ಬೆಂಗಳೂರು: ಪಿಂಚಣಿಗಾಗಿ ಆಗ್ರಹಿಸಿ ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರ ಸಂಘ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಮುಷ್ಕರದಲ್ಲಿ (Protest) ಭಾಗಿಯಾಗಿದ್ದ ಇಬ್ಬರು ನಿವೃತ್ತ ಶಿಕ್ಷಕರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾ ನಡೆದಿದೆ. ಅವರಿಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಲಾಗಿದೆ.
ಬಾದಾಮಿಯ ಪಟ್ಟದಕಲ್ಲಿನ ಸಿದ್ದಯ್ಯ ಹೀರೆಮಠ (65), ನೆಲಮಂಗದಲ ವೆಂಕಟರಾಜು(65) ಆತ್ಮಹತ್ಯೆ ಮಾಡಲು ಯತ್ನಿಸಿದವರು. ಅವರಿಬ್ಬರೂ ವಿಷ ಸೇವಿಸಿ ಅಸ್ವಸ್ಥಗೊಂಡ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : Video: ದೆಹಲಿ ಏರ್ಪೋರ್ಟ್ನಲ್ಲಿ ಇಂಡಿಗೋ ವಿಮಾನದ ಎದುರು ಕಾಂಗ್ರೆಸ್ ಪ್ರತಿಭಟನೆ; ಪವನ್ ಖೇರಾರನ್ನು ಕೆಳಗೆ ಇಳಿಸಿದ್ದೇ ಕಾರಣ
ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರ ಸಂಘ 140 ದಿನಗಳಿಂದ ಫ್ರೀಡಂ ಪಾರ್ಕ್ ಬಳಿ ಸತ್ಯಾಗ್ರಹ ನಡೆಸುತ್ತಿದೆ. ನೂರಾರು ಶಿಕ್ಷಕರು ಈ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.