Attempt to Murder Case) ಇರಿಯಲಾಗಿದೆ.

VISTARANEWS.COM


on

SSLC Students Fighting
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಸ್ಎಸ್ಎಲ್‌ಸಿ ಹುಡುಗರ ಮಾರಾಮಾರಿ ನಡೆದಿದ್ದು, ಮೂವರು ವಿದ್ಯಾರ್ಥಿಗಳು ಚಾಕು (SSLC Students Fight) ಇರಿತಕ್ಕೊಳಗಾಗಿದ್ದಾರೆ. ಪರೀಕ್ಷಾ ಕೊಠಡಿಯ ಹೊರಗೆ ಬ್ಯಾಗ್ ಇಡುವ ವಿಚಾರಕ್ಕೆ ರಾಗಿ ಗುಡ್ಡ ಹಾಗೂ ಸಾರಕ್ಕಿ ಬಳಿ ಇರುವ ಶಾಲಾ ವಿದ್ಯಾರ್ಥಿಗಳ ನಡುವೆ ಕಿರಿಕ್ ನಡೆದಿದೆ. ಪರೀಕ್ಷೆ ಮಗಿಸಿ ಮನೆಗೆ ಹೋಗುವಾಗ ಎರಡು ಶಾಲೆಗಳ ಮಕ್ಕಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಖಾಸಗಿ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಂದಿದ್ದ ಎರಡು ಶಾಲೆಯ ಮಕ್ಕಳು, ಪರೀಕ್ಷಾ ಕೇಂದ್ರದಲ್ಲಿ ಜಗಳ ನಡೆಸಿದ್ದಾರೆ. ಒಳಗೆ ಜಗಳವಾಡಿ ಅದೇ ದ್ವೇಷದಿಂದ ಹಿಂಬಾಲಿಸಿ ಬಂದಿದ್ದ ರಾಗಿ ಗುಡ್ಡ ಬಳಿ ಇರುವ ಶಾಲಾ ಬಾಲಕರು, ನಂತರ ಸಾರಕ್ಕಿ ಬಳಿ ಇರುವ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದು ಪರಾರಿ ಆಗಿದ್ದಾರೆ.

ನಿನ್ನೆ ಬುಧವಾರ ಮಧ್ಯಾಹ್ನ 1-45ಕ್ಕೆ ಘಟನೆ ನಡೆದಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎಲ್ಲ ಬಾಲಕರ ಮೇಲೂ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿದ್ದಾರೆ. ಪುಸ್ತಕ ಹಿಡಿಯಬೇಕಿದ್ದ ಕೈಗಳಿಗೆ ಈಗ ಕೋಳ ಬಿದ್ದಿದೆ.

ಇದನ್ನೂ ಓದಿ:Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

ಕುಡಿಯುವ ನೀರಿಗಾಗಿ ಚಿಮ್ಮಿತು ರಕ್ತ; ಚಾಕು ಇರಿದು ಯುವಕನ ಕೊಲೆ

ಯಾದಗಿರಿ: ಎಲ್ಲೆಡೆ ಕುಡಿಯುವ ನೀರಿಗಾಗಿ ಹಾಹಾಕರ (Water Crisis) ಶುರುವಾಗಿದೆ. ಗಂಟೆಗಟ್ಟಲೇ ಕಾಯುತ್ತಾ, ಹಗಲಿರುಳು ಎನ್ನದೇ ನಲ್ಲಿ ಮುಂದೆ ಕೂರುವಂತಾಗಿದೆ. ಬರಗಾಲವು ತೀವ್ರವಾಗಿ ಆವರಿಸಿದೆ. ಈ ಮಧ್ಯೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಸಂಬಂಧಿಕರೇ ಕಿತ್ತಾಡಿಕೊಂಡಿದ್ದು, ರಕ್ತವನ್ನೇ (Murder Case) ಹರಿಸಿದ್ದಾರೆ.

ಕುಡಿಯುವ ನೀರಿಗಾಗಿ ಶುರುವಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ನಂದಕುಮಾರ ಕಟ್ಟಿಮನಿ (21)ಕೊಲೆಯಾದವನು. ಹಣಮಂತ ಹಾಗೂ ಹಣಮವ್ವ ಕೊಲೆ ಆರೋಪಿಗಳಾಗಿದ್ದಾರೆ. ನೀರಿನ ವಿಚಾರವಾಗಿ ನಂದಕುಮಾರನ ಅಜ್ಜಿ ಜತೆ ಆರೋಪಿಗಳು ಜಗಳವಾಡಿದ್ದರು.

ಹೊರಹೋಗಿ ಮನೆಗೆ ವಾಪಸ್‌ ಬಂದ ನಂದಕುಮಾರಗೆ ಗಲಾಟೆ ವಿಚಾರವನ್ನು ಅಜ್ಜಿ ತಿಳಿಸಿದ್ದರು. ಹೀಗಾಗಿ ಅಜ್ಜಿ ಜತೆ ನೀವೂ ಯಾಕೆ ಜಗಳ ಮಾಡಿದ್ದೀರಿ ಎಂದು ಮೊಮ್ಮಗ ನಂದಕುಮಾರ್‌ ಸಂಬಂಧಿಗಳಾದ ಹಣಮಂತ ಮತ್ತು ಹಣಮವ್ವರಿಗೆ ಪ್ರಶ್ನೆ ಮಾಡಿದ್ದ. ಇದೇ ವೇಳೆ ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿದೆ. ಜಗಳವು ವಿಕೋಪಕ್ಕೆ ತಿರುಗಿದ್ದು, ನಂದಕುಮಾರ್‌ಗೆ ಹಾಗೂ ಈತನ ತಾಯಿಗೂ ಹಲ್ಲೆ ನಡೆಸಿದ್ದಾರೆ.

murder case Youth killed over drinking water dispute
ಕೊಲೆಯಾದ ನಂದಕುಮಾರ ಕಟ್ಟಿಮನಿ

ಇಷ್ಟಕ್ಕೆ ಸುಮ್ಮನಾಗದೆ ಹಣಮಂತ ಹಾಗೂ ಹಣಮವ್ವ ಎಂಬುವವರು ನಂದಕುಮಾರಗೆ ಚಾಕು ಇರಿದು ಕೊಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧ ಹುಣಸಗಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಹಣಮಂತ ಹಾಗೂ ಹಣಮವ್ಬ ಇಬ್ಬರನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Gold Rate Today: ಚಿನ್ನದ ಬೆಲೆಗಳು ಇಂದು 22 ಕ್ಯಾರಟ್‌ಗೆ ₹20 ಹಾಗೂ 24 ಕ್ಯಾರಟ್‌ಗೆ ₹22 ಏರಿಕೆಯಾಗಿವೆ. ಇದು ಪ್ರತಿ 1 ಗ್ರಾಂಗೆ ಏರಿಕೆಯಾಗಿರುವ ದರ. ಒಟ್ಟಾರೆ ದರಗಳನ್ನು ಇಲ್ಲಿ ಪರಿಶೀಲಿಸಿ.

VISTARANEWS.COM


on

gold rate today beauty
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹20 ಹಾಗೂ ₹22 ಏರಿಕೆಯಾಗಿವೆ. ನಿನ್ನೆ ಮತದಾನದ ದಿನವೂ ಚಿನ್ನದ ಬೆಲೆಗಳು ಏರಿಕೆಯಾಗಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,930 ಮತ್ತು ₹7,29,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84, ಎಂಟು ಗ್ರಾಂ ₹672 ಮತ್ತು 10 ಗ್ರಾಂ ₹840ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,850 72,930
ಬೆಂಗಳೂರು66,850 72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

ಬೆಂಗಳೂರು

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Road Accident : ವೇಗವಾಗಿ ಬಂದ ಆಂಬ್ಯುಲೆನ್ಸ್‌ವೊಂದು ನಿಂತಿದ್ದ ಕಾರಿಗೆ ಗುದ್ದಿದೆ. ಈ ವೇಳೆ ಚಾಲಕ ಗಾಬರಿಯಲ್ಲಿ ಬ್ರೇಕ್‌ ತುಳಿಯುವ ಬದಲು ಮತ್ತೆ ಎಕ್ಸಿಲೇಟರ್ ತುಳಿದು ಸರಣಿ ಅಪಘಾತಕ್ಕೆ ಮಾಡಿದ್ದಾನೆ. ಅದೃಷ್ಟವಶಾತ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

Road Accident in Bengaluru
Koo

ಬೆಂಗಳೂರು: ಆಂಬ್ಯುಲೆನ್ಸ್‌ ಚಾಲಕನ (Ambulance driver) ಎಡವಟ್ಟಿನಿಂದ ಸರಣಿ ಅಪಘಾತ (Road Accident) ಸಂಭವಿಸಿದೆ. ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ. ಶುಕ್ರವಾರ ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಘಟನೆ ನಡೆದಿದೆ. ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್‌ ಚಾಲಕ ಸುಮಂತ್‌ ಎಂಬಾತ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ. ಈ ವೇಳೆ ನಿಯಂತ್ರಣ ಸಿಗದೆ ಪಾರ್ಕಿಂಗ್‌ ಸ್ಥಳದಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ.

ಸರಣಿ ಅಪಘಾತಕ್ಕೆ ಟೆಕ್ಷನ್‌ ಆದ ಚಾಲಕ ಬ್ರೇಕ್ ತುಳಿಯುವ ಬದಲು ಎಕ್ಸಿಲೇಟರ್ ತುಳಿದು ಮತ್ತೆ ಅವಾಂತರ ಸೃಷ್ಟಿಸಿದ್ದಾನೆ. ಈ ವೇಳೆ ಕಾರುಗಳಿಗೆ ಗುದ್ದಿದ ಪರಿಣಾಮ ಸಂಪೂರ್ಣ ಜಖಂಗೊಂಡಿವೆ. ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಬ್ಯುಲೆನ್ಸ್ ಚಾಲಕ ಸುಮಂತ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

ಕಲಬುರಗಿ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬೈಕ್‌ ಸವಾರ ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಅರ್ಜುನ್ ಎಂಬಾತ ಮೃತಪಟ್ಟಿದ್ದಾರೆ. ಅರ್ಜುನ್‌ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿಯಾಗಿದ್ದಾರೆ. ಅರ್ಜುನ್‌ ತಮ್ಮ ಪತ್ನಿ ಜತೆಗೆ ಬೆಳಗಿನ ಜಾವ ಪುಣೆಯಿಂದ ಯಾದಗಿರಿ ಕಡೆ ಬೈಕ್ ಮೇಲೆ ಹೊರಟಿದ್ದರು.

ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್‌ನಿಂದ ಎಗರಿ ಬಿದ್ದಾಗ ಅರ್ಜುನ್‌ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಜತೆಯಲ್ಲಿದ್ದ ಅರ್ಜುನ್‌ ಪತ್ನಿಗೂ ಗಾಯವಾಗಿದ್ದು, ಪತಿ ಒದ್ದಾಡಿ ಸಾವನ್ನಪ್ಪಿದ್ದು ಕಂಡು ಆಘಾತಕ್ಕೆ ಒಳಗಾಗಿದ್ದರು.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಪುಡಿ ಪುಡಿಯಾಗಿದ್ದ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

ಕಾರವಾರ: ಅಪಘಾತದಲ್ಲಿ (Road Accident) ಗಾಯಗೊಂಡು ರಸ್ತೆ ಬದಿ ನರಳುತ್ತ ಬಿದ್ದಿದ್ದ ಯುವಕನನ್ನು ತಮ್ಮದೇ ಕಾರಿನಲ್ಲಿ ಉತ್ತರ ಕನ್ನಡ ಲೋಕಸಭೆ ಚುನಾವಣಾ ಅಭ್ಯರ್ಥಿ (Uttara Kannada lok sabha election candidate) ಅಂಜಲಿ ನಿಂಬಾಳ್ಕರ್‌ (Anjali Nimbalkar) ಆಸ್ಪತ್ರೆಗೆ ಸಾಗಿಸಿ ಮಾನವೀಯತೆ (Humanity) ಮೆರೆದಿದ್ದಾರೆ.

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರ- ಶಿರಸಿ ನಡುವೆ ಪ್ರಯಣಿಸುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಯುವಕನನ್ನು ಗಮನಿಸಿದ್ದರು. ವಿನಾಯಕ್ ಶೆಟ್ಟರ್ ಎಂಬ ಯುವಕ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದರು.

ಹಳಿಯಾಳದಿಂದ ಶಿರಸಿಗೆ ಹೋಗುವಾಗ ಯುವಕನನ್ನು ಗಮನಿಸಿದ ಅಂಜಲಿ ನಿಂಬಾಳ್ಕರ್, ಕಾರು ನಿಲ್ಲಿಸಿ ಗಾಯಗೊಂಡವನನ್ನು ಪರಿಶೀಲಿಸಿದರು. ಸ್ವತಃ ವೈದ್ಯೆಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಸೂಕ್ತ ಪ್ರಥಮ ಉಪಚಾರ ನೀಡಿ ತಕ್ಷಣ ಯುವಕನನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕರೆತಂದರು. ಆಸ್ಪತ್ರೆಯಲ್ಲೂ ಚಿಕಿತ್ಸೆ ವೇಳೆ ಸಿಬ್ಬಂದಿಯೊಂದಿಗಿದ್ದು ನೆರವು ನೀಡಿದರು. ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಬಿಜೆಪಿಯ ಭದ್ರಕೋಟೆಯನ್ನು ಒಡೆಯುವೆ: ಅಂಜಲಿ

ಅಂಕೋಲಾ: ಜಾತಿ- ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಬಿಜೆಪಿಗರು ಉತ್ತರ ಕನ್ನಡದ ಹೆಸರು ಕೆಡಿಸಿರುವುದನ್ನು ಸರಿಪಡಿಸಲು ನಮಗೆ ಈ ಬಾರಿ ಉತ್ತಮ ಅವಕಾಶವಿದೆ. ನಾನು ಈ ಜಿಲ್ಲೆಯವಳಲ್ಲ ಎನ್ನುವ ಬಿಜೆಪಿಗರು ಕೂಡ ನನ್ನ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರಲೇಬೇಕು. ಬಹುಶಃ ಅವರಿಗೆ ಖಾನಾಪುರ ಬ್ಲಾಕ್ ಎಲ್ಲಿದೆ ಎನ್ನುವುದೂ ಗೊತ್ತಿರಲಿಕ್ಕಿಲ್ಲ. ಯಾಕೆಂದರೆ ಅಲ್ಲಿಗೆ ಅವರು ಬರುವುದೇ ಅಪರೂಪ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada News) ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ವ್ಯಂಗ್ಯವಾಡಿದರು.

ಅಂಕೋಲಾದ ನಾಡವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ. ರಾಜಕೀಯ ನನಗೆ ಹೊಸದಲ್ಲ. ಖಾನಾಪುರದಲ್ಲಿ ಕೇವಲ ಮಹಿಳೆಯರಿಗಾಗಿ ಎಂಸಿಎಚ್ ಆಸ್ಪತ್ರೆ ಕಟ್ಟಿದ್ದೇನೆ. ಕಾಡುಪ್ರದೇಶದಲ್ಲಿ ಅಂಥದ್ದೊಂದು ಆಸ್ಪತ್ರೆ ಕಟ್ಟಿಸಬೇಕೆಂಬುದು ನನ್ನ ಕನಸಾಗಿತ್ತು. ಬಿಜೆಪಿ ಸರ್ಕಾರವಿದ್ದರೂ ಅಂಥ ದೊಡ್ಡ ಆಸ್ಪತ್ರೆ ಕಟ್ಟಿ ತೋರಿಸಿದ್ದೀನಿ. ಜಿಲ್ಲೆಯಲ್ಲೂ ಸುಸಜ್ಜಿತ ಆಸ್ಪತ್ರೆ ಆಗಬೇಕೆಂಬ ಆಸೆ ಇಲ್ಲಿಯ ಜನರದ್ದಿದೆ. ಅದನ್ನು ಮಾಡಲು ಪ್ರಯತ್ನಿಸೋಣʼʼ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

Parkinson’s disease:ಪಾರ್ಕಿನ್ಸನ್ಸ್ ಚಿಕಿತ್ಸೆಗಾಗಿ ಭಾರತದ ಪ್ರಪ್ರಥಮ NeuroSmartTM ಪೋರ್ಟಬಲ್ ಮೈಕ್ರೋ ಎಲೆಕ್ಟ್ರೋಡ್ ರೆಕಾರ್ಡಿಂಗ್ ಸಾಧನವನ್ನು ಪರಿಚಯಿಸಲಾಗಿದೆ.

VISTARANEWS.COM


on

By

Koo

ಬೆಂಗಳೂರು: ಮೆಡ್‌ಟ್ರಾನಿಕ್ (NYSE:MDT)ನ ಅಧೀನ ಸಂಸ್ಥೆಯಾದ ಇಂಡಿಯಾ ಮೆಡ್‌ಟ್ರಾನಿಕ್ ಪ್ರೈವೇಟ್ ಲಿಮಿಟೆಡ್, ಪಾರ್ಕಿನ್ಸನ್ಸ್ ಚಿಕಿತ್ಸೆ(Parkinson’s disease) ಗಾಗಿ ಭಾರತದ ಪ್ರಪ್ರಥಮ NeuroSmartTM ಪೋರ್ಟಬಲ್ ಮೈಕ್ರೋ ಎಲೆಕ್ಟ್ರೋಡ್ ರೆಕಾರ್ಡಿಂಗ್(MER) ಸಾಧನವನ್ನು ಪರಿಚಯಿಸಿದೆ. ಡೀಪ್ ಬ್ರೈನ್ ಸ್ಟಿಮುಲೇಶನ್ (DBS), ನಡುಕಗಳು, ಬಿಗಿತ, ಮತ್ತು ನಡೆಯುವುದಕ್ಕೆ ಕಷ್ಟವಾಗುವುದು ಹೀಗೆ ಪಾರ್ಕಿನ್ಸನ್ಸ್ ಕಾಯಿಲೆಯ ಲಕ್ಷಣಗಳುಳ್ಳ ರೋಗಿಗಳ ಚಿಕಿತ್ಸೆಯಲ್ಲಿ ಈ ಸಾಧನ ಬಳಸಲಾಗುತ್ತದೆ. DBS, ರೋಗ ಲಕ್ಷಣ ಹೊಂದಿರುವ ಮಿದುಳಿನ ಭಾಗದ ಪ್ರದೇಶದ ಮೇಲೆ ಗುರಿಯಿರಿಸುವುದಕ್ಕಾಗಿ “ಲೀಡ್ಸ್” ಎಂದು ಕರೆಯಲ್ಪಡುವ ಅತಿಸಣ್ಣ ತಂತಿಗಳ ಮೂಲಕ ವಿದ್ಯುತ್ ಸಿಗ್ನಲ್‌ಗಳನ್ನು ಕಳುಹಿಸುವ ಒಂದು ಚಿಕ್ಕ ಪೇಸ್‍ಮೇಕ್‌ನಂತಹ ಸಾಧನದಿಂದ ನೀಡುವ ಚಿಕಿತ್ಸೆ ಇದಾಗಿದೆ. ಅತ್ಯಾಧುನಿಕ DBS ತಂತ್ರಜ್ಞಾನ ಬಳಸಿ ಮಿದುಳಿನ ಸಿಗ್ನಲ್‌ಗಳನ್ನು ಸೆರೆಹಿಡಿಯುವುದಕ್ಕಾಗಿ ವಿನ್ಯಾಸಗೊಳಿಸಲಾಗಿದೆ. NeuroSmartTM ಪೋರ್ಟಬಲ್ MER ನ್ಯಾವಿಗೇಶನ್ ಸಿಸ್ಟಮ್, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನಿಖರತೆಯನ್ನು ವರ್ಧಿಸುವ ಮೂಲಕ ಡೀಪ್ ಬ್ರೈನ್ ಸ್ಟಿಮುಲೇಶನ್(DBS)ಅನ್ನು ಪರಿಣಾಮಕಾರಿಯನ್ನಾಗಿಸುತ್ತದೆ.

ಪಾರ್ಕಿನ್ಸನ್ಸ್ ಕಾಯಿಲೆಯು, ಜನರು ಸುಲಭವಾಗಿ ಗುರುತಿಸಬಹುದಾದ ಮೋಟಾರು ಲಕ್ಷಣಗಳು ನಡುಕ, ಸ್ನಾಯುಗಳ ಬಿಗಿತ , ದೈನಂದಿನ ಚಟುವಟಿಕೆಗಳಲ್ಲಿ ನಿಧಾನತೆ ಮತ್ತು ವಾಕಿಂಗ್ ಬದಲಾವಣೆಗಳನ್ನು ಒಳಗೊಂಡಿರುತ್ತದೆ. 2016ರಲ್ಲಿ, ವಿಶ್ವವ್ಯಾಪಿಯಾಗಿ 6.1 ದಶಲಕ್ಷ ಜನರು ಪಾರ್ಕಿನ್ಸನ್ಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿತ್ತು. ಭಾರತದಲ್ಲಿ ಸುಮಾರು 5.8 ಲಕ್ಷ ಜನ ಈ ಖಾಯಿಲೆಯಿಂದ ಬಳಸುತ್ತಿದ್ದಾರೆ ಎಂದು ಹೇಳಲಾಗಿತ್ತು.

1987ರಿಂದಲೂ ಮೆಡ್‌ಟ್ರಾನಿಕ್ ಡಿಬಿಎಸ್ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವವ್ಯಾಪಿಯಾಗಿ 185,000ಗಿಂತ ಹೆಚ್ಚಿನ ಡಿಬಿಎಸ್ ಸಾಧನಗಳ ಅಳವಡಿಕೆಯಾಗಿದೆ. ಆಲ್ಫಾ ಒಮೇಗಾ ಇಂಜಿನಿಯರಿಂಗ್ ಅಭಿವೃದ್ಧಿಪಡಿಸಿರುವ NeuroSmartTM ಪೋರ್ಟಬಲ್ MER ನ್ಯಾವಿಗೇಶನ್ ಸಿಸ್ಟಮ್, ನರರೋಗ ಹಾಗೂ ಮಾನಸಿಕ ರೋಗಗಳ ಚಿಕಿತ್ಸೆಗಾಗಿ ಒಂದು ವಿನೂತನ ಚಿಕಿತ್ಸೆಯಾಗಿದೆ. ಅತ್ಯಾಧುನಿಕವಾದ ನ್ಯೂರೋಫಿಸಿಯಲಾಜಿಕಲ್ (neurophysiological) ನ್ಯಾವಿಗೇಶನ್ ಮ್ಯಾಪಿಂಗ್ ಹೊಂದಿರುವ ಇದು, ನರಗಳ ಚಟುವಟಿಕೆಯನ್ನು ದಾಖಲಿಸುವ ಸಮಯದಲ್ಲಿ ನಿಖರವಾದ ಎಲೆಕ್ಟ್ರೋಡ್ ಇರಿಸುವುದಕ್ಕೆ ನೆರವಾಗುತ್ತದೆ. HaGuide ಸ್ವಯಂಚಾಲಿತ ನ್ಯಾವಿಗೇಶನ್ ಮೇಲೆ ಆಧಾರಿತವಾದ ವರ್ಧಿತ ಗುರಿಯಿರಿಸಲಾದ ಸ್ಥಳೀಕರಣಕ್ಕೆ ಇದಕ್ಕಿರುವ ಅತ್ಯಾಧುನಿಕ ಸಾಮರ್ಥ್ಯಗಳು, ರೋಗಿಗಾಗಿ ಅತ್ಯಂತ ಪರಿಣಾಮಕಾರಿಯಾದ ಗುರಿಯನ್ನು ಗುರುತಿಸಲು ನೆರವಾಗಿ ಗರಿಷ್ಟ ಲಕ್ಷಣ ಶಮನವನ್ನು ಖಾತರಿಪಡಿಸುತ್ತದೆ.

ನರರೋಗ ಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ಡಾ. ರಘುರಾಮ್ ಜಿ, ನರರೋಗಶಾಸ್ತ್ರ ವಿಭಾಗದ ಹೆಚ್ಚುವರಿ ನಿರ್ದೇಶಕ ಡಾ. ಗುರುಪ್ರಸಾದ್ ಹೊಸೂರ್ಕರ್ ಒಳಗೊಂಡ ಬೆಂಗಳೂರಿನ ಫೋರ್ಟಿಸ್ ಹಾಸ್ಪಿಟಲ್‌ನ ನರರೋಗಶಾಸ್ತ್ರ ತಂಡವು, ಪಾರ್ಕಿನ್ಸನ್ಸ್ ರೋಗಿಗಳಲ್ಲಿ ಈ ತಂತ್ರಜ್ಞಾನವನ್ನು ಬಳಸಿದ ಪ್ರಪ್ರಥಮ ತಂಡವಾಗಿದೆ. 68-ವರ್ಷ ವಯಸ್ಸಿನ ರೋಗಿ ಒಂದು ದಶಕಕ್ಕಿಂತ ಹೆಚ್ಚಿನ ಕಾಲದಿಂದ ಪಾರ್ಕಿನ್ಸನ್ಸ್‌ನಿಂದ ಬಳಲುತ್ತಿದ್ದರು. ಈ ಪರಿಸ್ಥಿತಿ ಅವರ ಚಲನೆಯನ್ನು ಮಿತಗೊಳಿಸಿ, ದಿನನಿತ್ಯದ ಕೆಲಸಗಳನ್ನು ಮಾಡಿಕೊಳ್ಳುವುದಕ್ಕೆ ಸವಾಲೊಡ್ಡುತ್ತಿತ್ತು. ರೋಗಿಯ ಕುಟುಂಬದವರಿಗೂ ಅವರನ್ನು ನೋಡಿಕೊಳ್ಳುವುದು ಸವಾಲಾಗಿತ್ತು. NeuroSmartTM ನಲ್ಲಿರುವ ಹೊಸ ಆವಿಷ್ಕಾರಗಳ ಪ್ರಭಾವದೊಂದಿಗೆ, ಈ ರೋಗಿಯ ಅನಿಯಂತ್ರಿತ ಲಕ್ಷಣಗಳನ್ನು, ಕನಿಷ್ಠ ಅಡ್ಡಪರಿಣಾಮಗಳೊಂದಿಗೆ ನಿರ್ವಹಿಸಲು ವೈದ್ಯರಿಗೆ ಸಾಧ್ಯವಾಯಿತು.

“ಈ ತಂತ್ರಜ್ಞಾನ ಒಂದು ಆಟ-ಬದಲಾಯಿಸುವ ತಂತ್ರಜ್ಞಾನವಾಗಿದೆ. ಎಐ ಮತ್ತು ವಾಸ್ತವ-ಸಮಯ ಫೀಡ್‌ಬ್ಯಾಕ್ ಇರುವುದೆಂದರೆ, ಈ ಹೊಸ MER ನ್ಯಾವಿಗೇಶನ್ ಸಿಸ್ಟಮ್, ಡಿಬಿಎಸ್ ಕಾರ್ಯವಿಧಾನಗಳ ಸಮಯದಲ್ಲಿ, ಮಿದುಳಿನ ರಚನೆಗಳನ್ನು ಗುರಿಯಿರಿಸುವ ನಮ್ಮ ದೃಷ್ಟಿಕೋನವನ್ನು ಕ್ರಾಂತಿಕಾರಕಗೊಳಿಸಿದೆ ಎಂದರ್ಥ. ಈ ಆಧುನೀಕರಣವು, ನಮ್ಮ ನಿಖರತೆಯನ್ನು ಗಣನೀಯವಾಗಿ ವರ್ಧಿಸಿ, ಹಿಂದೆಂದೂ ಕಂಡಿರದ ನಿಖರತೆಯೊಂದಿಗೆ ಚಿಕಿತ್ಸೆಯನ್ನು ಅಗತ್ಯಕ್ಕೆ ತಕ್ಕಂತೆ ಅನುವುಗೊಳಿಸಲು ನಮಗೆ ನೆರವಾಗುತ್ತದೆ ಎಂದು ಡಾ. ರಘುರಾಮ್ ಜಿ ಹೇಳಿದರು.

ಡಾ. ಗುರುಪ್ರಸಾದ್ ಹೊಸೂರ್ಕರ್ ಮಾತನಾಡಿದ, “ಡಿಬಿಎಸ್ ಚಿಕಿತ್ಸೆಯು, ಒಂದು ಪರಿವರ್ತನಾತ್ಮಕ ಪರಿಹಾರವಾಗಿದ್ದು, ವರ್ಧಿತ ಚಲನಾ ಕಾರ್ಯಕ್ಷಮತೆಗೆ ನೆರವಾಗಿ, ರೋಗಿಗಳಿಗೆ ಹೊಸ ಸ್ವಾತಂತ್ರ್ಯ ನೀಡುತ್ತದೆ. ಹೊಸ ಹಾಗ್ಊ ಅತ್ಯಾಧುನಿಕವಾದ ಎಐ-ನೆರವಿನ MER ನ್ಯಾವಿಗೇಶನ್ ಸಿಸ್ಟಮ್ ನಿಖರತೆಯ ಮೂಲಕ, ಎಲೆಕ್ಟ್ರೋಡ್ ಇರಿಸುವಿಕೆಯನ್ನು ಅತ್ಯಂತ ಸ್ಪಷ್ಟತೆಯೊಂದಿಗೆ ಗರಿಷ್ಟೀಕರಿಸಬಹುದಾದ್ದರಿಂದ, ಇದು ರೋಗಿಗಳಿಗೆ ನಡುಕ ಮತ್ತು ಬಿಗಿತ ಮುಂತಾದ ತೀವ್ರತರವಾದ ವೈಕಲ್ಯತೆಯಿಂದ ಶಮನ ನೀಡುತ್ತದೆ.” ಎಂದರು.

ಇದನ್ನೂ ಓದಿ: Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

“ರೋಗಿ ಮತ್ತು ಚಿಕಿತ್ಸಾ ಅನುಭವವಗಳನ್ನು ವರ್ಧಿಸುವ ಗುರಿಯಿರುವ ಮೆಡ್‌ಟ್ರಾನಿಕ್‌ನ ಡಿಬಿಎಸ್‌ನಲ್ಲಿನ ಆವಿಷ್ಕಾರ ಪರಂಪರೆಯು, ಎರಡು ದಶಕಗಳಿಗಿಂತ ಹೆಚ್ಚಿನದು. ನಮ್ಮ ಅತ್ಯಾಧುನಿಕ ಡಿಬಿಎಸ್ ಸಿಸ್ಟಮ್ಸ್, ಕಾರ್ಯವಿಧಾನಾತ್ಮಕ ಯೋಜನೆ ಹಾಗೂ ಪರಿಶೀಲನೆಗಾಗಿ ನಿಖರವಾದ ಡೇಟಾದೊಂದಿಗೆ ಆರೋಗ್ಯಶುಶ್ರೂಷಾ ವೃತ್ತಿಪರರನ್ನು ಸಬಲಗೊಳಿಸುವ ಮೂಲಕ ಶಸ್ತ್ರಚಿಕಿತ್ಸೆ ಕೋಣೆಯಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ ಎಂದು ಮೆಡ್‌ಟ್ರಾನಿಕ್ ಇಂಡಿಯಾದ ನರರೋಗವಿಜ್ಞಾನ ಮತ್ತು ಸ್ಪೆಶಲ್ಟಿ ಚಿಕಿತ್ಸೆಗಳು ವಿಭಾಗದ ಹಿರಿಯ ನಿರ್ದೇಶಕ ಪ್ರತೀಕ್ ತಿವಾರಿ ಹೇಳಿದರು.

Continue Reading

ಮಳೆ

Karnataka Weather : ಒಳನಾಡಿನಲ್ಲಿ ವಿಪರೀತ ಬಿಸಿಲು; ಕರಾವಳಿಯಲ್ಲಿ ಬಿಸಿಗಾಳಿ, ಮಲೆನಾಡಿನಲ್ಲಿ ಗುಡುಗು ಮಳೆ

Karnataka Weather Forecast : ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆಯಿಂದ ಜನರು ತತ್ತರಿಸಿ ಹೋಗಲಿದ್ದಾರೆ. ಕರಾವಳಿಯಲ್ಲಿ ಬಿಸಿಗಾಳಿಯು (Hot weather) ಬೀಸಲಿದ್ದು, ದಕ್ಷಿಣ ಒಳನಾಡಲ್ಲಿ ಶುಷ್ಕ ವಾತಾವರಣ (Dry Weather) ಇರಲಿದೆ. ಮಲೆನಾಡಿನ ಕೆಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾರಾಂತ್ಯದಲ್ಲಿ ರಾಜ್ಯಾದ್ಯಂತ ಹಗುರದಿಂದ ಕೂಡಿದ ಮಳೆಯಾಗುವ (Rain news) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದರೆ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಭಾಗಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ತಿಂಗಳಾಂತ್ಯದವರೆಗೂ ತಾಪಮಾನ ಹೆಚ್ಚಳ

ಗರಿಷ್ಠ ತಾಪಮಾನವು ಏಪ್ರಿಲ್‌ 30ರವರೆಗೆ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನ 12ರಿಂದ 3ಗಂಟೆವರೆಗೆ ಹೊರಾಂಗಣ ಚಟುವಟಿಕೆಗಳಿಂದ ದೂರ ಇರುವಂತೆ ತಜ್ಞರು ಸೂಚಿಸಿದ್ದಾರೆ. ಇನ್ನೂ ಕರಾವಳಿ ಕರ್ನಾಟಕದಲ್ಲಿ ವಾತಾವರಣವು ಬಿಸಿಯಾಗಿರಲಿದೆ. ಕೆಲವೊಮ್ಮೆ ಬಿಸಿ ಗಾಳಿಯೂ ಬೀಸಲಿದೆ.

ಯೆಲ್ಲೋ ಅಲರ್ಟ್‌

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಏರಿಕೆ ಆಗಲಿದೆ. ಹೀಗಾಗಿ ಈ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

ಈ ಬಾರಿಯ ಸಮ್ಮರ್‌ ಸೀಸನ್‌ನಲ್ಲಿ ಸೆಕೆಯಾಗದ 3 ಬಗೆಯ ಸಮ್ಮರ್‌ ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್‌ಗಳು (Summer Hairstyles) ಟ್ರೆಂಡಿಯಾಗಿವೆ. ತಕ್ಷಣಕ್ಕೆ ನೋಡಲು ಹಳೆಯ ಹೇರ್‌ಸ್ಟೈಲ್‌ ಎಂದೆನಿಸಿದರೂ ಅವುಗಳ ಜೊತೆಗೆ ನಾನಾ ಬಗೆಯ ವಿನ್ಯಾಸಗಳು ಸೇರಿಕೊಂಡಿವೆ.

Summer Hairstyles

ಸೈಡಿಗೆ ಸರಿದ ಫ್ರೀ ಹೇರ್‌ಸ್ಟೈಲ್‌ಗಳು

“ಈ ಸಮ್ಮರ್‌ನಲ್ಲಿ ಫ್ರೀ ಹೇರ್‌ಸ್ಟೈಲ್‌ಗಳು ಸೈಡಿಗೆ ಸರಿದಿವೆ. ಕೇವಲ ಹೇರ್‌ ಕಂಡೀಷನ್‌ ಕೋಣೆಗಳಲ್ಲಿ ಹಾಗೂ ಇನ್‌ಡೋರ್‌ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮಾತ್ರ ಈ ಹೇರ್‌ ಸ್ಟೈಲ್‌ಗಳಲ್ಲಿ ಹೆಣ್ಣುಮಕ್ಕಳು ಕಾಣಸಿಗುತ್ತಿದ್ದಾರೆ. ಇನ್ನು ಹೊರಾಂಗಣದಲ್ಲಿ ಸೆಕೆಯಾಗದ ಹಾಗೂ ಆರಾಮ ಎಂದೆನಿಸುವ ಕಂಫರ್ಟಬಲ್‌ ಕೂದಲ ವಿನ್ಯಾಸಗಳು ಚಾಲ್ತಿಯಲ್ಲಿವೆ. ಇದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ! ಟೀನೇಜ್‌ ಹಾಗೂ ಯುವತಿಯರಲ್ಲೂ ಕಾಮನ್‌ ಆಗಿವೆ” ಎನ್ನುತ್ತಾರೆ ಹೇರ್‌ಸ್ಟೈಲಿಸ್ಟ್‌ ನಮಿತಾ. ಅವರ ಪ್ರಕಾರ, ಶಾರ್ಟ್‌ ಹೇರ್‌ಸ್ಟೈಲ್‌ಗಳು ಈ ಸೀಸನ್‌ನಲ್ಲಿ ತೀರಾ ಕಾಮನ್‌ ಆಗಿವೆ ಎನ್ನುತ್ತಾರೆ.

ಹೈ ಬನ್‌ ಹೇರ್‌ಸ್ಟೈಲ್‌

ನೆತ್ತಿಯ ಮೇಲೆ ಹಾಕುವಂತಹ ಹೈ ಬನ್‌ ಹೇರ್‌ಸ್ಟೈಲ್‌ಗಳು ಇದೀಗ ಬಿಸಿಲಿನ ಝಳದಲ್ಲಿ ಹೈಲೈಟ್‌ ಆಗುತ್ತಿವೆ. ಕೆಳಗಿನಿಂದ ಮೇಲಿನವರೆಗೂ ಕೂದಲನ್ನು ಕಟ್ಟಿ ಹಾಕುವಂತಹ ವಿನ್ಯಾಸದಲ್ಲಿ ಹಾಗೂ ನೆತ್ತಿಯ ಮೇಲೆ ಸುತ್ತಿ ಅಥವಾ ಹರಡಿದಂತೆ ಕಾಣುವ ರೀತಿಯಲ್ಲಿ ಹಾಕುವ ಹೇರ್‌ಬನ್‌ಗಳು ಈ ಸೀಸನ್‌ನಲ್ಲಿ ಟ್ರೆಂಡಿಯಾಗಿವೆ. ಇವು ನೋಡಲು ಕೂಡ ಆಕರ್ಷಕವಾಗಿ ಕಾಣಿಸುತ್ತವೆ. ಜೊತೆಗೆ ಸೆಕೆಯಾಗುವುದಿಲ್ಲ!

Summer Hairstyles

ಪೋನಿಟೈಲ್‌ ವಿತ್‌ ಫ್ರಿಂಝ್‌ ಹೇರ್‌ಸ್ಟೈಲ್‌

ಮುಂಭಾಗದಲ್ಲಿ ಹುಡುಗಿಯರ ಹಣೆಯನ್ನು ಕವರ್‌ ಮಾಡುವ ಫ್ರಿಂಝ್‌ ಹೇರ್‌ಸ್ಟೈಲ್‌ ಹಿಂದೆ ಸಿಂಪಲ್‌ ಪೋನಿಟೈಲ್‌ ಕೂಡ ಈ ಸೀಸನ್‌ನಲ್ಲಿ ಮರಳಿದೆ. ನೋಡಲು ಸಿಂಪಲ್ಲಾಗಿ ಕಾಣಿಸುವ ಈ ಹೇರ್‌ಸ್ಟೈಲ್‌ ನೋಡಿದಾಗ ಖಾಲಿ ಎಂದೆನಿಸುವುದಿಲ್ಲ. ಬದಲಿಗೆ ಎರಡು ಹೇರ್‌ಸ್ಟೈಲ್‌ ಕಾಂಬಿನೇಷನ್‌ ಇದಾಗಿರುತ್ತದೆ.

ಹನ್‌ ಹೇರ್‌ಸ್ಟೈಲ್‌

ಅರ್ಧ ಫ್ರೀ ಹೇರ್‌ಸ್ಟೈಲ್‌ ಹಾಗೂ ಅರ್ಧ ಕಟ್ಟಿದ ಬನ್‌ ಹೇರ್‌ಸ್ಟೈಲ್‌ ಕಾಂಬೀನೇಷನ್‌ ಈ ಸೀಸನ್‌ನ ಹನ್‌ ಹೇರ್‌ಸ್ಟೈಲ್‌ನಲ್ಲಿ ಸೇರಿದೆ. ಇವೆರಡರೊಳಗೆ ಹಣೆ ಮುಂಭಾಗದ ಫಿಂಝ್‌ ಹೇರ್‌ಸ್ಟೈಲ್‌ ಮಿಕ್ಸ್‌ ಆಗಿದೆ. ಇವೆಲ್ಲದರ ಸಮಾಗಮ ಫ್ರಿಂಝ್‌ ಹನ್‌ ಹೇರ್‌ಸ್ಟೈಲ್‌. ಇದು ಈ ಸೀಸನ್‌ನಲ್ಲಿ ಇದು ಹುಡುಗಿಯರ ಫೇವರೇಟ್‌ ಲಿಸ್ಟ್‌ನಲ್ಲಿದೆ.

Summer Hairstyles

ಬೇಸಿಗೆ ಹೇರ್‌ಸ್ಟೈಲ್‌ ಫಾಲೋ ಮಾಡಲು ಹೀಗೆ ಮಾಡಿ

  • ಹೊರಗಡೆ ಹೋಗುವಾಗ ಮೇಲಿನ ಹೇರ್‌ಸ್ಟೈಲ್‌ಗಳನ್ನು ಮಾಡಿ.
  • ಮುಖದ ಆಕಾರಕ್ಕೆ ತಕ್ಕಂತೆ ಇವನ್ನು ಆಯ್ಕೆ ಮಾಡಿ.
  • ಫ್ರಿಂಝ್‌ ಮಾಡದಿದ್ದವರೂ ಸೈಡ್‌ಲಾಕ್ಸ್‌ ಕೂದಲ ವಿನ್ಯಾಸ ಮಾಡಬಹುದು.
  • ತೀರಾ ಟೈಟಾಗಿ ಕಟ್ಟಬೇಡಿ. ತಲೆ ನೋವಾಗಬಹುದು.
  • ಮೇಲಿನ ಹೇರ್‌ಸ್ಟೈಲ್ಸ್‌ ನಿಮಗೆ ಸ್ಲಿಮ್‌ ಲುಕ್‌ ನೀಡಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Job Alert
ಉದ್ಯೋಗ6 mins ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

English Speaking Practice
ತಂತ್ರಜ್ಞಾನ13 mins ago

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

Vijayapur MLA Basanagowda Patil Yatnal latest statement in Dharwad
ಹುಬ್ಬಳ್ಳಿ14 mins ago

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Congress government notice to The Rulers: Power of Constitution hero
ಸಿನಿಮಾ17 mins ago

The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ18 mins ago

IPL 2024 : ಕೆಕೆಆರ್​ ತಂಡವನ್ನು ಸೋಲಿಸಿ ವಿಶೇಷ ಭಕ್ಷ್ಯ ಸವಿದ ಪಂಜಾಬ್ ಆಟಗಾರರು, ಇಲ್ಲಿದೆ ವಿಡಿಯೊ

Ramayana Movie Ranbir Kapoor, Sai Pallavi's first look leaked
ಸಿನಿಮಾ19 mins ago

Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

Drought Relief
ಕರ್ನಾಟಕ24 mins ago

Drought Relief: ಕಡಿಮೆ ಬರ ಪರಿಹಾರ; ಕೇಂದ್ರದ ವಿರುದ್ಧ ನಾಳೆ ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ!

Lok sabha election 2024
Lok Sabha Election 202425 mins ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

car accident USA
ದೇಶ1 hour ago

Road Accident: ಅಮೆರಿಕದಲ್ಲಿ ಭೀಕರ ಅಪಘಾತ, 20 ಅಡಿ ಎತ್ತರ ಜಿಗಿದ ಕಾರು; 3 ಭಾರತೀಯ ಮಹಿಳೆಯರ ಸಾವು

Lok sabha election 2024
Lok Sabha Election 20241 hour ago

Lok Sabha Election 2024 : ಜೆಡಿಎಸ್‌ಗೆ ವೋಟ್‌ ಹಾಕಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 202425 mins ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ5 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ12 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌