ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಡಾ. ಟಿ.ಎ. ಶರವಣ (TA Sharavana) ಅವರು ಶಿರಡಿ ಸಾಯಿಬಾಬಾ ಪ್ರಸಾದ ನೀಡಿ, ಅಭಿನಂದಿಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯ ಡಾ. ಟಿ.ಎ. ಶರವಣ, ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ಪ್ರಸಾದವನ್ನು ನೀಡುವುದರ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಶುಭ ಕೋರಿದರು.
ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್: ಟಿ.ಎ.ಶರವಣ
ಈ ಚುನಾವಣೆಯ ಫಲಿತಾಂಶವು ಜೆಡಿಎಸ್ (JDS) ಮತ್ತೊಮ್ಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ತಿಳಿಸಿದ್ದಾರೆ.
ಇದನ್ನೂ ಓದಿ: World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ
ಲೋಕಸಭಾ ಚುನಾವಣಾ ಫಲಿತಾಂಶ 2024 ರ ಕುರಿತು ಹೇಳಿಕೆ ನೀಡಿರುವ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ದೇಶದ ಜನ ಆಯ್ಕೆ ಮಾಡಿದ್ದಾರೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯು ಒಂದು ಪ್ರಬಲ ರಾಜಕೀಯ ಶಕ್ತಿ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.
ಜೆಡಿಎಸ್ ಪಕ್ಷವನ್ನು ಮುಗಿಸುವ ಸಂಚು ವಿಫಲ ಆಗಿದೆ. ಅಧಿಕೃತವಾಗಿ ಜೆಡಿಎಸ್ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ಸುಮಾರು 9 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಜೆಡಿಎಸ್ ಸಹಕಾರ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್ ಪಾಸ್ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ
ರಾಷ್ಟ್ರ ರಾಜಕಾರಣದಲ್ಲಿ ಮೋದಿ ಪ್ರಶ್ನಾತೀತ ನಾಯಕರಾಗಿ ಹೊರ ಹೊಮ್ಮಿದ್ದಾರೆ ಎಂದು ತಿಳಿಸಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ, ವೋಟ್ ಬ್ಯಾಂಕ್ ಸೃಷ್ಟಿಸುವಲ್ಲಿ ಗ್ಯಾರಂಟಿ ಯೋಜನೆ ವಿಫಲವಾಗಿವೆ ಎಂದು ಅವರು ತಿಳಿಸಿದ್ದಾರೆ.