ಬೆಂಗಳೂರು: ಜಯನಗರದ ಸಾರಕ್ಕಿ ಸರ್ಕಲ್ ಬಳಿ ಮಹಿಳೆ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಅಂಶವಿರುವ ಆ್ಯಸಿಡ್ ಎರಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಈ ಕುರಿತು ಆಯೋಗದ ಅಧ್ಯಕ್ಷೆ ಆರ್ ಪ್ರಮೀಳಾ ನಾಯ್ಡು ಪ್ರಕರಣ ದಾಖಲಿಸಿಕೊಂಡು ಸಂಬಂಧಪಟ್ಟ ಉಪ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿದ್ದಾರೆ. ಆ್ಯಸಿಡ್ ದಾಳಿಯಿಂದಾಗಿ ಯುವತಿಯ ಮುಖ ಭಾಗದಲ್ಲಿ ಕೆಂಪಾಗಿದೆ. ಕಣ್ಣಿನ ಬಳಿ ಗಾಯವಾಗಿದ್ದು, ಉತ್ತಮ ಚಿಕಿತ್ಸೆಗೆ ಸೂಚಿಸಲಾಗಿದೆ. ಅವರು ಗುಣಮುಖರಾಗುವ ಸಾಧ್ಯತೆಗಳಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಪ್ರಮೀಳಾ ನಾಯ್ಡು ಅವರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ | Acid Attack | ಆ್ಯಸಿಡ್ ನಾಗೇಶ್ ಸ್ವ-ಇಚ್ಛಾ ಹೇಳಿಕೆಯಲ್ಲಿ ಏನಿದೆ? ಇಲ್ಲಿದೆ ಫುಲ್ ಡಿಟೇಲ್ಸ್
ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯ ವಿರುದ್ಧ 307, 326 ಎ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಆಯೋಗದ ಅಧ್ಯಕ್ಷೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ | ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ಅಟ್ಯಾಕ್; ಪ್ರಿಯಕರನ ಕೃತ್ಯ, ಮಹಿಳೆಗೆ ಗಂಭೀರ ಗಾಯ