ಬೆಂಗಳೂರು: ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ (Youth Congress President Nalapad) ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ (Student Kidnap Case) ಮಾಡಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಈ ಕುರಿತು ವಿದ್ಯಾರ್ಥಿ ದೂರು ನೀಡಿದ್ದು, ಆರೋಪಿಗಳಿಗೆ ಹುಡುಕಾಡಲಾಗುತ್ತಿದೆ.
ಕಿಡ್ನಾಪ್ ಮಾಡಿ ಸುಲಿಗೆ ಮಾಡಿರುವ ಕುರಿತು ನಾಲ್ವರ ವಿರುದ್ಧ ಜೀವನ್ ಜೈನ್ ಎಂಬ ವಿದ್ಯಾರ್ಥಿ ಆರೋಪ ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್, ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ ಜೀವನ್ ನಂತರ ಕಾರಣಾಂತರದಿಂದ ಹಣ ಕೊಡಲು ಆಗದೆ ಒದ್ದಾಡುತ್ತಿದ್ದ.
ಲೇಟಾಗಿ ಹಣ ಕೊಟ್ಟಿದ್ದಕ್ಕೆ ಕಿಡ್ನಾಪ್ ಮಾಡಿ ಬೆದರಿಸಲಾಗಿದೆ. ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಎಂದು ಬೆದರಿಸಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ. ಪೊಲೀಸ್ ಕಮಿಷನರ್‌ಗೆ ಮೇಲ್ ಮಾಡಿ ದೂರು ನೀಡಿದ್ದಾನೆ.
ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಆಸ್ಪತ್ರೆಪಾಲು
ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ (PG) ಊಟ ಮಾಡುತ್ತಿರುವಾಗ ಇಲಿ ವಿಷ (Rat Poison spray) ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡು (Food Poison) ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್ ಪಾಯಿಸನ್ ಆಗಿದೆ.
ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್