ಬೆಂಗಳೂರು: ಬೆಂಗಳೂರಿನ (Bengaluru News) ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಡುಗಿಯೊಬ್ಬಳು ಅನುಮಾನಾಸ್ಪದವಾಗಿ (Suspicious Case) ಮೃತಪಟ್ಟಿದ್ದಾಳೆ. ಪ್ರಭುಧ್ಯಾ(21) ಮೃತ ದುರ್ದೈವಿ.
ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುದ್ಯಾ, ಬುಧವಾರ ಮಧ್ಯಾಹ್ನ ಮನೆಯ ಬಾತ್ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಪ್ರಭುಧ್ಯಾಳ ಸಾವು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ, ಕೊಲೆಯೋ ಹೀಗೆ ಎಲ್ಲ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯುಡಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.
ಇತ್ತ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗಳನ್ನು ಜೋಪಾನ ಮಾಡಿದ್ದೆ ಯಾರೋ ಕ್ರೂರವಾಗಿ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ತಾಯಿ ಸೌಮ್ಯ ಕಣ್ಣೀರು ಹಾಕಿದ್ದಾರೆ. ಆಫೀಸ್‌ನಲ್ಲಿದ್ದ ನನಗೆ ಮಧ್ಯಾಹ್ನ ಫೋನ್ ಮಾಡಿದ್ದಳು. ಫ್ರೆಂಡ್ಸ್ ಜತೆಗೆ ಇದ್ದೀನಿ ಪಾನಿಪುರಿ ತಿಂದು ಮನೆಗೆ ಹೋಗುತ್ತಿನಿ ಅಂದಿದ್ದಳು. ನಂತರ ಆಫೀಸ್ ಮುಗಿಸಿ ಮನೆಗೆ ಬಂದು ನೋಡಿದಾಗ ಮಗಳು ಬಾತ್ ರೂಮಿನಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.
ಮನೆಯ ಮುಂದಿನ ಡೋರ್ ಲಾಕ್ ಆಗಿತ್ತು. ಆದರೆ ಹಿಂದಿನ ಡೋರ್ ಓಪನ್ ಆಗಿತ್ತು. ಮಗಳ ಫೋನ್ ಸೋಫ್ ಮೇಲೆ ಇತ್ತು. ಆಕೆಯನ್ನು ಆಸ್ಪತ್ರೆಗೆ ಕೆರೆದುಕೊಂಡು ಹೋಗಿ ಬರುವಷ್ಟರಲ್ಲಿ ಫೋನ್ ಕೂಡ ಕಳ್ಳತನ ಆಗಿದೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವವಳು ಅಲ್ಲ.. ಯಾರೋ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.
ಎರಡ್ಮೂರು ಬಾರಿ ಆತ್ಮಹತ್ಯೆಗೆ ಯತ್ನ!
ಯುವತಿ ಪ್ರಬುದ್ಧ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಈ ಹಿಂದೆಯೂ ಎರಡು ಮೂರು ಬಾರಿ ಕೈ ಕೂಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗಿದೆ. ಬುಧವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಚಾಕುವಿನಿಂದ ಕುತ್ತಿಗೆ ಹಾಗೂ ಕೈಯನ್ನು ಕೂಯ್ದುಕೊಂಡಿದ್ದಾಳೆ ಎನ್ನಲಾಗಿದೆ.
ತಾಯಿ ಆಫೀಸ್‌ಗೆ ತೆರಳಿದ್ದರು. ಮೃತಳ ತಮ್ಮ ಮನೆಗೆ ಬಂದು ನೋಡಿದಾಗ ಸಹೋದರಿ ಪ್ರಬುದ್ಧ ಸಾವನ್ನಪ್ಪಿರುವುರು ಬೆಳಕಿಗೆ ಬಂದಿದೆ. ಸದ್ಯ ಮೃತಳ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಕೆಂಪೇಗೌಡ ಆಸ್ಪತ್ರೆಯ ಶವಾಗಾರದಲ್ಲಿ ಮೃತ ಯುವತಿಯ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಪ್ರಬುದ್ಧ ಮನೆ ಮಾಲೀಕರಾದ ಶ್ವೇತಾ ಚಂದ್ರಶೇಖರ್ ಮಾತನಾಡಿದ್ದು, ಪ್ರಬುದ್ಧ ತುಂಬಾ ಒಳ್ಳೆಯ ಹುಡುಗಿ. ಹೆಚ್ಚಾಗಿ ಓದುತ್ತಾ ಇದ್ದಳು, ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕು ಅಂತಿದ್ದಳು. ನಿನ್ನೆ ಸಂಜೆ ಪ್ರಬುದ್ಧಳ ಸಹೋದರ ಬಂದು ಬಾಗಿಲು ಬಡಿದಿದ್ದಾನೆ. ಈ ವೇಳೆ ಬಾಗಿಲು ತೆಗೆದು ನೋಡಿದಾಗ ಬಾತ್ ರೂಂನಲ್ಲಿ ಬಿದ್ದಿದ್ದಳು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆದರೆ ಪ್ರಯೋಜನ ಆಗಲಿಲ್ಲ. ಪೊಲೀಸರು ಬಂದು ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದ್ದಾರೆ. ಸದ್ಯ ಮೂರು ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಇಂಗ್ಲೀಷ್‌ನಲ್ಲಿ Sorry ಅಮ್ಮ ಎಂದು ಬರೆದಿದ್ದಾಳೆ. ಆದರೆ ನಾವು ಡೆತ್ ನೋಟ್ ನೋಡಿಲ್ಲ, ಪೊಲೀಸರು ತೋರಿಸಿದ್ದಾರೆ ಅಷ್ಟೆ.. ಡೆತ್ ನೋಟ್ ಹ್ಯಾಂಡ್ ರೈಟಿಂಗ್ ಮ್ಯಾಚ್ ಆಗುತ್ತಿಲ್ಲ ಎನ್ನಲಾಗಿದೆ ಎಂದರು.
ಇದನ್ನೂ ಓದಿ: Road Accident: ಸರಣಿ ಅಪಘಾತ, ಬೈಕ್ ಸವಾರ ಸಾವು; ಕಾರು ಡಿಕ್ಕಿಯಾಗಿ ಪಾದಚಾರಿ ಸಾವು
ಪತ್ನಿಗೆ ಹೆದರಿಸಲು ಹೋಗಿ ಉರುಳು ಬಿಗಿದು ಸತ್ತ ಜಿಮ್ ಟ್ರೇನರ್; ವಿಡಿಯೋ ಕಾಲ್‌ನಲ್ಲೇ ಆತ್ಮಹತ್ಯೆ
ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ (Video Call) ಮಾಡಿ ಹೆದರಿಸಲು ಹೋದ ಜಿಮ್ ಟ್ರೈನರ್ (Gym Trainer), ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು (hanging) ಮೃತಪಟ್ಟಿದ್ದಾನೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ (Self Harming) ಮಾಡಿಕೊಂಡ ದುರ್ದೈವಿ.
ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.
ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.
ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್‌ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್ ಅಲ್ಲೇ ಮೃತಪಟ್ಟಿದ್ದಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ