State Best Teacher Award: 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಶಿಕ್ಷಣ ಇಲಾಖೆಯಿಂದ ಪಟ್ಟಿ ಬಿಡುಗಡೆ - Vistara News

ಬೆಂಗಳೂರು

State Best Teacher Award: 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಶಿಕ್ಷಣ ಇಲಾಖೆಯಿಂದ ಪಟ್ಟಿ ಬಿಡುಗಡೆ

State Best Teacher Award: ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದೆ.

VISTARANEWS.COM


on

State Best Teacher Award
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ (State Best Teacher Award) ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ₹25 ಸಾವಿರ ನಗದು ನೀಡಿ, ಗೌರವಿಸಲಾಗುತ್ತೆ. ಶಿಕ್ಷಕರ ಪಟ್ಟಿ ಈ ಕೆಳಗಿನಂತಿದೆ.

ಚಿಕ್ಕೋಡಿ ಉಳ್ಳಾಗಡ್ಡಿವಾಡಿ ಶಾಲೆಯ ಪದ್ಮಶ್ರೀ ಸುರೇಶ, ಕಲಬುರಗಿ ಜಿಲ್ಲೆ ಭೂಸಣಗಿಯ ಮಲ್ಲಿಕಾರ್ಜುನ ಎಸ್‌. ಸಿರಸಿಗಿ, ದಾವಣಗೆರೆ ಜಿಲ್ಲೆ ಹಿಂಡಸಘಟ್ಟ ಕ್ಯಾಂಪ್‌ನ ಬಿ. ಅರುಣ್‌ಕುಮಾರ್, ಮೈಸೂರು ಜಿಲ್ಲೆ ಹಿನಕಲ್‌ನ ಕೆ.ಎಸ್‌. ಮಧುಸೂದನ್‌, ಬೆಳಗಾವಿ ಜಿಲ್ಲೆ ಅಂಬೇವಾಡಿಯ ಅಸ್ಮಾ ಇಸ್ಮಾಯಿಲ್‌, ದಕ್ಷಿಣ ಕನ್ನಡದ ನೀರ್ಕೆರೆ ಮೂಡಬಿದ್ರಿಯ ಕೆ. ಯಮುನಾ, ಹಾವೇರಿ ಜಿಲ್ಲೆಯ ಜಮೀರ್‌ ಅಬ್ದುಲ್‌, ಬೆಂಗಳೂರು ದಕ್ಷಿಣ ಜಿಲ್ಲೆಯ ಚಂದಾಪುರದ ಜಿ. ರಂಗನಾಥ, ಚಿಕ್ಕಬಳ್ಳಾಪುರ ಜಿಲ್ಲೆಯ ಇನಮಿಂಚೇನಹಳ್ಳಿಯ ಸುಶೀಲಮ್ಮ, ಮಧುಗಿರಿಯ ಬಸವನಹಳ್ಳಿಯ ಎಸ್‌.ವಿ. ರಮೇಶ್‌, ಧಾರವಾಡ ಜಿಲ್ಲೆ ಹಳೇಹುಬ್ಬಳ್ಳಿಯ ಹನುಮಂತಪ್ಪ ಎಂ. ಕುಂದರಗಿ, ಚಿತ್ರದುರ್ಗ ಜಿಲ್ಲೆ ಹೊಸಹಟ್ಟಿಯ ಆರ್‌.ಟಿ. ಪರಮೇಶ್ವರಪ್ಪ, ಶಿರಸಿ ಜೋಗೇಶ್ವರ ಹಳ್ಳದ ರಾಮಚಂದ್ರ ಶೇಷಾಜಪ್ಪ ಕಲಾಲ, ಶಿವಮೊಗ್ಗ ಗುತ್ಯಪ್ಪ ಕಾಲೊನಿಯ ಎಂ. ಭಾಗೀರಥಿ, ವಿಜಯನಗರ ಜಿಲ್ಲೆ ಹಿರೇಕೊಳಚಿಯ ಎಲ್‌. ಮಧುನಾಯ್ಕ, ರಾಮನಗರ ಜಿಲ್ಲೆ ಅರಳಾಳುಸಂದ್ರದ ಪಿ. ಸುರೇಶ, ಯಾದಗಿರಿ ಜಿಲ್ಲೆ ಬಸ್ಸಾಪುರದ ನೀಲಪ್ಪ ಎಸ್. ತೆಗ್ಗಿ, ಉತ್ತರ ಕನ್ನಡ ಜಿಲ್ಲೆಯ ಹೊನ್ನೆಮಡಿಯ ರಾಘವೇಂದ್ರ ಎಸ್. ಮಡಿವಾಳ, ದೊಡ್ಡಬಳ್ಳಾಪುರದ ಬೀಡಿಕೆರೆಯ ಎಚ್‌.ಎಂ. ಮಂಗಳಕುಮಾರಿ, ಗದಗ ಜಿಲ್ಲೆ ಬಸಾಪುರದ ರತ್ನಾಬಾಯಿ.

ಪ್ರೌಢಶಾಲಾ ಶಿಕ್ಷಕರು

ಚಿಕ್ಕಮಗಳೂರು ಜಿಲ್ಲೆ ಲೋಕನಾಥಪುರದ ಆರ್‌.ಡಿ.ರವೀಂದ್ರ, ಬೆಂಗಳೂರು ಗ್ರಾಮಾಂತರದ ಟಿ. ಬೇಗೂರಿನ ಟಿ.ಕೆ. ರವಿಕುಮಾರ್, ಉತ್ತರ ಕನ್ನಡ ಹಿರೇಗುತ್ತಿಯ ಮಹಾದೇವ ಬೊಮ್ಮಗೌಡ, ಶಿವಮೊಗ್ಗ ಜಿಲ್ಲೆ ಹೊಸೂರು–ಗುಡ್ಡೆಕೇರಿಯ ಟಿ. ವೀರೇಶ, ಧಾರವಾಡ ಜಿಲ್ಲೆ ಇಂಗಳಹಳ್ಳಿಯ ಕಳಕ ಮಲ್ಲೇಶ ಪಟ್ಟಣಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲೆಯ ನೆಲಗದರಹಳ್ಳಿಯ ಎಸ್‌. ಶ್ಯಾಮಲಾ, ಉಡುಪಿ ಜಿಲ್ಲೆ ರಂಜಾಳದ ವಿನಾಯಕ ನಾಯ್ಕ, ಬೆಂಗಳೂರು ದಕ್ಷಿಣ ಜಿಲ್ಲೆ ಕೋನಪ್ಪನ ಅಗ್ರಹಾರದ ಸಿ. ಪದ್ಮಾವತಿ, ವಿಜಯಪುರ ಜಿಲ್ಲೆ ನಾದ ಕೆ.ಡಿ.ಯ ಶಶಿಕಲಾ ಲಕ್ಷ್ಮಣ ಬಡಿಗೇರ, ಚಿಕ್ಕಬಳ್ಳಾಪುರ ಜಿಲ್ಲೆ ಹಂಪಸಂದ್ರದ ಹರೀಶ್‌ ರಾಜ ಅರಸ್‌, ದಕ್ಷಿಣ ಕನ್ನಡದ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ ಕೆ. ವಿಶ್ವನಾಥ ಗೌಡ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

CET-NEET: ಸಿಇಟಿ-ನೀಟ್; ಛಾಯ್ಸ್ ದಾಖಲು ಸೆ.4ರ ಮಧ್ಯಾಹ್ನ 12ಗಂಟೆಗೆ ಕೊನೆ

CET-NEET: ಯುಜಿಸಿಇಟಿ- ನೀಟ್ ಕೋರ್ಸ್‌ಗಳಿಗೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಇನ್ನೂ ಸುಮಾರು 15ಸಾವಿರ ಅಭ್ಯರ್ಥಿಗಳು ಯಾವ ಛಾಯ್ಸ್‌ಗಳನ್ನೂ ದಾಖಲು ಮಾಡದ ಕಾರಣ ಅವರಿಗೆ ಅನುಕೂಲ ಆಗಲಿಯೆಂದು ಛಾಯ್ಸ್ ದಾಖಲು ದಿನಾಂಕವನ್ನು ಸೆ.4ರ ಮಧ್ಯಾಹ್ನ 12ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಯುಜಿಸಿಇಟಿ- ನೀಟ್ (CET-NEET) ಕೋರ್ಸ್‌ಗಳಿಗೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಇನ್ನೂ ಸುಮಾರು 15ಸಾವಿರ ಅಭ್ಯರ್ಥಿಗಳು ಯಾವ ಛಾಯ್ಸ್‌ಗಳನ್ನೂ ದಾಖಲು ಮಾಡದ ಕಾರಣ ಅವರಿಗೆ ಅನುಕೂಲ ಆಗಲಿಯೆಂದು ಛಾಯ್ಸ್ ದಾಖಲು ದಿನಾಂಕವನ್ನು ಸೆ.4ರ ಮಧ್ಯಾಹ್ನ 12ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ಛಾಯ್ಸ್ ದಾಖಲೆಗೆ ಸೆ.3ರ ರಾತ್ರಿ 12ಗಂಟೆವರೆಗೂ ಅವಕಾಶ ಇತ್ತು. ಅದನ್ನು ವಿಸ್ತರಿಸಲಾಗಿದೆ. ಹಾಗೆಯೇ ಶುಲ್ಕ ಪಾವತಿಗೆ ನಾಳೆ ಸಂಜೆ 4 ಗಂಟೆವರೆಗೆ ಅವಕಾಶ ಇರಲಿದೆ ಎಂದು ಅವರು ವಿವರಿಸಿದ್ದಾರೆ.

ನಿಗದಿತ ಅವಧಿಯೊಳಗೆ ಛಾಯ್ಸ್ ದಾಖಲು ಮಾಡಿಕೊಳ್ಳದಿದ್ದರೆ ಅಂತಹ ಅಭ್ಯರ್ಥಿಗಳ ಸೀಟು ರದ್ದಾಗಲಿದೆ ಎಂದೂ ಅವರು ತಿಳಿಸಿದ್ದಾರೆ. ಅಭ್ಯರ್ಥಿಗಳು ಕೊನೆ ದಿನಾಂಕದವರೆಗೂ ಕಾಯದೆ ಛಾಯ್ಸ್ ದಾಖಲು‌ ಮಾಡಿ, ಅದರ ನಂತರದ ಪ್ರವೇಶ ಪ್ರಕ್ರಿಯೆಯಲ್ಲಿ‌ ಭಾಗವಹಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಶುಲ್ಕ ಪಾವತಿ ನಂತರ ಆದೇಶ ಪತ್ರ‌ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ. ಇವತ್ತಿನವರೆಗೂ 92 ಸಾವಿರ ಮಂದಿ ತಮ್ಮ ಛಾಯ್ಸ್ ದಾಖಲು ಮಾಡಿಕೊಂಡಿದ್ದಾರೆ ಎಂದು ಅವರು ವಿವರಿಸಿದರು.

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ; ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕೆಲವೊಮ್ಮೆ ಗಾಳಿ ವೇಗ 45 ಕಿ.ಮೀ ವೇಗದಲ್ಲಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಅಬ್ಬರ (Karnataka Weather Forecast) ಮುಂದುವರಿದಿದೆ. ಬುಧವಾರದಂದು ಕರ್ನಾಟಕದ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಬಳ್ಳಾರಿ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್‌, ಧಾರವಾಡ, ಗದಗ,‌ ಕೊಪ್ಪಳ, ವಿಜಯಪುರದಲ್ಲಿ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ರಾಯಚೂರಲ್ಲಿ 100ಕ್ಕೂ ಹೆಚ್ಚು ಮನೆಗಳು ಕುಸಿತ; ಕೊಡಗಿನಲ್ಲಿ ಕೂದಲೆಳೆ ಅಂತರದಲ್ಲಿ ಕುಟುಂಬ ಪಾರು

ಚದುರಿದಂತೆ ಸಾಧಾರಣ ಮಳೆ

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಬೆಂಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಸಹಿತ ವ್ಯಾಪಕ ಮಳೆ ಸಾಧ್ಯತೆ

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಮುದ್ರಕ್ಕೆ ಇಳಿಯದಂತೆ ಸೂಚನೆ

ಸೆಪ್ಟೆಂಬರ್ 6 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Dengue Fever : ಮಹಾಮಾರಿ ಡೆಂಗ್ಯೂ ಈಗ ಸಾಂಕ್ರಾಮಿಕ ರೋಗ; ಸೊಳ್ಳೆಗಳ ನಿಯಂತ್ರಣ ಮಾಡದಿದ್ದರೆ ದಂಡಾಸ್ತ್ರ ಪ್ರಯೋಗ

Dengue Fever : ಮಹಾಮಾರಿ ಡೆಂಗ್ಯೂ ಈಗ ಸಾಂಕ್ರಾಮಿಕ ರೋಗ; ಸೊಳ್ಳೆಗಳ ನಿಯಂತ್ರಣ ಮಾಡದಿದ್ದರೆ ದಂಡಾಸ್ತ್ರ ಪ್ರಯೋಗ

VISTARANEWS.COM


on

By

Dengue is now an epidemic
Koo

ಬೆಂಗಳೂರು: ಡೆಂಗ್ಯೂ ಜ್ವರವನ್ನು (Dengue Fever) ಸಾಂಕ್ರಾಮಿಕ ರೋಗ (Epidemic Diseases) ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಸಾಂಕ್ರಾಮಿಕ ರೋಗಗಳ ಕಾಯಿದೆ 2020 ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆ ಉಲ್ಲಂಘನೆಗೂ ದಂಡ ನಿಗದಿ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ನೀಡಿದೆ. ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಕ್ರಮವಹಿಸಲಾಗಿದೆ. ಸೊಳ್ಳೆಗಳ ನಿಯಂತ್ರಣ ಮಾಡದಿದ್ದರೆ ದಂಡಾಸ್ತ್ರ ಪ್ರಯೋಗ ಮಾಡಲಾಗುತ್ತದೆ.

ಡಿಸಿಗಳಿಗೆ ಅಧಿಕಾರ

ಡೆಂಗ್ಯೂ ರೋಗವನ್ನು ಸಾಂಕ್ರಾಮಿಕ ರೋಗ ಪಟ್ಟಿಗೆ ಸೇರಿಸಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಜನರಿಗೆ ಇದುವರೆಗೆ ಜಾಗೃತಿ ಮೂಡಿಸಿ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದ್ದವಿ. ಆದರೆ ಇದುವರೆಗೆ ನಮಗೆ ಯಾವ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ. ಮಂಗಳೂರು, ಬೆಂಗಳೂರಿನಲ್ಲಿ ಮಾತ್ರ ಪಾಲಿಕೆಗಳು ಕೆಲ ಕ್ರಮ ತೆಗೆದುಕೊಳ್ಳುವ ಅವಕಾಶ ಇತ್ತು, ಬೇರೆ ಕಡೆ ಇರಲಿಲ್ಲ. ಇದೀಗ ಡೆಪ್ಯುಟಿ ಕಮೀಷನರ್‌, ಡಿಸಿಗಳು ಇನ್ನು ಮುಂದೆ ಕ್ರಮ ತೆಗೆದುಕೊಳ್ಳುವ ಅಧಿಕಾರ ನೀಡಿದ್ದೇವೆ. ಮನೆ, ಸಂಸ್ಥೆ, ಕಟ್ಟಡಗಳು, ನಿರ್ಮಾಣ ಹಂತದ ಸೈಟ್, ಹೋಟೆಲ್ ಹೀಗೆ ಹಲವು ಸ್ಥಳಗಳ ಸುತ್ತಮುತ್ತ ಸರಿಯಾದ ನಿರ್ವಹಣೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆ.

ಆ ಪ್ರಕಾರ ಗ್ರಾಮೀಣ ಪ್ರದೇಶಗಳ ಮನೆಗಳಿಗೆ 200 ರೂ. ದಂಡ, ನಗರ ಪ್ರದೇಶಗಳ ಮನೆಗಳಿಗೆ 400 ರೂ., ನಗರ ಪ್ರದೇಶದ ವಾಣಿಜ್ಯ ಪ್ರದೇಶ, ಮಾಲ್, ಮಾರುಕಟ್ಟೆಗಳಿಗೆ 1 ಸಾವಿರ ರೂ, ಗ್ರಾಮೀಣ ಪ್ರದೇಶಗಳಲ್ಲಿ 500 ರೂವರೆಗೆ ದಂಡ ಇರಲಿದೆ. ಖಾಲಿ ಸ್ಥಳ, construction ಸೈಟ್ ( ನಗರ ಪ್ರದೇಶ) 2 ಸಾವಿರ ರೂ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 1 ಸಾವಿರ ರೂ ದಂಡ ಇರಲಿದೆ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ರಾಯಚೂರಲ್ಲಿ 100ಕ್ಕೂ ಹೆಚ್ಚು ಮನೆಗಳು ಕುಸಿತ; ಕೊಡಗಿನಲ್ಲಿ ಕೂದಲೆಳೆ ಅಂತರದಲ್ಲಿ ಕುಟುಂಬ ಪಾರು

Karnataka weather Forecast : ರಾಯಚೂರಿನಲ್ಲಿ ಭಾರಿ ಮಳೆಗೆ (Rain News) 108 ಮನೆಗಳು ನೆಲಸಮವಾಗಿದ್ದು, ಯಾದಗಿರಿಯಲ್ಲಿ ವ್ಯಾಪಕ ಮಳೆಗೆ ಹಲವು ಗ್ರಾಮಗಳು ಜಲಾವೃತಗೊಂಡಿದ್ದವು, ಕೊಡಗಿನಲ್ಲಿ ಮನೆಯೊಂದು ಧರಾಶಾಹಿಯಾಗಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಯಾದಗಿರಿ: ರಾಯಚೂರಿನಲ್ಲಿ (Karnataka Weather Forecast) ಭಾರಿ ಮಳೆಗೆ (Rain News) ಜಿಲ್ಲೆಯಾದ್ಯಂತ 108 ಮನೆಗಳು (Home collopase) ಕುಸಿದಿವೆ. ದೇವದುರ್ಗ ತಾಲೂಕಿನಲ್ಲಿ 9 ಮನೆಗಳು ಕುಸಿದು ಬಿದ್ದರೆ, ಲಿಂಗಸೂಗೂರಿನಲ್ಲಿ 32 ಮನೆಗಳು ಹಾಳಾಗಿವೆ. ರಾಯಚೂರು ತಾಲೂಕಿನ ವಿವಿಧೆಡೆ 19 ಮನೆಗಳು ಕುಸಿದಿದೆ. ಆಂಧ್ರ- ತೆಲಂಗಾಣ ಗಡಿ ಹೊಂದಿರುವ ಸಿಂಧನೂರು ತಾಲೂಕಿನ 33 ಮನೆಗಳು, ಮಸ್ಕಿ ತಾಲೂಕಿನಲ್ಲಿ 9, ಸಿರವಾರ ತಾಲೂಕಿನಲ್ಲಿ 4 ಮನೆಗಳು ಕುಸಿದು ಬಿದ್ದಿದೆ. ರಾಯಚೂರು ತಾಲೂಕಿನ ಬಿ.ಯದ್ಲಾಪುರ ಗ್ರಾಮದ ದಿವಾಕರ್ ಎಂಬುವರ ಮನೆ ಕುಸಿದಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆರು ಜನರು ವಾಸವಾಗಿರುವ ಮನೆ ಸಂಪೂರ್ಣ ಕುಸಿತವಾಗಿ ಹಾಳಾಗಿದೆ. ಸುಮಾರು 40 ವರ್ಷದ ಮಣ್ಣಿನ ಮನೆಯು ಕುಸಿದು ಬಿದ್ದಿದೆ.

ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

ಕಲಬುರಗಿ: ನೀರಿನ ರಭಸಕ್ಕೆ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಚಿಮ್ಮನಚೊಡ ಗ್ರಾಮದ ಹಳ್ಳದ ದಂಡೆಯಲ್ಲಿ ಶವ ಪತ್ತೆಯಾಗಿದೆ. ಬಾಬು ತಂದೆ ಗುಂಡಪ್ಪ ನೂಲ್ಕರ್(50) ಎಂಬುವವರ ಮೃತದೇಹ ಸಿಕ್ಕಿದೆ. ಸೇತುವೆ ದಾಟುವ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು.

karnataka weather Forecast
karnataka weather Forecast

ಕೊಡಗಿನಲ್ಲಿ ಧರಾಶಾಹಿಯಾದ ಮನೆ

ಕೊಡಗು ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಸುರಿದ ಭಾರಿ ಮಳೆಗೆ ಮನೆಯೊಂದು ಧರಾಶಾಹಿಯಾಗಿದೆ. ಸೋಮವಾರಪೇಟೆ ತಾಲ್ಲೂಕಿನ ರಾಮನಹಳ್ಳಿ ಗ್ರಾಮದ ಸುರೇಶ್ ಎಂಬುವರ ಮನೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ. ಮನೆ ಕಳೆದುಕೊಂಡು ಸುರೇಶ್ ಕುಟುಂಬ ಕಂಗಾಲಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Forced Conversion : ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರ! ಒಲ್ಲೆ ಎಂದವಳ ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯ

ಯಾದಗಿರಿಯಲ್ಲಿ ಗವಿಸಿದ್ದೇಶ್ವರ ಗರ್ಭಗುಡಿ ಸಂಪೂರ್ಣ ಮುಳುಗಡೆ

ಯಾದಗಿರಿ ಜಿಲ್ಲೆಯಲ್ಲಿ ವರುಣನ‌ ಅಬ್ಬರ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಚಿಂತನಹಳ್ಳಿ ,ಕೋಟಗೇರಾದ ಸುರಗ ಫಾಲ್ಸ್ ಭೋರ್ಗರೆಯುತ್ತಿದೆ. ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಚಿಂತನಹಳ್ಳಿಯ ಕೋಟಗೇರಾದ ಜಲಪಾತ ಗವಿಸಿದ್ದೇಶ್ವರ ಗರ್ಭಗುಡಿ ಮೇಲ್ಭಾಗದಲ್ಲಿ ಹರಿಯುತ್ತಿದೆ. ಗವಿಸಿದ್ದೇಶ್ವರ ಗರ್ಭಗುಡಿ ಸಂಪೂರ್ಣ ಮುಳುಗಡೆಯಾಗಿದೆ. ಭಕ್ತರ ದರ್ಶನ ಪಡೆಯುವ ಮೆಟ್ಟಿಲುಗಳು ಸಹ ಜಲಾವೃತಗೊಂಡಿದೆ. ಗವಿಸಿದ್ದೇಶ್ವರ ದೇವಸ್ಥಾನದ ಆವರಣಕ್ಕೂ ನೀರು ನುಗ್ಗಿದ್ದರಿಂದ ಭಕ್ತರ ದರ್ಶನಕ್ಕೆ ಅವಕಾಶ ಇಲ್ಲದಂತಾಗಿದೆ.

ಮಳೆಯ ಹೊಡೆತಕ್ಕೆ ಮತ್ತಷ್ಟು ಸೇತುವೆಗಳು ಮುಳುಗಡೆಯಾಗಿದೆ. ಸೇತುವೆಗಳು ಮುಳುಗಡೆಯಿಂದ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ನಂದೇಪಲ್ಲಿ, ಬದ್ದೆಪಲ್ಲಿ ಸೇತುವೆಗಳು ಜಲಾವೃತಗೊಂಡಿದೆ. ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೈದಾಪುರದಿಂದ ತೆಲಂಗಾಣದ ನಾರಾಯಣಪೇಟ್‌ಗೆ ಸಂಪರ್ಕ ಕಲ್ಪಿಸುವ ಸೇತುವೆ, ಇನ್ನೊಂದು ಕಡೆ ಗುರುಮಠಕಲ್ ತಾಲೂಕಿನ ಬದ್ದೇಪಲ್ಲಿ ಸೇತುವೆ ಸಹ ಜಲಾವೃತಗೊಂಡಿದೆ. ಬದ್ದೇಪಲ್ಲಿಯಿಂದ ತೆಲಂಗಾಣದ‌ ಕೆಲ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಇದಾಗಿದೆ. ಎರಡು ಸೇತುವೆ ಮುಳುಗಡೆಯಿಂದ ಜನರ ಪರದಾಟ ಅನುಭವಿಸಿದ್ದಾರೆ.

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ವರುಣನ ಅವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನಿರಂತರ ಮಳೆಯಿಂದ ತಗ್ಗು ಪ್ರದೇಶದೊಳಗೆ ನೀರು ನುಗ್ಗಿದೆ. ಲಕ್ಷ್ಮೀನಗರದಲ್ಲಿ ಅಂಗಡಿಯೊಳಗೆ ಹಾಗೂ ಮನೆ ಆವರಣದೊಳಗೆ ನೀರು ನುಗ್ಗಿದ್ದರಿಂದ ಮನೆಯಿಂದ ಹೊರಹೋಗಲು ಆಗದೆ ಜನರ ಸಂಕಷ್ಟ ಎದುರಾಗಿದೆ. ಅದೇ ರೀತಿ ಹಾವು, ಚೇಳುಗಳ ಕಾಟದಿಂದ ಜನರು ಕಂಗಾಲಾಗಿದ್ದಾರೆ. ರಸ್ತೆಗಳು ಜಲಾವೃತಗೊಂಡ ಪರಿಣಾಮ ನಡೆದುಕೊಂಡು ಹೋಗಲು ಆಗದೆ ಪರಿತಪ್ಪಿಸಿದರು. ಲಕ್ಷ್ಮಿನಗರದಲ್ಲಿ 25ಕ್ಕೂ ಹೆಚ್ಚು ಮನೆಗಳಿಗೆ ನೀರು ಆವರಿಸಿದೆ.

ಮಳೆಯ ಅವಾಂತರಕ್ಕೆ ನಲುಗಿದ ಅನ್ನದಾತರು

ಯಾದಗಿರಿ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರಕ್ಕೆ ಅನ್ನದಾತರು ನಲುಗಿ ಹೋಗಿದ್ದಾರೆ. ಭಾರಿ ಮಳೆಗೆ ಪಂಪ್ ಸೆಟ್, ಐಪಿ ಸೆಟ್ ಹಾಗೂ ಟಿಸಿಗಳು ಕೊಚ್ಚಿ ಹೋಗಿವೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೋನಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಕೋನಾಳ ಗ್ರಾಮದ ಬಂದಗಿಸಾಬ್ ಎಂಬ ರೈತನಿಗೆ ಸೇರಿದ ಪಂಪ್ ಸೆಟ್ ಹಾಗೂ ಟಿಸಿ ಸೇರಿದಂತೆ ಹಲವರ ಹತ್ತಾರು ಪಂಪ್ ಸೆಟ್ ಹಾಗೂ ವಿದ್ಯುತ್ ಟಿಸಿ ನೀರಿನಲ್ಲಿ ಕೊಚ್ಚಿ ಹೋಗಿವೆ. ಹಳ್ಳದ ಬಳಿ ರೈತರು ಪಂಪ್ ಸೆಟ್ ಹಾಗೂ ಟಿಸಿಗಳನ್ನು ಅಳವಡಿಸಿದ್ದರು. ನಿರಂತರ ಮಳೆಗೆ ಐಪಿ ಸೆಟ್, ಪಂಪ್ ಸೆಟ್ ಹಾಗೂ ಟಿಸಿಗಳು ನೀರುಪಾಲಾಗಿವೆ. ಹಗಲು ರಾತ್ರಿ ಎನ್ನದೇ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಗ್ರಾಮಗಳ ಸಂಪರ್ಕವು ಸಹ ಕಡಿತವಾಗಿದೆ. ಜನರು ಮನೆಯಿಂದ ಹೊರಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಯಾದಗಿರಿಯ ಲುಂಬಿನಿ ಗಾರ್ಡನ್‌ ಜಲಾವೃತ

ಯಾದಗಿರಿ ನಗರದ ಹೃದಯ ಭಾಗದಲ್ಲಿರುವ ಲುಂಬಿನಿ ಗಾರ್ಡನ್ ಜಲಾವೃತಗೊಂಡಿದೆ. ಪ್ರವಾಸಿಗರನ್ನು ಸೆಳೆಯಬೇಕಾದ ಗಾರ್ಡನ್ ಈಗ ಗಬ್ಬು ತಾಣವಾಗಿ ಮಾರ್ಪಾಡಾಗಿದೆ. ಗಾರ್ಡನ್ ಒಳಗೆ ನೀರು ನುಗ್ಗಿದ್ದ ಪರಿಣಾಮ ಪ್ರವಾಸಿಗರು ಬರಲು ಹಿಂದೇಟು ಹಾಕಿದ್ದಾರೆ. ಗಾರ್ಡನ್ ಪಕ್ಕದಲ್ಲಿರುವ ಕೆರೆಯು ನೀರು ಗಾರ್ಡನ್‌ನೊಳಗೆ ನುಗ್ಗಿದೆ. ಪ್ರಾಣಿಗಳ ಮೂರ್ತಿ ಹಾಗೂ ಮಕ್ಕಳ ಆಟಿಕೆ ವಸ್ತುಗಳು ಜಲಾವೃತಗೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
heart attack
ಚಿಕ್ಕೋಡಿ2 mins ago

Heart Attack: ದೂರವಾಣಿಯಲ್ಲಿ ಮಾತನಾಡುತ್ತ ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ

State Best Teacher Award
ಬೆಂಗಳೂರು4 hours ago

State Best Teacher Award: 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಶಿಕ್ಷಣ ಇಲಾಖೆಯಿಂದ ಪಟ್ಟಿ ಬಿಡುಗಡೆ

cet exam karnataka exam authority
ಬೆಂಗಳೂರು5 hours ago

CET-NEET: ಸಿಇಟಿ-ನೀಟ್; ಛಾಯ್ಸ್ ದಾಖಲು ಸೆ.4ರ ಮಧ್ಯಾಹ್ನ 12ಗಂಟೆಗೆ ಕೊನೆ

karnataka weather Forecast
ಮಳೆ9 hours ago

Karnataka Weather : ಗುಡುಗು ಸಹಿತ ಭಾರಿ ಮಳೆ; ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಒತ್ತಡ ಇದ್ದರೂ ಸ್ನೇಹಿತರ ಜತೆ ಕಾಲ ಕಳೆಯುವಿರಿ

ಹುಬ್ಬಳ್ಳಿ20 hours ago

Physical Abuse : ನೌಕರಿ ಆಮಿಷ ತೋರಿಸಿ ಮಂಚಕ್ಕೆ ಕರೆದ ಹುಬ್ಬಳ್ಳಿಯ ರೈಲ್ವೆ ಇಲಾಖೆ ಕ್ಲರ್ಕ್!

Dengue is now an epidemic
ಆರೋಗ್ಯ21 hours ago

Dengue Fever : ಮಹಾಮಾರಿ ಡೆಂಗ್ಯೂ ಈಗ ಸಾಂಕ್ರಾಮಿಕ ರೋಗ; ಸೊಳ್ಳೆಗಳ ನಿಯಂತ್ರಣ ಮಾಡದಿದ್ದರೆ ದಂಡಾಸ್ತ್ರ ಪ್ರಯೋಗ

Road Accident
ಬಾಗಲಕೋಟೆ22 hours ago

Road Accident : ಬೈಕ್‌- ಟಿಪ್ಪರ್‌ ಅಪಘಾತದಲ್ಲಿ ಸವಾರ ಸಾವು; ಕೆಎಸ್‌ಆರ್‌ಟಿಸಿ ಡಿಕ್ಕಿಗೆ ಕಾಲು ಮುರಿದುಕೊಂಡ ವೃದ್ಧ

Karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ರಾಯಚೂರಲ್ಲಿ 100ಕ್ಕೂ ಹೆಚ್ಚು ಮನೆಗಳು ಕುಸಿತ; ಕೊಡಗಿನಲ್ಲಿ ಕೂದಲೆಳೆ ಅಂತರದಲ್ಲಿ ಕುಟುಂಬ ಪಾರು

Conversion to Islam in the name of love
ಉಡುಪಿ1 day ago

Forced Conversion : ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರ! ಒಲ್ಲೆ ಎಂದವಳ ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್6 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌