ಬೆಂಗಳೂರು: ನಗರದ ಆಚಾರ್ಯ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide Case) ಮಾಡಿಕೊಂಡಿರುವುದು ಗುರುವಾರ ಕಂಡುಬಂದಿದೆ.
ಪಶ್ಚಿಮ ಬಂಗಾಳದ ಮೂಲದ ರಮಿತಾ ರಾಯ್ ಮೃತ ವಿದ್ಯಾರ್ಥಿನಿ. ಪೊಲೀಸರು ಸ್ಥಳ ಪರಿಶೀಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಶುಕ್ರವಾರ ರಮಿತಾಳ ತಂದೆ, ತಾಯಿ ಆಗಮಿಸಲಿದ್ದಾರೆ. ನಂತರ ಅವರಿಗೆ ಪೊಲೀಸರು ಮೃತದೇಹವನ್ನು ಹಸ್ತಾಂತರಿಸಲಿದ್ದಾರೆ.
ಇದನ್ನೂ ಓದಿ | Car Accident | ಹಂಚಿನಾಳ ಬಳಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಇಬ್ಬರು ಸಾವು