Site icon Vistara News

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

Student Death in Bengaluru

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version