Site icon Vistara News

Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

Teacher jobs good news

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಶಿಕ್ಷಕರು ಹಾಗೂ ತತ್ಸಮಾನ ವೃಂದದ 2023-24ನೇ ಸಾಲಿನ ಜಿಲ್ಲೆಯೊಳಗಿನ ಕೋರಿಕೆ, ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ (Teachers Transfer) ಶುಕ್ರವಾರದಿಂದ ಆರಂಭವಾಗಿದೆ.

2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು (Teachers Transfer) ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರಿಗೆ ವರ್ಗಾವಣೆ (Education News) ಕೌನ್ಸೆಲಿಂಗ್‌ ಶುರುವಾಗಿದೆ. ಆಗಸ್ಟ್ 02 ರಿಂದ 12ರವರೆಗೆ ಮೈಸೂರು ವಿಭಾಗದೊಳಗಿನ ಅಂತರ್ ಜಿಲ್ಲಾ ಕೋರಿಕೆ/ ಪರಸ್ಪರ ವರ್ಗಾವಣೆಯ ಕೌನ್ಸೆಲಿಂಗ್ (Teacher Transfer Counselling) ನಡೆಯಲಿದೆ.

ಪ್ರಾಥಮಿಕ ಶಿಕ್ಷಕರಿಗೆ ಆಗಸ್ಟ್‌ 2ರಿಂದ 5ರವರೆಗೆ ಹಾಗೂ ಆಗಸ್ಟ್‌ 6ರಿಂದ 8ರವರೆಗೆ ಪ್ರೌಢ ಶಿಕ್ಷಕರ ಸಾಮಾನ್ಯ ಕೋರಿಕೆಯ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್‌ 12ರಂದು ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಕೌನ್ಸೆಲಿಂಗ್‌ ಸಂಬಂಧಿಸಿದ ವೇಳಾಪಟ್ಟಿಯನ್ವಯ ಶಿಕ್ಷಕರು ಸೂಕ್ತ ದಾಖಲೆಗಳೊಂದಿಗೆ ಆಯಾಯ ದಿನಾಂಕದಂದು ಹಾಜರಾಗಬೇಕು.

ಇನ್ನೂ ರಾಯಚೂರಿನಲ್ಲೂ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರ ಹಂತದ ವರ್ಗಾವಣೆಗೆ ಆಗಸ್ಟ್ 2ರಿಂದ 8ರವರೆಗೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕೌನ್ಸೆಲಿಂಗ್‌ ನಡೆಯಲಿದೆ.

ಇದನ್ನೂ ಓದಿ: KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

ನೇಮಕಾತಿ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ ಪರಿಷ್ಕೃತ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ‌ ಎಂಜಿನಿಯರ್ ಹುದ್ದೆಗಳ‌ ನೇಮಕಕ್ಕೆ ಆಗಸ್ಟ್ 11ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಜು.20ರಂದು ಪ್ರಾಧಿಕಾರ ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಗೆ ಗೈರಾದವರಿಗೆ ಈ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ.

ಬಿಎಂಟಿಸಿ (ನಾನ್ ಎಚ್ಕೆ) ಪರೀಕ್ಷೆ ಸೆ.1ರಂದು, ಪಿಎಸ್ಐ ಪರೀಕ್ಷೆ ಸೆ.22ರಂದು, ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಗೆ ಕಡ್ಡಾಯ ಕನ್ನಡ ಪರೀಕ್ಷೆ ಸೆ.29ರಂದು ನಡೆಯಲಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪ್ರಮುಖ ಪರೀಕ್ಷೆ ಅಕ್ಟೋಬರ್ 27ರಂದು ನಡೆಸಲಾಗುವುದು. ಅಭ್ಯರ್ಥಿಗಳು ಪರಿಷ್ಕೃತ ವೇಳಾ ಪಟ್ಟಿ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಮೇಲಿಂದ ಮೇಲೆ ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿ ಪಡೆಯಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version