Site icon Vistara News

Kempanna : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ

State Contractors Association President Kempanna no more

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ (State Contractors Association President) ಅಧ್ಯಕ್ಷ ಕೆಂಪಣ್ಣ (84)ನಿಧನ (Kempanna) ಹೊಂದಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಸೆ.19ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬಿಜೆಪಿ ವಿರುದ್ಧ ಶೇ. 40 ಪರ್ಸೆಂಟೆಜ್ ಆರೋಪ ಮಾಡಿದ್ದ ಕೆಂಪಣ್ಣ ಅವರು ಗುತ್ತಿಗೆದಾರರ ಪರ ಹೋರಾಟ ಮಾಡಿದ್ದರು. ಆದರೆ ಕೆಂಪಣ್ಣ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್‌-ಬಿಜೆಪಿ ವಿರುದ್ಧ ಗುಡುಗಿದ್ದ ಡಿ ಕೆಂಪಣ್ಣ

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್‌ (40% Commission) ಹಗರಣದ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸಿದ್ದರಾಮಯ್ಯ ಸರ್ಕಾರದಲ್ಲೂ (Siddaramaiah Government) ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದಿದ್ದರು. ಭ್ರಷ್ಟಾಚಾರ ಇಲ್ಲ ಅಂತ ಹೇಳಿದರೆ ನನ್ನಂತ ಮೂರ್ಖ ಇನ್ನೊಬ್ಬರಿಲ್ಲ. ಹಿಂದೆಯೂ ಇತ್ತು, ಈಗಲೂ ಇದೆ. ಅದನ್ನು ತಡೆಗಟ್ಟಬೇಕು. ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ. ಆದರೆ ದೊಡ್ಡ ಮಟ್ಟದಲ್ಲಿ ಕಂಡುಬರುತ್ತಿಲ್ಲ. ಈಗ ಯಾವುದೇ ಪ್ರಮುಖ ಕೆಲಸಗಳು ಆಗಿಲ್ಲ. ಹಾಗಾಗಿ ಆರೋಪ ಮಾಡಲ್ಲ. ಪ್ರಮುಖ ಕಾಮಗಾರಿ ನಡೆದರೆ ಆಗ ಭ್ರಷ್ಟಾಚಾರದ ಬಗ್ಗೆ ಗೊತ್ತಾಗಲಿದೆ ಎಂದಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ (ಎಕ್ಸ್‌) ಮಾಡಿದ್ದಾರೆ.

Exit mobile version